Home Blog Left SidebarPage 212

ಉಳ್ಳಾಲ: ಸಮುದ್ರಪಾಲಾಗುತ್ತಿದ್ದ ಮೂವರು ಮಹಿಳೆಯರ ರಕ್ಷಣೆ, ಓರ್ವ ಮಹಿಳೆ ಸಾವು

ಉಳ್ಳಾಲ: ಇಲ್ಲಿನ ಸಮುದ್ರತೀರಕ್ಕೆ ವಿಹಾರಕ್ಕೆ ಬಂದಿದ್ದ ಆಂದ್ರಪ್ರದೇಶ ಮೂಲದ ನಾಲ್ವರು ಮಹಿಳೆಯರಲ್ಲಿ ಒಬ್ಬಾಕೆ ಸಮುದ್ರಪಾಲಾಗಿದ್ದು, ಉಳಿದ ಮೂವರನ್ನು ಸ್ಥಳೀಯರು ರಕ್ಷಿಸಿದ್ದಾರೆ‌.ಆಂದ್ರಪ್ರದೇಶದ ಕೊಂಡಾಪುರದ ಸಿರಿಲಿಂಗಪಲ್ಲಿ ನಿವಾಸಿ ಪಿ.ಎಲ್ ಪ್ರಸನ್ನ ಎಂಬವರ ಪತ್ನಿ ಪರಿಮೀ ರತ್ನ ಕುಮಾರಿ (57) ಸಾವನ್ನಪ್ಪಿದವರು. ಉಳ್ಳಾಲ ಬೀಚ್ ಸಮುದ್ರದಲ್ಲಿ

ಟೊಯೊಟಾ ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮ ಬ್ರಹ್ಮಾವರದಲ್ಲಿ ಉದ್ಘಾಟನೆ

ಬ್ರಹ್ಮಾವರ:ಯುನೈಟೆಡ್ ಟೊಯೊಟ ವತಿಯಿಂದ ಟೊಯೊಟಾ ಮಾನ್ಸೂನ್ ಕಾರೋತ್ಸವ  ಕಾರ್ಯಕ್ರಮ ಬ್ರಹ್ಮಾವರದಲ್ಲಿ ಸೋಮವಾರ ನಡೆಯಿತು. ಟೊಯೊಟಾ ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮ ಜೂ.10 ರಿಂದ ಜೂ.16 ರ ವರೆಗೆ ಬ್ರಹ್ಮವಾರದಲ್ಲಿ ನಡೆಯಲಿದೆ. ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮದ ಅಂಗವಾಗಿ ಗ್ರಾಹಕರಿಗೆ ಆಕರ್ಷಕ  ಆಫರ್ ಗಳನ್ನು ನೀಡಲಾಗುತ್ತಿದ್ದು.ತಮ್ಮ ಹಳೆ ಕಾರನ್ನು ನೀಡಿ ಉತ್ತಮ ಬೆಲೆಯನ್ನು ಪಡೆದುಕೊಂಡು ಹೊಸ ಕಾರನ್ನು ಖರೀದಿಸಲು ಅವಕಾಶವನ್ನು ಕಲ್ಪಿಸಲಾಗಿದೆ.ಕಡಿಮೆ

ನೀಟ್ ಯುಜಿ ಫಲಿತಾಂಶ: ಆಕಾಶ್ ಎಜ್ಯುಕೇಶನ್ ಸಂಸ್ಥೆ ವಿದ್ಯಾರ್ಥಿಯ ಸಾಧನೆ:ಮಂಗಳೂರು ಶಾಖೆಯ ಅಮನ್ ಅಬ್ದುಲ್ ಹಕೀಂ ಟಾಪ್ ಸ್ಕೋರರ್

ಪರೀಕ್ಷಾ ಪೂರ್ವ ಸಿದ್ಧತಾ ಸೇವೆಗಳ ಕ್ಷೇತ್ರದಲ್ಲಿ ರಾಷ್ಟ್ರದಲ್ಲೇ ಮುಂಚೂಣಿಯಲ್ಲಿರುವ ಆಕಾಶ್ ಎಜ್ಯುಕೇಶನಲ್ ಸರ್ವೀಸಸ್ ಲಿಮಿಟೆಡ್ ಸಂಸ್ಥೆಯ ಮಂಗಳೂರಿನ ಶಾಖೆಯ ಅಮನ್ ಅಬ್ದುಲ್ ಹಕೀಂ ಪ್ರತಿಷ್ಠಿತ ನೀಟ್ ಯುಜಿ ಪರೀಕ್ಷೆಯಲ್ಲಿ ೭೧೦ ಅಂಕಗಳೊಂದಿಗೆ ಕ್ರಮವಾಗಿ ಎಐಆರ್ ೫೯೨ ಶ್ರೇಯಾಂಕ ಗಳಿಸಿ ಅತ್ಯತ್ತಮ ಸಾಧನೆ ಮಾಡಿದ್ದಾರೆ. ಅಮನ್ ಅಬ್ದುಲ್ ಹಕೀಂ ಅವರ ಗಮನಾರ್ಹ ಸಾಧನೆಯು ಅವರ ಕಠಿಣ ಪರಿಶ್ರಮ, ಸಮರ್ಪಣೆ ಮತ್ತು ಆಕಾಶ್ ಎಜ್ಯುಕೇಶನಲ್ ಸರ್ವೀಸಸ್ ಲಿಮಿಟೆಡ್‌ನ  ಒದಗಿಸಿದ

ಬೆಳ್ಳಾರೆ: ಮಹಿಳೆಯ ಶವ ಪತ್ತೆ- ಕೊಲೆ ಶಂಕೆ

ಸುಳ್ಯ: ಬೆಳ್ಳಾರೆ ಪೇಟೆಯಲ್ಲಿ ಮಹಿಳೆಯೋರ್ವರ ಶವ ಪತ್ತೆಯಾಗಿದ್ದು ಕೊಳೆ ಶಂಕೆ ವ್ಯಕ್ತವಾಗಿದೆ.ಬೆಳ್ಳಾರೆ ಪೇಟೆಯ ಎಪಿಎಂಸಿ ಮಾರುಕಟ್ಟೆ ಬಳಿ ಸೋಮವಾರ ಮಹಿಳೆಯ ಶವ ಪತ್ತೆಯಾಗಿದೆ. ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆಂಬ ಶಂಕೆ ವ್ಯಕ್ತವಾಗಿದ್ದು, ಸ್ಪಷ್ಟ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಮೃತ ಮಹಿಳೆಯನ್ನು ಪಾಟಾಜೆಯ ನಳಿನಿ ಎಂದು ಗುರುತಿಸಲಾಗಿದೆ. ಪೊಲೀಸ್ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಕುಂದಾಪುರ : ತ್ರಾಸಿ ಅಂಬಾ ಶೋ ರೂಂ ಗೆ ಆಕಸ್ಮಿಕ ಬೆಂಕಿ

ಕುಂದಾಪುರ:ತಾಲೂಕಿನ ತ್ರಾಸಿ ಅಂಬಾ ಶೋ ರೂಂ ಗೆ ತಗುಲಿದ ಆಕಸ್ಮಿಕ ಬೆಂಕಿ ಯಿಂದಾಗಿ ಶೋ ರೂಂ ದಗದಹಿಸಿದೆ.ಕೋಟಿ.ಗೂ ಅಧಿಕ ನಷ್ಟ ಸಂಭವಿಸಿದ ಘಟನೆ ಭಾನುವಾರ ನಡೆದಿದೆ. ಕರಾವಳಿ ಭಾಗದಲ್ಲಿ ಪದೆ ಪದೆ ಅಗ್ನಿ ಅವಘಡಗಳು ಸಂಭವಿಸುತ್ತ ಇದ್ದರು, ಹೆಚ್ಚಿನ ಯಾವುದೇ ರೀತಿಯ ಸೌಲಭ್ಯ ಇಲ್ಲದೆ ಇರುವುದು ಅಗ್ನಿ ಅನಾಹುತದಲ್ಲಿ ನಷ್ಟ ಪ್ರಮಾಣ ಅಧಿಕವಾಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ. ಆಕಸ್ಮಿಕವಾಗಿ ತಗುಲಿದ ಬೆಂಕಿ ಶೊ ರೂಂ ಇಡಿ ವ್ಯಾಪಿಸಿದ್ದು ಬೆಂಕಿ ನಂದಿಸಲು

ಉಳ್ಳಾಲ: ಗ್ಲೋಬಲ್ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ – ಹಣ್ಣು ಹಂಪಲು ಅಂಗಡಿಗಳು ಭಸ್ಮ

ಉಳ್ಳಾಲದ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪು ಬಳಿಯಿರುವ ಗ್ಲೋಬಲ್ ಮಾರುಕಟ್ಟೆಯಲ್ಲಿ ಬೆಂಕಿ ಅವಘಢ ಸಂಭವಿಸಿ 5 ದೊಡ್ಡ ಹಾಗೂ 20 ಸಣ್ಣ ಅಂಗಡಿಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿ, ವ್ಯಾಪಾರಸ್ಥರಿಗೆ ಕೋಟ್ಯಂತರ ರೂ ನಷ್ಟ ಉಂಟಾಗಿದೆ. ಕಲ್ಲಾಪು ಗ್ಲೋಬಲ್ ಮಾರುಕಟ್ಟೆಯಲ್ಲಿನ ನವೀದ್ ಮಾಲೀಕತ್ವದ ಎಸ್.ಎನ್ ಫ್ರೂಟ್ಸ್ ಸುಹೈಲ್ ಎಂಬವರಿಗೆ ಸೇರಿದ ಕೆಎಫ್ ಕೆ, ಲತೀಫ್ ಎಂಬವರ ಕೆ.ಕೆ.ಫ್ರೂಟ್ಸ್, ಇಂಡಿಯನ್, ಸಲಾಂ ಅವರ ಬಿ.ಎಸ್.ಆರ್, ಝುಲ್ಫೀಕರ್ ಅವರ ಪಿಕೆಎಸ್, ನಾಸೀರ್

ಸುರತ್ಕಲ್ ಬಂಟರ ಸಂಘದ ನೂತನ ಕಟ್ಟಡ ಸಮಿತಿಯ ಚೆಯರ್ ಮೆನ್ ಆಗಿ ಕರುಣಾಕರ ಶೆಟ್ಟಿ ಮಧ್ಯಗುತ್ತು ಆಯ್ಕೆ

ಸುರತ್ಕಲ್ : ಸುರತ್ಕಲ್ ಬಂಟರ ಸಂಘದ ನೂತನ ಕಟ್ಟಡ ಸಮಿತಿಯ ಚೆಯರ್ ಮೆನ್ ಆಗಿ ಸಮಾಜಸೇವಕ, ಉದ್ಯಮಿ ಮುಂಬೈ ವಿ.ಕೆ.ಸಮೂಹ ಸಂಸ್ಥೆಗಳ ಮ್ಯಾನೇಜಿಂಗ್ ಡೈರೆಕ್ಟರ್ ಕರುಣಾಕರ ಶೆಟ್ಟಿ ಮಧ್ಯಗುತ್ತು ಆಯ್ಕೆಯಾಗಿದ್ದಾರೆ. ಸುರತ್ಕಲ್ ಬಂಟರ ಸಂಘದ ಮಹಾಸಭೆಯಲ್ಲಿ ಕರುಣಾಕರ ಎಂ ಶೆಟ್ಟಿ ಅವರನ್ನು ಸುರತ್ಕಲ್ ಬಂಟರ ಸಂಘದ ನೂತನ ಕಟ್ಟಡ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಲು ಠರಾವು ಮಂಡಿಸಲಾಯಿತು. ಬಳಿಕ ಸಂಜೆ ನಡೆದ ಬಹಿರಂಗ ಅಧಿವೇಶನದಲ್ಲಿ ಕರುಣಾಕರ ಶೆಟ್ಟಿ ಅವರನ್ನು ನೂತನ ಕಟ್ಟಡ

ಮಂಗಳೂರು ವಕೀಲರ ಸಂಘದ 2024-26 ರ ಪದಾಧಿಕಾರಿಗಳ ಆಯ್ಕೆ

ಮಂಗಳೂರು ವಕೀಲರ ಸಂಘದ 2024-26 ರ ಪದಾಧಿಕಾರಿಗಳ ಆಯ್ಕೆ, ಚುನಾವಣೆ ಮೂಲಕ ದಿನಾಂಕ 07.06.2024ರಂದು ಮಂಗಳೂರು ವಕೀಲರ ಸಂಘದ ಕಛೇರಿಯ ಆವರಣದಲ್ಲಿ ನಡೆದಿದ್ದು, ಅಧ್ಯಕ್ಷರಾಗಿ ಶ್ರೀ ಎಚ್. ವಿ ರಾಘವೇಂದ್ರ, ಉಪಾಧ್ಯಕ್ಷರಾಗಿ ಶ್ರೀ ಸುಜಿತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ಶ್ರೀಧರ್ ಎಚ್, ಜತೆ ಕಾರ್ಯದರ್ಶಿಯಾಗಿ ಶ್ರೀಮತಿ ಜ್ಯೋತಿ ಮತ್ತು ಖಜಾಂಚಿಯಾಗಿ ಶ್ರೀ ಗಿರೀಶ್ ಶೆಟ್ಟಿ ಇವರು ಆಯ್ಕೆಯಾಗಿರುತ್ತಾರೆ. ಹಾಗೆಯೇ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಶ್ರೀಮತಿ

14ನೇ ಆವೃತ್ತಿಯ ಆಳ್ವಾಸ್ ಪ್ರಗತಿ 2024 ಸಂಪನ್ನ: 2468 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಉದ್ಯೋಗ

 ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ವಿದ್ಯಾಗಿರಿ ಆವರಣದಲ್ಲಿ ನಡೆದ 2024ನೇ ಸಾಲಿನ 2 ದಿನದ ಬೃಹತ್ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ 2468 ಆಕಾಂಕ್ಷಿಗಳಿಗೆ ಸ್ಥಳದಲ್ಲೇ ಉದ್ಯೋಗ ಅವಕಾಶ ನೀಡುವುದರೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡಿದೆ ಈ ಬಾರಿಯ ಉದ್ಯೋಗ ಮೇಳದಲ್ಲಿ ಭಾಗವಹಿಸಿದ ಒಟ್ಟು 258 ಕಂಪನಿಗಳ ಪೈಕಿ 217 ಕಂಪನಿಗಳು 5953 ಜನರನ್ನು ಶಾರ್ಟ್ಲಿಸ್ಟ್ಗೊಳಿಸಿ ಮುಂದಿನ ಹಂತಕ್ಕೆ ಆಯ್ಕೆ ಮಾಡಿವೆ. ಉದ್ಯೋಗ ಮೇಳದ ಎರಡನೇ ದಿನ 1542

ಆಳ್ವಾಸ್ ನಲ್ಲಿ ಮೈಸೂರು ರಂಗಾಯಣದ  ನಾಟಕ ‘ ಗೋರ್ ಮಾಟಿ’: ಬಂಜಾರ ಬದುಕಿನ ವಿಶೇಷ ರಂಗ ಪ್ರಯೋಗ

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆ ,ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಜೂನ್ 12 ಮತ್ತು 13 ರಂದು ಸಂಜೆ 6.45 ಕ್ಕೆ ಮೂಡುಬಿದಿರೆಯ ಸ್ಕೌಟ್ ಗೈಡ್ ಕನ್ನಡ ಭವನದಲ್ಲಿ  ರಂಗಾಯಣ ಮೈಸೂರು ತಂಡದಿಂದ ಗೋರ್ ಮಾಟಿ ಎಂಬ ಕನ್ನಡ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಬಂಜಾರ ಜನಾಂಗದ ಕಲೆ ಸಂಸ್ಕೃತಿ ಬದುಕು ಬವಣೆಗಳ ಸಂಕಥನಗಳಿಂದ ಕೂಡಿದ ಗೋರ್ ಮಾಟಿ ನಾಟಕವನ್ನು ಪ್ರಸಿದ್ಧ ರಂಗನಿರ್ದೇಶಕರಾದ ಸಿ.ಬಸವಲಿಂಗಯ್ಯ ನಿರ್ದೇಶಿಸಿದ್ದಾರೆ. ಈ