ಬೆಳ್ತಂಗಡಿಯ ಮುಗೇರಡ್ಕ ಎಂಬಲ್ಲಿ ಅಕ್ರಮ ಮರಳು ದಂಧೆ : ಮಾಜಿ ಶಾಸಕ ವಸಂತ ಬಂಗೇರ ಆರೋಪ

ಬೆಳ್ತಂಗಡಿ ತಾಲೂಕಿನ ಮೊಗ್ರೂ ಗ್ರಾಮದ ಮುಗೇರಡ್ಕ ಎಂಬಲ್ಲಿ ನಡೆಯುವ ಅಕ್ರಮ ಮರಳು ದಂಧೆ ಮತ್ತು ನೀರಾವರಿ ಕಾಮಗಾರಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಎಂದು ಬೆಳ್ತಂಗಡಿ ತಾಲೂಕಿನ ಮಾಜಿ ಶಾಸಕರಾದ ವಸಂತ ಬಂಗೇರ ಹೇಳಿದರು. ಅವರುಬೆಳ್ತಂಗಡಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿ ಮುಗೇರಡ್ಕದಲ್ಲಿ ನಡೆಯುವ ಅಕ್ರಮ ಮರಳು ದಂಧೆ ಮತ್ತು 250 ಕೋಟಿಯ ಕಾಮಗಾರಿಯಲ್ಲಿ ಭ್ರಷ್ಟಾಚಾರ, ಅಕ್ರಮ ಸಕ್ರಮಗಳಲ್ಲಿ ವಿಳಂಬ ನೀತಿ, ಬಿಜೆಪಿ ಸರಕಾರದ 40% ಕಮಿಷನ್ ದಂಧೆ, ತಾಲೂಕು ಕಚೇರಿಯಲ್ಲಿ ಕಡತ ವಿಲೇವಾರಿಯಲ್ಲಿ ವಿಳಂಬ ಇದರ ವಿರುದ್ಧ ನಾವು ಬರುವ ಏಳನೇ ತಾರೀಖಿನಂದು ಬೆಳ್ತಂಗಡಿ ಕಾಂಗ್ರೆಸ್ ವತಿಯಿಂದ ಉಗ್ರವಾದ ಪ್ರತಿಭಟನೆ ನಡೆಸಿ ಬೆಳ್ತಂಗಡಿ ತಹಸಿಲ್ದಾರರಿಗೆ ಮನವಿ ಸಲ್ಲಿಸಿ ನಂತರ ಬೆಳ್ತಂಗಡಿಯಿಂದ ಮುಗೇರಡ್ಕದವರೆಗೆ ವಾಹನ ಜಾತ ನಡೆಸಲಿದ್ದೇವೆ ಎಂದು ಹೇಳಿದರು.
