Bengaluru : ಇಂದಿರಾ ಕ್ಯಾಂಟೀನ್‍ನಲ್ಲಿ `ನಂದಿನಿ’ ಉತ್ಪನ್ನಗಳ ಮಾರಾಟಕ್ಕೆ ಚಿಂತನೆ
ಬೆಂಗಳೂರು: ರಾಜ್ಯಾದ್ಯಾಂತ ಇರುವ ಇಂದಿರಾ ಕ್ಯಾಂಟೀನ್‍ಗಳಲ್ಲಿ ನಂದಿನಿ' ಉತ್ಪನ್ನಗಳನ್ನು ಮಾರಾಟ ಮಾಡಲು ರಾಜ್ಯ ಸರಕಾರ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. ನಂದಿನಿ ಉತ್ಪನ್ನಗಳ ಮಾರುಕಟ್ಟೆಯನ್ನು ವಿಸ್ತರಣೆ ಮಾಡಲು ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ ಯೋಜನೆ ರೂಪಿಸಿದ್ದು ಮುಂದಿನ ದಿನಗಳಲ್ಲಿ ಇಂದಿರಾ ಕ್ಯಾಂಟೀನ್‍ಗಳಲ್ಲಿ
ನಂದಿನಿ’ ಉತ್ಪನ್ನಗಳು ಲಭ್ಯವಾಗಲಿದೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಕೆಎಂಎಫ್ ನೂತನ ಅಧ್ಯಕ್ಷ ಭೀಮಾ ನಾಯ್ಕ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಸರಕಾರದೊಂದಿಗೆ ಚರ್ಚಿಸಿ ಈ ಕುರಿತು ಶೀಘ್ರದಲ್ಲಿ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಯೋಜನೆ ಶೀರ್ಘ ಕಾರ್ಯಗತಗೊಂಡರೆ ಕೆಲವೇ ದಿನಗಳಲ್ಲಿ ಗ್ರಾಹಕರಿಗೆ ಇಂದಿರಾ ಕ್ಯಾಂಟೀನ್‍ನಲ್ಲಿ ನಂದಿನಿ ಉತ್ಪನ್ನಗಳು ಲಭ್ಯವಾಗಲಿದ್ದು, ಈ ಮೂಲಕ ಗ್ರಾಹಕರಿಗೆ ನಂದಿನಿ ಇನ್ನಷ್ಟು ಹತ್ತಿರವಾಗಲಿದೆ. ಚಾಕೋಲೇಟ್, ಬಿಸ್ಕತ್, ಐಸ್ ಕ್ರೀಂ, ಹಾಲು, ಮೊಸರು ಸೇರಿದಂತೆ ಹಲವು ನಂದಿನಿ ಉತ್ಪನಗಳು ಇಂದಿರಾ ಕ್ಯಾಂಟಿನ್‍ನಲ್ಲಿ ದೊರೆಯಲಿದೆ ಎಂದು ಹೇಳಲಾಗುತ್ತಿದೆ.