ಮಂಗಳೂರಿನ ವಾಮಂಜೂರಿನಲ್ಲಿರುವ ಮಾನಸ ವಾಟರ್ ಪಾರ್ಕ್‌ನಲ್ಲಿ ಮಾನಸ ಮ್ಯಾಕ್ಸ್ ರಾಯಲ್ ಪ್ರೀಮಿಯಂ ಕ್ಲಬ್ ಸದಸ್ಯತ್ವ ಆರಂಭಗೊಂಡಿದ್ದು, ಆ ಮೂಲಕ ವಿಶೇಷ ಸೌಲಭ್ಯಗಳನ್ನು ಪಡೆದುಕೊಳ್ಳಬಹದು. ಮನೋರಂಜನೆಯ ವಾಟರ್ ಪಾರ್ಕ್ ಮಾನಸ ಅಮ್ಯೂಸ್‌ಮೆಂಟ್ ವಾಟರ್ ಪಾರ್ಕ್, ಹಚ್ಚ ಹಸಿರಿನ ಪರಿಸರದಲ್ಲಿ ಪ್ರವಾಸಿಗರಿಗೆ ಮನೋರಂಜನೆ ನೀಡುವ ಪಾರ್ಕ್ ಆಗಿದ್ದು, ಅನೇಕ ಸೌಲಭ್ಯಗಳನ್ನು
ಮೂಡುಬಿದಿರೆ: ದ.ಕ.ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ ಮೂಡುಬಿದಿರೆ ಮತ್ತು ಸರ್ವೋದಯ ಫ್ರೆಂಡ್ಸ್ ಇವುಗಳ ವತಿಯಿಂದ ಮಾಸ್ತಿಕಟ್ಟೆ ಸರಕಾರಿ ಶಾಲೆಯ ಮಕ್ಕಳಿಗೆ ಉಚಿತ ಕೊಡೆ ಮತ್ತು ಪುಸ್ತಕವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಪುರಸಭೆಯ ಮಾಜಿ ಅಧ್ಯಕ್ಷ ಪ್ರಸಾದ್ ಕುಮಾರ್, ಗ್ಯಾರೇಜ್ ಮಾಲೀಕರ ಸಂಘದ ಅಧ್ಯಕ್ಷ ಗುರುಪ್ರಸಾದ್ ಭಂಡಾರಿ, ಪ್ರಧಾನ ಕಾರ್ಯದರ್ಶಿ ನವೀನ ಕುಂದರ್, ಉಪಾಧ್ಯಕ್ಷ ಗಿರೀಶ್ ನಾಯಕ್, ಕೋಶಾಧಿಕಾರಿ ಶಂಕರ ಕೋಟ್ಯಾನ್, ಯಶವಂತ್, ದೀರಜ್, ಸುಧಾಕರ,
ವಿಶ್ವ ಪರಿಸರ ದಿನದ ಅಂಗವಾಗಿ ನಗರದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿಯಾದ ರೋಹನ್ ಕಾರ್ಪೊರೇಷನ್ ತನ್ನ ರೋಹನ್ ಸಿಟಿ ಆವರಣದಲ್ಲಿ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ರೋಹನ್ ಕಾರ್ಪೋರೇಶನ್ ನಿನ ವ್ಯವಸ್ಥಾಪಕ ನಿರ್ದೇಶಕರಾದ ರೋಹನ್ ಮೊಂತೇರೊ ರವರು ತಮ್ಮ ಉದ್ಯೋಗಿಗಳೊಂದಿಗೆ ಸಸಿಗಳನ್ನು ನೆಟ್ಟು , ಪರಿಸರ ಸಂರಕ್ಷಣೆಯ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಹೊಸದಾಗಿ ರಚಿಸಲಾದ “ರೋಹನ್ ಕಾರ್ಪೊರೇಷನ್ ಪರಿಸರದ ಪ್ರತಿಜ್ಞೆ” ಯನ್ನು
ಬಂಟ್ವಾಳ: ಸ್ಮಾರ್ಟ್ ಗೈಸ್ ಕೈಕಂಬ, ಅಂಬೇಡ್ಕರ್ ಯುವವೇದಿಕೆ ಬಂಟ್ವಾಳ ಆಶ್ರಯದಲ್ಲಿ ದ.ಕ.ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಸಮಾಜಮುಖಿ, ಮಾನವತಾವಾದಿ ದಿ.ರಾಜ ಪಲ್ಲಮಜಲು ಅವರು ನಿಧನ ಹೊಂದಿ 3ನೇ ವರ್ಷದ ಸ್ಮರಣಾರ್ಥ, ನುಡಿನಮನ, ಪ್ರತಿಭಾ ಪುರಸ್ಕಾರ ಮತ್ತು ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ ಎಸ್.ಜಿ.ಕೆ. ಟ್ರೋಫಿ 2024 ಕಾರ್ಯಕ್ರಮಗಳು ಜೂನ್ 15ರಂದು ಸಂಜೆ ಬಂಟ್ವಾಳ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿದೆ. ಈ ವಿಷಯವನ್ನು ಸಂಘಟಕ,
ಬ್ಯಾಂಕಿನ 2023-24ನೇ ವರ್ಷದ ಸಿಬ್ಬಂದಿ ಕಾರ್ಯಕ್ಷಮತೆ ವಿಶ್ಲೇಷಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭವು ಮಂಗಳೂರಿನ ಆಡಳಿತ ಕಚೇರಿಯ ಪಿ.ಎಫ್.ಎಕ್ಸ್ ಸಲ್ಡಾನಾ ಸ್ಮಾರಕ ಸಭಾಂಗಣದಲ್ಲಿ ನಡೆಯಿತು. ಸಮೀಕ್ಷೆಯು ಆಲ್ಡ್ರಿನ್ ಡಿಸೋಜ ಮತ್ತು ತಂಡದ ನೇತೃತ್ವದಲ್ಲಿ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಮಂಗಳೂರು ಧರ್ಮಪ್ರಾಂತ್ಯದ ಮಾಜಿ ಪ್ರೊಕ್ಯುರೇಟರ್ ರೆ| ಫಾ| ಜಾನ್ ವಾಸ್ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಫಾ| ಜಾನ್
ಪೊಲೀಸರ ಅಂತರ್ ಜಿಲ್ಲಾ ವರ್ಗಾವಣೆ ದಿನೇ ದಿನೇ ಕಗ್ಗಂಟಾಗಿ ಪರಿವರ್ತನೆಯಾಗುತ್ತಿದ್ದು, ಪೊಲೀಸ್ ಇಲಾಖೆಯ ಕೆಳಮಟ್ಟದ ಪೊಲೀಸ್ ಕಾನ್ಸ್ ಸ್ಟೇಬಲ್‌ಗಳ ಅಂತರ ಜಿಲ್ಲಾ ವರ್ಗಾವಣೆಗೆ ಗೃಹ ಸಚಿವರ ಒಪ್ಪಿಗೆಯಿದ್ದರೂ ಇಲಾಖಾ ಮೇಲಾಧಿಕಾರಿಗಳು ಸಮ್ಮತಿ ಸೂಚಿಸದೇ ಪದೇ ಪದೇ ವಿಳಂಭ ನೀತಿ ಅನುಸರಿಸುತ್ತಿರುವುದು ಪೊಲೀಸರ ಗೋಳು ಕೇಳೋರ್‍ಯಾರು ಎಂಬಂತಹ ಪರಿಸ್ಥಿತಿಗೆ ಬಂದು ತಲುಪಿದೆ. ಪೊಲೀಸ್ ಇಲಾಖೆಯಲ್ಲಿ ಪ್ರತಿಭಟನೆ ಮಾಡಲು ಅವಕಾಶವಿಲ್ಲವೆನ್ನುವುದನ್ನೇ ಗುರಿಯಾಗಿಸಿಕೊಂಡು
ಎಂಜಿನಿಯರಿಂಗ ಪದವಿಯ ಕನಸು ಹೊತ್ತ ಆಸಕ್ತ ವಿದ್ಯಾರ್ಥಿಗಳಿಗೆ ನೇರವಾಗಿ 10ನೇ ತರಗತಿಯ ಅನಂತರ 3 ವರ್ಷಗಳ ಡಿಪ್ಲೋಮಾ ಪೂರೈಸಿ ಯಾವುದೇ ಪ್ರವೇಶ ಪರೀಕ್ಷೆಯ ಒತ್ತಡವಿಲ್ಲದೆ ಲ್ಯಾಟರಲ್ ಎಂಟ್ರಿ ಸೌಲಭ್ಯದೊಂದಿಗೆ ಆಯ್ಕೆಯ ಎಂಜಿನಿಯರಿಂಗ್ ಪದವಿಯ ದ್ವಿತೀಯ ವರ್ಷಕ್ಕೆ ಎಂಐಟಿ ಮಣಿಪಾಲದಲ್ಲಿ ನೇರ ಪ್ರವೇಶಕ್ಕೆ ಸಂಸ್ಥೆಯ ಮೂಲಕ ಸದಾವಕಾಶ ಕಲ್ಪಿಸಲಾಗಿದೆ. ಸಂಸ್ಥೆಯ ಲ್ಯಾಟರಲ್ ಎಂಟ್ರಿ ಆಸಕ್ತ ವಿದ್ಯಾರ್ಥಿಗಳಿಗೆ ಎಂಐಟಿ ಶುಲ್ಕದ ಒಟ್ಟು ಶುಲ್ಕದಲ್ಲಿ ಶೇ.75ರಷ್ಟು
ಬಹರೈನ್‌ನ ಕನ್ನಡ ಸಂಘವು ಕನ್ನಡ ಭವನದ ಸಭಾಂಗಣದಲ್ಲಿ ಜೂನ್ 14ರಂದು ಶನಿ ಪೂಜೆ ಸತ್ಯನಾರಾಯಣ ಪೂಜೆ ಹಾಗು ಯಕ್ಷಗಾನ ಪ್ರದರ್ಶನವನ್ನು ಹಮ್ಮಿಕೊಂಡಿದೆ. ಸಂಜೆ ಮೂರು ಗಂಟೆಗೆ ಸರಿಯಾಗಿ ಮಂಗಳೂರಿನ ಪ್ರಸಿದ್ಧ ಕದ್ರಿ ಕ್ಷೇತ್ರದ ಅರ್ಚಕರಾದ ವೇದಮೂರ್ತಿ ಕೃಷ್ಣ ಅಡಿಗರ ಪೌರೋಹಿತ್ಯದಲ್ಲಿ ಶನಿ ಪೂಜೆ ಹಾಗು ಸತ್ಯನಾರಾಯಣ ಪೂಜೆಯೊಂದಿಗೆ ಕಾರ್ಯಕ್ರಮವು ಆರಂಭವಾಗಲಿದೆ. ಸಂಜೆ ಐದೂವರೆ ಘಂಟೆಗೆ ನಾಟ್ಯಗುರು ದೀಪಕ್ ರಾವ್ ಪೇಜಾವರ ಇವರ ದಿಗ್ದರ್ಶನದಲ್ಲಿ ನಾಡಿನ ಖ್ಯಾತ ಅತಿಥಿ
ಮಂಗಳೂರು : ಸುಳ್ಯ ತಾಲೂಕಿನ ಗ್ರಾಮೀಣ ಭಾಗದಲ್ಲಿ ಬಿಎಸ್‌ಎನ್‌ಎಲ್ ನೆಟ್ ವರ್ಕ್ ಸಮಸ್ಯೆ ತೀವ್ರಗೊಂಡಿರುವ ಹಿನ್ನಲೆಯಲ್ಲಿ ಪರಿಹಾರದ ಕುರಿತು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ಮಾಡಿ ಚರ್ಚಿಸಿದರು. ಸುಳ್ಯ ತಾಲೂಕಿನ ತೊಡಿಕಾನದ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಸಮಸ್ಯೆ ಸೇರಿದಂತೆ ಸುಳ್ಯ ತಾಲೂಕಿನ ವಿವಿಧ ಕಡೆ ನೆಟ್‌ವರ್ಕ್
ಪುತ್ತೂರು: ಕಳೆದ ಎರಡು ದಿನಗಳಿಂದ ಬೆಳ್ಳಿಪ್ಪಾಡಿ ಗ್ರಾಮ ಮತ್ತು ಶಾಂತಿಗೋಡು ಗ್ರಾಮದ ನಡುವೆ ಸುತ್ತಾಡುತ್ತಿರುವ ಕಾಡಾನೆಗಳೆರಡು ಇದೀಗ ಶಾಂತಿಗೋಡು / ಚಿಕ್ಕಮುಡ್ನೂರು ಗ್ರಾಮದ ನಡುವೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಶಾಂತಿಗೋಡು ಗ್ರಾಮದ ಪಂಜಿಗದಲ್ಲಿ ಆನೆ ಹೆಜ್ಜೆ ಗುರುತುಗಳು ಪತ್ತೆಯಾಗಿದೆ. ಬೆಳ್ಳಿಪ್ಪಾಡಿ ಕೊಡಿಮರದಿಂದ ಹೊಳೆ ದಾಟಿದ ಆನೆ ಅಲ್ಲಿಂದ ಬೆದ್ರಾಳ ತೋಡು ಮೂಲಕ ಚಿಕ್ಕಮುಡ್ನೂರು ಗ್ರಾಮದ ಧನ್ಯ ಕುಮಾರ್ ಜೈನ್ ಎಣಿಮೊಗರು ಅವರ ತೋಟದಲ್ಲಿ ಹೋಗಿದೆ.




























