ಬೆಳುವಾಯಿ :ರೂ.13 ಕೋ. ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ

ಮೂಡುಬಿದಿರೆ: ಬೆಳುವಾಯಿ ಗ್ರಾ.ಪಂ.ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಸುಮಾರು ರೂ.7.5 ಕೋ.ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ರೂ13 ಕೋ.ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಉಮಾನಾಥ ಕೋಟ್ಯಾನ್ ಶಿಲಾನ್ಯಾಸ ನೆರವೇರಿಸಿದರು.
ನಂತರ ಮಾತನಾಡಿದ ಕೋಟ್ಯಾನ್ ಮೂಲಭೂತ ಸೌಕರ್ಯ ಮತ್ತು ಕೃಷಿಗೆ ಆದ್ಯತೆಯನ್ನು ನೀಡಲಾಗಿದೆ. ಕ್ಷೇತ್ರದ ಅಭಿವೃದ್ಧಿಗಾಗಿ ಪಕ್ಷ – ಜಾತಿ ಬೇಧ ಮರೆತು ರೂ 2000 ಕೋ.ರೂಗಳ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲಾಗಿದೆ. ಶಾಸಕನಾಗಿ ಆಯ್ಕೆಯಾದ ಮೊದಲ ಎರಡು ವರ್ಷ ಕೊರೋನಾದಿಂದ ಸ್ವಲ್ಪ ತೊಂದರೆಯಾಯಿತು ಇಲ್ಲದಿದ್ದರೆ ರೂ. 5000 ಕೋ.ರೂಗಳ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಬಹುದಿತ್ತು ಎಂದು ಹೇಳಿದರು.

ಬೆಳುವಾಯಿ ಪಂಚಾಯತ್ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ರೂ 100 ಕೋ.ಅನುದಾನವನ್ನು ಒದಗಿಸಿರುವುದಕ್ಕೆ 7 ನೇ ವಾರ್ಡಿನ ಸದಸ್ಯ ಭರತ್ ಶೆಟ್ಟಿ ನೇತೃತ್ವದಲ್ಲಿ ಗ್ರಾಮಸ್ಥರು ಕೋಟ್ಯಾನ್ ಅವರನ್ನು ಸನ್ಮಾನಿಸಿದರು. 130 ಕುಟುಂಬಗಳಿಗೆ ಹಕ್ಕುಪತ್ರವನ್ನು ವಿತರಿಸಿರುವ ಫಲಾನುಭವಿಗಳು ಕೋಟ್ಯಾನ್ ಅವರಿಗೆ ಹೂವನ್ನು ನೀಡಿ ಗೌರವಿಸಿದರು. ಬೆಳುವಾಯಿ ಗ್ರಾ.ಪಂ.ಅಧ್ಯಕ್ಷೆ ಸುಶೀಲಾ, ಉಪಾಧ್ಯಕ್ಷ ರವೀಂದ್ರ ಪೂಜಾರಿ, ಬಿಜೆಪಿ ಮಂಡಲ ಅಧ್ಯಕ್ಷ ಸುನೀಲ್ ಆಳ್ವ, ಪ್ರ.ಕಾರ್ಯದರ್ಶಿಗಳಾದ ಗೋಪಾಲ ಶೆಟ್ಟಿಗಾರ್, ಕೇಶವ ಕರ್ಕೇರಾ,ಮೂಡಾ ಅಧ್ಯಕ್ಷ ಮೇಘನಾಥ ಶೆಟ್ಟಿ, ಭೂನ್ಯಾಯ ಮಂಡಳಿಯ ಸದಸ್ಯ ಹರ್ಷವರ್ಮ ಹೆಗ್ಡೆ ಮಾಲಾಡಿ, ವಿ.ಹಿಂ.ಪ.ತಾಲೂಕು ಕಾರ್ಯಧ್ಯಕ್ಷ ಶ್ಯಾಮ ಹೆಗ್ಡೆ, ಕೆಸರ್ ಗದ್ದೆ ಶಕ್ತಿ ಕೇಂದ್ರದ ಅಧ್ಯಕ್ಷ ಸದಾನಂದ ಶೆಟ್ಟಿ, ಹೋಮಲ್ಕೆ ಶಕ್ತಿ ಕೇಂದ್ರದ ಅಧ್ಯಕ್ಷ ಸೂರಜ್ ಆಳ್ವ ಅತಿಥಿಗಳಾಗಿ ಭಾಗವಹಿಸಿದ್ದರು. ಗ್ರಾ.ಪಂ.ಸದಸ್ಯರು ಉಪಸ್ಥಿತರಿದ್ದರು.
