ಡಿ.17ರಂದು ಬೆಂಗ್ರೆಯಲ್ಲಿ ಬೃಹತ್ ಸ್ವಚ್ಛತಾ ಕಾರ್ಯಕ್ರಮ
ಬೆಂಗ್ರೆ ವಿದ್ಯಾರ್ಥಿ ಸಂಘ ಯುವಕ ಮಂಡಲದ ಅಮೃತ ಮಹೋತ್ಸವದ ಅಂಗವಾಗಿ ಬೆಂಗ್ರೆ ಪರಿಸದಲ್ಲಿ ಬೃಹತ್ ಸ್ವಚ್ಛತಾ ಕಾರ್ಯಕ್ರಮವನ್ನು ಡಿಸೆಂಬರ್ 17ರಂದು ಹಮ್ಮಿಕೊಳ್ಳಲಾಗಿದೆ ಎಂದು ಮಹಾಜನ ಸಂಘ ಬೆಂಗ್ರೆಯ ಅಧ್ಯಕ್ಷರು ಮತ್ತು ಬೆಂಗ್ರೆ ವಿದ್ಯಾರ್ಥಿ ಸಂಘ ಯುವಕ ಮಂಡಲದ ಅಧ್ಯಕ್ಷರಾದ ಚೇತನ್ ಬೆಂಗ್ರೆ ತಿಳಿಸಿದರು.
ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡ ಬಳಿಕ ವಿ4 ನ್ಯೂಸ್‍ಗೆ ಮಾಹಿತಿ ನೀಡಿದರು. ಇತ್ತೀಚಿನ ದಿನಗಳಲ್ಲಿ ನದಿಗಳಿಗೆ ಕಸ ತ್ಯಾಜ್ಯಗಳನ್ನು ಎಸೆಯುವ ಪೃವೃತ್ತಿ ಹೆಚ್ಚಾಗುತ್ತಿದೆ. ಈ ಬಗ್ಗೆ ನಾವು ಹಲವಾರು ವರ್ಷಗಳಿಂದ ವಿದ್ಯಾರ್ಥಿಗಳ ಜೊತೆಗೂಡಿ ಐದು ಸಾವಿರ ಮಂದಿಯ ಮುಖಾಂತರ ಸ್ವಚ್ಛತಾ ಅಭಿಯಾನವನ್ನು ನಡೆಸುತ್ತಾ ಬಂದಿದ್ದೇವೆ. ಈ ಬಾರಿ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ನಡೆಸಲು ತೀರ್ಮಾನಿಸಿದ್ದೇವೆ. ಇದಕ್ಕೆ ಸಾರ್ವಜನಿಕರು, ಸ್ಥಳೀಯ ಸಂಘ ಸಂಸ್ಥೆಗಳು, ಜಿಲ್ಲೆ ಎಲ್ಲಾ ನಾಗರಿಕರು ಕೈಜೋಡಿಸಬೇಕು. ಡಿ.17ರಂದು ಬೆಳಿಗ್ಗೆ 6 ಗಂಟೆಯಿಂದ ಸ್ವಚ್ಛತಾ ಕಾರ್ಯಕ್ರಮ ಆರಂಭಗೊಳ್ಳಲಿದೆ ಎಂದರು.