ಸಾಮಾಜಿಕ ಮಾಧ್ಯಮಗಳ ಮೂಲಕ ಕೋಮು ದ್ವೇಷ ಹರಡುವುದರ ವಿರುದ್ಧದ ಪ್ರಮುಖ ಕಾರ್ಯಾಚರಣೆಯಲ್ಲಿ, ಮಂಗಳೂರು ನಗರ ಪೊಲೀಸರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾಮಾಜಿಕ ಸಾಮರಸ್ಯವನ್ನು ಕದಡುವ ಗುರಿಯನ್ನು ಹೊಂದಿರುವ ಪ್ರಚೋದನಕಾರಿ ವಿಷಯವನ್ನು ಪ್ರಸಾರ ಮಾಡಿದ್ದಕ್ಕಾಗಿ ಐವರನ್ನು ಬಂಧಿಸಿದ್ದಾರೆ. ಗುಪ್ತಚರ ಮಾಹಿತಿಯ ಮೇರೆಗೆ ತ್ವರಿತವಾಗಿ ಕಾರ್ಯನಿರ್ವಹಿಸಿದ
ಕರ್ನಾಟಕ ಪತ್ರಕರ್ತರ ಸಂಘ (ರಿ) ಉಡುಪಿ ಜಿಲ್ಲಾ ಘಟಕದ ವತಿಯಿಂದ ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯವರಾಗಿರುವ ಶ್ರೀ ಹರಿರಾಂ ಶಂಕರ್ ಅವರನ್ನು ಜಿಲ್ಲೆಗೆ ಸ್ವಾಗತಿಸುವ ಮೂಲಕ ಗೌರವಿಸಲಾಯಿತು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಯನ್ನು ಬಲಪಡಿಸಿ ಶಾಂತಿ ಕಾಪಾಡುವಂತೆ, ಅಕ್ರಮ ವ್ಯವಹಾರಗಳಿಗೆ ಕಡಿವಾಣ ಹಾಕಬೇಕೆಂದು ಕರ್ನಾಟಕ ಪತ್ರಕರ್ತರ ಸಂಘ ದ ವತಿಯಿಂದ ವಿನಂತಿಸಲಾಯಿತು.ಕರ್ನಾಟಕ ಪತ್ರಕರ್ತರ ಸಂಘ ದ ಜಿಲ್ಲಾಧ್ಯಕ್ಷರಾದ ಕಿರಣ್ ಪೂಜಾರಿ,
ಮೂಡುಬಿದಿರೆ : ಎಸ್.ಎನ್. ಮೂಡುಬಿದಿರೆ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ ಐದು ವಿದ್ಯಾರ್ಥಿಗಳು ಜೂನ್ 4 ರಿಂದ 7ರ ತನಕ ಮಂಗಳೂರಿನ ಯೆನಪೋಯ ವಿಶ್ವ ವಿದ್ಯಾಲಯದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ ಗ್ಲೋಬಲ್ ಯೂಥ್ ಸಮ್ಮಿಟ್ 2025 ಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಕಾಲೇಜಿನ ಪ್ರಾಂಶುಪಾಲೆ ನೊರೊನ್ಹಾ ತರೀನಾ ರೀಟಾ ತಿಳಿಸಿದ್ದಾರೆ. ಈ ಸಮ್ಮೇಳನದಲ್ಲಿ ಭಾರತದ 20 ರಾಜ್ಯಗಳಿಂದ ಹಾಗು 10 ಇತರ ದೇಶಗಳನ್ನು ಒಳಗೊಂಡಂತೆ ಸುಮಾರು 500ಕ್ಕೂ ಹೆಚ್ಚು ಯುವ
⭕ವಿದ್ಯಾರ್ಹತೆ:ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಮತ್ತು ಈಗಾಗಲೇ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು. ⭕ಭಾರತೀಯ ಭೂ ಸೇನೆಯ ಪ್ರವೇಶ ಬಯಸುವ ಅಭ್ಯರ್ಥಿಗಳು ಪಿಯುಸಿ ಯಲ್ಲಿ ಯಾವುದೇ ವಿಷಯವನ್ನು ಅಧ್ಯಯನ ಮಾಡಿರಬಹುದು. ⭕ನೌಕಾ ಸೇನೆ ಮತ್ತು ವಾಯು ಸೇನೆಯ ಪ್ರವೇಶ ಬಯಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಪಿಯುಸಿ ಯಲ್ಲಿ ವಿಜ್ಞಾನ ವಿಷಯದಲ್ಲಿ ಅಧ್ಯಯನ ಮಾಡಿರಬೇಕು. ⭕ವಯಸ್ಸಿನ ಮಿತಿ :ಅಭ್ಯರ್ಥಿಯು 02.01.2007 ರಿಂದ
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ಕಾಲೇಜಿನ ಅಗದ ತಂತ್ರ, ಸ್ವಸ್ಥವೃತ್ತ ವಿಭಾಗದ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹಯೋಗದೊಂದಿಗೆ ಆಚರಿಸಲಾಯಿತು.ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ ವಿಯವರು ದೀಪ ಬೆಳಗಿಸಿ ಕಾರ್ಯಕ್ರಮ ವನ್ನು ಉದ್ಘಾಟಿಸಿ, ಶುಭ ಹಾರೈಸಿದರು. ತಂಬಾಕು ಸೇವನೆಯ ದುಷ್ಪರಿಣಾಮಗಳು, ಇದರಿಂದ ಉಂಟಾಗುವ ಕಾಯಿಲೆಗಳು ಹಾಗೂ ಸೇವನೆಯ ಚಟದಿಂದ ಹೊರಬರುವ ವಿಧಾನಗಳನ್ನು
ಕಡಬ:ಸೈಂಟ್ ಜೋಕಿಮ್ ವಿದ್ಯಾ ಸಂಸ್ಥೆಯಲ್ಲಿ 2025 -26 ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ದೀಪ ಬೆಳಗಿಸುವುದರ ಮೂಲಕ ಶಾಲಾ ಶೈಕ್ಷಣಿಕ ಚಟುವಟಿಕೆಗಳಿಗೆ ಚಾಲನೆಯನ್ನು ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಸಂಚಾಲಕರಾದ ವಂದನೀಯ ಪ್ರಕಾಶ್ ಪೌಲ್ ಡಿಸೋಜಾ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಶುಭ ಹಾರೈಸಿದರು. ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ವಂದನೀಯ ಸುನಿಲ್ ಪ್ರವೀಣ್ ಪಿಂಟೋ ರವರು ಪ್ರಾಸ್ತಾವಿಕ
ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆರೋಗ್ಯ ಕ್ಷೇತ್ರವನ್ನು ಬಲ ವರ್ಧನೆ ಮಾಡುವ ನಿಟ್ಟಿನಲ್ಲಿ 2023-24 ನೇ ಸಾಲಿನಲ್ಲಿ 15 ನೇ ಹಣಕಾಸು ಆಯೋಗದಡಿ ರಾಜ್ಯದ ಆರೋಗ್ಯ ವಲಯದ ಕಾರ್ಯಕ್ರಮ ಗಳಿಗೆ ಕೇಂದ್ರ ಸರಕಾರ ಅನುಮೋದನೆ ನೀಡಿದ ಕಾರ್ಯಕ್ರಮ ಇದಾಗಿದೆ. ಕ್ಷೇತ್ರದ 3 ಕಡೆ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡಕ್ಕೆ ಸರಕಾರಿ ಜಾಗ ಮಂಜೂರಾತಿ ಮಾಡಲಾಗಿದ್ದು ಶೀಘ್ರದಲ್ಲೇ ಹೊಸದಾಗಿ 1.95 ಕೋಟಿ ವೆಚ್ಚದಲ್ಲಿ 3 ಕಡೆ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡ
ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ. ಇತ್ತೀಚೆಗೆ ಕೊಲೆಯಾದ ಸುಹಾಸ್ ಶೆಟ್ಟಿಗೆ ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಹಾಲ್ ನಲ್ಲಿ ಮೇ 12ರಂದು ನಡೆದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಭಾಕರ್ ಭಟ್ ಸಮಾಜದ ಸ್ವಾಸ್ಥ್ಯ ಕೆಡುವಂತೆ, ಮತೀಯ ಗುಂಪುಗಳ ನಡುವೆ ವೈಮನಸ್ಸು ಉಂಟು ಮಾಡುವಂತೆ, ಪ್ರಚೋದನಾತ್ಮಕವಾಗಿ ಭಾಷಣ
ಮೂಡುಬಿದಿರೆ : ಕಳೆದ ಎರಡು ದಿನಗಳ ಹಿಂದೆ ವಾಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಜೋಗೊಟ್ಟು ಎಂಬಲ್ಲಿ ಕಾಲು ಜಾರಿ ನೀರಿಗೆ ಬಿದ್ದು ಕೊಚ್ಚಿಕೊಂಡು ಹೋಗಿದ್ದ ಆನೆಗುಡ್ಡೆಯ ಗುರುಪ್ರಸಾದ್ ಅವರ ಮೃತದೇಹವನ್ನು ಈಜು ತಜ್ಞ ಈಶ್ವರ್ ಮಲ್ಪೆ ಅವರು ಮೇಲಕ್ಕೆತ್ತಿದ್ದಾರೆ. ಜೋಗೊಟ್ಟು ಬಳಿಯ ಪಡ್ಡಾಯಿಮಜಲು ಎಂಬಲ್ಲಿರುವ ಅಣೆಕಟ್ಟಿನಲ್ಲಿ ನೀರು ತುಂಬಿಕೊಂಡಿತ್ತು ಅದರ ಹಲಗೆಯನ್ನು ತೆಗೆಯಲೆಂದು ಗುರುಪ್ರಸಾದ್ ಅವರು ಕೆಳಗಿಳಿಯುತ್ತಿದ್ದ ಸಂದಭ೯ದಲ್ಲಿ ಕಾಲು ಜಾರಿ ನೀರಿಗೆ
ಅಸ್ಸಾಂನಲ್ಲಿ ಕೂಡಾ ಭಾರಿ ಮಳೆಯಾಗುತ್ತಿದ್ದು, ರಸ್ತೆ ಸಾರಿಗೆ ಹಾಗೂ ರೈಲು ಸೇವೆಗಳು ಅಸ್ತವ್ಯಸ್ತಗೊಂಡಿವೆ. ಭಾರಿ ಮಳೆಯಿಂದಾಗಿ ಉಂಟಾಗಿರುವ ಪ್ರವಾಹ ಹಾಗೂ ಭೂಕುಸಿತದಲ್ಲಿ ಈವರೆಗೆ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಳೆಯಿಂದಾಗಿ ರಾಜ್ಯದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ 78,000ಕ್ಕೂ ಹೆಚ್ಚು ಮಂದಿ ತೊಂದರೆಗೊಳಗಾಗಿದ್ದಾರೆ ಎಂದು ಅವರು ಹೇಳಿದ್ದಾರೆ. ಬ್ರಹ್ಮಪುತ್ರ ಮತ್ತು ಬರಾಕ್ ಸೇರಿದಂತೆ 10 ನದಿಗಳು ಅಪಾಯ ಮಟ್ಟ ಮೀರಿ




























