ಜುಲೈ 3 : ಬಿಜೆಪಿ ಯುಮೋರ್ಚಾದಿಂದ ಕೆಸರ್‍ಡೊಂಜಿ ದಿನ

ಮೂಡುಬಿದಿರೆ : ಭಾರತೀಯ ಜನತಾಪಾರ್ಟಿ ಯುವಮೋರ್ಚಾ ಮೂಲ್ಕಿ ಮೂಡುಬಿದಿರೆ ಮಂಡಲದ ವತಿಯಿಂದ ದರೆಗುಡ್ಡೆಯ ಸಿರಿಸಂಪದ ಫಾರ್ಮ್ನಲ್ಲಿ ಜು.3ರಂದು ಕೆಸರ್‍ಡೊಂಜಿ ಕಮಲದಿನ ಎಂಬ ಕಾರ್ಯಕ್ರಮವನ್ನು ಆಚರಿಸಲಾಗುವುದು ಎಂದು ಶಾಸಕ ಉಮಾನಾಥ ಕೋಟ್ಯಾನ್ ಮತ್ತು ಮಂಡಲಾಧ್ಯಕ್ಷ ಸುನಿಲ್ ಆಳ್ವ ತಿಳಿಸಿದರು.
ಬಿಜೆಪಿ ಕಛೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. ಪಕ್ಷ ಸಂಘಟನೆ, ಬಲವರ್ಧನೆ ಹಾಗೂ ಕಾರ್ಯಕರ್ತರಲ್ಲಿ ಬಾಂಧವ್ಯ ವೃದ್ಧಿಸುವ ಚಿಂತನೆಗಳೊಂದಿಗೆ ಮೂಲ್ಕಿ ಮೂಡುಬಿದಿರೆ ಮಂಡಲಕ್ಕೆ ಒಳಪಟ್ಟ ಎಲ್ಲಾ 9 ಮಹಾಶಕ್ತಿಕೇಂದ್ರಗಳ ಕಾರ್ಯಕರ್ತರಿಗಾಗಿ ಕಾರ್ಯಕ್ರಮ ಆಯೋಜಿಸಲಾಗಿದ್ದು ಪುರುಷರು ಹಾಗೂ ಮಹಿಳೆಯರು ಸೇರಿದಂತೆ ಒಟ್ಟು 2000 ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದರು. ಸಾರ್ವಜನಿಕರಿಗೆ ವೀಕ್ಷಣೆಗೆ ಮುಕ್ತ ಅವಕಾಶವಿದೆ.
ಪತ್ರಿಕಾಗೋಷ್ಠಿಯಲ್ಲಿ ಮಂಡಲ ಪ್ರ.ಕರ?ಯದರ್ಶಿಗಳಾದ ಗೋಪಾಲ್ ಶೆಟ್ಟಿಗಾರ್, ಕೇಶವ ಕರ್ಕೇರ, ಯುವಮೋರ್ಚಾ ಪ್ರ.ಕಾರ್ಯದರ್ಶಿ ಚರಣ್ ಪೂಜಾರಿ, ಕಾರ್ಯಕ್ರಮ ಸಂಚಾಲಕ ರಾಹುಲ್ ಕುಲಾಲ್ ಉಪಸ್ಥಿತರಿದ್ದರು.