ಮೂಡುಬಿದಿರೆ: ಇಲ್ಲಿನ ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ನ ಗೌರವಾಧ್ಯಕ್ಷ, ವಿದ್ಯುತ್ ಗುತ್ತಿಗೆದಾರ ಗಣೇಶ್ ರಾವ್ (57ವ) ಅವರು ಹೃದಯಾಘಾತಕ್ಕೊಳಗಾಗಿ ಶನಿವಾರ ರಾತ್ರಿ ನಿಧನ ಹೊಂದಿದರು. ಪ್ರಾಂತ್ಯ ಗಾಮದ ವಿಶಾಲ್ ನಗರ ನಿವಾಸಿಯಾಗಿರುವ ಗಣೇಶ್ ರಾವ್ ಅವರು ಮೂಡುಬಿದಿರೆಯಲ್ಲಿ ಹಲವು ವರ್ಷಗಳಿಂದ ವಿದ್ಯುತ್ ಗುತ್ತಿಗೆದಾರರಾಗಿ ದುಡಿಯುತ್ತಿದ್ದರು. ಅಲ್ಲದೆ ಶ್ರೀ
ಮೂಡುಬಿದಿರೆ: ಜೈನ ಬಾಂಧವರು ಆಚರಿಸಿಕೊಂಡು ಬರುವ ಹೊಸ ತೆನೆ ಹಬ್ಬ(ಕುರಾಲ್ ಪರ್ಬ) ಜೈನ ಕಾಶಿ ಮೂಡುಬಿದಿರೆಯಲ್ಲಿ ರವಿವಾರ ಜರಗಿತು. ಬೆಟ್ಟೇರಿಯಲ್ಲಿರುವ, ಮಹಾವೀರ ಸಂಘ ದವರ ‘ಕೊರಲ್ ಕಟ್ಟೆ’ಯಲ್ಲಿ ಹೊಸ ತೆನೆರಾಶಿ ಹಾಕಿ 18 ಬಸದಿಗಳ ಇಂದ್ರರು ಪೂಜೆ ಸಲ್ಲಿಸಿದರು. ಶ್ರೀಮಠದಲ್ಲಿ ಪಪೂ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯ ಸ್ವಾಮೀಜಿ ಪಾವನ ಸಾನ್ನಿಧ್ಯ ಮಾರ್ಗದರ್ಶನದಲ್ಲಿ 18ಬಸದಿಗಳ ದೇವಕಾರ್ಯ ನೆರವೇರಿಸಿ ಅರ್ಚಕರಿಗೆ
ಸುಳ್ಯ: ರಾತ್ರಿ ಮಲಗಿರುವಾಗ ಮಹಿಳೆ ಮೇಲೆ ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿ, ಕೊಲೆಗೆ ಯತ್ನಿಸಿರುವ ಘಟನೆ ನಡೆದಿರುವುದು ತಿಳಿದು ಬಂದಿದೆ. ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲರ್ಪೆ ಜಯಭಾರತಿ (56) ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಮಹಿಳೆಯ ಭಾವ ಶಂಕರ ಅವರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ.ಗಂಭೀರ ಗಾಯಗೊಂಡ ಮಹಿಳೆಯನ್ನು ಸಂಬಂಧಿಕರು ಸುಳ್ಯದ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ ಕ್ಷೇತ್ರ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ 10 ದಿನಗಳಿಂದ ನಡೆದ ದಸರಾ ಉತ್ಸವ ನವದುರ್ಗೆಯೆ ಸಹಿತ ಶಾರದಾ ಮಾತೆ ವಿಗ್ರಹ ಜಲಸ್ತಂಭನದೊಂದಿಗೆ ಸಮಾಪನಗೊಂಡಿತು. ಉಡುಪಿ ಉಚ್ಚಿಲ ದಸರಾ ಉತ್ಸವ 2024ರ ವೈಭವದ ವಿಸರ್ಜನಾ ಶೋಭಾಯಾತ್ರೆಗೆ ಶನಿವಾರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಾಡೋಜ ಡಾ| ಜಿ. ಶಂಕರ್ ಮತ್ತು ಶಾಲಿನಿ ಶಂಕರ್ ದಂಪತಿ ಪುಷ್ಪಾರ್ಚನೆಗೈದು ಚಾಲನೆ ನೀಡಿದರು. ಕ್ಷೇತ್ರದ
ಮಂಗಳೂರು: ಜೆ.ಎಫ್. ಅಸೋಸಿಯೇಷನ್ ಬಜಾಲ್ ನಂತೂರು ಮಂಗಳೂರು ವತಿಯಿಂದ ಸ್ವಚ್ಛತಾ ಆಂದೋಲನ*ಜೆ.ಎಫ್. ಅಸೋಸಿಯೇಷನ್ ಅಧ್ಯಕ್ಷರಾದ ಅಹಮದ್ ಕುರೈಶ್ ರವರ ಮಾರ್ಗದರ್ಶನದಲ್ಲಿ ಭಾನುವಾರ ಬೆಳಿಗ್ಗೆ ನಡೆಯಿತು. ರಸ್ತೆ ಗುಡಿಸುವ ಮೂಲಕ ಉದ್ಘಾಟಿಸಿದ ಮ ನ ಪಾ ಸದಸ್ಯರು ಹಾಗೂ ಬದ್ರಿಯಾ ಜುಮ್ಮಾ ಮಸೀದಿ, ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷರಾದ ಅಬ್ದುಲ್ ರವೂಫ್ ರವರು ಮಾತನಾಡಿ, ಆರೋಗ್ಯ ಮತ್ತು ಪರಿಸರ ಸ್ವಚ್ಚತೆ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಪರಿಸರ ಸ್ವಚ್ಚತೆ ಇರುವಲ್ಲಿ
ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್, ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ (ರಿ), ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿ ಇದರ ನೇತೃತ್ವದಲ್ಲಿ ನಡೆಯುತ್ತಿರುವ 53ನೇ ವರ್ಷದ ಶ್ರೀ ಶಾರದಾಂಬಾ ಉತ್ಸವ “ಸುಳ್ಯ ದಸರಾ -2024 ರ ಪ್ರಯುಕ್ತ ಮಕ್ಕಳ ದಸರಾ ಇಂದು ಉದ್ಘಾಟನೆ ಗೊಂಡಿತು. ಸುಳ್ಯ ಬಸ್ಸು ನಿಲ್ದಾಣದ ಬಳಿಯಿಂದ ತಾಲೂಕಿನ ವಿವಿಧ ಭಾಗದ ಮಕ್ಕಳಿಂದ ಅದ್ದೂರಿ ಮೆರವಣಿಗೆಯೊಂದಿಗೆ ಪ್ರಾರಂಭ ಗೊಂಡು ಶ್ರೀ ಶಾರದಾಂಬ
ಪುತ್ತೂರು: ಉದನೆ ಸಮೀಪದ ಎಂಜಿರದಲ್ಲಿ ಖಾಸಗಿ ಬಸ್ ಪ್ರಪಾತಕ್ಕೆ ಬಿದ್ದು ಚಾಲಕ ಮೃತಪಟ್ಟ ಘಟನೆ ಅ.12 ರ ನಸುಕಿನ ಜಾವ ನಡೆದ ಬಗ್ಗೆ ವರದಿಯಾಗಿದೆ.ಬಸ್ ಚಾಲಕ ಮತ್ತು ನಿರ್ವಾಹಕರಿಬ್ಬರೇ ಇದ್ದ “ಸುಬ್ರಹ್ಮಣ್ಯ” ಎಂಬ ಫಲಕವಿರುವ ಬಸ್ ಎಂಜಿರ ದಲ್ಲಿ ಚಾಲಕನ ತಪ್ಪಿ ಪ್ರಪಾತಕ್ಕೆ ಉರುಳಿದೆ. ಘಟನೆಯಿಂದ ಚಾಲಕ ಭರತ್ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಸುಳ್ಯದ ಪ್ರತಿಷ್ಠಿತ ಸಂಸ್ಥೆಗಳಲ್ಲೊಂದಾದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ನೂತನ ಕಾರ್ಯಕ್ರಮಾಧಿಕಾರಿಯಾಗಿ ಎರಡನೇ ಬಾರಿಗೆ ಡಾ. ಅನುರಾಧಾ ಕುರುಂಜಿಯವರು ಅಧಿಕಾರ ಸ್ವೀಕರಿಸಿದರು. ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿರುವ ಡಾ. ಅನುರಾಧಾ ಕುರುಂಜಿಯವರು ಈ ಹಿಂದೆ 2012-22ರವರೆಗೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕವನ್ನು ಮುನ್ನಡೆಸಿ 2019 ರಲ್ಲಿ ಪ್ರಪ್ರಥಮ ಬಾರಿಗೆ ಮಂಗಳೂರು
ಮಂಗಳೂರಿನ ಪ್ರಖ್ಯಾತ ಬಿಲ್ಡರ್, ಬಿಜೆಪಿ ಮುಖಂಡ ಜಿತೇಂದ್ರ ಕೊಟ್ಟಾರಿ ಅವರ ಮನೆಗೆ ಇಬ್ಬರು ಯುವಕರು ನುಗ್ಗಿ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಮಾಹಿತಿ ಪಡೆದ ಬರ್ಕೆ ಪೊಲೀಸರು ಕಾರ್ಯಾಚರಣೆ ನಡೆಸಿ ಯುವಕರನ್ನು ಬಂಧಿಸಿದ್ದಾರೆ. ಖ್ಯಾತ ಬಿಲ್ಡರ್ ಲೋಟಸ್ ಪ್ರಾಪರ್ಟೀಸ್ ಪಾಲುದಾರ ಹಾಗೂ ಬಿಜೆಪಿ ಮುಖಂಡ ಜಿತೇಂದ್ರ ಕೊಟ್ಟಾರಿ ಏರ್ಪೋರ್ಟಿನಿಂದ ಕಾರಿನಲ್ಲಿ ಬರುತ್ತಿರುವಾಗ ಈ ಯುವಕರ ಕಾರನ್ನು ಓವರ್ ಟೇಕ್ ಮಾಡಿ ಬಂದಿದ್ದರು. ಇದೇ ಕಾರಣಕ್ಕೆ ಕೋಪದಿಂದ ಕೊಟ್ಟಾರಿ ಅವರ
ಬೈಂದೂರು: ಬೈಂದೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮೇಕೋಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ನವರಾತ್ರಿ ಉತ್ಸವದ ಅಂಗವಾಗಿ ಶ್ರೀ ದೇವಿಗೆ ವಿಶೇಷ ಅಲಂಕಾರ ಪೂಜೆ,ಮಹಾ ಮಂಗಳಾರತಿ, ಹಣ್ಣುಕಾಯಿ ಸೇವೆ, ಚಂಡಿಕಾ ಹೋಮ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ಸೇವೆಯನ್ನು ನಾನಾ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಲ್ಲಿಸಲಾಯಿತು. ಅಕ್ಟೋಬರ್ 3 ರಿಂದ ಆರಂಭಗೊಂಡಿರುವ ನವರಾತ್ರಿ ಉತ್ಸವ ಅಕ್ಟೋಬರ್ 12 ರ ತನಕ ವಿಜೃಂಭಣೆಯಿಂದ ನಡೆಯಲಿದೆ.ಶ್ರೀ ಕ್ಷೇತ್ರದಲ್ಲಿ ನಡೆಯಲಿರುವ




























