ಮೂಲಭೂತ ಸೌಕರ್ಯ ವಂಚಿತ ಸರ್ಕಾರಿ ಶಾಲೆ

ಬೆಂಗ್ರೆ: ಬೇಂಗ್ರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೂಲಭೂತ ಸೌಲಭ್ಯ ಕಲ್ಪಿಸಬೇಕೆಂದು ಎಸ್.ಐ.ಓ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಬೆಂಗ್ರೆಯ ಶಾಲೆಯ ಮುಂದೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ಪ್ರತಿಭಟನೆಯಲ್ಲಿ ಶಾಲೆಯ ಸುತ್ತಮುತ್ತಲಿನ ಜನರು ಮತ್ತು ಆ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳ ಪೆÇೀಷಕರು ಭಾಗವಹಿಸಿ ತಮ್ಮ ಮಕ್ಕಳ ಶೈಕ್ಷಣಿಕ ಹಕ್ಕಿನ ಲಭಿಸುವಿಕೆಗೆ ಎಸ್.ಐ.ಓ ಸಂಘಟನೆಯೊಂದಿಗೆ ಜೊತೆಗೂಡಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಆಸಿಫ್ ಅವರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾತನಾಡುತ್ತಾ, ಅನೇಕ ಬಾರಿ ಇಲ್ಲಿನ ಸಮಸ್ಯೆಗಳ ಕುರಿತು ಶಿಕ್ಷಣ ಇಲಾಖೆಯ ಗಮನಕ್ಕೆ ತರುವುದರ ಜೊತೆಗೆ ಮನವಿ ಪತ್ರವನ್ನು ಸಲ್ಲಿಸಿದರೂ ಇದುವರೆಗೂ ಯಾವುದೇ ಸಕಾರಾತ್ಮಕ ಸ್ಪಂದನೆ ದೊರೆತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು,