ಬೆಳ್ತಂಗಡಿ : ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ
ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜಾ ನೆರಿಯ ಗ್ರಾಮದ ಅರ್ಹ ಫಲಾನುಭವಿಗಳಿಗೆ ಕೆಲವು ಅಶಕ್ತರ ಮನೆಗೆ ಮನೆಯ ಹಕ್ಕು ಪತ್ರ ತಂದು ನೀಡಿದರು. ಹಕ್ಕು ಪತ್ರ ವಿತರಣಾ ಸಮಾರಂಭ ಹಾಗೂ ಶಿಲಾನ್ಯಾಸ ಕಾರ್ಯಕ್ರಮ ಕಾಳಿಕಾಂಬ ದೇವಸ್ಥಾನದಲ್ಲಿ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜಾ ನೆರಿಯ ಗ್ರಾಮದ ಹಲವಾರು ಕುಟುಂಬಗಳಿಗೆ ಹಕ್ಕುಪತ್ರ ಸಿಗದೆ 70 ವರ್ಷಗಳಿಂದ ಅಲೆದಾಡುತಿದ್ದರು ಆದರೆ ಈಗ ಹಕ್ಕು ಪತ್ರವನ್ನು ಅವರ ಮನೆಗೆ ತಲುಪಿಸುವ ಕೆಲಸ ಮಾಡಿದ್ದೇವೆ,ಇದಕ್ಕೆ ಸಹಕರಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.ವೇದಿಕೆಯಲ್ಲಿ.ನೆರಿಯ ಗ್ರಾಮ ಪಂಚಾಯತ್ ಅಧ್ಯಕ್ಷೆ ವಸಂತಿ,ಪುದುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಯಶವಂತ,ನೆರಿಯ ಗ್ರಾಮ ಪಂಚಾಯತ್ ಸದಸ್ಯರು, ಪ್ರತಿಷ್ ಹಾಗೂ ಇತರರು ಉಪಸ್ಥಿತರಿದ್ದರು.