ಪಾಟ್ನಾ: ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ
ಬಿಹಾರ ರಾಜಕೀಯ ಭಾರಿ ಕುತೂಹಲ ಕೆರಳಿಸಿದ್ದು, ನಿತೀಶ್ ಕುಮಾರ್ ಬಿಹಾರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಹಾರ ರಾಜ್ಯಪಾಲರನ್ನು ಭೇಟಿ ಮಾಡಿದ ನಿತೀಶ್ ಕುಮಾರ್ ಅಧಿಕೃತವಾಗಿ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಆರ್‌ಜೆಡಿ, ಕಾಂಗ್ರೆಸ್, ಎಡರಂಗ ಹಾಗೂ ಜೆಡಿಯು ಮೈತ್ರಿ ಸರ್ಕಾರ ಪತನಗೊಂಡಿದೆ.
ಇನ್ನೊಂದೆಡೆ, ಬಿಜೆಪಿ ಜತೆಗೆ ಸೇರಿ ಇಂದು ಸಂಜೆ ಮತ್ತೆ ಜೆಡಿಯು – ಬಿಜೆಪಿ ಸರ್ಕಾರ ರಚನೆಯಾಗೋದು ಸಹ ಬಹುತೇಕ ಖಚಿತವಾಗಿದೆ. ಭಾನುವಾರ ಸಂಜೆ 4 ಗಂಟೆ ಅಥವಾ 5 ಗಂಟೆಯ ವೇಳೆಗೆ ನಿತೀಶ್ ಕುಮಾರ್ ಮತ್ತೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.
ರಾಜಭವನದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಭೇಟಿ ಮಾಡಿದ ನಂತರ ನಿತೀಶ್ ಕುಮಾರ್ ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಜನತಾ ದಳ ಅನುಭವಿ ಈಗ ಬಿಜೆಪಿಯೊಂದಿಗೆ ಹೊಸ ಸರ್ಕಾರ ರಚಿಸಲು ಹಕ್ಕು ಸಾಧಿಸಲಿದೆ ಎಂದು ತಿಳಿದುಬಂದಿದೆ.