ಬೆಂಗಳೂರು ಕಂಬಳದಲ್ಲಿ ಕಾಂತಾರ ಕೋಣಕ್ಕೆ ಚಿನ್ನದ ಪದಕ
ನಟ, ನಿರ್ದೇಶಕ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಿತ್ರದಲ್ಲಿ ಬಳಸಿಕೊಂಡಿದ್ದ ಕೋಣಗಳು ಚಿನ್ನದ ಪದಕಕ್ಕೆ ಭಾಜನವಾಗಿದೆ. ಬೆಂಗಳೂರು ಕಂಬಳದಲ್ಲಿ ಬೈಂದೂರಿನ ಕೋಣ ಪ್ರಥಮ ಚಿನ್ನ ಗೆದ್ದ ಕೋಣ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದೆ. ಬೊಳಂಬೆಳ್ಳದ ಪರಮೇಶ್ವರ ಭಟ್ ಮಾಲೀಕತ್ವದ ಕೋಣಗಳು 6.5 ಕೋಲು ನೀರು ಎತ್ತರಕ್ಕೆ ನೀರು ಚಿಮ್ಮಿಸಿ ಚಿನ್ನದ ಪಡೆದಿವೆ. ಬಾನೆತ್ತರಕ್ಕೆ ನೀರು ಚಿಮ್ಮಿಸುತ್ತಾ ಈ ಕೋಣಗಳ ಓಟ ನೋಡುಗರ ಮೈನವಿರೇಳಿಸುವಂತಿತ್ತು.
ಈ ಕುರಿತು ಕೋಣಗಳ ಮಾಲೀಕರು ಮಾತನಾಡಿ ಅದ್ದೂರಿ ಕಂಬಳೋತ್ಸವ ಬಹಳ ವಿಜೃಂಭಣೆಯಿಂದ ನಡೆಯಿತು ಸತತ ಪರಿಶ್ರಮದಿಂದ ಕೋಣಗಳ ಗೆಲುವಿಗೆ ಕಾರಣವಾಯಿತು. ಬಂದಂತ ಎಲ್ಲಾ ಕೋಣಗಳು ಉತ್ತಮ ಪ್ರದರ್ಶನವನ್ನು ನೀಡಿದವು ಕೋಣ ಓಡಿಸಿದ ಗಣೇಶ್ ಕಂದಾವರ ಮತ್ತು ರಾಘವೇಂದ್ರ ಕಾಮನಮನೆ ಅವರನ್ನು ಅಭಿನಯಿಸಿದರು.