ಬಿಕರ್ನಕಟ್ಟೆ : ಗಾಳಿ ಮಳೆಗೆ ಬೃಹತ್ ಹೋರ್ಡಿಂಗ್ಸ್ ಬಿದ್ದು ವಾಹನ ಜಖಂ
ಮಂಗಳೂರಿನಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಕೆಲವೆಡೆ ಮಳೆಯಿಂದಾಗಿ ಹಾನಿ ಸಂಭವಿಸುತ್ತಿದೆ. ಮಂಗಳೂರಿನ ಬಿಕರ್ನಕಟ್ಟೆಯಲ್ಲಿ ಕಟ್ಟಡದ ಮೇಲಿದ್ದ ಜಾಹೀರಾತು ಹೋರ್ಡಿಂಗ್ ಬಿದ್ದು 12ಕ್ಕೂ ಹೆಚ್ಚು ವಾಹನಗಳಿಗೆ ಹಾನಿಯಾಗಿರುವ ಘಟನೆ ನಡೆದಿದೆ.
ಬಿಕರ್ನಕಟ್ಟೆಯಲ್ಲಿನ ಕಟ್ಟಡದಲ್ಲಿದ್ದ ಜಾಹೀರಾತು ಹೋರ್ಡಿಂಗ್ ಕಟ್ಟಡದ ಪಾರ್ಶ ಸಮೇತ ಬಿದ್ದಿದೆ. ಪರಿಣಾಮ ಕೆಳಗಡೆ ನಿಲ್ಲಿಸಿದ್ದ 12 ವಾಹನಗಳು ಜಖಂಗೊಂಡಿವೆ. ವಿದ್ಯುತ್ ಕಂಬ ಕೂಡ ಮುರಿದು ಬಿದ್ದಿದೆ.