ವಿಶ್ವವಿದ್ಯಾನಿಲಯದ 43ನೇ ಘಟಿಕೋತ್ಸದಲ್ಲಿ ಉದ್ಯಮಿಗಳಾದ ರೋಹನ್ ಮೊಂತೆರೋ, ಡಾ.ಎಂ.ಎನ್.ರಾಜೇಂದ್ರ ಕುಮಾರ್ , ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ಮಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ. ಮಾ. 29ರಂದು ಪೂರ್ವಾಹ್ನ 11ಕ್ಕೆ ವಿಶ್ವವಿದ್ಯಾನಿಲಯದ ಆವರಣದ ಮಂಗಳ ಸಭಾಂಗಣದಲ್ಲಿ ಘಟಿಕೋತ್ಸವ ನಡೆಯಲಿದೆ ಎಂದು ವಿವಿ ಕುಲಪತಿ ಪ್ರೊ.ಧರ್ಮ
ನೇತ್ರಾವತಿ ನದಿ ತೀರದಲ್ಲೇ ಇರುವ ಬಜಾಲ್ ಕಟ್ಟಪುನಿ ಪ್ರದೇಶಕ್ಕೆ ಸರಿಯಾದ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗದ ಶಾಸಕರು, ಪಾಲಿಕೆ ಸದಸ್ಯರು ಯಾಕಿರಬೇಕು. ಈ ಕೂಡಲೇ ನೀರು ವಿತರಿಸುವಲ್ಲಿ ವಿಳಂಬವಾದರೆ ಇದೇ ಖಾಲಿ ಕೊಡಗಳನ್ನು ಹಿಡಿದು ಪಾಲಿಕೆ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಲಿದ್ದೇವೆ ಎಂದು ಬಜಾಲ್ ವಾರ್ಡ್ ಅಭಿವೃದ್ಧಿ ಹೋರಾಟ ಸಮಿತಿ ಕಾರ್ಯದರ್ಶಿ, ಡಿವೈಎಫ್ಐ ಮುಖಂಡ ಸಂತೋಷ್ ಬಜಾಲ್ ಇಂದು ( 27-03-2025) ಬಜಾಲ್ ಕಟ್ಟಪುನಿ ಪ್ರದೇಶದ
ನವದೆಹಲಿ: ಪುತ್ತೂರು ಶ್ರೀ ಮಹಾಲಿಂಗೇಶ್ವರ, ಶಿಶಿಲದ ಶ್ರೀ ಶಿಶಿಲೇಶ್ವರ ದೇವಸ್ಥಾನ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪ್ರಮುಖ ದೇವಾಲಯಗಳನ್ನು ಕೇಂದ್ರ ಸರ್ಕಾರ ‘ಪ್ರಸಾದ್’ ಯೋಜನೆಯಡಿಯಲ್ಲಿ ಅಭಿವೃದ್ದಿಪಡಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಜೊತೆ ನವದೆಹಲಿಯಲ್ಲಿ
ಮೂಡುಬಿದಿರೆ : ಅವಿಭಜಿತ ದ.ಕ ಜಿಲ್ಲೆಯಲ್ಲಿ ಈ ವರ್ಷದ ಋತುವಿನ ಕಂಬಳಗಳು ಮುಕ್ತಾಯದ ಹಂತದಲ್ಲಿದ್ದು ಮೂರ್‍ನಾಲ್ಕು ಕಂಬಳಗಳು ಮಾತ್ರ ಬಾಕಿಯುಳಿದಿದ್ದು ಈ ಕಂಬಳಗಳನ್ನಾದರೂ ಗೊಂದಲರಹಿತವಾಗಿ ನಡೆಸುವಂತೆ ಜಿಲ್ಲಾ ಕಂಬಳ ಸಮಿತಿಯು ಬೇಡಿಕೊಂಡಿದೆ. ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಇಲ್ಲಿನ ಸೃಷ್ಠಿ ಗಾರ್ಡನ್‌ನಲ್ಲಿ ಬುಧವಾರ ನಡೆದ ಪರಾಮಶೆ೯ ಸಭೆಯಲ್ಲಿ ಮಾತನಾಡಿದ ಅಧ್ಯಕ್ಷರು ಈಗಾಗಲೇ ನಡೆದಿರುವಒಂದೆರಡು ಕಂಬಳಗಳಲ್ಲಿ ಗೊಂದಲಗಳು
ದರೆಗುಡ್ಡೆ ಗ್ರಾಮ ಪಂಚಾಯತ್‌ದ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಉಮಾನಾಥ ಎ. ಕೋಟ್ಯಾನ್ ಉದ್ಘಾಟಿಸಿದರು.17ಲಕ್ಷ ರೂ. ವೆಚ್ಚದ ಸಂಜೀವಿನಿ ಕಟ್ಟಡ, 20ಲಕ್ಷ ರೂ. ವೆಚ್ಚದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ, ರಸ್ತೆ, 12ಲಕ್ಷ ರೂ. ವೆಚ್ಚದಲ್ಲಿ ಕೆಲ್ಲಪುತ್ತಿಗೆಯಲ್ಲಿ ರುದ್ರಭೂಮಿ ಹಾಗೂ 15ಲಕ್ಷ ರೂ ವೆಚ್ಚದಲ್ಲಿ ದರೆಗುಡ್ಡೆ ನರಂಗೊಟ್ಟು ಎಂಬಲ್ಲಿ ರುದ್ರಭೂಮಿ ಹಾಗೂ ರಸ್ತೆ ಕಾಮಗಾರಿಗಳನ್ನು ಅವರು ಉದ್ಘಾಟಿಸಿದರು. ನಂತರ ಸಭೆಯನ್ನುದ್ದೇಶಿಸಿ
ಮಂಗಳೂರು : ಸಮರ ವೀರ ಕೆದಂಬಾಡಿ ರಾಮಯ್ಯ ಗೌಡ್ರ ಮುಂದಾಳತ್ವದಲ್ಲಿ ನಡೆದ ಅಮರ ಸುಳ್ಯ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಗೆದ್ದು ಮಂಗಳೂರಿನ ಬಾವುಟ ಗುಡ್ಡೆಯಲ್ಲಿ ವಿಜಯ ದ್ವಜ ಹಾರಿಸಿ ಮತ್ತು 13 ದಿವಸ ಆಡಳಿತ ನಡೆಸಿದ ಸಂಸ್ಮರಣಾ ದಿನ ಆಚರಣೆಯ ಅಂಗವಾಗಿ ತುಳುನಾಡ ಅಮರ ಸುಳ್ಯ ಸಮರ – 1837 ಸಂಸ್ಮರಣಾ ಮತ್ತು ವಿಜಯದಿನಾಚರಣೆ ಕಾರ್ಯಕ್ರಮ ಪ್ರಯುಕ್ತ ಸಮರ ವೀರ ಕೆದಂಬಾಡಿ ರಾಮಯ್ಯ ಗೌಡ ಸ್ಥಾಪನ ಸಮಿತಿ ಮಂಗಳೂರು ವತಿಯಿಂದ ಚಿತ್ರಕಲಾ ಸ್ಪರ್ಧೆ ಏ.5 ರಂದು ಬೆಳಗ್ಗೆ 9 […]
ಮಂಗಳೂರು ದೇರಳಕಟ್ಟೆಯ ಯೆನೆಪೊಯ ಡೆಂಟಲ್ ಕಾಲೇಜಿನ ಆರ್ಥೊಡಾಂಟಿಕ್ಸ್ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾದ ಡಾ. ಸಂದೀಪ್ ಶೆಟ್ಟಿ ಅವರು, ಕ್ಲಾಸ್ III ಮ್ಯಾಲೋಕ್ಲೂಷನ್ ಚಿಕಿತ್ಸೆಗಾಗಿ ಹೊಸತು SAVE ಸಾಧನವನ್ನು ಅಭಿವೃದ್ಧಿಪಡಿಸಿ ಹೊಸ ತಂತ್ರವನ್ನು ಪರಿಚಯಿಸಿದ್ದಾರೆ. ಡಾ. ಸಂದೀಪ್ ಶೆಟ್ಟಿ ಅವರ ಪಿಎಚ್ಡಿ ಪ್ರಬಂಧ "SAVE: A Novel Appliance and Its Finite Evaluation for Correction of Deficient Maxilla" ನಲ್ಲಿ ಪ್ರಸ್ತಾಪಿಸಿದ ಅವರ
ಮೂಡುಬಿದಿರೆ: ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ 26 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕಲ್ಲಮುಂಡ್ಕೂರು ಗ್ರಾಮದ ಮಾಣಿಲ ಮನೆಯ ರಿಚಾರ್ಡ್ ನೊರೊನ್ಹ ಎಂಬ ಆರೋಪಿಯನ್ನು ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. 1999 ರಲ್ಲಿ ಮಾಣಿಲ ಮನೆಯಲ್ಲಿ ನಡೆದ ಹಲ್ಲೆ ಹಾಗೂ ಕೊಲೆ ಬೆದರಿಕೆಗೆ ಸಂಬಂಧಿಸಿ ತೆರೆಸಾ ಸಿಕ್ವೇರಾ ಅವರು ರಿಚಾರ್ಡ್ ಸಹಿತ ನಾಲ್ಕು ಮಂದಿಯ ವಿರುದ್ಧ ಮೂಡುಬಿದಿರೆ ಠಾಣೆಗೆ ದೂರು
ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ ಬಾಳೆಹೊನ್ನೂರು ಸಂಘದ ಗೌರವಯುತ ಸತೀಶ್ ಪೂಜಾರಿಯವರ ನೇತೃತ್ವದಲ್ಲಿ ನೂತನ ಅಧ್ಯಕ್ಷರ ಆಯ್ಕೆಯನ್ನು ಚೀಟಿ ಎತ್ತುವ ಮೂಲಕ ನಡೆಸಲಾಯಿತು. ಈ ಪ್ರಕ್ರಿಯೆಯಲ್ಲಿ ಎನ್ ಎ ಸಂಜೀವ ಪೂಜಾರಿಯವರು ಆಯ್ಕೆಗೊಂಡರು. ನೂತನ ಅಧ್ಯಕ್ಷರನ್ನು ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ ಬಾಳೆಹೊನ್ನೂರು ಸಂಘದ ಎಲ್ಲಾ ಸದಸ್ಯರುಗಳು ಒಮ್ಮತದ ಒಪ್ಪಿಗೆಯೊಂದಿಗೆ ಶುಭ ಹಾರೈಸಿದರು.




























