ಪುತ್ತೂರು: ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಕೂಟ- ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸರಕಾರಿ ಪ್ರೌಢಶಾಲೆ ಏನೆಕಲ್ಲು ಇದರ ಸಂಯುಕ್ತ ಆಶಯದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಕೂಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆ ಪುತ್ತೂರು ಇಲ್ಲಿಯ ಪ್ರೌಢ ಶಾಲಾ ಮತ್ತು ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.
ಈ ಪಂದ್ಯಕೂಟದಲ್ಲಿ ಬೆಥನಿ ಶಾಲೆಯ ಆಯುಶಾ ಹಿಬಾ ಬೆಸ್ಟ್ ಆಲ್ ರೌಂಡರ್ ಆಗಿ ಹಾಗೂ ನಿರೀಕ್ಷೆ ಎಚ್ ಶೆಟ್ಟಿ ಬೆಸ್ಟ್ ರಿಸೀವರ್ ಆಗಿ ಮಿಂಚಿದ್ದಾರೆ. ವೈಗಾ ಎಂ, ಹನ ನಫೀಸ, ನದಾ, ಅಲ್ ಶಿಫಾ, ಆದ್ಯಾ ಕೆ, ಪೂರ್ವಿಕ, ಶಾನ್ವಿ ಇವರು ಕೂಡ ವಿಭಾಗ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.
ಪ್ರೌಢ ಶಾಲಾ ಬಾಲಕಿಯರ ವಿಭಾಗದಲ್ಲಿ ರಿಯಾ ಜೆ ರೈ ಬೆಸ್ಟ್ ಆಲ್ ರೌಂಡರ್ ಹಾಗೂ ಫಾತಿಮಾತ್ ಹಫೀದಾ ಬೆಸ್ಟ್ ರಿಸೀವರ್ ಆಗಿ ಉತ್ತಮ ಪ್ರದರ್ಶನ ನೀಡಿರುತ್ತಾರೆ.