Home Blog Left SidebarPage 131

ಉಪ್ಪಿನಂಗಡಿ: ಮನೆಯ ತೋಟದ ಕೆರೆಗೆ ಹಾರಿ ಯುವಕ ಆತ್ಮಹತ್ಯೆ

ಅವಿವಾಹಿತ ಯುವಕನೊಬ್ಬ ತನ್ನ ಮನೆಯ ತೋಟದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕದಲ್ಲಿ ನಡೆಯಿದೆ . ಇಲ್ಲಿನ ಕಿಂಡೋವು ಜಿನ್ನಪ್ಪ ಗೌಡ ಎಂಬವರ ಪುತ್ರ ಶ್ರೀನಿವಾಸ (28) ಆತ್ಮಹತ್ಯೆಗೈದ ಯುವಕ. ಕೂಲಿ ಕಾರ್ಮಿಕನಾಗಿದ್ದ ಶ್ರೀನಿವಾಸ ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದು, ಮಂಗಳವಾರ ಮುಂಜಾನೆ ಆತನ ಶವ ತೋಟದಲ್ಲಿನ ಕೆರೆಯಲ್ಲಿ

ನೆಲ್ಯಾಡಿ: ಗೇರುತೋಪಿಗೆ ಬೆಂಕಿ – ಐದಾರು ಎಕ್ರೆ ಜಾಗದಲ್ಲಿನ ಗೇರುಮರಗಳು ಬೆಂಕಿಗಾಹುತಿ – ಅಪಾರ ನಷ್ಟ

ನೆಲ್ಯಾಡಿ: ಗೇರುತೋಪಿಗೆ ಬೆಂಕಿಬಿದ್ದ ಪರಿಣಾಮ ಐದಾರು ಎಕ್ರೆ ಜಾಗದಲ್ಲಿದ್ದ ನೂರಾರು ಫಲಭರಿತ ಗೇರುಮರಗಳು ಬೆಂಕಿಗಾಹುತಿಯಾಗಿ ಅಪಾರ ನಷ್ಟ ಸಂಭವಿಸಿರುವ ಘಟನೆ ಗೋಳಿತ್ತೊಟ್ಟು ಸಮೀಪ ಶಾಂತಿಮಾರ್ ವ್ಯಾಪ್ತಿಯಲ್ಲಿ ಫೆ.24ರಂದು ಅಪರಾಹ್ನ ನಡೆದಿದೆ. ಗ್ರಾಮಸ್ಥರು ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ವಿದ್ಯುತ್ ಟ್ರಾನ್ಸ್‍ಫಾರ್ಮರ್‍ನಿಂದ ಹರಡಿದ ಬೆಂಕಿಯಿಂದಾಗಿ ಈ ಅನಾಹುತ ಸಂಭವಿಸಿದೆ ಎಂದು ಶಂಕಿಸಲಾಗಿದೆ.ಗೋಳಿತ್ತೊಟ್ಟು ಸಮೀಪ ಕೊಣಾಲು ಗ್ರಾಮದ

ನೆಲ್ಯಾಡಿ: ಪರಿಸರ ಜಾಗೃತಿಗೆ ಅರಣ್ಯ ಇಲಾಖೆ ಪಣ

ನೆಲ್ಯಾಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುತ್ತದೆ. ಅದರಲ್ಲೂ ಪ್ರತಿ ವರ್ಷ ಮಹಾ ಶಿವರಾತ್ರಿ ಆಚರಿಸಲು ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಲಕ್ಷಾಂತರ ಭಕ್ತರು ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸುತ್ತಾರೆ. ಪ್ರತಿ ವರ್ಷವೂ ನಡೆದುಕೊಂಡು ಬರುತ್ತಿರುವ ಪರಂಪರೆಯಾಗಿದೆ. ಆಗಮಿಸುವ ಪಾದಯಾತ್ರಿಗಳ ಅನುಕೂಲಕ್ಕಾಗಿ ಅರಣ್ಯ

ನೆಲ್ಯಾಡಿ: ದೋಂತಿಲ ಶ್ರೀ ಮಹಾವಿಷ್ಣು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನಕ್ಕೆ ಷಡಾಧಾರ, ಗರ್ಭನ್ಯಾಸಗಳ ಆಗಮನ-ಮೆರವಣಿಗೆ

ನೆಲ್ಯಾಡಿ:ಕೌಕ್ರಾಡಿ-ದೋಂತಿಲ ಶ್ರೀ ಮಹಾವಿಷ್ಣು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಜೀರ್ಣೋದ್ದಾರ ಪ್ರಯುಕ್ತ ಪ್ರತಿಷ್ಠಾಪನೆಯಾಗಲಿರುವ ಷಡಾಧಾರ ಮತ್ತು ಗರ್ಭನ್ಯಾಸಗಳನ್ನು ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ತರಲಾಯಿತು. ಕಾರ್ಕಳದಿಂದ ಶಿಲ್ಪಿಗಳು ತಂದ ಷಡಾಧಾರ ಮತ್ತು ಗರ್ಭನ್ಯಾಸಗಳನ್ನು ನೆಲ್ಯಾಡಿ ಸಂತಜಾರ್ಜ್ ವಿದ್ಯಾಸಂಸ್ಥೆಯ ಮುಂಭಾಗದಲ್ಲಿರುವ ಶಿಲ್ಪಾ ಕಾಂಪ್ಲೆಕ್ಸ್ ಎದುರು ಸ್ವಾಗತಿಸಲಾಯಿತು. ಅಲ್ಲಿಂದ ವಾಹನಗಳ ಮೆರವಣಿಗೆ, ಚೆಂಡೆ ವಾದನದೊಂದಿಗೆ ರಾಷ್ಟ್ರೀಯ

ಆಳ್ವಾಸ್‌ಗೆ ಅಖಿಲ ಭಾರತ ಗೋಲ್ಡ್ ಮೆಡಲ್ ಬಾಲ್ ಬ್ಯಾಡ್ಮಿಂಟನ್ ಪ್ರಶಸ್ತಿ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಸಂಸ್ಥೆಯ ಮಹಿಳಾ ತಂಡ ಬೆಂಗಳೂರಿನ ಜೆಪಿ ನಗರದಲ್ಲಿ ಮುಕ್ತಾಯಗೊಂಡ ಅಖಿಲ ಭಾರತ ಗೋಲ್ಡ್ ಮೆಡಲ್ ಬಾಲ್ ಬ್ಯಾಡ್ಮಿಂಟನ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಮೇರಿ ಗೋ ರೌಂಡ್ ಬಾಲ್ ಬ್ಯಾಡ್ಮಿಂಟನ್ ಕ್ಲಬ್‌ನ 50ನೇ ವರ್ಷದ ಸಂಭ್ರಮಾಚರಣೆಯ ಸಲುವಾಗಿ ಬೆಂಗಳೂರಿನ ಜೆಪಿ ನಗರದ ಆರ್‌ಬಿಐ ಲೇಔಟ್ ಕ್ರೀಡಾಂಗಣದಲ್ಲಿ ಹೊನಲು ಬೆಳಕಿನಲ್ಲಿ ನಡೆದ ಪಂದ್ಯಾವಳಿಯ ಫೈನಲ್ಸ್ನಲ್ಲಿ ಆಳ್ವಾಸ್ ತಂಡ ತಮಿಳುನಾಡುವಿನ ಪಿ.ಎಸ್.ಎನ್.ಎ ದಿಂಡಿಗಲ್

ನೆಲ್ಯಾಡಿ: ಚಲಿಸುತ್ತಿರುವ ಲಾರಿಯಿಂದ ಜಿಗಿದು ಸಾವು

ನೆಲ್ಯಾಡಿ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಚಲಿಸುತ್ತಿರುವ ಲಾರಿಯಿಂದ ಜಿಗಿದು ನಿರ್ವಾಹಕ ಸಾವನ್ನಪ್ಪಿದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ. ಲಕ್ಷ್ಮಣನ್ ಸೆಂಗುತ್ತುವನ್(46) ಚಿನ್ನತೂಬುರ್ ನಾಗಪಟ್ಟಿನಮ್, ತಮಿಳುನಾಡಿನ ವ್ಯಕ್ತಿ ಎಂದು ಗುರುತಿಸಲಾಗಿದೆ. ತಮಿಳುನಾಡಿನ ಕೃಷ್ಣಗಿರಿಯಿಂದ ಕಲ್ಲಂಗಡಿಯನ್ನು ತುಂಬಿಕೊಂಡು ಮಂಗಳೂರಿಗೆ ಬರುತ್ತಿದ್ದ ಲಾರಿಯು ಗುಂಡ್ಯ ಸಮೀಪದ ಅಡ್ಡಹೊಳೆ ತಲುಪುತಿದ್ದಂತೆ ಏಕಾಏಕಿಯಾಗಿ

ಉಡುಪಿ: ಲಾರಿ ಪಲ್ಟಿ:ಚಾಲಕ ಮೃತ್ಯು

ಉಡುಪಿ ಟಿಪ್ಪರ್ ಲಾರಿ ಪಲ್ಟಿಯಾಗಿ ಚಾಲಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಿಂಗೇರಿ ಗಣಪಣಕಟ್ಟೆ ತಿರುವಿನ ಬಳಿ ಮಂಗಳವಾರ (ಫೆ.25ರಂದು) ಮುಂಜಾನೆ ನಡೆದಿದೆ.ಮೃತರನ್ನು ಬೈಂದೂರಿನ ಸುಬ್ರಮಣ್ಯ ಆಚಾರ್ಯ (40) ಎಂದು ಗುರುತಿಸಲಾಗಿದೆ. ಮಂಗಳವಾರ ಮುಂಜಾನೆ ಸುಮಾರಿಗೆ ಈ ಘಟನೆ ನಡೆದಿದೆ. 4 ಗಂಟೆಯ ಟಿಪ್ಪರ್ ಬೈಂದೂರಿನಿಂದ ಪಳ್ಳಿಯ ಕೋರೆಗೆ ಜಲ್ಲಿ ತರಲು ಹೋಗುತ್ತಿದ್ದ ವೇಳೆ ಪಲ್ಟಿಯಾಗಿದೆ. ಪರಿಣಾಮ ಚಾಲಕ ಸುಬ್ರಮಣ್ಯ

ಕೋಟೆಕಾರು : “ಮಾಡೂರು ಶಾಖಾ ಅಂಚೆ ಕಚೇರಿ ಉದ್ಘಾಟನೆ”

ಅಂಚೆ ಕಚೇರಿಗಳು ಜನ ಸಾಮಾನ್ಯರ ಜೀವನಕ್ಕೆ ಅವಶ್ಯವಾದಂತಹ ಸೇವೆಗಳನ್ನು ಮನೆಬಾಗಿಲಿನಲ್ಲಿ ಆಧುನಿಕ ತಂತ್ರಜ್ಞಾನದೊಂದಿಗೆ ನೀಡುವ ಮೂಲಕ ಹಿಂದೆಂದಿಗಿಂತಲೂ ಹೆಚ್ಚು ಪ್ರಸ್ತುತವಾಗಿವೆ ಮತ್ತು ಬದಲಾದ ಕಾಲ ಘಟ್ಟದಲ್ಲಿ ಅಂಚೆ ಇಲಾಖೆಯ ಜನಸೇವೆ ಅತ್ಯಂತ ಶ್ಲಾಘನೀಯ ಎಂದು ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಹೇಳಿದರು. ಕೋಟೆಕಾರಿನ ಮಾಡೂರಿನಲ್ಲಿ ಹೊಸ ಶಾಖಾ ಅಂಚೆ ಕಚೇರಿಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಹೊಸ ಶಾಖಾ

ನೆಹರೂ ಮೆಮೋರಿಯಲ್ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆಯ 47ನೇ ವರ್ಷದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ

ಮಂಗಳೂರು ವಿಶ್ವವಿದ್ಯಾನಿಲಯ, ನೆಹರೂ ಮೆಮೋರಿಯಲ್ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆಯ ನಲವತ್ತೇಳನೇ ವರ್ಷದ ವಾರ್ಷಿಕ ವಿಶೇಷ ಶಿಬಿರವು ಫೆ. 22ನೇ ಶನಿವಾರದಿಂದ ಫೆ. 28 ಶುಕ್ರವಾರದವರೆಗೆ ಮಂಡೆಕೋಲು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕನ್ಯಾನದಲ್ಲಿ ನಡೆಯುತ್ತಿದ್ದು ಈ ಶಿಬಿರವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಇವರು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಡಾ| ರುದ್ರಕುಮಾರ್ ಎಂ. ಎಂ.,

ಬೆಳ್ಳಾರೆ: ಬೀಡು-ಪಾಟಾಜೆ ದುರಸ್ಥಿಗೆ ಆಗ್ರಹ: ಪ್ರತಿಭಟನೆ ನಡೆಸಲು ನಿರ್ಧರಿಸಿದ ಗ್ರಾಮಸ್ಥರು

ಕಳೆದ 16 ವರುಷಗಳಿಂದ ಹದೆಗೆಟ್ಟಿರುವ ಬೆಳ್ಳಾರೆ ಗ್ರಾಮದ ಬೀಡು-ಪಾಟಾಜೆ ರಸ್ತೆ ಯನ್ನು ಡಾಮರೀಕರಣಗೊಳಿಸುವಂತೆ ಆಗ್ರಹಿಸಿ ಬೆಳ್ಳಾರೆಯ ಮುಖ್ಯ ಪೇಟೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ. ಶೀಘ್ರದಲ್ಲೇ ನಮ್ಮ ಬೀಡು, ಪಾಟಾಜೆ ರಸ್ತೆ ದುರಸ್ತಿಗೊಳಿಸುವ ಭರವಸೆಯನ್ನು ಸರಕಾರ ಹಾಗೂ ಇದಕ್ಕೆ ಸಂಬಂಧ ಪಟ್ಟ ಅಧಿಕಾರಿಗಳು ಕೊಡದೇ ಹೋದಲ್ಲಿ ಇಲ್ಲಿನ ಎಲ್ಲಾ ನಿವಾಸಿಗಳು ರಸ್ತೆಗೆ ಇಳಿದು ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನು ನೀಡಿದ್ದಾರೆ. ಈ