ಫಲಾನುಭವಿಗಳ ಸಮ್ಮೇಳನಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ
ಮಂಗಳೂರು, :- ಇಲ್ಲಿನ ಕರಾವಳಿ ಉತ್ಸವ ಮೈದಾನದಲ್ಲಿ ಮಾ16ರ ಗುರುವಾರ ಹಮ್ಮಿಕೊಳ್ಳಲಾಗಿದ್ದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನವನ್ನು ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಸಚಿವರಾದ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಸಚಿವರದ ಕೋಟ ಶ್ರೀನಿವಾಸ್ ಪೂಜಾರಿ, ಸಹಕಾರ ಸಚಿವರಾದ ಸೋಮಶೇಖರ್, ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಸಂಜೀವ ಮಠಂದೂರು, ಉಮನಾಥ್ ಕೋಟ್ಯಾನ್,ರಾಜೇಶ್ ನಾಯಕ್, ಹರೀಶ್ ಪೂಂಜಾ, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಮೇಯರ್ ಜಯಾನಂದ ಅಂಚನ್ ಸೇರಿದಂತೆ ಜನಪ್ರತಿನಿಧಿಗಳು ವೇದಿಕೆಯಲ್ಲಿದ್ದರು.