ಮಡಿಕೇರಿ : ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿ ಭಾಗದಲ್ಲಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರ ಹಿತಾಸಕ್ತಿಯಿಂದ ಜು.18 ರಿಂದ 22ರ ವರೆಗೆ ಪ್ರತಿ ದಿನ ರಾತ್ರಿ 8 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್
ಎಣ್ಮೂರು ಬೈದರ್ಕಳ ಗರಡಿಯ ಕೋಟಿ ದರ್ಶನ ಪಾತ್ರಿ ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ನೇಲ್ಯಕುಮೇರ್ ಬಾಬು ಪೂಜಾರಿ ಅವರ ಪುತ್ರ ಗಿರೀಶ್ ಮೃತಪಟ್ಟಿದ್ದು, ಮೃತರ ಮನೆಗೆ ಮುಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಳ ಅಧ್ಯಕ್ಷರಾದ ರಾಜಶೇಖರ್ ಕೋಟ್ಯಾನ್, ಉಪಾಧ್ಯಕ್ಷ ಹರೀಶ್ ಡಿ ಸಾಲಿಯಾನ್,ಕಾರ್ಯದರ್ಶಿ ಗಂಗಾಧರ ಪೂಜಾರಿ ಚೆಳ್ಯಾರ್ , ಜತೆ ಕಾರ್ಯದರ್ಶಿ ಗಣೇಶ್ ಪೂಜಾರಿ ಮೂಡು ಪೆರರ,ಪದಾಧಿಕಾರಿಗಳಾದ ಕುಮಾರ್ ಪೂಜಾರಿ ಇರುವೈಲ್, ದಾಮೋದರ ಪೂಜಾರಿ ಸಿದ್ದಕಟ್ಟೆ,
ದಕ್ಷಿಣ ಕನ್ನಡ ಮತ್ತು ಉಡುಪಿ, ಚಿಕ್ಕಮಗಳೂರು ಕ್ಷೇತ್ರಗಳ ನೂತನ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಕೋಟ ಶ್ರೀನಿವಾಸ್ ಪೂಜಾರಿ ಅವರನ್ನು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ವತಿಯಿಂದ ಮುಲ್ಕಿ ಬಿಲ್ಲವ ಮಹಾ ಮಂಡಲದ ಸಭಾಭವನದಲ್ಲಿ ಅಭಿನಂದಿಸಲಾಯಿತು. ಅಭಿನಂದನಾ ಕಾರ್ಯಕ್ರಮ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಕೋಟ ಶ್ರೀನಿವಾಸ್ ಪೂಜಾರಿಯವರು, ಚುನಾವಣೆ ಸಂದರ್ಭ ಅಪಪ್ರಚಾರಗಳು ಸಾಮಾನ್ಯ. ಆದರೆ ಉಭಯ ಜಿಲ್ಲೆಗಳ ಮತದಾರರು ಜಾತಿ, ಧರ್ಮವನ್ನು ಮೀರಿ ನಮಗೆ ಸಹಕಾರ
ಸಕಲೇಶಪುರ ತಾಲೂಕಿನ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ದೊಡ್ಡತಪ್ಪಲು ಎಂಬಲ್ಲಿ ಭೂ ಕುಸಿತ ಉಂಟಾಗಿ ಓಮಿನಿಯೊಂದು ಜಖಂಗೊಂಡಿದ್ದು, ಅದೃಷ್ಟವಶಾತ್ ಕಾರು ಚಾಲಕ ಅಪಾಯದಿಂದ ಪಾರಾದ ಘಟನೆ ಸಂಭವಿಸಿದೆ. ಬೇಲೂರು ತಾಲೂಕಿನ ಬಿಕ್ಕೊಡು ಮೂಲದ ಶರತ್ ಎಂಬವರು ಮಂಗಳೂರು ಕಡೆಯಿಂದ ಸಕಲೇಶಪುರ ಮಾರ್ಗವಾಗಿ ಬರುವ ಸಂದರ್ಭ ದೊಡ್ಡತಪ್ಪಲು ಸಮೀಪ ಭೂ ಕುಸಿತ ಉಂಟಾಗಿ ಕಾರಿನ ಮೇಲೆ ಬಿದ್ದಿದ್ದು ಕಾರು ಮಣ್ಣಿನ ರಾಶಿಯಲ್ಲಿ ಸಿಲುಕಿ ಸಂಪೂರ್ಣವಾಗಿ ಕುಸಿದಿದೆ. ಈ
ಇಂದಿರಾ ಗಾಂಧಿ ಸರಕಾರ ಹೇರಿದ್ದ ತುರ್ತು ಪರಿಸ್ಥಿತಿಯಿಂದ ಜಿಲ್ಲೆಗೆ ಯಾವುದೇ ಕೆಡುಕಾಗಿಲ್ಲ: ಮಾಜಿ ಸಚಿವ ಬಿ. ರಮಾನಾಥ ರೈ
ಮಂಗಳೂರು: ಇಂದಿರಾ ಗಾಂಧಿ ಸರಕಾರ ಹೇರಿದ್ದ ತುರ್ತು ಪರಿಸ್ಥಿತಿಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಯಾವುದೇ ರೀತಿಯ ಕೆಡುಕಾಗಿಲ್ಲ, ಬದಲಾಗಿ ಆ ಕಾಲದಲ್ಲಿ ಹಲವಾರು ಪ್ರಗತಿಪರ ಯೋಜನೆ ಜಾರಿಗೆ ಬಂದವು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು. ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುರ್ತು ಪರಿಸ್ಥಿತಿ ಕಾಲದಲ್ಲಿ ಭೂ ಮಸೂಧೆ ಕಾಯ್ದೆ, ಬ್ಯಾಂಕ್ ರಾಷ್ಟ್ರೀಕರಣ, ಖುಣ ಪರಿಹಾರ ಕಾಯ್ದೆ, ಬಸ್ ರಾಷ್ಟ್ರೀಕರಣ ಸಹಿತ
ಮಂಜೇಶ್ವರ ಕಾಲೇಜ್ ಆಫ್ ಅಪ್ಲೈಡ್ ಸೈನ್ಸ್‌ನಲ್ಲಿ ನೂತನವಾಗಿ ನಿರ್ಮಿಸಲಾದ ’ಯುವೈಕ್ಯ ವೇದಿಕೆಯನ್ನು ಮಂಜೇಶ್ವರ ಬ್ಲಾಕ್ ಪಂಚಾಯತ್ ಸದಸ್ಯ ಶ್ರೀಮತಿ ಅಶ್ವಿನಿ ಎಂ ಎಲ್ ರವರು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಕಾಲೇಜ್ ಮ್ಯಾಗಝೀನ್ ಸ್ನೇಹ ಲತಾ ದಿವಾಕರ್ ರವರು ಬಿಡುಗಡೆ ಮಾಡಿದರು.
ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಸಂಸ್ಥೆಯ ಐರಾವತ ಬಸ್‌ಗೆ ಬೆಂಕಿ ಹಿಡಿದ ಘಟನೆ ಉಪ್ಪಿನಂಗಡಿಯ ಹಳೆಗೇಟು ಬಳಿ ನಡೆದಿದ್ದು, ಸ್ಥಳೀಯ ಯುವಕರ ಸಕಾಲಿಕ ಪ್ರಯತ್ನದಿಂದ ಬೆಂಕಿ ಆರಿಸಿ ಸಂಭವಿಸಬಹುದಾಗಿದ್ದ ಹೆಚ್ಚಿನ ಅವಘಡವನ್ನು ತಪ್ಪಿಸಿದ್ದಾರೆ. ಬೆಂಗಳೂರಿನಿಂದ – ಮಂಗಳೂರಿಗೆ ಆಗಮಿಸುತ್ತಿದ್ದ ಐರಾವತ ಬಸ್ಸಿನ ಹಿಂಬದಿ ಎಸಿಗೆ ಬೆಂಕಿ ಹತ್ತಿಕೊಂಡಿದ್ದು, ಇದನ್ನು ಗಮನಿಸಿದ ಚಾಲಕ ಹಳೆಗೇಟು ಬಳಿ ಬಸ್ಸನ್ನು ನಿಲ್ಲಿಸಿದ್ದಾನೆ. ಆಗ ಪ್ರಯಾಣಿಕರೆಲ್ಲರೂ ಬಸ್ಸಿನಿಂದ
ಪಡುಬಿದ್ರಿ ನಡಿಪಟ್ಣ ಪ್ರದೇಶದಲ್ಲಿ ಸಮುದ್ರ ಕೊರೆತ ತೀವ್ರಗೊಂಡಿದ್ದು ಮೀನುಗಾರಿಕಾ ಶೆಡ್ ಸಹಿತ ಹತ್ತಾರು ತೆಂಗಿನ ಮರಗಳು ಸಮುದ್ರ ಪಾಲಾಗುವ ಸಾಧ್ಯತೆ ನಿಶ್ಚಲವಾಗಿದ್ದೂ ಜನಪ್ರತಿನಿಧಿಗಳು ಸಹಿತ ಅಧಿಕಾರಿಗಳು ನಮ್ಮ ಮನವಿಗೆ ಪೂರಕವಾಗಿ ಸ್ಪಂಧಿಸಿಲ್ಲ ಎಂಬುದಾಗಿ ಮೀನುಗಾರರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಮೀನುಗಾರ ನೂತನ್ ಪುತ್ರನ್, ಹತ್ತಾರು ದಿನಗಳಿಂದ ಈ ಪ್ರದೇಶದಲ್ಲಿ ಕಡಲು ಕೊರೆತ ಈ ಭಾಗದ ಮೀನುಗಾರರಾದ ನಮ್ಮನ್ನು
ಬಂಟ್ವಾಳ: ತಾಲೂಕು ವ್ಯಾಪ್ತಿಯಲ್ಲಿ ಬುಧವಾರ ರಾತ್ರಿಯಿಡಿ ಭಾರಿ ಮಳೆ ಸುರಿದಿದ್ದು ನದಿ ತೀರದ ತಗ್ಗು ಪ್ರದೇಶಗಳು ನೆರೆ ನೀರಿನಿಂದ ಜಲಾವೃತಗೊಂಡಿದೆ. ನೇತ್ರಾವತಿ ನದಿಯಲ್ಲಿ ಗುರುವಾರ ಬೆಳಗ್ಗಿನ ವೇಳೆ ನೀರಿನ ಮಟ್ಟ7.8 ಮೀಟರ್ ದಾಖಲಾಗಿದ್ದು ಅಪಾಯದ ಮಟ್ಟವನ್ನು ಮೀರುವ ರೀತಿ ನದಿಯಲ್ಲಿ ನೀರು ಹರಿದು ಬರುತ್ತಿದ್ದು ಜನರಲ್ಲಿ ಆತಂಕ ಮನೆಮಾಡಿತ್ತು. ಪಾಣೆಮಂಗಳೂರು ಬಳಿಯ ಆಲಡ್ಕ ಮಿಲಿಟರಿ ಮೈದಾನ, ಶ್ರೀಶಾರದ ಪ್ರೌಢಶಾಲೆಯ ಮೈದಾನ, ನಂದಾವರ ಬಳಿಯ ಅಡಿಕೆ ತೋಟ ನೆರೆ
ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನ ಮಾಜಿ ಕುಲಪತಿ, ವಿಶ್ವ ವಿಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಹಾಗೂ ಖ್ಯಾತ ಶಿಕ್ಷಣ ತಜ್ಞ ಪ್ರೊಫೆಸರ್ ಮಾರ್ತಾಂಡ ವರ್ಮ ಶಂಕರನ್ ವಲಿಯಥಾನ್ (ಎಂ ಎಸ್ ವಲಿಯಥಾನ್) ತನ್ನ 90 ನೇ ವಯಸ್ಸಿನಲ್ಲಿ ಮಣಿಪಾಲದಲ್ಲಿ ನಿಧನರಾದರು. ಪ್ರೊ. ವಲಿಯಾಥನ್ ಅವರು ಹೃದಯ ಶಸ್ತ್ರಚಿಕಿತ್ಸೆ ಮತ್ತು ವೈದ್ಯಕೀಯ ತಂತ್ರಜ್ಞಾನಕ್ಕೆ ನೀಡಿದ ಕೊಡುಗೆ ಅಪಾರ. ಅವರು ತಿರುವನಂತಪುರ ವೈದ್ಯಕೀಯ ಕಾಲೇಜಿನ ಹಳೆಯ ವಿದ್ಯಾರ್ಥಿ ಮತ್ತು ರಾಯಲ್ ಕಾಲೇಜ್ ಆಫ್




























