Home Blog Left SidebarPage 166

ಸಾಲೆತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್‌ ಕಂಬಕ್ಕೆ ಡಿಕ್ಕಿ

ಸಾಲೆತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯಲ್ಲಿದ್ದ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಭಾಗಶ: ಜಖಂಗೊಂಡ ಘಟನೆ ಸಾಲೆತ್ತೂರು ಜಂಕ್ಷನ್‌ನಲ್ಲಿ ನಡೆದಿದೆ. ಮುಡಿಪು ಕಡೆಯಿಂದ ಪುತ್ತೂರು ಕಡೆಗೆ ಸಂಚರಿಸುತ್ತಿದ್ದ ಟೊಯೊಟಾ ಅರ್ಬನ್ ಕ್ರೂಸರ್ ಕಾರು ಸಾಲೆತ್ತೂರು ಜಂಕ್ಷನಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿದ್ದ ಭಾರಿ

ಅಳಕೆ ಮಜಲಿನಲ್ಲಿ ಹಾಡುಹಗಲೇ ಮನೆಗೆ ನುಗ್ಗಿ ನಗ-ನಗದು ದೋಚಿದ ಕಳ್ಳ ಖದೀಮರು..!

ಅಳಕೆಮಜಲು ಕೆಮನಾಜೆ ಎಂಬಲ್ಲಿ ಇಂದು ಹಾಡುಹಗಲೇ ಎರಡು ಮನೆಗಳಿಗೆ ಕಳ್ಳರು ನುಗ್ಗಿ ಅಳಕೆಮಜಲು ಕೆಮನಾಜೆ ನಿವಾಸಿ ಪುಷ್ಪರಾಜ್‌‌ ಎಂಬವರ ಮನೆಯಿಂದ ಸುಮಾರು 15 ಪವನ್‌ ಚಿನ್ನ ಮತ್ತು ಕೆಮನಾಜೆ ನಿವಾಸಿ ಕೃಷ್ಣಪ್ಪ ಕುಲಾಲ್‌‌ (ಕುಂಞ್ಞಣ್ಣ) ಎಂಬರ ಮನೆಯಿಂದ ಸುಮಾರು 12 ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ. ನವರಾತ್ರಿಯ ದಿನವಾಗಿದ್ದರಿಂದ ಇಂದು ಅಳಕೆಮಜಲು ಭಜನಾ ಮಂದಿರದಲ್ಲಿ ಮೂರ್ತಿ ಪ್ರತಿಷ್ಠೆಯಾಗಿ ನವರಾತ್ರಿ ಉತ್ಸವದಲ್ಲಿ ಕಾರ್ಯಕ್ರಮದಲ್ಲಿ ಎಲ್ಲರೂ

ಮೂಡುಬಿದಿರೆ: ಆಳ್ವಾಸ್ ಗೆ ನೂತನ ಫಾರ್ಮಸಿ ಪದವಿ ಕಾಲೇಜು ಸೇರ್ಪಡೆ

ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.)ದ 20 ವಿವಿಧ ಶಿಕ್ಷಣ ಸಂಸ್ಥೆಗಳ ಜೊತೆಗೆ ನೂತನ ಫಾರ್ಮಸಿ ಪದವಿ ಕಾಲೇಜು ಸೇರ್ಪಡೆಗೊಂಡಿದ್ದು ಈ ವರ್ಷದಿಂದಲೇ ಪ್ರಾರಂಭಿಸಲಾಗುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ವಿಜ್ಞಾನ ವಿಷಯದಲ್ಲಿ ಪದವಿಪೂರ್ವ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ 4 ವರ್ಷಗಳ ಪದವಿ ಶಿಕ್ಷಣ ಇದಾಗಿದ್ದು 2024-25ನೇ ಶೈಕ್ಷಣಿಕ ವರ್ಷದಿಂದಲೇ

Big Breaking: ಭಾರತದ ಹೆಮ್ಮೆಯ ಉದ್ಯಮಿ ರತನ್‌ ಟಾಟಾ ಇನ್ನಿಲ್ಲ

ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್‌ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ

ಬಡಾಕೆರೆ: ರೈಲು ಡಿಕ್ಕಿ ಹೊಡೆದು ಚಿರತೆ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಬಡಾಕೆರೆ ಸಮೀಪ ಸೌಪರ್ಣಿಕಾ ನದಿ ಮೇಲೆ ಹಾದು ಹೋಗಿರುವ ಕೊಂಕಣ ರೈಲು ಬ್ರಿಡ್ಜ್ ಮೇಲೆ ಅಂದಾಜು ಐದು ವರ್ಷ ಪ್ರಾಯವನ್ನು ಹೊಂದಿರುವ ಬೃಹತ್ ಗಾತ್ರದ ಗಂಡು ಚಿರತೆಯೊಂದು ರೈಲು ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ.ಬೆಳಗಿನ ಜಾವ 4.40 ರ ಸುಮಾರಿಗೆ ಇವೊಂದು ಘಟನೆ ನಡೆದಿದೆ ಎಂದು ಅಂದಾಜಿಸಲಾಗಿದೆ.ಉಪ ವಲಯ ಅರಣ್ಯಾಧಿಕಾರಿಗಳಾದ ಪೂರ್ಣಚಂದ್ರ ಮತ್ತು ಸೆಲ್ವ ಮುರುಗನ್,ಅರಣ್ಯ ವೀಕ್ಷಕ ಸುರೇಶ್,ಗಸ್ತು ಅರಣ್ಯ

ಅತೀ ವೇಗ, ಅಜಾಗರುಕತೆಯ ಚಾಲನೆ : ಚಾಲಕನ ವಿರುದ್ಧ ಕ್ರಮಕೈಗೊಂಡ ಮೂಡುಬಿದಿರೆ ಇನ್ಸ್ ಪೆಕ್ಟರ್

ಮೂಡುಬಿದಿರೆ: ಮಂಗಳೂರು – ಮೂಡುಬಿದಿರೆ ಮಾರ್ಗವಾಗಿ ನಿನ್ನೆ ( ಮಂಗಳವಾರ) ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿದ ಬಸ್ KA 19 AB 1339 ನ್ನು ಮೂಡುಬಿದಿರೆ ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿಜಿ ಅವರು ವಶಕ್ಕೆ ಪಡೆದುಕೊಂಡಿದ್ದಾರೆ ಮತ್ತು ಚಾಲಕನ ವಿರುದ್ಧ ಕ್ರಮಕೈಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯು ನಡೆಯುತ್ತಿರುವುದರಿಂದ ವಾಹನ ಸವಾರರು ಬಹಳ ಜಾಗರೂಕತೆಯಿಂದ ವಾಹನವನ್ನು ಚಲಾಯಿಸುವುದು ಅವಶ್ಯಕ. ಆದರೆ ಮಂಗಳವಾರ ಸಂಜೆ ವೇಳೆಯಲ್ಲಿ

ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್‌ಗೆ ಅನಾರೋಗ್ಯ – ಆಸ್ಪತ್ರೆಗೆ ದಾಖಲು

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಅನಾರೋಗ್ಯದಿಂದ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜ್ವರದಿಂದ ಬಳಲುತ್ತಿದ್ದ 55ರ ಹರೆಯದ ಪ್ರಮೋದ್ ಮಧ್ವರಾಜ್ ಅವರನ್ನು ಮಂಗಳವಾರ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ವಾಸಕೋಶದ ಸೋಂಕು ನ್ಯುಮೋನಿಯಾ ಕಾಣಿಸಿಕೊಂಡಿದ್ದು ವೈದ್ಯರು ಸಕಾಲಿಕ ಚಿಕಿತ್ಸೆ ನೀಡಿದ್ದಾರೆ. ಚಿಕಿತ್ಸೆಗೆ ಸ್ಪಂದಿಸಿದ್ದು ಇನ್ನೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವದ ಸಂಭ್ರಮ

ಬೈಂದೂರು:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಉಪ್ಪುಂದದಲ್ಲಿ ಶರನ್ನವರಾತ್ರಿ ಮಹೋತ್ಸವ ಕಾರ್ಯಕ್ರಮ ಅಕ್ಟೋಬರ್ 03 ರಿಂದ ಆರಂಭಗೊಂಡು ಅಕ್ಟೋಬರ್ 12 ರ ತನಕ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ. ಗ್ರಾಮ ದೇವತೆಯಾದ ಶ್ರೀ ಉಪ್ಪುಂದ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಪ್ರತಿ ದಿನ ಬೆಳಿಗ್ಗೆ ದೇವಸ್ಥಾನದ ವತಿಯಿಂದ ದುರ್ಗಾಹೋಮ ಹಾಗೂ ಭಕ್ತರು ಸೇವಾ ರೂಪದಲ್ಲಿ ಶ್ರೀ

ಕುಕ್ಕೆ: ಪವಿತ್ರ ಬೋಜನ ಪ್ರಸಾದಕ್ಕೆ ವೈವಿಧ್ಯಮ ಪಾಯಸ

ಸುಬ್ರಹ್ಮಣ್ಯ: ನಾಗಾರಾಧನೆಯ ಪುಣ್ಯ ತಾಣ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೋಜನ ಪ್ರಸಾದವು ಪರಮ ಪಾವನವಾದುದು. ಇಲ್ಲಿಗೆ ದಿನಂಪ್ರತಿ ಸಹಸ್ರಾರು ಭಕ್ತರು ಆಗಮಿಸಿ ಶ್ರೀ ದೇವರ ದರುಶನ ಪಡೆದು ಕೃತಾರ್ಥರಾಗುತ್ತಾರೆ. ಅನ್ನದಾತ ಸುಬ್ಬಪ್ಪ ಎಂಬ ಪ್ರತೀತಿ ಪಡೆದ ಶ್ರೀ ದೇವಳದಲ್ಲಿ ಇತರ ಸೇವೆಗಳಂತೆ ಬೋಜನ ಪ್ರಸಾದ ಸ್ವೀಕಾರವು ಪವಿತ್ರವಾಗಿದೆ. ಇಲ್ಲಿ ವಾರ್ಷಿಕವಾಗಿ ಸುಮಾರು 55ಲಕ್ಷಕ್ಕೂ ಮಿಕ್ಕಿ ಭಕ್ತರು ಬೋಜನ ಪ್ರಸಾದ