ಬೆಳ್ತಂಗಡಿ : ನೆಟ್ವರ್ಕ್ ಸಮಸ್ಯೆ- ಏರ್ಟೆಲ್ ಸಂಸ್ಥೆಯ ವಿರುದ್ಧ ಪ್ರತಿಭಟನೆ

ನಿರಂತರ ನೆಟ್ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮಸ್ಥರು, ಏರ್ಟೆಲ್ ಸಂಸ್ಥೆ ವಿರುದ್ಧ ಟವರ್ ಬಳಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಏರ್ಟೆಲ್ ನೆಟ್ವರ್ಕ್ ವಿರುದ್ಧ ಘೋಷಣೆಯನ್ನು ಕೂಗಲಾಯಿತು ಮತ್ತು ನೆಟ್ವರ್ಕ್ ಸಮಸ್ಯೆಯನ್ನು ಬಗೆಹರಿಸಲು ಗಡುವು ನೀಡಲಾಯಿತು. ಮುಂದಿನ ದಿನಗಳಲ್ಲಿ ಕಾನೂನಾತ್ಮಕವಾಗಿ ಬೃಹತ್ ಪ್ರತಿಭಟನೆಯನ್ನು ನಡೆಸುವುದಾಗಿ ಎಚ್ಚರಿಸಲಾಯಿತು.
ಪ್ರತಿಭಟನೆಯಲ್ಲಿ ಬಳಂಜ ಗ್ರಾಮ ಪಂಚಾಯತ್ ಸದಸ್ಯರಾದ ನಿಝಾಮ್ ಕಟ್ಟೆ, ಬದ್ರೀಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಇದರ ಅಧ್ಯಕ್ಷರಾದ ನವಾಝ್ ಶರೀಫ್ ಕಟ್ಟೆ ಮೊದಲಾದವರು ಭಾಗವಹಿಸಿದ್ದರು.
