Home Blog Left SidebarPage 1029

ಪಟ್ಲ ಫೌಂಡೇಶನ್ ಟ್ರಸ್ಟ್‍ನಿಂದ ಆಹಾರ ಕಿಟ್ ವಿತರಣೆ

 ಮಂಗಳೂರು: ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಯಕ್ಷಗಾನ ಕಲಾವಿದರು, ನಾಟಕ ಕಲಾವಿದರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಅನೇಕ ಸೇವಾ ಸಂಸ್ಥೆಗಳು ಕಲಾವಿದರಿಗೆ ನೆರವನ್ನು ನೀಡಿ ಕಲಾವಿದರ ಕಣ್ಣೀರು ಒರೆಸುವ ಕೆಲಸ ಮಾಡುತ್ತಿದೆ. ಈ ನಿಟ್ಟಿನಲ್ಲಿ ಖ್ಯಾತ ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿ ಅವರ ನೇತೃತ್ವದ ಯಕ್ಷಧ್ರುವ ಪಟ್ಲ

ಕರ್ತವ್ಯ ನಿರತ ವೈದ್ಯರಿಗೆ ಹಲ್ಲೆ ನಡೆಸಿದ ಆರೋಪ ಇಬ್ಬರ ಬಂಧನ

ಮಂಗಳೂರಿನ ಖಾಸಗಿ ಆಸ್ಪತ್ರೆಯ ಕರ್ತವ್ಯನಿರತ ವೈದ್ಯರಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರ ಬಂಧವಾಗಿದ್ದು, ಇತರ ಕೆಲ ಆರೋಪಿಗಳ ಪತ್ತೆಯಾಗಬೇಕಿದೆ. ಈ ನಡುವೆ, ಈ ಪ್ರಕರಣದಲ್ಲಿ ಗರ್ಭಿಣಿ ಮಹಿಳೆಗೆ ಚಿಕಿತ್ಸೆಯಲ್ಲಿ ವೈದ್ಯರಿಂದ ಕಿರಿಕಿರಿ, ತೊಂದರೆ ಆಗಿರುವ ಕುರಿತಂತೆ ದೂರು ನೀಡಲಾಗಿದ್ದು, ಈ ಬಗ್ಗೆಯೂ ಸೂಕ್ತ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅವರು, ಕರ್ತವ್ಯ ನಿರತ ವೈದ್ಯರ ಮೇಲೆ

ಅರ್ಚಕರಿಗೆ ಹಾಗೂ ಆಶಾ ಕಾರ್ಯಕರ್ತರಿಗೆ ಆಹಾರ ಸಾಮಾಗ್ರಿ ವಿತರಣೆ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿಯಲ್ಲಿ ಧಾರ್ಮಿಕ ಪರಿಷತ್ ಹಾಗೂ ಧಾರ್ಮಿಕ ದತ್ತಿ ಇಲಾಖೆಯ ತಾಲೂಕಿನ ಎಲ್ಲಾ ಅರ್ಚಕರಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ದಿನ ಬಳಕೆ ಸಾಮಗ್ರಿಗಳನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಹರೀಶ್ ಪೂಂಜಾ ರವರು ಧಾರ್ಮಿಕ ಪರಿಷತ್ ಇದರ ಬಹಳ ಮಹತ್ವಾಕಾಂಕ್ಷೆ ಯೋಜನೆ ರಾಜ್ಯದ ಎಲ್ಲಾ ಅರ್ಚಕರಿಗೆ ಈ ಕೊರೊನಾ ಸಂದರ್ಭದಲ್ಲಿ ನಾವು ಸಹಕಾರವನ್ನು ಕೊಡಬೇಕೆಂಬ ಕಳಕಳಿಯಿಂದ ಈ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಅದಕ್ಕಾಗಿ ತಾಲೂಕಿನ ಎಲ್ಲಾ

ಆರೋಗ್ಯ ಕೇಂದ್ರ ಕೋವಿಡ್ ಆಸ್ಪತ್ರೆಯನ್ನು ಉದ್ಘಾಟಿಸಿದ : ಸಚಿವ ಗೋಪಾಲಯ್ಯ

ಅರಕಲಗೂಡು ಕೊಣನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಅವರು ಕೋವಿಡ್ ಆಸ್ಪತ್ರೆಯನ್ನು ಉದ್ಘಾಟಿಸಿದರು.  ಉದ್ಘಾಟನೆಯ ನಂತರ ಪತ್ರಿಕಾ ಗೋಷ್ಠಿಯಲ್ಲಿ ಭಾಗವಹಿಸಿದ ಸಚಿವರು ಕಾರ್ಯವೈಖರಿಯ ಬಗ್ಗೆ ಸಂಪೂರ್ಣ ವರದಿ ಪಡೆದ ಸಚಿವರು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೌಲಭ್ಯವನ್ನು ಒದಗಿಸುವ ಭರವಸೆ ನೀಡಿದರು.

ವಿ ವಿ ಸಂಧ್ಯಾ ಕಾಲೇಜಿನಲ್ಲಿ ಕೋವಿಡ್ 2ನೇ ಅಲೆ ನಿರ್ವಹಣೆಯ ಬಗ್ಗೆ ವೆಬಿನಾರ್

ಮಂಗಳೂರು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ ವಾಣಿಜ್ಯ ಸಂಘದ ವತಿಯಿಂದ ಮೇ 31, 2021 ರಂದು “ಕೋವಿಡ್ ಎರಡನೇ ಅಲೆ- ವರ್ತನಾತ್ಮಕ ನಿರ್ವಹಣೆ ಮತ್ತು ಮುನ್ನೆಚ್ಚರಿಕೆ” ಎಂಬ ವಿಷಯದಲ್ಲಿ ವೆಬಿನಾರನ್ನು ಆಯೋಜಿಸಲಾಗಿತ್ತು. ಮುಖ್ಯ ಅತಿಥಿಗಳಾಗಿದ್ದ ನ್ಯಾಯವಾದಿಗಳೂ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರೂ ಆಗಿರುವ ಶ್ರೀ ವಿವೇಕಾನಂದ ಪಣಿಯಾಲ ಅವರು ಮಾತನಾಡಿ, ಕೋವಿಡ್ – 19ರ ವಿರುದ್ಧ ನಿರಂತರವಾಗಿ ಹೋರಾಡುತ್ತಿರುವ ವೈದ್ಯಕೀಯ

ಶ್ರೀನಿವಾಸ್ ಹೋಟೆಲ್ ಮ್ಯಾನೇಜ್‍ಮೆಂಟ್ ಕಾಲೇಜು : ವಿಶಿಷ್ಟ ಪಠ್ಯಕ್ರಮಕ್ಕೆ ಹೆಚ್ಚು ಒತ್ತು

ಶ್ರೀನಿವಾಸ ಹೋಟೆಲ್ ಮ್ಯಾನೇಜ್‍ಮೆಂಟ್ ಕಾಲೇಜು ಯುವ ಪೀಳಿಗೆಗೆ, ಬದಲಾಗುತ್ತಿರುವ ಮತ್ತು ಸವಾಲಿನ ಹೋಟೆಲ್ ಉದ್ಯಮದಲ್ಲಿ ಕೆಲಸ ಮಾಡಲು ಸಾಕಷ್ಟು ಸ್ಪರ್ಧಾತ್ಮಕವಾಗುವಂತೆ ಜ್ಞಾನ ಮತ್ತು ಕೌಶಲ್ಯಗಳನ್ನು ನೀಡುತ್ತಿದೆ. ಎ. ಶ್ಯಾಮರಾವ್ ಫೌಂಡೇಶನ್ ಅಡಿಯಲ್ಲಿ 1988ರಲ್ಲಿ ಸ್ಥಾಪನೆಗೊಂಡ ಈ ಕಾಲೇಜನ್ನು 2017ರಲ್ಲಿ ಶ್ರೀನಿವಾಸ ವಿಶ್ವವಿದ್ಯಾನಿಲಯದಲ್ಲಿ ವಿಲೀನಗೊಳಿಸಲಾಯಿತು, ಇದು ವಿದ್ಯಾರ್ಥಿಗಳಿಗೆ ಮತ್ತು ವಿಶಿಷ್ಟ ಪಠ್ಯಕ್ರಮಕ್ಕೆ ಹೆಚ್ಚು ಒತ್ತು ನೀಡುತ್ತಿದೆ. ನಮ್ಮ

ಸಕಲೇಶಪುರದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಹಾಸನ ಜಿಲ್ಲೆಯ ಸಕಲೇಶಪುರದ ಕಿರುಹುಣಸೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ರಾಜಣ್ಣ(59) ಎಂಬವರು ಮೃತಪಟ್ಟಿದ್ದಾರೆ. ಅರಣ್ಯ ಇಲಾಖೆ ನಿರ್ಲಕ್ಷ್ಯದಿಂದಲ್ಲೇ ಹೆಚ್ಚು ಸಾವು- ನೋವುಗಳು ಸಂಭವಿಸುತ್ತಿವೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಡಾನೆ ಚಲನ ವಲನಗಳ ಬಗ್ಗೆ ಮಾಹಿತಿ ನೀಡದ ಅರಣ್ಯ ಇಲಾಖೆ ವಿರುದ್ಧ ಜನರು ಹಿಡಿಶಾಪ ಹಾಕುತ್ತಿದ್ದಾರೆ.    

ಮುಜರಾಯಿ ಇಲಾಖೆಯ ಸಿ ಗ್ರೇಡ್ ದೇವಸ್ಥಾನಗಳ ಅರ್ಚಕರು, ಸಿಬ್ಬಂದಿಗೆ ಆಹಾರ ಸಾಮಾಗ್ರಿ ಕಿಟ್ ವಿತರಣೆ

ಬಂಟ್ವಾಳ: ಮುಜರಾಯಿ ಇಲಾಖೆಯ ಸಿ ಗ್ರೇಡ್ ದೇವಸ್ಥಾನಗಳ ಅರ್ಚಕರು, ಸಿಬ್ಬಂದಿಗೆ ಆಹಾರ ಸಾಮಾಗ್ರಿ ಕಿಟ್ ವಿತರಿಸಲಾಗಿದ್ದು, ಇಲಾಖೆ ವ್ಯಾಪ್ತಿಗೆ ಬರದೆ ಸಂಕಷ್ಟದಲ್ಲಿರುವ ಕ್ಷೇತ್ರಗಳ ಸಿಬ್ಬಂದಿಗೂ ಕಿಟ್ ಕೊಡುವುದಕ್ಕೆ ಚಿಂತನೆ ನಡೆಸಲಾಗುವುದು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ಹೇಳಿದರು.  ಮುಜರಾಯಿ ಇಲಾಖೆಯ ಎ ಗ್ರೇಡ್ ಕ್ಷೇತ್ರವಾದ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಿಂದ ತಾಲೂಕಿನ 26 ದೇವಸ್ಥಾನಗಳ ಅರ್ಚಕರು ಹಾಗೂ ಸಿಬ್ಬಂದಿಗಳಿಗೆ

ದುಬೈಯ ಲತೀಫಾ ಆಸ್ಪತ್ರೆಯಲ್ಲಿ ಬೃಹತ್ ರಕ್ತದಾನ ಶಿಬಿರ

ದುಬೈ : ಹಲವಾರು ವರ್ಷಗಳಿಂದ ಯು.ಎ.ಇ ಯಾದ್ಯಂತ ಸಾಮಾಜಿಕ ರಂಗದಲ್ಲಿ ಸೇವೆಗೈಯುತ್ತಿರುವ ಅನಿವಾಸಿ ಕನ್ನಡಿಗರ ಒಕ್ಕೂಟ ಯು. ಎ. ಇ. ಇದರ ವತಿಯಿಂದ ಮರುಭೂಮಿ ಮಣ್ಣಿನ ಲತೀಫಾ ಆಸ್ಪತ್ರೆ ದುಬೈಯಲ್ಲಿ,ಆಯೋಜಿಸಿದ ಬೃಹತ್ ರಕ್ತದಾನ ಶಿಬಿರವು ಬಹಳ ಅಚ್ಚುಕಟ್ಟಾಗಿ ನೆರವೇರಿತು. ಕಾರ್ಯಕ್ರಮದ ನೇತೃತ್ವ ವಹಿಸಿದ ಅನಿವಾಸಿ ಕನ್ನಡಿಗರ ಒಕ್ಕೂಟ ಯು.ಎ.ಇ. ಇದರ ಶಾಫಿ ಬಜ್ಪೆ ಯವರು ಪ್ರಾಸ್ತವಿಕವಾಗಿ ಮಾತನಾಡಿ, ಪ್ರತಿಯೊಬ್ಬ ರಕ್ತದಾನಿ ಇನ್ನೊಬ್ಬರ ಜೀವ ರಕ್ಷಕರಾಗಿರುತ್ತಾರೆ.