ಬಿಪೋರ್ ಜಾಯ್ ಚಂಡಮಾರುತ : ಪ್ರಾಣಹಾನಿಯಾಗದಂತೆ ಕಟ್ಟೆಚ್ಚರ || biporjoy cyclon

ಬಿಪೋರ್ ಜಾಯ್ ಚಂಡಮಾರುತದ ಪರಿಣಾಮ ಜೂನ್ 11ರವರೆಗೆ ಮುಂದುವರಿಯಲಿರುವ ಕಾರಣ ಹಾಗೂ ಇದೇ ವೇಳೆಯಲ್ಲಿ ಮುಂಗಾರು ಆರಂಭವಾಗಲಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ಮಾನವ ಹಾಗೂ ಜಾನುವಾರುಗಳ ಪ್ರಾಣಹಾನಿಯಾಗದಂತೆ ಕಟ್ಟೆಚ್ಚರ ವಹಿಸುವಂತೆ ರಾಜ್ಯ ವಿಪತ್ತು ನಿರ್ವಹಣೆಯ ಅಧಿಕಾರಿಗಳು ಸೂಚಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನಲೆಯಲ್ಲಿ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ.
ಕರಾವಳಿಯಲ್ಲಿ ಆಳ ಮೀನುಗಾರಿಕೆ ಸೇರಿದಂತೆ ಮೀನುಗಾರಿಕೆ ಹಾಗೂ ಪ್ರವಾಸಿ ತಾಣಗಳಲ್ಲಿ ಚಟುವಟಿಕೆಗಳನ್ನು ಕೂಡಲೇ ನಿಲ್ಲಿಸಬೇಕು, ಬೀಚ್‍ಗಳಲ್ಲಿ ಹೋಂ ಗಾರ್ಡ್ ಗಳನ್ನು ಯೋಜಿಸಬೇಕುಬಿಪೋರ್ ಜಾಯ್ ಹಿನ್ನಲೆಯಲ್ಲಿ ರಾಜ್ಯದ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಯಾವುದೇ ರೀತಿಯ ಹಾನಿಯಾಗದಂತೆ ಅತ್ಯಂತ ಎಚ್ಚರ ವಹಿಸುವಂತೆ ಸೂಚಿಸಿದ್ದಾರೆ.
