ಮಂಜೇಶ್ವರ: ಗಡಿಪ್ರದೇಶವಾದ ತಲಪಾಡಿಯಿಂದ ಮಂಜೇಶ್ವರ ತನಕದ ರಾ. ಹೆದ್ದಾರಿಯ ಇಕ್ಕಡೆಗಳಲ್ಲೂ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದೆ. ಸರ್ವೀಸ್ ರಸ್ತೆಯ ಇಕ್ಕೆಡೆಗಳಲ್ಲೂ ಕಾರ್ಯಾಚರಿಸುತ್ತಿರುವ ವ್ಯಾಪಾರ ಕೇಂದ್ರಗಳಿಗೆ ಮತ್ತು ಮನೆಗಳಿಗೆ ತೊಂದರೆಯಾಗುತ್ತಿದೆ. ಈ ರೀತಿಯಾಗಿ ತೊಂದರೆ ನೀಡುವ ಕಾಮಗಾರಿಯನ್ನು ನಿಲ್ಲಿಸಬೇಕೆಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ
ಮಂಗಳೂರಿನ ನಂತೂರಿನಲ್ಲಿರುವ ಡಾ. ನಿಟ್ಟೆ ಶಂಕರ್ ಅಡ್ಯಂತಾಯ ಮೆಮೋರಿಯಲ್ ಪಿಯು ಕಾಲೇಜಿನ ಎನ್‌ಎಸ್‌ಎಸ್ ಯೂನಿಟ್ ವತಿಯಿಂದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಿದರು. ಕಾಲೇಜಿನ ಅಡಿಟೋರಿಯಂನಲ್ಲಿ ನಡೆದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಪತಂಜಲಿ ಯೋಗ ಸಮಿತಿಯ ಉಪಾಧ್ಯಕ್ಷರಾದ ಡಾ. ಜ್ಞಾನೇಶ್ವರ್ ನಾಯಕ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ನಮ್ಮ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಸುವಲ್ಲಿ ಯೋಗದ ಪಾತ್ರ ಮಹತ್ವದ್ದು ಎಂದರು. ಡಾ. ಎನ್ ಎಸ್‌ಎಎಮ್
ಜಗತ್ತು ಯೋಗವನ್ನು ಜಾಗತಿಕ ಕ್ಷೇಮದ ಪ್ರಬಲ ರಾಯಭಾರಿ ಎಂಬಂತೆ ನೋಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕಾಶ್ಮೀರದ ‘ಶೇರ್ ಇ ಕಾಶ್ಮೀರ್ ಇಂಟರ್‌ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್’ನಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದ ಮೋದಿ, ಜನರು ತಮ್ಮ ವೈಯಕ್ತಿಕ ಯೋಗಕ್ಷೇಮಕ್ಕೂ ಸಮಾಜದ ಕಲ್ಯಾಣಕ್ಕೂಸಂಬಂಧವಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಲು ಯೋಗ ನೆರವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ‘ನಾವು
ಮಂಗಳೂರಿನ ಕದ್ರಿ ಕೈಬಟ್ಟಲಿನ ಪ್ರಕೃತಿ ಯೋಗ ಕುಟೀರದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು.ಕಾರ್ಯಕ್ರಮವನ್ನು ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಮನೋಹರ್ ಶೆಟ್ಟಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಯೋಗಾಸನದಿಂದ ಅದ್ಭುತ ಶಕ್ತಿ ಉಂಟಾಗುತ್ತದೆ. ಮಾನಸಿಕ, ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದರು. ಎಜೆ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಪ್ರಶಾಂತ್ ಮಾರ್ಲ ಅವರು ಮಾತನಾಡಿ, ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ
ಮಂಗಳೂರು: ರಾಮೋಜಿ ರಾವ್ ಅವರು ದೂರದೃಷ್ಟಿತ್ವವುಳ್ಳವರು. ಉಪ್ಪಿನಕಾಯಿ ಮೂಲಕ ಒಂದು ಬೃಹತ್ ಉದ್ಯಮ ಆರಂಭಿಸಬಹುದು ಎಂದು ಬಹಳಷ್ಟು ವರ್ಷಗಳ ಹಿಂದಯೇ ಆಲೋಚನೆ ಮಾಡಿದವರು ಎಂದು ವಿಜಯಕರ್ನಾಟಕ ದಿನಪತ್ರಿಕೆಯ ನಿವೃತ್ತ ಸ್ಥಾನೀಯ ಸಂಪಾದಕ , ಹಿರಿಯ ಪತ್ರಕರ್ತ ಕುಮಾರನಾಥ್ ಹೇಳಿದರು. ನಗರದ ಎ.ಬಿ.ಶೆಟ್ಟಿ ವೃತ್ತದ ಬಳಿಯಿರುವ ಮಾರ್ಗದರ್ಶಿ ಚಿಟ್ಸ್ ಫ್ರೈ. ಲಿಮಿಟೆಡ್ ಕಚೇರಿಯಲ್ಲಿ ನಡೆದ ರಾಮೋಜಿ ರಾವ್ ಅವರ ಶ್ರದ್ಧಾಂಜಲಿ ಸಭೆಯಲ್ಲಿ ರಾಮೋಜಿ ರಾವ್ ಅವರ ಭಾವಚಿತ್ರಕ್ಕೆ
ಇತ್ತೀಚಿನ ದಿನಗಳಲ್ಲಿ ಹೆಚ್ಚು ಬೆಳಕು ಚೆಲ್ಲುವ ಎಲ್‌ಇಡಿ ಬೆಳಕುಗಳೊಡನೆ ವಾಹನಗಳು ಸಂಚರಿಸುತ್ತಿದ್ದು, ಇದು ಎದುರು ಬದಿಯ ವಾಹನಗಳವರನ್ನು ಕಕ್ಕಾಬಿಕ್ಕಿ ಮಾಡಿ ಅಪಘಾತಕ್ಕೆ ಕಾರಣ ಆಗುತ್ತಿವೆ. ಇದನ್ನು ಮುಂದುವರಿಸಿದರೆ ದಂಡ ವಿಧಿಸಲಾಗುವುದು ಎಂದು ಅಲೋಕ್ ಕುಮಾರ್ ಎಚ್ಚರಿಕೆ ನೀಡಿದರು. ಕರ್ನಾಟಕದ ಸಂಚಾರ ಮತ್ತು ರಸ್ತೆ ಸುರಕ್ಷತಾ ವ್ಯವಸ್ಥೆಯ ಹೆಚ್ಚುವರಿ ಪೋಲೀಸು ಮಹಾನಿರ್ದೇಶಕ ಅಲೋಕ್ ಕುಮಾರ್ ಅವರು ಎಲ್ಲ ಪೋಲೀಸು ಇಲಾಖೆಯವರಿಗೆ ಮತ್ತು ವಾಹನ ಹೊಂದಿರುವವರಿಗೆ
ಕರ್ನಾಟಕ ಸರ್ಕಾರ ಉಡುಪಿ ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಾಥಮಿಕ ಆರೋಗ್ಯ ಕೇಂದ್ರ ನಾಡ ಗ್ರಾಮ ಪಂಚಾಯತ್ ನಾಡ ಶ್ರೀ ಮಹಾಗಣಪತಿ ಸೇವಾ ಸಮಿತಿ ಗುಡ್ಡೆ ಹೊಟೆಲ್ ನಾಡ ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಶಿರೂರು ಮುದ್ದುಮನೆ ಸಂಯುಕ್ತ ಆಶ್ರಯದಲ್ಲಿ ಜೂನ್ 27ರಂದು ಬೆಳಿಗ್ಗೆ 9 ಗಂಟೆಯಿಂದ 12ರ ವರೆಗೆ ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ ಆಯೋಜಿಸಿದ್ದಾರೆ. ಶ್ರೀ ಮಹಾಗಣಪತಿ
ಬಂಟ್ವಾಳ: ಕರ್ನಾಟಕದಲ್ಲಿ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿದ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ ಹಾಗೂ ರಾಷ್ಡ್ರೀಯ ಹೆದ್ದಾರಿ ತಡೆ ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ಬಿ.ಸಿ.ರೋಡಿನಲ್ಲಿ ನಡೆಯಿತು. ಶಾಸಕ ರಾಜೇಶ್ ನಾಯ್ಕ್ ಪ್ರತಿಭಟಮಕಾರರನ್ನು ಉದ್ದೇಶಿಸಿ ಮಾತನಾಡಿ ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಹಿಂದಿನ ಸರಕಾರದ ಅವಧಿಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿತ್ತು. ಈಗ ನಾಲ್ಕನೇ ಸ್ಥಾನಕ್ಕೆ ಹಿಂದೆ ಸರಿದಿದೆ. ಕಾಂಗ್ರೆಸ್ ಸರಕಾರ ಗ್ಯಾರಂಟಿ ನೆಪದಲ್ಲಿ
ತೈಲ ಬೆಲೆ ಏರಿಕೆಯನ್ನು ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯುತ್ತಿದ್ದು, ಮಂಗಳೂರಿನ ಪಿವಿಎಸ್ ವೃತ್ತದ ಬಳಿ ಬಿಜೆಪಿ ವತಿಯಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು, ಲೋಕಸಭೆ ಚುನಾವಣೆಯ ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತೈಲ ಬೆಲೆ ಏರಿಸಿ ಜನಸಾಮಾನ್ಯರ ಮೇಲೆ ಬರೆ ಎಳೆದಂತಾಗಿದೆ. ಬಡವರ ಜೇಬಿಗೆ ಕತ್ತರಿ ಹಾಕುವಂತಹ ನಿರ್ಣಯ ಸರಿಯಲ್ಲ.
ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ತೈಲ ಬೆಲೆಯ ಮೇಲಿನ ಮಾರಾಟ ತೆರಿಗೆ ಏರಿಸಿ ಜನಸಾಮ್ಯಾನರ ಮೇಲೆ ಬರೆ ಎಳೆದಿದ್ದಾರೆ. ವಾಲ್ಮೀಕಿ ನಿಗಮ ಸಹಿತ ಅನೇಕ ಭ್ರಷ್ಟಾಚಾರದಲ್ಲಿ ತೊಡಗಿದ ಮುಖ್ಯಮಂತ್ರಿಗಳು ಬೆಲೆ ಏರಿಕೆ ಹಾಗೂ ಭ್ರಷ್ಟಾಚಾರದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಮುಲ್ಕಿ ಮೂಡಬಿದಿರೆ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಆಗ್ರಹಿಸಿದ್ದಾರೆ. ಕಿನ್ನಿಗೋಳಿಯ ಯುಗಪುರುಷ ಸಭಾಭವನ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ




























