Home Blog Left SidebarPage 163

ಸಾಮಾನ್ಯ ಕಾರ್ಯಕರ್ತನನ್ನು ಕಾಂಗ್ರೆಸ್ ಪಕ್ಷ ಗುರುತಿಸಿ ಟಿಕೆಟ್ ನೀಡಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ವಿಧಾನಪರಿಷತ್ತಿನ ಉಪಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಪಕ್ಷದ‌ ಶಿಸ್ತಿನ ಸಿಪಾಯಿ ಆಗಿದ್ದು, ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಪಕ್ಷ ಟಿಕೆಟ್ ನೀಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ದಕ್ಷಿಣ ಕನ್ನಡ –

ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಗೆಲುವು ನಿಶ್ಚಿತ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ : ದಕ್ಷಿಣ ಕನ್ನಡ – ಉಡುಪಿ ಸ್ಥಳೀಯ ಸಂಸ್ಥೆಗಳ ಕರ್ನಾಟಕ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಗೆಲುವು ಶತಸಿದ್ಧ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಶ್ವಾಸ ವ್ಯಕ್ತಪಡಿಸಿದ್ಧಾರೆ. ಉಡುಪಿಯ ಕಾಂಗ್ರೆಸ್ ಭವನದಲ್ಲಿ ನಡೆದ ಚುನಾವಣಾ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಗೆಲುವು

ಮಹರ್ಷಿ ವಾಲ್ಮೀಕಿಯವರ ತತ್ವಾದರ್ಶಗಳು ಮುಂದಿನ ಪೀಳಿಗೆಗೂ ಮಾದರಿ -ಜಿಲ್ಲಾಧಿಕಾರಿ  ಡಾ. ಕೆ, ವಿದ್ಯಾಕುಮಾರಿ

ಉಡುಪಿ,: ಶ್ರೀ ಮಹರ್ಷಿ ವಾಲ್ಮೀಕಿಯವರು  ನಾಗರಿಕ ಸಮಾಜದ ಮೊದಲ ಅಕ್ಷರ   ಜ್ಞಾನಿ. ಅವರು ರಾಮಾಯಣದ ಮೂಲಕ ಬಿಂಬಿಸಿದ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು  ನಮ್ಮ ಮುಂದಿನ ಪೀಳಿಗೆಗೂ ಮಾದರಿಯಾಗಿರೋಣ ಎಂದು ಜಿಲ್ಲಾಧಿಕಾರಿ  ಡಾ. ಕೆ, ವಿದ್ಯಾಕುಮಾರಿ ತಿಳಿಸಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್‌, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ,   ಉಡುಪಿ ನಗರಸಭೆ ಮತ್ತು ಪರಿಶಿಷ್ಟ

ಪ್ರಾಮಾಣಿಕತೆ ಮೆರೆದ ಆಟೋ ಚಾಲಕ..!

ಮಣಿಪಾಲ: ಆಟೋ ಚಾಲಕ ಪ್ರಯಾಣಿಕರು ಆಟೋ ರಿಕ್ಷಾದಲ್ಲಿ ಮರೆತು ಬಿಟ್ಟು ಹೋದ ಮೊಬೈಲ್ ಹಾಗೂ ಹಣವನ್ನು ಮರಳಿಸಿ ಪ್ರಾಮಾಣಿಕತೆ ಮೆರೆದ ಘಟನೆ ಅ. 19 ರಂದು ಮಣಿಪಾಲದಲ್ಲಿ ನಡೆದಿದೆ.ಆಟೋ ಚಾಲಕರು ಎಂದರೇ ಸ್ವಲ್ಪ ದೂರ ಸಂಚಾರ ಮಾಡಲು ಸಾಕಷ್ಟು ದುಡ್ಡು ಕೇಳುತ್ತಾರೆ ಎನ್ನುವ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುವುದು ಸಹಜ. ಆದರೆ ಖಾಕಿ ತೊಟ್ಟು ಆಟೋ ಚಾಲನೆ ಮಾಡುವ ಚಾಲಕರಲ್ಲಿಯೂ ಒಬ್ಬ ಸಹೃದಯಿ ಸೇವಕ ಇರುತ್ತಾನೆ ಎಂಬ ಮಾತು ಸಹ ಅಕ್ಷರಶಃ ಸತ್ಯ. ಅದೇ ರೀತಿ […]

ನಟ ಕಿಚ್ಚ ಸುದೀಪ್ ಅವರಿಗೆ  ಮಾತೃ ವಿಯೋಗ

ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಸಂಜೀವ್‌ ಅವರು ಬೆಳಗ್ಗೆ 7 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕೆಲವು ಸಮಯದಿಂದ ಸರೋಜಾ ಅವರು ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಜಯನಗರದ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸರೋಜಾ ಸಂಜೀವ್ ಅವರು ಕೊನೆಯುಸಿರೆಳೆದಿದ್ದಾರೆ.

ದಿಲ್ಲಿ : ವಿಮಾನಗಳಲ್ಲಿ ಬಾಂಬಿಟ್ಟ ಸುಳ್ಳು ಕರೆಗಳ ಸರಣಿ: ಮರಳಿ ಬಂದಿಳಿದ ಲಂಡನ್ ದಿಲ್ಲಿ ವಿಮಾನ

ಇದೇ ಸೋಮವಾರದಿಂದ ವಿಮಾನಗಳಲ್ಲಿ ಬಾಂಬ್ ಇಟ್ಟಿರುವ ಬೆದರಿಕೆ ಕರೆಗಳು ಬರುತ್ತಿದ್ದು, ಕಳೆದ ೨೪ ಗಂಟೆಗಳಲ್ಲಿನ 3 ಸೇರಿ ಒಟ್ಟು ೩೫ಕ್ಕೂ ಹೆಚ್ಚು ಬಾಂಬ್ ಬೆದರಿಕೆ ಕಾರಣಕ್ಕೆ ವಿಮಾನಗಳನ್ನು ಬೇರೆಡೆ ತಿರುಗಿಸಿದೆ, ಇಲ್ಲವೇ ತುರ್ತಾಗಿ ಅಲ್ಲೇ ಕೆಳಕ್ಕೆ ಇಳಿಸಲಾಯಿತು. ಕಳೆದ 24 ಗಂಟೆಗಳಲ್ಲಿ ಮೂರು ಪ್ರಮುಖ ವಿಮಾನ ಯಾನಗಳು ತತ್ತರಿಸಿವೆ. ವಿಸ್ತಾರ ಸೇವೆಯ ಲಂಡನ್ ದಿಲ್ಲಿ ವಿಮಾನವನ್ನು ಜರ್ಮನಿಯ ಫ್ರಾಂಕ್‌ಫರ್ಟ್‌ಗೆ ತಿರುಗಿಸಲಾಗಿದೆ. ಜೈಪುರ ದುಬಾಯಿ, ಬೆಂಗಳೂರು

ಮಂಗಳೂರು: ಕೆಎಂಸಿ ಆಸ್ಪತ್ರೆಯಲ್ಲಿ ಸ್ತನ ಸ್ವಾಸ್ಥ್ಯ ಕೇಂದ್ರ ಆರಂಭ

ಮಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿರುವ ಕೆಎಂಸಿ ಆಸ್ಪತ್ರೆ ವತಿಯಿಂದ ಸ್ತನ ಕ್ಯಾನ್ಸರ್ ಜಾಗೃತಿ ತಿಂಗಳನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸ್ತನ ಸ್ವಾಸ್ಥ್ಯ ಕೇಂದ್ರ ಆರಂಭಿಸಲಾಗಿದೆ ಎಂದು ಕೆಎಂಸಿ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಆಂಕೋಲಾಜಿಸ್ಟ್ ಡಾ. ಹರೀಶ್  ಅವರು ಹೇಳಿದರು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಕ್ಯಾನ್ಸರ್ ಆರೈಕೆಗಾಗಿ ಅತ್ಯುತ್ತಮ ದರ್ಜೆಯ ಚಿಕಿತ್ಸೆಯನ್ನು

ಕಲ್ಲಾಪು:  ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳಕ್ಕೆ ನಟ ದುನಿಯಾ ವಿಜಯ್ ಭೇಟಿ

ಉಳ್ಳಾಲ : ಕೊರಗಜ್ಜನ ಬಗ್ಗೆ ಕೇಳುತ್ತಾ ಬಂದಿದ್ದೇನೆ. ವಿಶೇಷ ಸ್ಥಳಕ್ಕೆ ಭೇಟಿ ನೀಡುವ ಉದ್ದೇಶದಿಂದ ಮಂಗಳೂರು ಶೂಟಿಂಗ್ ಇರುವ ಸಮಯದಲ್ಲಿ ಬಂದಿರುವೆನು. ಮುಂದಿನ ಪ್ರಾಜೆಕ್ಟ್ ಆಗಿ ಮಗಳಿಗಾಗಿಯೇ ಒಂದು ಚಿತ್ರ ತೆಗೀತಾ ಇದ್ದೇನೆ, ಸಿಟಿ ಲೈಫ್ಸ್ ಅನ್ನುವ ಶೀರ್ಷಿಕೆಯಡಿ ನಡೆಸುವ ಚಿತ್ರವನ್ನು ತಾನೇ ನಿರ್ದೇಶಿಸಲಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಅವರು ಕಲ್ಲಾಪು ಬುರ್ದುಗೋಳಿ ಗುಳಿಗ ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳಕ್ಕೆ ಶುಕ್ರವಾರ ರಾತ್ರಿ ಸಂದರ್ಶನಗೈದು

ಉಳ್ಳಾಲ: ಪೆಟ್ರೋಲ್ ಸ್ಕೂಟರ್ ಬೆಂಕಿಗಾಹುತಿ

ಉಳ್ಳಾಲ: ಮನೆ ಅಂಗಳದಲ್ಲಿ ನಿಲ್ಲಿಸಿಡಲಾಗಿದ್ದ ಪೆಟ್ರೋಲ್ ಸ್ಕೂಟರ್ ಬೆಂಕಿಗೆ ಆಹುತಿಯಾದ ಘಟನೆ ಕುಂಪಲ ಸಮೀಪದ ವಿದ್ಯಾನಗರ ಎಂಬಲ್ಲಿ ತಡರಾತ್ರಿ ಸಂಭವಿಸಿದೆ. ಐಟಿಐ ವಿದ್ಯಾರ್ಥಿ ರಾಕೇಶ್ ಎಂಬವರಿಗೆ ಸೇರಿದ ಸ್ಕೂಟರ್ ಬೆಂಕಿಗೆ ಆಹುತಿಯಾಗಿದೆ. ಎರಡು ತಿಂಗಳ ಹಿಂದಷ್ಟೇ ಟಿವಿಎಸ್ ಎಂಟಾರ್ಕ್ ಸ್ಕೂಟರನ್ನು  ರಾಕೇಶ್ ಖರೀದಿಸಿದ್ದು, ಮೊದಲ ತಿಂಗಳ ಸಾಲದ ಕಂತನ್ನು ಕಟ್ಟಿದ್ದರು. ತಡರಾತ್ರಿ 12.30ರ ಸುಮಾರಿಗೆ ಇದ್ದಕ್ಕಿಂತೆ ಸ್ಕೂಟರ್ ಗೆ ಬೆಂಕಿ ಆವರಿಸಿ, ಬೆಂಕಿಯ

ಪುತ್ತೂರು: ರಾಜ್ಯದಲ್ಲಿ 12 ಲಕ್ಷ ಬಿಪಿಎಲ್ ಕಾರ್ಡ್ ರದ್ದು ಮಾಡಿದ್ರೆ ಬಿಜೆಪಿಯಿಂದ ಬೃಹತ್ ಹೋರಾಟ: ಸಂಸದ ಕೋಟ

ಪುತ್ತೂರು: ರಾಜ್ಯದಲ್ಲಿ  12ಲಕ್ಷ ಬಿಪಿಎಲ್ ಕಾರ್ಡ್‌ಗಳನ್ನು ಅನಧಿಕೃತ ಬಿಪಿಎಲ್ ಕಾರ್ಡ್‌ಗಳೆಂದು ಗುರುತಿಸಲಾಗಿದ್ದು, ಇವುಗಳನ್ನು ರದ್ದು ಮಾಡಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಿದ್ಧತೆ ನಡೆಸುತ್ತಿದೆ ಎಂದು ಗೊತ್ತಾಗಿದೆ. ಇದರ ವಿರುದ್ಧ ಬಿಜೆಪಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲಿದೆ ಎಂದು ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಸಿದರು. ವಿಧಾನ ಪರಿಷತ್ ಉಪ ಚುನಾವಣೆ ಹಿನ್ನೆಲೆಯಲ್ಲಿ  ಪುತ್ತೂರಿಗೆ ಬಂದಿದ್ದ