ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ ಆಶ್ರಯದಲ್ಲಿ ಆಲೆಟ್ಟಿ ಗ್ರಾಮದ ಕುಡೆಕಲ್ಲಿನಲ್ಲಿ ಅರೆಭಾಷಿಕರ ಐನ್ ಮನೆ ಐಸಿರಿ ಕಾರ್ಯಕ್ರಮ ನಡೆಯಲಿದ್ದು, ಆಮಂತ್ರಣ ಬಿಡುಗಡೆ ಕಾರ್ಯಕ್ರಮ ಸುಳ್ಯದ ಶ್ರೀಹರಿ ಕಾಂಪ್ಲೆಕ್ಸ್ ನಲ್ಲಿರುವ ರಂಗಮಯೂರಿಯ ಕಲಾ ಶಾಲೆಯಲ್ಲಿ ಮಾ.21ರಂದು ನಡೆಯಿತು. ನಿವೃತ್ತ ಪ್ರಾಂಶುಪಾಲೆ ಡಾ.ರೇವತಿ ನಂದನ್ ರವರು ಆಮಂತ್ರಣ
ಮಣಿಪಾಲವನ್ನು ಮಲೇರಿಯಾ ಮುಕ್ತವಾಗಿಸುವ ನಿಟ್ಟಿನಲ್ಲಿ ರೋಟರಿ ಮಣಿಪಾಲ ಹಿಲ್ಸ್ ಸಂಸ್ಥೆಯು ರೋಟರಿಯನ್ಸ್ ಎಗೇನ್ಸ್ಟ್ ಮಲೇರಿಯಾ (RAM-G) ಸಹಯೋಗದೊಂದಿಗೆ ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರೋಟರಿ ಮಣಿಪಾಲ ಹಿಲ್ಸ್ ಅಧ್ಯಕ್ಷೆ ರೊಟೇರಿಯನ್ ಸುಪರ್ಣಾ, “ಸಮುದಾಯದ ಆರೋಗ್ಯ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ” ಎಂದರು. ಎಂಐಟಿ ನಿರ್ದೇಶಕರಾದ ಡಾ. ಅನಿಲ್ ರಾಣಾ ಅವರು ಮಣಿಪಾಲ ಸರೋವರದ ಬಳಿ ಬೇವಿನ ಸಸಿಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ
ಮಂಜೇಶ್ವರ : ಮಂಜೇಶ್ವರ ರಾಗಂ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಕಾರೊಂದು ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಗಂಭೀರಾವಸ್ಥೆಯಲ್ಲಿದ್ದ ಪಾದಾಚಾರಿಯನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಬಾಯಾರು ಚಿಗುರುಪಾದೆ ಕುಳೂರು ಕುಳ ಬೈಲು ನಿವಾಸಿ ಜಯಂತ (48) ಅಪಘಾತಕ್ಕೀಡಾದ ವ್ಯಕ್ತಿ. ಅನಾರೋಗ್ಯ ಪೀಡಿತರಾದ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲು
ಪಡುಬಿದ್ರಿ ರಾಗ್ ರಾಂಗ್ ಕಲ್ಚರಲ್ ಕ್ಲಬ್ (ರಿ) ವತಿಯಿಂದ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ 20 ನೇ ವರ್ಷದ ” ಸ್ಟಾರ್ ನೃೆಟ್” ಸಾಂಸ್ಕೃತಿಕ ಕಾರ್ಯಕ್ರಮವು ವಿಶ್ವಾಸ್ ವಿ.ಅಮೀನ್ ಸಾರಥ್ಯದಲ್ಲಿ ಮಾರ್ಚ್ 21 ರಂದು ರಾತ್ರಿ 8:00 ಗಂಟೆಗೆ ದೇವಸ್ಥಾನದ ವಠಾರದಲ್ಲಿ ಅದ್ದೂರಿ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಗಣ್ಯಾತೀ ಗಣ್ಯರು ಹಾಗು ಕನ್ನಡ ಮತ್ತು ತುಳು ಚಿತ್ರರಂಗದ ಖ್ಯಾತ ನಟ ನಟಿಯರು ಭಾಗವಹಿಸಲಿದ್ದು, ವಿವಿಧ
ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಮಹಿಳಾ ಒಕ್ಕೂಟ ಮಡಿಕೇರಿ ಎಂಬ ನೂತನ ಸಂಘಟನೆ ಅಸ್ತಿತ್ವಕ್ಕೆ ಬಂದಿದ್ದು, ಇದರ ಉಪಾಧ್ಯಕ್ಷರಾಗಿ ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ ಮಹಿಳಾ ಘಟಕದ ಅಧ್ಯಕ್ಷರಾಗಿರುವ ಶ್ರೀಮತಿ ವಿನುತಾ ಹರಿಶ್ಚಂದ್ರ ಪಾತಿಕಲ್ಲು ಆಯ್ಕೆಯಾಗಿದ್ದಾರೆ. ಸಮಿತಿಯ ಅಧ್ಯಕ್ಷರಾಗಿ ಮೂಟೇರ ಪುಷ್ಪಾವತಿ ರಮೇಶರವರ ನೇತೃತ್ವದಲ್ಲಿ ತಂಡ ರಚನೆಯಾಗಿದೆ. ಶ್ರೀಮತಿ ವಿನುತಾ ಪಾತಿಕಲ್ಲುರವರು ಮಂಡೆಕೋಲು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಹಾಲಿ
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಕರಾವಳಿ ಲೇಖಕಿಯರ ವಾಚಕಿಯರ ಸಂಘ, ಹೇಮಾಂಶು ಪ್ರಕಾಶನ, ಆಕೃತಿ ಆಶಯ ಪಬ್ಲಿಕೇಶನ್ಸ್ ವತಿಯಿಂದ ಇತ್ತೀಚೆಗೆ ನಿಧನರಾದ ಹಿರಿಯ ವಿದ್ವಾಂಸರಾದ ಡಾ. ವಾಮನ ನಂದಾವರ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವು ನಗರದ ತುಳು ಅಕಾಡೆಮಿಯ ಸಿರಿ ಚಾವಡಿಯಲ್ಲಿ ನಡೆಯಿತು. ಆರದ ಎಣ್ಣೆ, ಮಾಸದ ಬತ್ತಿ, ಆರದ ದೀಪ ಎಂಬ ಹೆಸರಿನಲ್ಲಿ ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಂಡರು. ಕಾರ್ಯಕ್ರಮದ ಮೊದಲಿಗೆ ವಾಮನ ನಂದಾವರ ಅವರ ಭಾವ ಚಿತ್ರಕ್ಕೆ ಪುಷ್ಪ
ವಿಟ್ಲ: ಡ್ರೆಸ್ ಶಾಪ್‌ನಲ್ಲಿ ಒಂಟಿ ಮಹಿಳೆ ಕೆಲಸ ಮಾಡುತ್ತಿದ್ದ ವೇಳೆ ನವೀನ್ ಕುಂಪಲ ಮತ್ತು ಇತರ ಮೂರು ಜನ ಏಕಾಏಕಿ ಅಂಗಡಿಯೊಳಗೆ ಅಕ್ರಮ ಪ್ರವೇಶ ಮಾಡಿ ಬೆದರಿಸಿ ಅಂಗಡಿಯಲ್ಲಿದ್ದ ಬಟ್ಟೆ ಮತ್ತು ವಸ್ತುಗಳನ್ನು ದೋಚಿ ಪರಾರಿಯಾದ ಘಟನೆ ವಿಟ್ಲ ಶಾಲಾ ರಸ್ತೆ ಬಳಿ ನಡೆದಿದೆ. ಮಾರ್ಚ್ ೧೮ ರ ಮಧ್ಯಾಹ್ನ ವೇಳೆ ಏಕಾಏಕಿ ಅಂಗಡಿಗೆ ಅಕ್ರಮ ಪ್ರವೇಶ ಮಾಡಿದ ನಾಲ್ಕು ಜನರ ತಂಡ ಅಂಗಡಿಯಲ್ಲಿರುವ ವಸ್ತುಗಳನ್ನು ಹಾಗೂ ಬಟ್ಟೆಯನ್ನು ತನ್ನ ಬ್ಯಾಗಿನೊಳಗೆ ತುಂಬಿಸಿ ಕೊಂಡೋಯ್ಯಲು
ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ಕರಿಯರ್ ಗೈಡೆನ್ಸ್ ಸೆಲ್ ಮತ್ತು ಐಕ್ಯುಎಸಿ ವತಿಯಿಂದ ವಿಜ್ಞಾನ ಸಂಘ ಮತ್ತು ನೇಚರ್ ಕ್ಲಬ್ ಸಹಯೋಗದೊಂದಿಗೆ ವೃತ್ತಿ ಕೌಶಲ್ಯ ಶಿಕ್ಷಣ ಮಾಹಿತಿ ಕಾರ್ಯಕ್ರಮವು ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ಟಾಟಾ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸ್ಕಿಲ್ಸ್ ಇಲ್ಲಿನ ಮ್ಯಾನೇಜರ್ ಪೂರ್ಣಚಂದ್ರ ಬಿ ಪಿ ಯವರು ಮಾತನಾಡಿ ಟಾಟಾ ಎಜುಕೇಶನ್ ಟ್ರಸ್ಟ್ ನ ಮೂಲಕ ಸ್ಕಿಲ್ ಇಂಡಿಯಾ ಯೋಜನೆಯಂತೆ ವಿಜ್ಞಾನ ಪದವಿ ಮತ್ತು ಬಿಸಿಎ ಪದವಿ
ಮಂಗಳೂರು ಸಿಸಿಬಿ ಪೊಲೀಸರು ರಾಜ್ಯದ ಇತಿಹಾಸದಲ್ಲೇ ಅತೀ ದೊಡ್ಡ ಡ್ರಗ್ಸ್ ಜಾಲವನ್ನು ಬೇಧಿಸಿರುವುದು ಪೊಲೀಸ್ ಇಲಾಖೆಯ ಬಗ್ಗೆ ಜಿಲ್ಲೆಯ ನಾಗರಿಕರು ಹೆಮ್ಮೆ ಪಡುವಂತಹ ವಿಷಯವಾಗಿದೆ ಎಂದು ವಿಧಾನ ಪರಿಷತ್ಸದಸ್ಯರಾದ ಮಂಜುನಾಥ ಭಂಡಾರಿ ಹೇಳಿದರು.ದಕ್ಷಿಣ ಕನ್ನಡ ಜಿಲ್ಲೆ ಇತ್ತೀಚಿನ ದಿನಗಳಲ್ಲಿ ಡ್ರಗ್ಸ್ ಜಾಲದ ಕಬಂಧಬಾಹುಗಳಲ್ಲಿ ಬಂಧಿಯಾಗಿದ್ದು ಜನಸಾಮಾನ್ಯರು ಆತಂಕ ಪಡುವಂತಹ ವಾತಾವರಣ ಸೃಷ್ಟಿಯಾಗಿತ್ತು. ಆದರೆ ಈ ಜಾಲದ ಬೆನ್ನುಬಿದ್ದ ಪೊಲೀಸರು ಅಂದಾಜು 75 ಕೋಟಿ
ಬೆಳ್ಳಾರೆ:ಶ್ರೀ ಕ್ಷೇತ್ರ ಧರ್ಮಸ್ಥಳ ಬಿ ಸಿ ಟ್ರಸ್ಟ್ ಸುಳ್ಯ ತಾಲೂಕು ಬೆಳ್ಳಾರೆ ವಲಯದ ಬೆಳ್ಳಾರೆ ಹಿಂದೂ ರುದ್ರ ಭೂಮಿ ಗೆ 1, 51,680/ ರೂಪಾಯಿ ಯ ಮೌಲ್ಯ ದ ಸಿಲಿಕಾನ್ ಚೆಂಬರ್ ನ ಮಂಜೂರಾತಿ ಪತ್ರ ವನ್ನು ತಾಲೂಕಿನ ಯೋಜನಾಧಿಕಾರಿಗಳು ಮಾದವ ಗೌಡ ರವರು ಪಂಚಾಯತ್ ಅಧ್ಯಕ್ಷರು ನಮಿತಾ /ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾಜಿ ಪಂಚಾಯತ್ ಅಧ್ಯಕ್ಷರು ಚಂದ್ರಶೇಖರ್ ಪನ್ನೆ,ವಲಯ ಅಧ್ಯಕ್ಷರು ವೇಧಾ ಯಲ್ ಯಚ್ ಶೆಟ್ಟಿ




























