ಕೇವಲ ಒಂದು ಲಕ್ಷ ರೂಪಾಯಿ ಹಣದಾಸೆಗಾಗಿ 2 ದಿನದ ಹಸುಗೂಸನ್ನು ಚಿಕ್ಕಮಗಳೂರಿನ ಎನ್‌ಆರ್‌ಪುರದಿಂದ ಕಾರ್ಕಳದ ದಂಪತಿಗೆ ಮಾರಾಟ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಭಾಗಿಯಾದ ಮಗುವಿನ ಹೆತ್ತವರು, ಮಗುವನ್ನು ಪಡೆದವರು ಹಾಗೂ ಆರೋಗ್ಯ ಇಲಾಖೆಯ ನಿವೃತ್ತ ನರ್ಸ್ ಕುಸುಮಾ ಸೇರಿ ಐವರ ವಿರುದ್ಧ ಕೇಸ್ ದಾಖಲಾಗಿದೆ.ಕಾರ್ಕಳದ ರಾಘವೇಂದ್ರ ಎಂಬವರಿಗೆ 2 ದಿನದ
ಮೂಡುಬಿದಿರೆ : ಸಾಯಿ ಮಾರ್ನಾಡ್ ಸೇವಾ ಸಂಘ ಟ್ರಸ್ಟ್( ರಿ.)ಅಮನಬೆಟ್ಟು, ಪಡುಮಾರ್ನಾಡ್ ಇದರ 63ನೇ ಸೇವಾ ಯೋಜನೆಯ ಅಂಗವಾಗಿ ಮೇ ತಿಂಗಳ 1ನೇ ಯೋಜನೆಯನ್ನು ದರೆಗುಡ್ಡೆ ಗ್ರಾಮದ ಆನೆಗುಡ್ಡೆ ಪರಿಸರದ ಅನಾರೋಗ್ಯ ಪೀಡಿತರಾಗಿರುವ ವಿಜಯ್ ಪೂಜಾರಿ ಅವರ ಚಿಕಿತ್ಸೆಗೆ ಆಥಿ೯ಕ ನೆರವನ್ನು ನೀಡಲಾಯಿತು.ಆನೆಗುಡ್ಡೆ ಪರಿಸರದ ವಿಜಯ್ ಪೂಜಾರಿ ಅವರು ಮುಂಬೈಯಲ್ಲಿ ಸಣ್ಣ ಉದ್ಯೋಗದಲ್ಲಿರುವಾಗ ಆಕ್ಸಿಡೆಂಟ್ ಆಗಿ ಕಾಲಿನ ಎಲುಬು ಮುರಿತವಾಗಿರುತ್ತದೆ. ಅವರಿಗೆ ಒಂದು ವರ್ಷ ಕೆಲಸಕ್ಕೆ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಘಟನೆಗಳ ಬಗ್ಗೆ, ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ವಿಧಾನಪರಿಷತ್ ಸದಸ್ಯರಾದ ಬಿ.ಕೆ ಹರಿಪ್ರಸಾದ್ ರವರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ರಕ್ಷಿತ್ ಶಿವರಾಂ ರವರು ಮಾಹಿತಿಯನ್ನು ನೀಡಿದರು. ಜಿಲ್ಲೆಯ ಜನತೆ ಶಾಂತಿ ಸೌಹಾರ್ದತೆಯನ್ನು ಬಯಸುತ್ತಿದ್ದಾರೆ. ಆದರೆ ಕೆಲವು ವಿಘ್ನ ಸಂತೋಷಗಳು ಜಿಲ್ಲೆಯ
ಕೇಂದ್ರ ಸರಕಾರದ ಪಿ.ಎಂ ಜನ್ ಮನ್ ಯೋಜನೆಯಡಿ ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕೊರಗ ಸಮುದಾಯ ವಾಸವಾಗಿರುವ ಪ್ರದೇಶಗಳ ಅಭಿವೃದ್ಧಿಗೆ ರೂ. 4.39 ಕೋಟಿ ಅನುದಾನ ಮಂಜೂರು. ಕೇಂದ್ರ ಸರಕಾರದ ಪಿಎಂ ಜನ್ ಮನ್( ಪ್ರಧಾನ ಮಂತ್ರಿ ಜನ ಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ ) ಯೋಜನೆಯಡಿ ನೈಜ ದುರ್ಬಲ ಬುಡಕಟ್ಟು ಸಮುದಾಯಗಳ ಸಾಮಾಜಿಕ ಆರ್ಥಿಕ ಸ್ಥಿತಿಗತಿಗಳ ಸುಧಾರಣೆ ನಿಟ್ಟಿನಲ್ಲಿ ಹೊಸ ಅಭಿಯಾನವನ್ನು ಆರಂಭಿಸಿದ್ದು ಕರ್ನಾಟಕ ರಾಜ್ಯದಲ್ಲಿ ಕೊರಗ ಮತ್ತು ಜೇನು
ಉಳ್ತೂರು ಮೋಹನ್ ದಾಸ್ ಶೆಟ್ಟಿಯವರ ವಿಶೇಷ ಮನವಿಯ ಮೇರೆಗೆ ನಮ್ಮ ಟ್ರಸ್ಟಿನ ಅಧ್ಯಕ್ಷರಾದ ಶ್ರೀ ಪಟ್ಲ ಸತೀಶ್ ಶೆಟ್ಟಿಯವರ ಆಪ್ತ ಅಭಿಮಾನಿಗಳಾದ ಶೈಕ್ಷಣಿಕ,ಧಾರ್ಮಿಕ, ಪ್ರಾಮಾಣಿಕ,ಸಾಮಾಜಿಕ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಅದೆಷ್ಟೋ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಮತ್ತು ಅಶಕ್ತರಿಗೆ ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತಾ ಬಂದಿರುವ ಪ್ರಸಿದ್ಧ ಉದ್ಯಮಿ ಮೆರಿಟ್ & ಅರ್ಜುನ್ ಹಾಸ್ಪಿಟಲ್ ಸರ್ವಿಸಸ್ ಪ್ರೈ. ಲಿ ನ ಮಾಲೀಕರಾದ ಗೌರವಾನ್ವಿತ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯು ಯೋಜನಾ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾ ನಿರ್ದೇಶಕರಾದ ಶ್ರೀ ಬಾಬು ನಾಯ್ಕ್ ಸರ್ ರವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ತಾಲೂಕು ಯೋಜನಾಧಿಕಾರಿಗಳಾದ ಶ್ರೀ ಮಾಧವ ಗೌಡ ಸರ್ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಭಜನಾ ಪರಿಷತ್ತಿನ ಧ್ಯೆಯೋದ್ದೇಶಗಳು ಮತ್ತು ಸುಳ್ಯ ತಾಲೂಕು ಪರಿಷತ್ತಿನ ಕಾರ್ಯ ಚಟುವಟಿಕೆಗಳ
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಮತ್ತು ಡಾ. ಕೆ ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ಳಾರೆ ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ, ಕನ್ನಡ ಮತ್ತು ಇಂಗ್ಲೀಷ್ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ಅರೆಭಾಷೆ ಸಾಹಿತ್ಯ ಸಂಘದ ಉದ್ಘಾಟನೆ, ಪುಸ್ತಕ ಕೊಡುಗೆ ಮತ್ತು ಉಪನ್ಯಾಸ ಕಾರ್ಯಕ್ರಮ ಕಾಲೇಜಿನ ಬಾಬಾಸಾಹೇಬ್ ಡಾ. ಬಿ. ಆರ್ ಅಂಬೇಡ್ಕರ್ ಸೆಮಿನಾರ್ ಹಾಲ್ ನಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಖ್ಯಾತ ಸಹಕಾರಿ
ಮೂಡುಬಿದಿರೆ : ತಾಲೂಕಿನಲ್ಲಿ ಸುರಿದ ಮಳೆ ಗಾಳಿಗೆ ಪಡುಮಾರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಿವಾಲಯ ಎಂಬಲ್ಲಿ ಶೇಖರ ಯಾನೆ ಬೂದ ಎಂಬುವವರ ಮನೆಯ ಛಾವಣಿ ಬುಧವಾರ ಮುಂಜಾನೆ ಸಂಪೂರ್ಣವಾಗಿ ಕುಸಿದು ಬಿದ್ದು ಸುಮಾರು ರೂ ಮೂರು ಲಕ್ಷದಷ್ಟು ನಷ್ಟ ಉಂಟಾಗಿದೆ. ಮನೆಯಲ್ಲಿ ಗಂಡ ಹೆಂಡತಿ ಇಬ್ಬರೂ ಮಲಗಿದ್ದು ಹೆಂಚು ಬಿದ್ದು ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಪಂಚಾಯತ್ ಅಧ್ಯಕ್ಷ ವಾಸುದೇವ ಉಪಾಧ್ಯಾಯ, ಅಭಿವೃದ್ಧಿ ಅಧಿಕಾರಿ ಸಾಯೀಶ ಚೌಟ,
ಕರಾವಳಿ ಜಿಲ್ಲೆಗಳಲ್ಲಿ ಶಾಂತಿ ಕದಡುವವರ ವಿರುದ್ಧ ಕಾನೂನು ರೀತಿಯಲ್ಲೇ ಕಠಿಣ ಕ್ರಮಕೈಗೊಳ್ಳುವ ಬಗ್ಗೆ ವಿಧಾನ ಪರಿಷತ್ ನ ಸದಸ್ಯರಾದ ಮಂಜುನಾಥ ಭಂಡಾರಿ ಅವರು, ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮನವಿ ನೀಡಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷದಂತಹ ಪ್ರಕರಣಗಳು ಮುಂದುವರಿದಿದ್ದು ಕೇವಲ ಕೆಲವು ತಿಂಗಳುಗಳ ಅಂತರದಲ್ಲಿ ಕೊಲೆ. ಮತ್ತು ಚೂರಿ ಇರಿತ ಪ್ರಕರಣಗಳು ನಡೆದಿದ್ದು, ಕೆಲವೇ ಕೆಲವು ಸಮಾಜಘಾತುಕ ಶಕ್ತಿಗಳಿಂದ ಕೋಮು ಸಂಘರ್ಷ ಘಟನೆಗಳು ಹಾಗೂ
ಹತ್ತನೇ ತೋಕೂರು ಗ್ರಾಮದ ಶ್ರೀ ಓಂಕಾರೇಶ್ವರೀ ನಗರದಲ್ಲಿ ಮುಂಡಾಳ ಸಮಾಜ ಸಂಘಟನೆ ಹಾಗೂ ಸಮಾಜಭವನದ ಕಟ್ಟಡ ರಚನೆ ಬಗ್ಗೆ ಮುಲ್ಕಿ ಹೋಬಳಿ ಒಂಬತ್ತು ಮಾಗಣೆಯ ಎಲ್ಲಾ ಮುಂಡಾಲ ಧಾರ್ಮಿಕ ಮುಖಂಡರ ಸಾಮಾಜಿಕ ಮುಂದಾಳುಗಳ ಸಭೆಯು ಶ್ರೀ ಓಂಕಾರೇಶ್ವರೀ ಮಂದಿರದ ಅಧ್ಯಕ್ಷರಾದ ಶ್ರೀ ಸದಾಶಿವ ಕುಂದರ್ ರವರ ಅಧ್ಯಕ್ಷತೆಯಲ್ಲಿ ನಡೆದು ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಅನುಕೂಲವಾಗುವಂತೆ ಮೂಲ್ಕಿ ಹೋಬಳಿಯ ಮುಂಡಾಲ ಸಮಾಜ ಸೇವಾ ಟ್ರಸ್ಟನ್ನು ರಚಿಸಲಾಯಿತು.ಟ್ರಸ್ಟ್ ನ ಅಧ್ಯಕ್ಷರಾಗಿ




























