ಬೆಂಗಳೂರು : ಬೋರ್ಡ್ ಎಕ್ಸಾಂಗೆ ಹೈಕೋರ್ಟ್ ಗ್ರೀನ್ ಸಿಗ್ನಲ್
ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಅನುಮತಿ ನೀಡಿದೆ.ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಅಧಿಸೂಚನೆಗಳನ್ನು ರದ್ದುಪಡಿಸಿದ್ದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ನ್ಯಾಯಮೂರ್ತಿ ಕೆ.ಸೋಮಶೇಖರ್ ನೇತೃತ್ವದ ವಿಭಾಗೀಯ ನ್ಯಾಯಪೀಠ ರದ್ದುಪಡಿಸಿದೆ. ಈ ಕುರಿತಂತೆ ಕಾಯ್ದಿರಿಸಿದ್ದ ತೀರ್ಪನ್ನು ಶುಕ್ರವಾರ ಪ್ರಕಟಿಸಿದೆ.
ರಾಜ್ಯ ಸರ್ಕಾರವು ಬೋರ್ಡ್ ಪರೀಕ್ಷೆಯನ್ನು ನಡೆಸಬಹುದು. ಪರೀಕ್ಷೆ ಪ್ರಕ್ರಿಯೆ ಸ್ಥಗಿತಗೊಂಡ ಹಂತದಿಂದಲೇ ಮುಂದುವರಿಸಬೇಕು. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಬೋರ್ಡ್ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಸಂಬಂಧಿಸಿದವರ ಜೊತೆ ಸಮಾಲೋಚಿಸಿ ತೀರ್ಮಾನ ಕೈಗೊಳ್ಳಿ’ ಎಂದು ಸರ್ಕಾರಕ್ಕೆ ನಿರ್ದೇಶಿಸಿದೆ.