ಬೆಂಗಳೂರಿನಬಟ್ಟೆ ವ್ಯಾಪಾರಿ ಈಗ ರಾಜಸ್ತಾನದ ಶಾಸಕ
ಬೆಂಗಳೂರಿನ ಚಿಕ್ಕಪೇಟೆಯ ಬಟ್ಟೆ ವ್ಯಾಪಾರಿ ಹಾಗೂ ಜೂಗನಹಳ್ಳಿಯ ಬಂಗಲೆ ವಾಸಿ ಲಾಡುಲಾಲ್ ಪಿಟ್ಲಿಯಾ ಅವರು ಈಗ ರಾಜಸ್ತಾನದ ಸಹಾರ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದಾರೆ.ಕಳೆದ ಬಾರಿ ಪಕ್ಷೇತರರಾಗಿ ಸ್ಪರ್ಧಿಸಿ 31 ಲಕ್ಷ ಮತ ಪಡೆದಿದ್ದರು. ಈ ಬಾರಿ ಬಿಜೆಪಿ ಟಿಕೆಟ್ ಪಡೆದು 1.17 ಲಕ್ಷ ಮತ ಪಡೆದು ಗೆದ್ದಿದ್ದಾರೆ. ಸೋತ ಕಾಂಗ್ರೆಸ್ ಅಭ್ಯರ್ಥಿ 55 ಸಾವಿರ ಮಾತ್ರ ಪಡೆದಿದ್ದಾರೆ.ಬೆಂಗಳೂರಿನ ಲಾಡುಲಾಲರ ವ್ಯವಹಾರವನ್ನು ಈಗ ಮಕ್ಕಳು ನೋಡಿಕೊಳ್ಳುತ್ತಿದ್ದಾರೆ.