Home Blog Full WidthPage 233

ಬ್ರಹ್ಮಾವರ : ಸರ್ವರ್ ಸಮಸ್ಯೆಯಿಂದ ಪಡಿತರಕ್ಕೆ ಕಾದುಕುಳಿತ ಜನತೆ

ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದ ಪಡಿತರ ವಿತರಣಾ ಕೇಂದ್ರದಲ್ಲಿ ಸರ್ವರ್ ಸಮಸ್ಯೆಯಿಂದ ಪಡಿತರ ವಿತರಿಸಲಾಗುತ್ತಿಲ್ಲ. ಕಳೆದ 4 ದಿನದಿಂದ ಪಡಿತರದಾರರು ಕಾದು ಕಾದು ಸುಸ್ತಾಗಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ 8 ಪಡಿತರ ವಿತರಣಾ ಕೇಂದ್ರದಲ್ಲಿ 8000 ಮಂದಿ ಪಡಿತರ ಕಾರ್ಡು ಹೊಂದಿದವರು ಇದ್ದಾರೆ. ಇಲ್ಲಿನ

ಪುತ್ತೂರು : ಕಟ್ಟಡ ಕಾಮಗಾರಿ ಮುಗಿದರೂ ಕಾಲೇಜು ಪ್ರಾರಂಭ ಕನಸು ಇನ್ನೂ ದೂರ

ಪುತ್ತೂರು ತಾಲೂಕಿನ ಕೊಯಿಲದಲ್ಲಿ ನಿರ್ಮಾಣವಾದ ಪಶು ವೈದ್ಯಕೀಯ ಕಾಲೇಜಿಗೆ 2012-13ನೇ ಸಾಲಿನಲ್ಲಿ ಡಿ.ವಿ. ಸದಾನಂದ ಗೌಡ ಮುಖ್ಯಮಂತ್ರಿಯಾಗಿದ್ದಾಗ ತಮ್ಮ ಬಜೆಟ್ ನಲ್ಲಿ ಪಶು ವೈದ್ಯಕೀಯ ಕಾಲೇಜು ಘೋಷಿಸಿ 145 ಕೋಟಿ ರೂ. ಮೀಸಲಿಟ್ಟಿದ್ದರು. ಬಳಿಕ ಸದಾನಂದ ಗೌಡ ಕನಸಿನ ಕೂಸಿಗೆ 2016 ರಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವ್ರು ಶಿಲಾನ್ಯಾಸ ನೆರವೇರಿಸಿದ್ದರು. ಆದ್ರೆ ಅಂದಿನಿಂದ ಇಂದಿನ ತನಕವೂ ಕಾಮಗಾರಿ ಕುಂಟುತ್ತಾ ಸಾಗಿ ಒಂದು ಹಂತಕ್ಕೆ ಬಂದು ನಿಂತಿದೆ.

ಫ್ಲ್ಯಾಟ್‌ ಮಾರಾಟ ಮಾಡುವುದಾಗಿ ಕೋಟ್ಯಂತರ ರೂಪಾಯಿ ವಂಚನೆ : ತಲೆಮರೆಸಿಕೊಂಡ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ

ಉಡುಪಿ: ಫ್ಲ್ಯಾಟ್‌ ಮಾರಾಟ ಮಾಡುವುದಾಗಿ ಒಪ್ಪಂದ ಮಾಡಿಕೊಂಡು ಬಳಿಕ ಹಲವರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣ ಉಡುಪಿಯಲ್ಲಿ ನಡೆದಿದೆ. ಈ ಸಂಬಂಧ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈ ವಿರುದ್ಧ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಸದ್ಯ ಆರೋಪಿ ತಲೆಮರೆಸಿಕೊಂಡಿದ್ದು, ಫ್ಲ್ಯಾಟ್ ಗಾಗಿ ಹಣ ನೀಡಿದವರು ಕಣ್ಣೀರು ಹಾಕುತ್ತಿದ್ದಾರೆ. ಉಡುಪಿ ನಗರದ ಶ್ರೀ ಲಕ್ಷ್ಮೀ ಇನ್ಪ್ರಾಸ್ಟ್ರಕ್ಚರ್‌ನ ಮಾಲಕ, ಆರೋಪಿ ಅಮೃತ್‌ ಶೆಣೈ “ವೈಜರ್‌ ” ಹೆಸರಿನ

ತಲಪಾಡಿ: ಲಾರಿಗಳ ನಡುವೆ ಸಿಲುಕಿ ಚಾಲಕ ಮೃತ್ಯು

ಉಳ್ಳಾಲ: ಎರಡು ಕಂಟೈನರ್ ಲಾರಿಗಳ ನಡುವೆ ಸಿಲುಕಿ ಲಾರಿ ಚಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾ,.ಹೆ.66ರ ತಲಪಾಡಿ ಟೋಲ್ ಗೇಟ್ ಸಮೀಪ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಹರ್ಯಾಣ ಮೂಲದ ಶಮೀಮ್ (38) ಮೃತಪಟ್ಟ ಚಾಲಕ. ಹರಿಯಾಣದಿಂದ ಕೇರಳ ಕಡೆಗೆ ಒಂದೇ ಸಂಸ್ಥೆಗೆ ಸೇರಿದ , ಸಂಬಂಧಿ ಚಾಲಕರು ಎರಡು ಕಂಟೈನರ್ ಲಾರಿಗಳಲ್ಲಿ ಕೇರಳ ಕಡೆಗೆ ಸರಕು ಸಾಗಾಟ ನಡೆಸುತ್ತಿದ್ದರು. ತಲಪಾಡಿ ಟೋಲ್ ಸಮೀಪ ಒಂದು ಕಂಟೈನರ್ ಲಾರಿಯನ್ನು ಚಾಲಕ ಶಮೀಮ್ ಚಹಾ ಕುಡಿಯಲೆಂದು

ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ : ಜೂನ್ 26 ರಂದು ‘ವಿದ್ಯಾರ್ಥಿಗಳು ಸಹ ಸಲಹೆಗಾರರಾಗಿ’ ಮಾಹಿತಿ ಕಾರ್ಯಾಗಾರ

ಉಡುಪಿ: ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಆರೋಗ್ಯ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಸೇರಿದಂತೆ ವಿವಿಧ ಸಂಘ-ಸಂಸ್ಥೆ, ಇಲಾಖೆಗಳ ಆಶ್ರಯದಲ್ಲಿ ನಶಾ ಮುಕ್ತ ಭಾರತ ಅಭಿಯಾನದಡಿ ವಿಶ್ವ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಪ್ರಯುಕ್ತ ‘ವಿದ್ಯಾರ್ಥಿಗಳು ಸಹ ಸಲಹೆಗಾರರಾಗಿ’ ಮಾಹಿತಿ ಕಾರ್ಯಾಗಾರ ಜೂನ್ 26 ರ ಸೋಮವಾರದಂದು ಬೆಳಗ್ಗೆ 10 ಗಂಟೆಗೆ ಮಣಿಪಾಲ ಡಿಸಿ ಕಚೇರಿ ಸಭಾಂಗಣದಲ್ಲಿ ಜರಗಲಿದೆ ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋವೈದ್ಯ ಡಾ.

ಕಡಬ : ಅನಾರೋಗ್ಯದಿಂದ ಯುವಕ ನಿಧನ

ಕಡಬ: ಕುಟ್ರುಪ್ಪಾಡಿ ಗ್ರಾಮದ ಹೊಸಮಠ ಉಳಿಪು ನಿವಾಸಿ ಗಿರಿಯಪ್ಪ ಗೌಡ ಅವರ ಪುತ್ರ ಸುಮಂತ್(32ವ.)ರವರು ಅನಾರೋಗ್ಯದಿಂದ ಜೂ.22ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸುಮಂತ್ ಅವರು ಕಳೆದ ಎರಡು ವರ್ಷಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಕೆಲ ದಿನಗಳಿಂದ ಅವರ ಆರೋಗ್ಯದಲ್ಲಿ ಮತ್ತಷ್ಟೂ ಏರುಪೇರಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದವರು ಚಿಕಿತ್ಸೆಗೆ ಸ್ಪಂದಿಸದೆ ಜೂ.22ರಂದು ರಾತ್ರಿ ನಿಧನರಾಗಿದ್ದಾರೆ.

“ಮೊಗಲ್ ದೊರೆ ದಂಡೆತ್ತಿ ಬಂದದ್ದು ಮುಖ್ಯವಲ್ಲ, ಶಿವಾಜಿ ದೇಶದ ಸಮಗ್ರತೆ ಕಾಪಾಡಿದ್ದು ಮುಖ್ಯ” : ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲಾ ಮಟ್ಟದ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಜೂನ್ 22 ರಂದು ಉಡುಪಿಯ ಕಿದಿಯೂರು ಹೋಟೆಲ್ ನ ಶೇಷಶಯನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ನಿಮಗೆ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಲು ಯಾರು ಕೇಳಿದ್ರು? ಶಿಕ್ಷಣ ಸಂಸ್ಥೆ, ಪಾಲಕರು,

“ನಮ್ಮ ಸರ್ಕಾರದಲ್ಲಿ ಸ್ಕ್ಯಾಮ್ ಇಲ್ಲ, ಸ್ಕೀಮ್ ಮಾತ್ರ” : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲಾ ಮಟ್ಟದ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಜೂನ್ 22 ರಂದು ಉಡುಪಿಯ ಕಿದಿಯೂರು ಹೋಟೆಲ್ ನ ಶೇಷಶಯನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಭವಿಷ್ಯದಲ್ಲಿ ಬಿಫೋರ್ ಮೋದಿ ಆಫ್ಟರ್ ಮೋದಿ ಎಂಬ ಚರ್ಚೆ ನಡೆಯಲಿದೆ. ಕಾಂಗ್ರೆಸ್ ಹಿಂದೆ ಆಕಾಶ ಭೂಮಿ

ಕಾಸರಗೋಡು ಶಾಲೆಯಲ್ಲಿ ಕನ್ನಡಕ್ಕಾಗಿ ಹೋರಾಟ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಸಿನೆಮಾ ನೆನಪಿಸುವ ನೈಜ ದೃಶ್ಯ

ಕನ್ನಡ ಸರಿಯಾಗಿ ಬಾರದ ಶಿಕ್ಷಕಿಯೋರ್ವರನ್ನು ಕನ್ನಡ ಮಾಧ್ಯಮ ಶಾಲೆಗೆ ನಿಯುಕ್ತಿಗೊಳಿಸಿರುವುದನ್ನು ವಿರೋಧಿಸಿ ಶಾಲಾ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರತಿಭಟನೆ ನಡೆಸಿದ ಘಟನೆ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಅಡೂರು ಸರಕಾರಿ ಶಾಲೆಯಲ್ಲಿ ನಡೆದಿದೆ. ಇತ್ತೀಚೆಗೆ ಈ ಶಾಲೆಯ ಸಮಾಜ ವಿಜ್ಞಾನ ಶಿಕ್ಷಕರಿಗೆ ಬೇರೆ ಶಾಲೆಗೆ ವರ್ಗಾವಣೆಯಾದ ಹಿನ್ನಲೆಯಲ್ಲಿ ಕೇರಳ ಶಿಕ್ಷಣ ಇಲಾಖೆ ಆ ಜಾಗಕ್ಕೆ ಹೊಸ ಶಿಕ್ಷಕಿಯೋರ್ವರನ್ನು ನೇಮಿಸಿದೆ. ಆದರೆ ಈ ಶಿಕ್ಷಕಿಗೆ ಕನ್ನಡ ಸರಿಯಾಗಿ

ಜಿಲ್ಲಾ ಮಟ್ಟದ ಉಡುಪಿ ಬಿಜೆಪಿ ಕಾರ್ಯಕರ್ತರ ಸಭೆ : ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಭಾಗಿ

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲಾ ಮಟ್ಟದ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಜೂನ್ 22 ರಂದು ಉಡುಪಿಯ ಕಿದಿಯೂರು ಹೋಟೆಲ್ ನ ಶೇಷಶಯನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು, ಮುಖ್ಯಮಂತ್ರಿ ಉಪಮುಖ್ಯಮಂತ್ರಿಗಳು ಪೊಲೀಸರ ಸಭೆ ಮಾಡಿದ್ದಾರೆ. ಪೊಲೀಸರ ಸಭೆಯಲ್ಲಿ ಕೇಸರೀಕರಣ ಬೇಡ ಹುಷಾರ್ !