ಪುತ್ತೂರಿನಲ್ಲಿ ನಡೆದ ಬಿಜೆಪಿ ಮಹಿಳಾ ಸಮಾವೇಶ
ದೇಶದ ಪ್ರಧಾನಿ ನರೇಂದ್ ಮೋದಿ ಮಹಿಳೆಯರಿಗೆ ಎಲ್ಲಾ ಕ್ಷೇತ್ರಗಳಲ್ಲಿ ಪ್ರಾತಿನಿದ್ಯ ನೀಡುವ ಮುಖಾಂತರ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಡಾ. ಭಾರತಿ ಪ್ರವೀಣ್ ಪವಾರ್ ಹೇಳಿದರು.
ಪುತ್ತೂರಿನ ಜೈನಭವನದಲ್ಲಿ ನಡೆದ ಬಿಜೆಪಿ ಮಹಿಳಾ ಸಮಾವೇಶವನ್ನು ಉದ್ಧೇಶಿಸಿ ಅವರು ಮಾತನಾಡಿದರು. ಕೇಂದ್ರದ ಮೋದಿ ಸರಕಾರ ಮಹಿಳೆಯರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಆ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಿದೆ. ಆದರೆ ಕಾಂಗ್ರೆಸ್ ಕೇವಲ ಭಾಷಣದಲ್ಲಿ ಮಾತ್ರ ಮಹಿಳೆಯರ ಸಮ್ಮಾನದ ಬಗ್ಗೆ ಮಾತನಾಡುತ್ತಿದೆ. ಇದಕ್ಕೆ ಒಂದು ಉದಾಹರಣೆ ದೇಶದ ರಾಷ್ಟ್ರಪತಿ ಚುನಾವಣೆಯಾಗಿದೆ ಎಂದ ಅವರು ಕೇಂದ್ರ ಸರಕಾರ ಸಮಾಜದ ಕಟ್ಟಕಡೆಯ ದಲಿತ ಮಹಿಳೆ ದ್ರೌಪದಿ ಮುರ್ಮು ಅವರನ್ನು ದೇಶದ ಅತ್ಯುನ್ನತ ರಾಷ್ಟ್ರಪತಿ ಸ್ಥಾನಕ್ಕೆ ಆಯ್ಕೆ ಮಾಡಿದೆ. ಆದರೆ ಕಾಂಗ್ರೇಸ್ ಮಹಿಳೆಯನ್ನು ರಾಷ್ಟ್ರಪತಿ ಮಾಡುವುದಕ್ಕೆ ತನ್ನ ವಿರೋಧ ವ್ಯಕ್ತಪಡಿಸಿ ತನ್ನದೇ ಇನ್ನೊಂದು ಅಭ್ಯರ್ಥಿಯನ್ನು ಕಣಕ್ಕಿಳಿಸಿತ್ತು. ಆದರೆ ಬಿಜೆಪಿ ಮಿತ್ರಪಕ್ಷಗಳ ಸಹಕಾರದೊಂದಿಗೆ ದ್ರೌಪದಿ ಮುರ್ಮು ರಾಷ್ಟ್ರಪತಿ ಹುದ್ದೆ ಅಲಂಕರಿಸಿದ್ದಾರೆ. ಮಹಿಳೆಯರ ಬಗ್ಗೆ ಮಾತನಾಡುವ ಕಾಂಗ್ರೇಸ್ ನವರಿಗೆ ಮಹಿಳೆಯರು ಈ ವಿಚಾರವನ್ನು ಕೇಳಬೇಕು ಎಂದರು. ಜನಧನ್, ಜನೌಷಧಿ, ಅಂತ್ಯೋದಯ ಹಾಗು ಇತರ ಜನೋಪಕಾರಿ ಯೋಜನೆಗಳನ್ನು ಕೇಂದ್ರ ಸರಕಾರ ಜಾರಿಗೆ ತಂದಿದ್ದು, ಇದರ ಸದುಪಯೋಗವನ್ನು ದೇಶದ ಜನ ಪಡೆದುಕೊಳ್ಳುತ್ತಿದ್ದಾರೆ ಎಂದರು.