ಬೆಳ್ತಂಗಡಿ : ಕಪಿಲಾ ನದಿಯಲ್ಲಿ ಕೋಳಿ ತ್ಯಾಜ್ಯದ ರಾಶಿ : ಸೂಕ್ತ ಕ್ರಮ ಕೈಗೊಳ್ಳಲು ಒತ್ತಾಯ
ಬೆಳ್ತಂಗಡಿ ತಾಲೂಕಿನ ಶಿಶಿಲದಲ್ಲಿ ಕಪಿಲಾ ನದಿ ಹರಿಯುತ್ತಿದ್ದು, ಈ ನದಿಗೆ ದಿನ ನಿತ್ಯ ಕೋಳಿ ತ್ಯಾಜ್ಯವನ್ನು ಸುರಿಯುತ್ತಿರುವುದು ಪರಿಸರ ಪ್ರಿಯರಿಗೆ ಆತಂಕವಾಗಿದೆ.
ಕಪಿಲಾ ನದಿ ನಿತ್ಯ ಹರಿದ್ವರ್ಣ ಪ್ರದೇಶದಿಂದ ಹರಿಯುತ್ತಿದ್ದು, ಮತ್ಸ್ಯ ದೇವರ ಮೀನುಗಳಿಗೆ ಆಶ್ರಯ ನೀಡುತ್ತಿದೆ. ನದಿಯ ತಟದಲ್ಲಿ ಪ್ರಖ್ಯಾತ ಶಿಶಿಲೇಶ್ವರ ದೇವಾಲಯವೂ ಇದೆ. ಇಲ್ಲಿಯ ಜಲದಿಂದಲೇ ದೇವರಿಗೆ ನಿತ್ಯ ಅಭಿಷೇಕ ನಡೆಯುತ್ತಿದೆ. ಸಾವಿರಾರು ಭಕ್ತರು ಈ ನೀರನ್ನು ತೀರ್ಥವೆಂದು ಕುಡಿಯುತ್ತಿದ್ದಾರೆ.
ಮಾತ್ರವಲ್ಲ ಈ ನೀರು ಕೃಷಿ ಕುಡಿಯಲು ನಿತ್ಯ ಬಳಸುತ್ತಿದ್ದಾರೆ. ಈ ನದಿಗೆ ದಿನ ನಿತ್ಯ ಕೋಳಿ ತ್ಯಾಜ್ಯವನ್ನು ಸುರಿಯುತ್ತಿರುವುದು ಪರಿಸರ ಪ್ರಿಯರಿಗೆ ಆತಂಕವಾಗಿದೆ. ಇದರಿಂದ ಸುತ್ತ ಮುತ್ತಲಿನ ಪ್ರದೇಶದಲ್ಲಿ ದುರ್ವಾಸನೆ ಹೊರಹೊಮ್ಮಿ ವಾತಾವರಣ ಹಾಳಾಗುತ್ತಿದೆ. ಆದುದರಿಂದ ಅಧಿಕಾರಿಗಳು, ಗ್ರಾಮ ಪಂಚಾಯತ್, ತಾಲೂಕು ಆಡಳಿತ ಕೂಡಲೆ ಮಧ್ಯಪ್ರವೇಶಿಸಿ ಅಂತಹ ವ್ಯಕ್ತಿಗಳ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಶಿಶಿಲದ ಪ್ರಜ್ಞಾವಂತ ಪರಿಸರ ಪ್ರೇಮಿಗಳು ಒತ್ತಾಯಿಸಿದ್ದಾರೆ.