Home Blog Left SidebarPage 112

ಕಡಬ: ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ನಾಳೆ(ಮೇ17) ಶೈಕ್ಷಣಿಕ ಮಾರ್ಗದರ್ಶನ ಮತ್ತು ಮಾಹಿತಿ ಕಾರ್ಯಗಾರ

ಕಡಬ: ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಎಲ್ಲಾ ಸಮುದಾಯದ ಪ್ರಸ್ತುತ ಸಾಲಿನ ಪ್ರೌಢ ಶಿಕ್ಷಣದಲ್ಲಿ 9 ನೇ ತರಗತಿ, 10 ನೇ ತರಗತಿ ಮತ್ತು 10 ನೇ ತರಗತಿ ಉತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಹಾಗೂ ದ್ವಿತೀಯ ಪಿ.ಯು.ಸಿ ಮತ್ತು ದ್ವಿತೀಯ ಪಿ.ಯು.ಸಿ ಉತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಮೇ.17 ರಂದು ಮುಂದಿನ ಶಿಕ್ಷಣ ಮತ್ತು ಉದ್ಯೋಗವಕಾಶಗಳು, ಉದ್ಯಮಶೀಲತೆ

ಪ್ರಮೋದ್ ಕುಮಾರ್ ರೈ ಬೆಳ್ಳಾರೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ

ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು 50ನೇ ವಾರ್ಷಿಕ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಕೊಡಮಾಡುತ್ತಿದ್ದು, ಈ ವರ್ಷದ ‘ಆರ್ಯಭಟ’ ಪ್ರಶಸ್ತಿಯನ್ನು ಘೋಷಿಸಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಈ ವರ್ಷ ಆರ್ಯಭಟ ಸುವರ್ಣ ಸಂಭ್ರಮ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಕಳೆದ ಮೂರು ದಶಕಗಳಿಂದ ನೃತ್ಯ ಕಲಾವಿದರಾಗಿ, ನಿರ್ದೇಶಕರಾಗಿ, ವಸ್ತ್ರ ವಿನ್ಯಾಸ ಸೇರಿದಂತೆ ವಿವಿಧ ಆಯಾಮಗಳಲ್ಲಿ ನಿರಂತರವಾಗಿ ರಂಗಸೇವೆ ಸಲ್ಲಿಸಿತ್ತಾ ಬಂದಿರುವ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ, ಸೇನೆ ನಡೆಸಿದ ಆಪರೇಷನ್ ಸಿಂದೂರ್ ಬಗ್ಗೆ ಮಾತನಾಡಲಿದ್ದಾರೆ

ಪ್ರಧಾನಿ ನರೇಂದ್ರ ಮೋದಿ ಅವರುಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ,ಸೇನೆ ನಡೆಸಿದ ಆಪರೇಷನ್ ಸಿಂದೂರ್ಬಗ್ಗೆ ಮಾತನಾಡಲಿದ್ದಾರೆ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಹರೀಶ್ ಇಂಜಾಡಿ ಆಯ್ಕೆ

ಸುಬ್ರಹ್ಮಣ್ಯ:ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಹರೀಶ್ ಇಂಜಾಡಿ ಆಯ್ಕೆಯಾಗಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯ ಸದಸ್ಯರ ನೇಮಕ ಮಾಡಿ ಸರಕಾರ ಆದೇಶ ಮಾಡಿತ್ತು. ಇಂದು ನಡೆದ ಅಧ್ಯಕ್ಷರ ಆಯ್ಕೆಯಲ್ಲಿ ಭಾರೀ ನಾಟಕೀಯ ತಿರುವು ಪಡೆದು ಹರೀಶ್ ಇಂಜಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷತೆಗೆ ಮಹೇಶ್ ಕುಮಾರ್ ಕರಿಕ್ಕಳ ಅವರನ್ನು ಕಾಂಗ್ರೆಸ್ ಜಿಲ್ಲಾ

ಮಂಗಳೂರು ವಿ. ವಿ. ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸಲಹಾ ಸಮಿತಿ ಸದಸ್ಯರಾಗಿ ಯೋಗೀಶ್ ಕೈರೋಡಿ ಆರಂಬೋಡಿ ಆಯ್ಕೆ

ಪ್ರಸ್ತುತ ಮೂಡುಬಿದಿರೆ ಆಳ್ವಾಸ್ ಪದವಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿರುವ ಕೈರೋಡಿ ನಿವಾಸಿ ಲೇಖಕ ಡಾ. ಯೋಗೀಶ್ ಕೈರೋಡಿ ಇವರನ್ನು ಮಂಗಳೂರು ವಿಶ್ವ ವಿದ್ಯಾನಿಲಯದ ರಾಣಿ ಅಬ್ಬಕ್ಕ ಅಧ್ಯಯನ‌ ಪೀಠದ ಸಲಹಾ ಸಮಿತಿಗೆ ಸರಕಾರದ ನಾಮ ನಿರ್ದೇಶಿತ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಸುಳ್ಯ ಪ್ರೆಸ್ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಸುಳ್ಯ:ಸುಳ್ಳು ಮಾಹಿತಿಗಳು,‌ ವೈಭವೀಕರಿಸಿದ ಸುದ್ದಿಗಳ ಅತಿಪ್ರಸರಣದಿಂದ ಗೊಂದಲ, ಆತಂಕ ಸೃಷ್ಠಿಯಾಗುತ್ತಿರುವ ಇಂದಿನ ದಿನಗಳಲ್ಲಿ ಸುದ್ದಿಗಳನ್ನು ಸತ್ಯ ಮತ್ತು ನಿಸ್ಪಕ್ಷಪಾತವಾಗಿ ಬಿತ್ತರಿಸುವ ಮೂಲಕ ಮಾಧ್ಯಮಗಳು ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕು. ಸತ್ಯವನ್ನೇ ತಿಳಿಸುವ ಮೂಲಕ ಜನರನ್ನು ಸುಶಿಕ್ಷಿತರನ್ನಾಗಿಸಬೇಕು ಎಂದು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‌ನ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ. ಅಭಿಪ್ರಾಯಪಟ್ಟಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್‌ನ ನೂತನ

ಉಡುಪಿ: ಜೂಬ್ಲಿಯೆಂಟ್ ಮೋಟಾರ್‌ವರ್ಕ್ಸ್‌ನಲ್ಲಿ ನೂತನ ವಿಂಡ್ಸರ್ ಇವಿ ಪ್ರೋ ಕಾರನ್ನು ಲೋಕಾರ್ಪಣೆ

ನೂತನ ವಿಂಡ್ಸರ್ ಇವಿ ಪ್ರೋ ಕಾರನ್ನು ಗಣ್ಯರು ಮಾರುಕಟ್ಟೆಗೆ ಲೋಕಾರ್ಪಣೆ ಮಾಡಿದರು. ಈ ಹೊಸ ’ವಿಂಡ್ಸರ್ ಇವಿ ಪ್ರೊ’ ನಲ್ಲಿ, ಗ್ರಾಹಕರು ಬಿಗ್ ಬ್ಯಾಟರಿ ಮತ್ತು ಲಾಂಗ್ ರೇಂಜ್ ಅನ್ನು ಪಡೆಯುತ್ತಾರೆ. ಈ ಹೊಸ ಇವಿ ಬ್ಯಾಟರಿಯು ಒಮ್ಮೆ ಪೂರ್ಣ ಚಾರ್ಜ್ ಮಾಡಿದರೆ 449 ಕಿ.ಮೀ ವರೆಗೆ ಪ್ರಯಾಣಿಸಬಹುದು. ಒಉ ಈ ಹೊಸ ಕಾರನ್ನು ಹಲವು ವಿಶಿಷ್ಟ, ಅಪ್‌ಡೇಟ್ಡ್ ಫೀಚರ್ಸ್‌ಗಳೊಂದಿಗೆ ಬಿಡುಗಡೆ ಮಾಡಿದೆ. ಸಾಮಾನ್ಯ ವಿಂಡ್ಸರ್‌ಗೆ ಹೋಲಿಸಿದರೆ ಇದು ಹಲವು ಹೊಸ, ಸುಧಾರಿತ

ಪಾಕಿಸ್ತಾನದ ಡ್ರೋನ್ ದಾಳಿ ವಿಫಲ:ಸರಣಿ ಸ್ಫೋಟಗಳು ಮತ್ತು ಮೊಳಗಿದ ಸೈರನ್ ಸದ್ದು

ಭಾರತ-ಪಾಕ್ ಮಧ್ಯೆ ಯುದ್ಧದ ಕಾರ್ಮೋಡ ಕವಿದಿದ್ದು, ಇಂದು ಶುಕ್ರವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದಾದ್ಯಂತ ಡ್ರೋನ್‌ಗಳು ಮತ್ತು ಕ್ಷಿಪಣಿಗಳ ಮೂಲಕ ಭಾರತೀಯ ಮಿಲಿಟರಿ ಸ್ಥಾಪನೆಗಳನ್ನು ಗುರಿಯಾಗಿಸಲು ಪಾಕಿಸ್ತಾನ ವಿಫಲ ಪ್ರಯತ್ನ ಮಾಡಿದ ನಂತರ ಸರಣಿ ಸ್ಫೋಟಗಳು ಮತ್ತು ಸೈರನ್‌ಗಳು ಕೇಳಿಬರುತ್ತಿವೆ. ನಸುಕಿನ ಜಾವ 3:50 ರಿಂದ 4:45 ರ ನಡುವೆ ಕೇಳಿದ ಸ್ಫೋಟಗಳಿಂದ ಜಮ್ಮು ನಗರದ ಕೆಲವು ಭಾಗಗಳಲ್ಲಿ ಕತ್ತಲೆಯಾಗಿದ್ದು, ಆಕಾಶದಲ್ಲಿ ಯುದ್ಧಸಾಮಗ್ರಿಗಳು ಕಂಡುಬಂದವು.

ಕೊಕ್ಕಡ: ಜೀಪು, ಗೂಡ್ಸ್ ರಿಕ್ಷಾ ನಡುವೆ ಡಿಕ್ಕಿ – ನಾಲ್ವರಿಗೆ ಸಣ್ಣಪುಟ್ಟ ಗಾಯ

ಕೊಕ್ಕಡ: ಪಟ್ಟೂರು ಬಳಿಯ ಪುಂಡಿಕಾಯಿ ತಿರುವಿನಲ್ಲಿ ಗುರುವಾರದಂದು ಜೀಪು ಮತ್ತು ಗೂಡ್ಸ್ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಉಂಟಾಗಿದೆ. ಅಪಘಾತದ ರಭಸಕ್ಕೆ ರಿಕ್ಷಾ ಮತ್ತು ಜೀಪು ಎರಡೂ ಭಾಗಶಃ ಹಾನಿಗೊಳಗಾಗಿವೆ. ಘಟನೆಯಲ್ಲಿ ಜೀಪಿನಲ್ಲಿ ಪ್ರಯಾಣಿಸುತ್ತಿದ್ದ ಸುಂದರಿ, ಗಿರಿಜಾ ಮತ್ತು ಲಲಿತ ಎಂಬ ಮಹಿಳೆಯರು ಹಾಗೂ ರಿಕ್ಷಾ ಚಾಲಕ ಸಿದ್ದಿಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ತಕ್ಷಣ ಕೊಕ್ಕಡ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಪ್ರಾಥಮಿಕ

ಮಣಿಪಾಲ: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಆಗಿ ಡಾ. ಅನಿಲ್ ಕೆ. ಭಟ್ ನೇಮಕ

ಮಣಿಪಾಲ: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಡೀನ್ ಆಗಿ ಡಾ. ಅನಿಲ್ ಕೆ ಭಟ್ ಅವರನ್ನು ಮೇ 1, 2025 ರಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಅತುತ್ತಮ ವೈದ್ಯರು, ಶಿಕ್ಷಣ ತಜ್ಞರು ಮತ್ತು ಆಡಳಿತಾಧಿಕಾರಿಯಾಗಿರುವ ಡಾ. ಭಟ್ ಅವರು ಮೂಳೆಚಿಕಿತ್ಸೆ, ಕೈ ಶಸ್ತ್ರಚಿಕಿತ್ಸೆ, ಸಂಶೋಧನೆ ಮತ್ತು ವೈದ್ಯಕೀಯ ಶಿಕ್ಷಣದಲ್ಲಿ ಸುಮಾರು ಎರಡು ದಶಕಗಳಿಗೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಈ ನೇಮಕಾತಿ ಬಗ್ಗೆ ಮಾತನಾಡಿದ, ಮಾಹೆಯ ಉಪಕುಲಪತಿ ಲೆಫ್ಟಿನೆಂಟ್