ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ
ಕೆದಂಬಾಡಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಕೆದಂಬಾಡಿ ಗ್ರಾಮದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾದರು. ಶಾಸಕರಾದ ಅಶೋಕ್ ರೈ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ, ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮಹಮ್ಮದ್, ಮುಖಂಡರಾದ ಮುರಳೀಧರ್ ರೈ, ಕೆದಂಬಾಡಿ ವಲಯ ಕಾಂಗ್ರೆಸ್ ಅಧ್ಯಕ್ಷ ಪುರಂದರ್ ರೈ ಮೊದಲಾದವರು ಇದ್ದರು.