Home Blog Left SidebarPage 197

ಉಚ್ಚಿಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ  ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಆರ್. ಪೂಜಾರಿ ಆಯ್ಕೆ

 37ನೇ ವರ್ಷದ  ಉಚ್ಚಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಲಕೃಷ್ಣ ಆರ್. ಪೂಜಾರಿ ಸರ್ವಾನುಮತಮತದಿಂದ ಆಯ್ಕೆಗೊಂಡಿದ್ದಾರೆ. ಅಧ್ಯಕ್ಷ ಕಿಶೋರ್ ಶೆಟ್ಟಿ ಎರ್ಮಾಳುರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರಧಾನ ಆರ್ಚಕರಾಗಿ ವೇ. ಮೂ. ಕೆ.ವಿ. ರಾಘವೇಂದ್ರ ಉಪಾಧ್ಯಾಯ ಗೌರವ ಅಧ್ಯಕ್ಷರಾಗಿ ಎರ್ಮಾಳು ರೋಹಿತ್ ಹೆಗ್ಡೆ,

ಬೈಂದೂರು: ಬಾವಿಗೆ ಕಾಲು ಜಾರಿ ಬಿದ್ದು ಸಾವು

ಬೈಂದೂರು:ಬೈಂದೂರು ತಾಲೂಕಿನ ಬಡಾಕೆರೆ ಗ್ರಾಮದ ಪೋಸ್ಟ್ ನಿವಾಸಿ ಕೃಷಿಕ ಮಂಜುನಾಥ ಶೇಟ್ (85) ಎಂಬುವವರು ತೆಂಗಿನ ತೋಟದಲ್ಲಿ ತೆಂಗಿನಕಾಯಿ ಹೆಕ್ಕಲು ಹೋದಂತಹ ಸಮಯದಲ್ಲಿ ಬಾವಿ ಬದಿಯಲ್ಲಿ ಬಿದ್ದಿರುವ ತೆಂಗಿನಕಾಯಿಯನ್ನು ಹೆಕ್ಕುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ. ಮಂಜುನಾಥ ಶೇಟ್ ಅವರು ಬೆಳಗಿನ ಸಮಯದಲ್ಲಿ ತೆಂಗಿನ ತೋಟಕ್ಕೆ ಹೋಗಿ ತೋಟದಲ್ಲಿ ಬಿದ್ದಿರುವ ಕಾಯಿಯನ್ನು ಹೆಕ್ಕುವ ಅಭ್ಯಾಸವನ್ನು

ಗುರುವಾಯನಕೆರೆ: ವಿದ್ವತ್ ಸ್ಪೂರ್ತಿ ಸಂಚಿಕೆ ಮೊದಲನೇ ಭಾಗದ ಅನಾವರಣ

  ಮಕ್ಕಳಿಗೆ ಸ್ಫೂರ್ತಿ ತುಂಬಿ ಓದಿನಡೆಗೆ ಹುರಿದುಂಬಿಸಿ, ಪಿಯುಸಿಯಲ್ಲಿಯೇ ಮಹತ್ತರವಾದುದ್ದನ್ನ ಸಾಧಿಸಿ, ಭವಿಷ್ಯ ರೂಪಿಸಿಕೊಳ್ಳುವ ದೃಷ್ಠಿಯಿಂದ ವಿದ್ವತ್ ಪಿಯು ಕಾಲೇಜಿನಲ್ಲಿ ಮಹತ್ವದ ಓರಿಯಂಟೇಷನ್ ಕಾರ್ಯಕ್ರಮ ಆಯೋಜಿಸಲಾಗಿತ್ತು.  ” ವಿದ್ವತ್ ಸ್ಫೂರ್ತಿ  ಸಂಚಿಕೆಯ ಮೊದಲನೇ ಭಾಗವಾದ ಈ ಕಾರ್ಯಕ್ರಮವನ್ನ ವಿದ್ವತ್ ಸಂಸ್ಥೆಯ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ ಮಂಡಗಳಲೆ ಅವರು ನಡೆಸಿಕೊಟ್ಟರು. ವಿದ್ಯಾರ್ಥಿಗಳಿಗೆ  ಸ್ಫರ್ಧಾತ್ಮಕ ಪರೀಕ್ಷೆಗೆ ಓದುವ ವಿಧಾನ

ಶ್ರೀ ರಾಮ ಕ್ರೆಡಿಟ್ ಕೋ- ಆಪರೇಟಿವ್‌ನಿಂದ ಸೇವಾ ನಿವೃತ್ತಿರಾದ ಅರುಣ್‌ ಕುಮಾರ್ ಎಸ್. ವಿ. ಅವರಿಗೆ ಸನ್ಮಾನ

ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೊ ಆಪರೇಟಿವ್ ವತಿಯಿಂದ ಸಂಘದ ಕಛೇರಿಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಸೇವಾ ನಿವೃತ್ತಿ ಹೊಂದಿದ ಸಹಕಾರ ಸಂಘಗಳ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್.ವಿ. ಅವರನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಎಸ್. ರಾಜು ಪೂಜಾರಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಸರಕಾರಿ ಸೇವೆಯಲ್ಲಿ ಜನಮನ್ನಣೆ ಗಳಿಸುವುದು ಕಷ್ಟ ಸಾಧ್ಯ. ಆದರೆ ತಮ್ಮ ಮೂರೂವರೆ ದಶಕದ ಸುಧೀರ್ಘ ಸೇವೆಯ ಅವಧಿಯಲ್ಲಿ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ದುಡಿದು

ಮಂಗಳೂರು: ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮತ್ತೊಂದು ದರೋಡೆ ಪ್ರಕರಣ

ಮಂಗಳೂರಿನ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆ ಕಣಿಯ ಮನೆಯೊಂದರಲ್ಲಿ ಸೋಮವಾರ ರಾತ್ರಿ ಕಳವು ನಡೆದಿದೆ. ಮನೆಮಂದಿ ಮಲಗಿದ್ದಾಗ ಕಿಟಕಿ ಮುರಿದು ಚಿನ್ನಾಭರಣ ಕಳವು ಮಾಡಲಾಗಿದೆ. ಅಲ್ಲದೆ ಕಳ್ಳರು ಕಾರನ್ನು ಕೂಡ ಕಳವು ಮಾಡಿದ್ದಾರೆಂದು ತಿಳಿದುಬಂದಿದೆ. ಕಳೆದ ಶನಿವಾರ ನಗರದ ಕೋಡಿಕಲ್ ಬಳಿ ಕಳ್ಳತನ ನಡೆದಿತ್ತು. ಚಡ್ಡಿಗ್ಯಾಂಗ್ ಆ ಕೃತ್ಯ ನಡೆಸಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದರು. ಅದೇ ತಂಡ ಕೋಟೆಕಣಿಯಲ್ಲಿಯೂ ಕೃತ್ಯ ಎಸಗಿದೆ ಎಂದು ಅಂದಾಜಿಸಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆ

ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಉಡುಪಿ ನಗರಸಭೆ ವ್ಯಾಪ್ತಿಯ ಹಲವೆಡೆ ಮನೆಗಳು ಜಲಾವೃತಗೊಂಡಿದೆ.ಕರಂಬಳ್ಳಿ, ಮೂಡುನಿಡಂಬೂರು, ಕೊಡವೂರು ಭಾಗದಲ್ಲಿ ನೆರೆ ಸೃಷ್ಟಿಯಾಗಿದೆ. ಕರಂಬಳ್ಳಿ ಭಾಗದಲ್ಲಿ, ಬನ್ನಂಜೆ ಮೂಡನಿಡಂಬೂರು ಕೆಲವು ಮನೆಗಳು ಜಲಾವೃತಗೊಂಡಿದೆ. ಇಂದ್ರಾಣಿ ನದಿ ಹರಿಯುವ ಪಾತ್ರದಲ್ಲಿ ಗುಂಡಿಭಾಗದಲ್ಲಿ ತೋಟ, ಗದ್ದೆಗಳು ಜಲಾವೃತಗೊಂಡಿದೆ. ಭಾರಿ ಮಳೆಯಿಂದ ನಗರದಲ್ಲಿನ ಮಳೆನೀರು ತೋಡು ತುಂಬಿ ಹರಿಯುತ್ತಿದ್ದು ಇದರಿಂದ ಈ ಪರಿಸರದ

ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿದ ಲೋಡುಗಟ್ಟಲೆ ತ್ಯಾಜ್ಯ

ಬ್ರಹ್ಮಾವರ: ಕರಾವಳಿ ಜಿಲ್ಲೆಯಲ್ಲಿ ಕಳೆದ ಕೆಲವುದಿನದಿಂದ ಸುರಿಯುವ ಬಾರೀ ಮಳೆಯಿಂದ ಪ್ರವಾಹದಿಂದ ತುಂಬಿಹರಿಯುವ ನದಿಯಲ್ಲಿ ಬಾರಕೂರು ಬಳಿಯ ಸೀತಾನದಿಯ ನೀಲಾವರ ಕಿಂಡಿ ಅಣೆಕಟ್ಟಿನಲ್ಲಿ ಲೋಡುಗಟ್ಟಲೆ ತ್ಯಾಜ್ಯಗಳು ಸಿಲಿಕಿಕೊಂಡು ನದಿ ತೀರದಲ್ಲಿ ಕೃತಕ ನೆರೆ ಉಂಟಾಗಿದೆ. ಪೂರ್ವ ಭಾಗವಾದ ಕೊಕ್ಕರ್ಣೆ ,ಎಳ್ಳಂಪಳ್ಳಿ, ಕರ್ದಾಡಿ, ಕೂರಾಡಿ ಭಾಗದಲ್ಲಿ ಸೇತುವೆಯಿಂದ ನದಿಗೆ ಎಸೆಯುವಖಾಲಿ ಬಾಟಲಿಗಳು ಬೃಹತ್ ಮರದದಿಮ್ಮಿಗಳು ಸತ್ತು ಬಿದ್ದ ಪ್ರಾಣಿಗಳು ಇಲ್ಲಿನ

ಒಡಿಯೂರು ಶ್ರೀಗಳ ಜನ್ಮದಿನೋತ್ಸವ – ’ಕೆಸರ್ದ ಕಂಡೊಡೊಂಜಿ ದಿನ’ ಆಟೋಟ ಸ್ಪರ್ಧೆ

ಪ್ರಕೃತಿಯೇ ವಿಶ್ವವಿದ್ಯಾನಿಲಯ. ಮರ, ನದಿ ಕೂಡಾ ಪರೋಪಕಾರ ಮನೋಭಾವವನ್ನು ಬೆಳೆಸುತ್ತದೆ. ಪ್ರಕೃತಿ ನಾಶವಾಗಬಾರದು. ಅದರ ಜತೆಗೆ ಬದುಕು ಸಾಗಬೇಕು. ಪ್ರಕೃತಿ ಸಮತೋಲನ ಕಾಪಾಡುತ್ತದೆ. ಪ್ರಕೃತಿಯನ್ನು ಸ್ವಚ್ಛವಾಗಿಡುವುದು ಕರ್ತವ್ಯ ಮತ್ತು ಪರಿಣಾಮವಾಗಿ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ಆಧ್ಯಾತ್ಮದ ಚಿಂತನೆ ಮೂಲಕ ಜೀವನ ಪಾವನವಾಗಬೇಕು ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ನುಡಿದರು. ಅವರು ಒಡಿಯೂರು ಶ್ರೀಗಳ

ಮಂಗಳೂರು: ರೆ.ಫಾ. ಮೈಕಲ್ ಎಲ್ ಸಾಂತುಮೇಯರ್ ಅವರಿಗೆ ಪಿಹೆಚ್‌ಡಿ ಪ್ರದಾನ

ಮಂಗಳೂರಿನ ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರಾದ ಮತ್ತು ಕ್ಯಾಂಪಸ್ ನಿರ್ದೇಶಕರಾದ ರೆವರೆಂಡ್ ಫಾದರ್ ಮೈಕಲ್ ಎಲ್ ಸಾಂತುಮೇಯರ್ ಅವರಿಗೆ ಪಿಹೆಚ್‌ಡಿ ಪದವಿ ಪ್ರದಾನ ಮಾಡಲಾಯಿತು. ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯವು ಕೆಲಸದಲ್ಲಿ ತೊಡಗಿಕೊಳ್ಳುವುದರ ಕಣ್ಣೋಟಗಳು ಮತ್ತು ಅದು ಸಂಘಟಿತ ನಾಗರಿಕ ವರ್ತನೆಯ ಮೇಲೆ ಬೀರುವ ಪರಿಣಾಮಗಳು ಎಂಬ ಪ್ರಬಂಧಕ್ಕಾಗಿ ಡಾಕ್ಟರ್ ಆಫ್ ಫಿಲಾಸಫಿ ನೀಡಿ ಗೌರವಿಸಿದೆ. ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾನಿಲಯದ ಸಂಶೋಧನಾ

ರಸ್ತೆ ಕಾಮಗಾರಿಗೆ ಸ್ಥಳೀಯರ ಆಗ್ರಹ

ಮುಲ್ಕಿ ತಾಲ್ಲೂಕು ವ್ಯಾಪ್ತಿಯ ಕೆಮ್ರಾಲ್ ಗ್ರಾಮ ಪಂಚಾಯತ್‌ನ ಪಕ್ಷಿಕೆರೆಯಿಂದ ಪಂಜ ಮೂಲಕ ಸುರತ್ಕಲ್ ಸಂಪರ್ಕ ಕಲ್ಪಿಸುವ ಜಿಲ್ಲಾ ಪಂಚಾಯತ್ ರಸ್ತೆ ತೀವ್ರ ಕೆಟ್ಟು ಹೋಗಿದ್ದು ಸಂಚಾರ ದುಸ್ತರವಾಗಿ ಪರಿಣಮಿಸಿದೆ. ಈ ರಸ್ತೆಯ ಕೆಮ್ರಾಲ್ ಸಮುದಾಯ ಆರೋಗ್ಯ ಕೇಂದ್ರ ಹಾಗೂ ದಿ.ಶಾಂತರಾಮ ಶೆಟ್ಟಿ ಶಾಲೆಯ ಬಳಿ ತೀವ್ರ ಹದಗೆಟ್ಟಿದ್ದು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆಯಲ್ಲಿ ಮಳೆ ನೀರು ಹರಿದು ರೋಡ್, ತೋಡಾಗಿ ಪರಿಣಮಿಸಿದ್ದು ಸ್ಥಳೀಯರು ಸಂಬಂಧಪಟ್ಟವರಿಗೆ ಹಿಡಿ ಶಾಪ