ಕಡಿದು ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಇಬ್ಬರು ರಿಕ್ಷಾ ಚಾಲಕರು ದುರಂತ ಸಾವನ್ನಪ್ಪಿದ ಘಟನೆ ನಗರದ ಪಾಂಡೇಶ್ವರದ ರೊಸಾರಿಯೋ ಸ್ಕೂಲ್ ಬಳಿ ನಡೆದಿದೆ. ಪುತ್ತೂರು ರಾಮಕುಂಜ ನಿವಾಸಿ ದೇವರಾಜ್ ಗೌಡ(46), ಹಾಸನ ಜಿಲ್ಲೆಯ ಆಲೂರು ಮೂಲದ ರಾಜು (50) ಮೃತರು. ಇವರು ರೊಸಾರಿಯೋ ಸ್ಕೂಲ್ ಬಳಿ ಬಾಡಿಗೆ ಮನೆ ಮಾಡಿಕೊಂಡಿದ್ದರು. ನಿನ್ನೆ ರಾತ್ರಿ ಇವರ ಮನೆ ಬಳಿಯಲ್ಲಿ
ತೊನ್ನು ಏನಿದರ ಮರ್ಮ? ತೊನ್ನು ಎನ್ನುವುದು ಚರ್ಮಕ್ಕೆ ಸಂಬಂಧಿಸಿದ ದೀರ್ಘಕಾಲಿಕ ಖಾಯಿಲೆಯಾಗಿದ್ದು ಆಂಗ್ಲಭಾಷೆಯಲ್ಲಿ ಈ ರೋಗವನ್ನು ‘ವಿಟಿಲಿಗೊ’ ಎಂದು ಕರೆಯುತ್ತಾರೆ. ಈ ತೊನ್ನು ರೋಗ ಸಾಂಕ್ರಾಮಿಕ ರೋಗವಲ್ಲ ಮತ್ತು ವ್ಯಕ್ತಿಯಿಂದ ವ್ಯಕ್ತಿಗೆ ಸ್ಪರ್ಶದ ಮುಖಾಂತರ ಹರಡುವುದಿಲ್ಲ. ಅದೇ ರೀತಿ ತೊನ್ನು ರೋಗಕ್ಕೂ ಕುಷ್ಠ ರೋಗಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ತೊನ್ನು ರೋಗ ಯಾವುದೇ ವಯಸ್ಸಿನಲ್ಲಿ, ಯಾವುದೇ ಜಾತಿಯ, ಧರ್ಮದ ಮತ್ತು ಲಿಂಗದ ವ್ಯಕ್ತಿಗೆ ಬರಬಹುದು.
ಜೂನ್ 26ರಂದು ವಿಶ್ವದಾದ್ಯಂತ “ಮಾದಕವಸ್ತು ವಿರೋಧಿ ದಿನ” ಎಂದು ಆಚರಿಸಲಾಗುತ್ತದೆ. ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ, ಯುವ ಜನತೆಯನ್ನು ಜಾಗೃತಗೊಳಿಸುವ ಸದುದ್ದೇಶ ಈ ಆಚರಣೆಯ ಹಿಂದೆ ಇದೆ ಎಂದರೂ ತಪ್ಪಲ್ಲ. ಇಂದು ನಾವು ಜೀವಿಸುತ್ತಿರುವ ಈ ಕಾಲಘಟ್ಟ ಎನ್ನುವುದು, ಬಹಳ ಸ್ಪರ್ಧಾತ್ಮಕ ಜಗತ್ತು. ಎಲ್ಲವೂ ಬಹಳ ವೇಗದಲ್ಲಿ ನಡೆಯುತ್ತದೆ. ಕಣ್ಣು ಮಿಟುಕಿಸುವುದರ ಒಳಗೆ ಏನೆಲ್ಲಾ ನಡೆದು ಬಿಡುತ್ತದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ, ಒತ್ತಡವೂ
ಉಡುಪಿ : ತಂತಿ ಬೇಲಿಯಲ್ಲಿ ಸಿಲುಕಿಕೊಂಡಿದ್ದ ಚಿರತೆಯೊಂದನ್ನು ಅರಣ್ಯ ಇಲಾಖೆಯವರು ರಕ್ಷಿಸಿರುವ ಘಟನೆ ಕುಕ್ಕೆಹಳ್ಳಿ- ಹಿರಿಯಡ್ಕ ರಸ್ತೆಯ ಬಕ್ಕಾರೆ ಎಂಬಲ್ಲಿ ನಡೆದಿದೆ. ಸರಕಾರಿ ಜಾಗದಲ್ಲಿ ಅಳವಡಿಸಲಾಗಿದ್ದ ತಂತಿ ಬೇಲಿಯಲ್ಲಿ ಸುಮಾರು 4-5 ವರ್ಷ ಪ್ರಾಯದ ಗಂಡು ಚಿರತೆಯೊಂದು ಸಿಲುಕಿಕೊಂಡಿತ್ತು. ತಂತಿಯು ಚಿರತೆಯ ಸೊಂಟದ ಭಾಗಕ್ಕೆ ಉರುಳು ಬಿದ್ದಿದ್ದ ಕಾರಣ ಚಿರತೆ ನರಳಾಡುತ್ತಿತ್ತು. ಚಿರತೆಯನ್ನು ಗಮನಿಸಿದ ಸ್ಥಳೀಯರು ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದರು.
ಪುತ್ತೂರು: ಕೃಷ್ಣ ನಗರದ ಅಲುಂಬುಡ ಎಂಬಲ್ಲಿ ಕಾರ್ಯಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಶಿಕ್ಷಕರಾಗಿರುವ ಶ್ರೀಯುತ ಹರಿಪ್ರಸಾದ್ ಪಿಕೆ ರವರು ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಯೋಗದಿಂದ ನಮ್ಮ ಶಾರೀರಿಕ ಹಾಗೂ ಮಾನಸಿಕ ಸಮತೋಲನವನ್ನು ಕಾಯ್ದುಕೊಳ್ಳುವ ಮೂಲಕ ಒತ್ತಡ ರಹಿತ ಬದುಕನ್ನು ನಡೆಸಬಹುದು ಎಂದರು. ಕಾರ್ಯಕ್ರಮದ
ಉಪ್ಪಿನಂಗಡಿ ಪೇಟೆಯಲ್ಲಿರುವ ಪೃಥ್ವಿ ವಾಣಿಜ್ಯ ಮಳಿಗೆಯ ಫ್ಯಾನ್ಸಿ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಅಂಗಡಿಯನ್ನು ಸಂಪೂರ್ಣವಾಗಿ ಆವರಿಸಿ ಪಕ್ಕದಲ್ಲಿನ ಕೆಲವು ಅಂಗಡಿಗಳಿಗೆ ವ್ಯಾಪಿಸಿ ಹಾನಿಯುಂಟಾಗಿದೆ. ಪೃಥ್ವಿ ವಾಣಿಜ್ಯ ಮಳಿಗೆಲ್ಲಿನ ಅಂಗಡಿ ಮಾಲಕರು ರಾತ್ರಿ ತಮ್ಮ ಅಂಗಡಿಗಳನ್ನು ಮುಚ್ಚಿ ಮನೆಗೆ ತೆರಳಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.ಮೊದಲಿಗೆ ಫ್ಯಾನ್ಸಿ ಅಂಗಡಿಯಿಂದ ಹೊಗೆ ಕಾಣಿಸಿಕೊಂಡಿತ್ತು ಬಳಿಕ ಬೆಂಕಿ ವ್ಯಾಪಿಸಿತ್ತು ಎಂದು ಸ್ಥಳೀಯರು
ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪಿವಿಎಸ್ ಸರ್ಕಲ್ ಬಳಿಯ ವೈಶ್ಯ ಎಜುಕೇಶನ್ ಸೊಸೈಟಿ ಸಭಾಂಗಣದಲ್ಲಿ ನಡೆದ ಯೋಗಾಭ್ಯಾಸದಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರು ಭಾಗವಹಿಸಿದರು. ಈ ವೇಳೆ ಮಾತನಾಡಿದ ಶಾಸಕರು, ಭಾರತದ ಸನಾತನ ಪರಂಪರೆಯನ್ನು ಇಡೀ ವಿಶ್ವವೇ ಗೌರವಿಸುವ ದಿನವೇ ಅಂತಾರಾಷ್ಟ್ರೀಯ ಯೋಗ ದಿನ. ಮನುಷ್ಯನ ದೇಹದ ಸಮತೋಲನಕ್ಕಾಗಿ ಯೋಗದ ಕೊಡುಗೆ ಅನನ್ಯವಾಗಿದ್ದು ದೇಹದ ಜೊತೆಗೆ ಮನಸ್ಸಿಗೂ
ಮಂಗಳೂರು: ಪಿ.ಎನ್.ಆರ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ತಯಾರಾದ ಪುಷ್ಪರಾಜ್ ರೈ ಮಲಾರಬೀಡು ನಿರ್ದೇಶನದ “ಆರಾಟ” ಕನ್ನಡ ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು. ಶಾಸಕ ರಾಜೇಶ್ ನಾಯ್ಕ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.ಆರಾಟ ಕನ್ನಡ ಸಿನಿಮಾ ನಮ್ಮ ಸಂಸ್ಕ್ರತಿಯನ್ನು,ನಮ್ಮ ಪರಂರೆಯನ್ನು ಬಿಂಬಿಸುವ ಸಿನಿಮಾ ಆಗಿದೆ. ಸಿನಿಮಾವನ್ನು ಎಲ್ಲರೂ ವೀಕ್ಷಿಸಿ ಪ್ರೋತ್ಸಾಹಿಸ ಬೇಕೆಂದರು. ಮುಖ್ಯ ಅತಿಥಿ ಕಟೀಲು ಯಕ್ಷಗಾನ ಮೇಳದ ಮುಖ್ಯಸ್ಥ
ಲಿಟ್ಲ್ ಫ್ಲವರ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ದರ್ಬೆ ಪುತ್ತೂರು ಇಲ್ಲಿ ವಿಶ್ವ ಯೋಗದಿನಾಚರಣೆಯನ್ನು ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ನಂತರ ಮಾತನಾಡಿದ ಅವರು ” ಭಾರತೀಯ ವೈದ್ಯ ಪದ್ಧತಿಯಲ್ಲಿ ಆಯುರ್ವೇದಕ್ಕೆ ಮಹತ್ವದ ಸ್ಥಾನವಿದೆ.ಯೋಗದಿಂದ ದೈಹಿಕ ಮತ್ತು ಮಾನಸಿಕ ಸಮತೋಲನ ಸಾಧ್ಯವಿದ್ದು, ಯೋಗ ಇದ್ದರೆ ರೋಗವಿಲ್ಲ, ಯೋಗ ದಿನ ನಿತ್ಯದ ಭಾಗವಾಗಲಿ ” ಎಂದರು. ವೇದಿಕೆಯಲ್ಲಿ ಹಿರಿಯ ಶಿಕ್ಷಕಿ ವಿಲ್ಮಾ
ಸುದ್ದಿ ಮತ್ತು ಮನೋರಂಜನಾ ಕ್ಷೇತ್ರದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ವಿ4 ನ್ಯೂಸ್‌ಗೆ 19ನೇ ವರ್ಷದ ಸಂಭ್ರಮ. ನಗರದ ಯೆಯ್ಯಾಡಿಯಲ್ಲಿರುವ ವಿ4 ನ್ಯೂಸ್ ಸ್ಟುಡಿಯೋದಲ್ಲಿ ಕೇಕ್ ಕತ್ತರಿಸಿ ಸಂಭ್ರಮದಿಂದ ವಾರ್ಷಿಕೋತ್ಸವನ್ನು ಆಚರಿಸಲಾಯಿತು. ಕರಾವಳಿ ಕರ್ನಾಟಕದ ಜನಪ್ರೀಯ ಚಾನೆಲ್ ಆಗಿ ಹೊರಹೊಮ್ಮಿರುವ ವಿ4 ನ್ಯೂಸ್ ಕರಾವಳಿಯ ಸುದ್ದಿಗಳು ಮಾತ್ರವಲ್ಲದೆ ರಾಜ್ಯ, ರಾಷ್ಟ್ರೀಯ ಅಂತರರಾಷ್ಟ್ರೀಯ ಸುದ್ದಿಗಳನ್ನು ಭಿತ್ತರಿಸುವುದರ ಜೊತೆಗೆ, ಕಾಮಿಡಿ ಪ್ರೀಮಿಯರ್ ಲೀಗ್




























