ಮೂಡುಬಿದಿರೆ : ಕಳೆದ ಬಾರಿ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ತುಳುನಾಡಿನ ಕಂಬಳವನ್ನು ಆಯೋಜಿಸಿ ಸೈ ಎನಿಸಿಕೊಂಡಿರುವ ಕಂಬಳ ಸಮಿತಿಯು ಈ ಬಾರಿ ಮಲೆನಾಡಿನ ಶಿವಮೊಗ್ಗದಲ್ಲಿ ಕಂಬಳ ನಡೆಸಲು ನಿರ್ಧರಿಸಿದೆ ಎಂದು ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಹೇಳಿದ್ದಾರೆ. ಮೂಡುಬಿದಿರೆ ಸ್ವರ್ಣ ಮಂದಿರದಲ್ಲಿ ನಡೆದ ಜಿಲ್ಲಾ ಕಂಬಳ ಸಮಿತಿಯ
ದೇಶದ ಸ್ವಾತಂತ್ರ್ಯ ,ಸಮಗ್ರತೆ, ಸಾರ್ವಭೌಮತ್ವದ ರಕ್ಷಣೆಗಾಗಿ, ಕಾರ್ಮಿಕ ವರ್ಗದ ಹಕ್ಕುಗಳ ಉಳಿವಿಗಾಗಿ ಹಾಗೂ ಕಾರ್ಪೊರೇಟ್ ಪರ ನೀತಿಗಳನ್ನು ಹಿಮ್ಮೆಟ್ಟಿಸಲು ಆಗಸ್ಟ್ 14 ರಂದು ಸಂಜೆ 5ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ನಗರದ ಪುರಭವನದ ಮುಖ್ಯ ದ್ವಾರದ ಬಳಿಯಲ್ಲಿ ಸಾಮೂಹಿಕ ಧರಣಿ ಸತ್ಯಾಗ್ರಹವನ್ನು ನಡೆಸಲು CITU ದ.ಕ.ಜಿಲ್ಲಾ ಸಮಿತಿಯು ನಿರ್ಧರಿಸಿದ್ದು,CITU ಅಖಿಲ ಭಾರತ ತೀರ್ಮಾನದ ಮೇರೆಗೆ ದೇಶ ಉಳಿಸಿ, ಜನತೆಯ ಬದುಕನ್ನು ರಕ್ಷಿಸಿ ಎಂಬ ಘೋಷಣೆಯೊಂದಿಗೆ ಈ
ಉಡುಪಿ: ಉಡುಪಿ ತಾಲೂಕು ಕಚೇರಿಯಲ್ಲಿ ಉಪತಹಸೀಲ್ದಾರ್ ಅಶ್ವಥ್ ಪಡುಬಿದ್ರಿ(41) ಅಲ್ಪಕಾಲದ ಅಸೌಖ್ಯದಿಂದ ಇಂದು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ನಿಧನರಾದರು. ಇವರು ಕುಂದಾಪುರ, ಶೃಂಗೇರಿ, ಉಡುಪಿ ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದರು. ಅವಿವಾಹಿತರಾಗಿರುವ ಇವರು, ಇಬ್ಬರು ಸಹೋದರಿ, ತಾಯಿ, ಅಜ್ಜಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಮೂಡುಬಿದಿರೆ: ಇಲ್ಲಿ ವಲಯ ಅರಣ್ಯಾಧಿಕಾರಿಯಾಗಿರುವ ದಿನೇಶ್ ಜಿ.ಡಿ.ಅವರು ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಯಾಗಿ ಭಡ್ತಿ ಹೊಂದಿದ್ದು ಸಿದ್ಧಾಪುರ ವನ್ಯಜೀವಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.ದಿನೇಶ್ ಅವರು ಮೂಡುಬಿದಿರೆ ವಲಯ ಅರಣ್ಯಾಧಿಕಾರಿಯಾಗಿದ್ದು ಈ ಹಿಂದೆ ಕೂಡಾ ಮೂಡುಬಿದಿರೆಯಲ್ಲಿ ವಲಯಾರಣ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ ಕಾರ್ಕಳಕ್ಕೆ ವರ್ಗಾವಣೆಗೊಂಡಿದ್ದರು.ಅಲ್ಲಿಂದ ಕಾರ್ಕಳ ವನ್ಯಜೀವಿ ವಿಭಾಗದ ವಲಯ
ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಅಲೈಡ್ ಹೆಲ್ತ್ ಸೈನ್ಸಸ್ ಮತ್ತು ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಉಪನ್ಯಾಸಕರಿಗೆ ಪ್ರಶಿಕ್ಷಣ ಕಾರ್ಯಗಾರವನ್ನು ಏರ್ಪಡಿಸಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಉಡುಪಿಯ ಡಾ. ಜಿ. ಶಂಕರ್ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತರ ವಿಭಾಗದ ಮುಖ್ಯಸ್ಥರಾದ ಡಾ. ನಿಕೇತನ ರವರು ಆಗಮಿಸಿ, ಶಿಕ್ಷಕ ವೃತ್ತಿ ಶ್ರೇಷ್ಠವಾದ ವೃತ್ತಿ ಶಿಕ್ಷಕರು ನಿರಂತರ ಅಧ್ಯಯನಶೀಲರಾಗಿರಬೇಕು, ಧೈರ್ಯ, ತಾಳೆ, ಸಮಯ
ಶಾಲಾ ಶಿಕ್ಷಣ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬೈಂದೂರು ಹಾಗೂ ಶುಭದ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರಇವರ ಜಂಟಿ ಆಶ್ರಯದಲ್ಲಿ ಬೈಂದೂರು ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಬಾಲಕ-ಬಾಲಕಿಯರಚೆಸ್ ಪಂದ್ಯಾಟ ಶ್ರೀ ನರಸಿಂಹ ದೇವಾಡಿಗ ಮತ್ತು ಶ್ರೀ ಶೇಖರ್ ಖಾರ್ವಿ ಚೆಸ್ ಆಟ ಆಡುದರ ಮೂಲಕ ಚಾಲನೆ ನೀಡಲಾಯಿತು. ಶ್ರೀ ಶೇಖರ್ ಖಾರ್ವಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಕಿರಿಮಂಜೇಶ್ವರ ಮತ್ತು ಶ್ರೀ ನರಸಿಂಹ ದೇವಾಡಿಗ ಗ್ರಾಮ ಪಂಚಾಯತ್ ಅಧ್ಯಕ್ಷರು
ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ, ಪುತ್ತೂರು ಇಲ್ಲಿನ ಭಾರತ್ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ದಳದ ವತಿಯಿಂದ ವನ ಮಹೋತ್ಸವ ವನ್ನು ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆ ವಹಿಸಿ ಮಾತನಾಡಿ ವನ ಮಹೋತ್ಸವದ ಅಗತ್ಯತೆ, ಪ್ರಕೃತಿಯ ಆಂತರ್ಯದ ಸತ್ವವನ್ನು ನಾವು ತಿಳಿದು ಕೊಳ್ಳುವ ಅನಿವಾರ್ಯತೆಯ ಕುರಿತು ಬೆಳಕು ಚೆಲ್ಲಿದರು. ವೇದಿಕೆಯಲ್ಲಿ ಸ್ಕೌಟ್ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್, ಗೈಡ್ ಶಿಕ್ಷಕಿಯರಾದ
ಮಂಗಳೂರು: ನಾಗರಾಧನೆ, ದೈವಾರಾಧನೆ, ದೇವತಾರಾಧನೆಯ ಮುಖೇನ ಪ್ರಕೃತಿಯನ್ನು ಆರಾಧಿಸುವ ಪುಣ್ಯ ನೆಲ ತುಳುನಾಡು. ಈ ನೆಲದಲ್ಲಿ 12 ತಿಂಗಳಿಗೂ ಮಹತ್ವವಿದೆ, ವಿಶೇಷ ಆಚರಣೆ ಇದೆ. ಆಟಿ ತಿಂಗಳು ಅದರಲ್ಲೂ ಆಟಿ ಅಮಾವಾಸ್ಯೆಯ ದಿವಸ ಸಮಸ್ತ ತುಳುನಾಡಿನ ಜನರು ಜಾತಿ ಮತ ಭೇದವಿಲ್ಲದೆ, ಈ ಔಷಧೀಯ ಗುಣವುಳ್ಳ ಹಾಳೆ ಮರದ ಕೆತ್ತೆ ಕಷಾಯವನ್ನು ವರ್ಷ ಪೂರ್ತಿ ತನ್ನ ರೋಗ ನಿರೋಧಕ ಶಕ್ತಿಯ ವೃದ್ಧಿಗಾಗಿ ಸೇವಿಸುತ್ತಾರೆ. ಆದ್ದರಿಂದ ತುಳುನಾಡು ವಿಶೇಷ ಪರಂಪರೆಗಳ ನಾಡು ಈ ಹಾಳೆ ಮರದ
ಮೂಡುಬಿದಿರೆ: ತಾಲೂಕಿನ ಕೋಟೆಬಾಗಿಲು ಬಳಿ ಸೋಮವಾರ ಮಧ್ಯಾಹ್ನ ಈಕೋ-ಮ್ಯಾಸ್ಟ್ರೋ ಢಿಕ್ಕಿಯಾಗಿ ಮರಿಯಾಡಿಯ ನಿವಾಸಿ ಅಹಮದ್ ಬಾವ (50) ಅವರು ಮೃತಪಟ್ಟಿದ್ದಾರೆ.ಮೂಡುಬಿದಿರೆ ಕಡೆಗೆ ಬರುತ್ತಿದ್ದ ಈಕೋ ಕಾರು ಮೂಡುಬಿದಿರೆಯಿಂದ ಮರಿಯಾಡಿ ಕಡೆಗೆ ಹೋಗುತ್ತಿದ್ದ ಮ್ಯಾಸ್ಟ್ರೊ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡಿದ್ದ ಮ್ಯಾಸ್ಟ್ರೋ ಸವಾರ ಅಹಮದ್ ಬಾವ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ
ಮೂಡುಬಿದಿರೆ: ಪರಿಚಯಸ್ಥನಂತೆ ನಟಿಸಿ ಮಹಿಳೆಯ ಜತೆ ಮಾತನಾಡಿ ಆಕೆಯ ಮೂರೂವರೆ ಪವನಿನ ಸರವನ್ನು ವ್ಯಕ್ತಿಯೊಬ್ಬ ಎಗರಿಸಿ ಪರಾರಿಯಾದ ಘಟನೆ ಸೋಮವಾರ ಮಧ್ಯಾಹ್ನದ ವೇಳೆ ಮೂಡುಬಿದಿರೆ ಬಸ್ ನಿಲ್ದಾಣದಲ್ಲಿ ನಡೆದಿದೆ. ಅಶ್ವತ್ಥಪುರದಲ್ಲಿರುವ ತನ್ನ ಮಗಳ ಮನೆಗೆ ಹೋಗಲು ನಾರಾವಿಯಿಂದ ಬಂದಿದ್ದ ಮಧ್ಯ ವಯಸ್ಸಿನ ಮಹಿಳೆಯು ಬಸ್ಸಿನಿಂದ ಇಳಿದು ಬರುತ್ತಿದ್ದಾಗ ಚಿಕ್ಕಮ್ಮನೆಂದು ಕರೆದು ಪರಿಚಯಿಸಿಕೊಂಡಿದ್ದ ಅಲ್ಲದೆ ಮಹಿಳೆಯ ಮನೆಯವರ ಪರಿಚಯವನ್ನೆಲ್ಲಾ ಹೇಳಿದ ಅಲ್ಲದೆ ಆಕೆಯನ್ನು




























