ಬಿಜೆಪಿ ಯುವ ಮೋರ್ಚ ವತಿಯಿಂದ ಸ್ಪೀಕರ್ ವಿರುದ್ಧ ಪ್ರತಿಭಟನೆ
ಕರ್ನಾಟಕ ರಾಜ್ಯ ಅಧಿವೇಶನದಲ್ಲಿ ಭಾರತೀಯ ಜನತಾ ಪಕ್ಷದ ಸದಸ್ಯರು ಸ್ಪೀಕರ್ ವಿರುದ್ಧ ಪ್ರತಿಭಟನೆ ನಡೆಸಿದರು ಎಂದು ಆರೋಪಹರಿಸಿ 10 ಮಂದಿ ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವ ಕಾಂಗ್ರೆಸ್ ಪಕ್ಷದ ನಡವಳಿಕೆ ಹಾಗೂ ನಿಷ್ಪಕ್ಷಪಾತವಾಗಿ ನ್ಯಾಯ ನೀಡಬೇಕಾಗಿದ್ದ ಸ್ಪೀಕರ್ ವಿರುದ್ಧ ಬಿಜೆಪಿ ಯುವ ಮೋರ್ಚ ಸುರತ್ಕಲ್ ನಲ್ಲಿ ಪ್ರತಿಭಟನೆ ನಡೆಸಿತು.
ಪ್ರತಿಭಟನೆಯಲ್ಲಿ ಮಂಗಳೂರು ಉತ್ತರಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಭರತ್ ರಾಜ್ ಕೃಷ್ಣಾಪುರ ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ, ಶ್ವೇತಾ ಪೂಜಾರಿ ಮತ್ತಿತರರು ಅಧಿವೇಶನದಲ್ಲಿ ಕಾಂಗ್ರೆಸ್ ಪಕ್ಷ ನಡೆದುಕೊಂಡ ರೀತಿಯನ್ನು ಖಂಡಿಸಿದರು. ಬಿಜೆಪಿಯ ಮುಖಂಡರು ಯುವ ಮೋರ್ಚ ಉತ್ತರಮಂಡಲದ ಪದಾಧಿಕಾರಿಗಳು ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರು ಕಾರ್ಯಕರ್ತರು ಭಾಗವಹಿಸಿದ್ದರು.