ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಕೆಂಗಲ್ ಹನುಮಂತಯ್ಯ ದತ್ತಿ ಪ್ರಶಸ್ತಿ’ಗೆ ಬಿಜೆಪಿಯ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ₹ 25 ಸಾವಿರ ನಗದು ಒಳಗೊಂಡಿದೆ. ನಾಡಿನ ಸಂಸ್ಕೃತಿ, ಸಾಹಿತ್ಯ, ಕಲೆ, ಪರಂಪರೆಯ ಪೋಷಕರು ಅಥವಾ ಈ ಕ್ಷೇತ್ರಗಳಲ್ಲಿ ಕನಿಷ್ಠ 25 ವರ್ಷಗಳು ಸೇವೆ ಸಲ್ಲಿಸಿದವರನ್ನು
ಮೂರನೆಯ ಬಾರಿಗೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಇದಕ್ಕೂ ಮುನ್ನ ರಾಜ್ ಘಾಟ್ ಗೆ ತೆರಳಿದ ಅವರು ಮಹಾತ್ಮ ಗಾಂಧಿ ಅವರಿಗೆ ಗೌರವ ನಮನ ಸಲ್ಲಿಸಿ, ನಂತರ ದಿಲ್ಲಿಯಲ್ಲಿನ ಸದೈವ ಅಟಲ್ ಸ್ಮಾರಕಕ್ಕೆ ಭೇಟಿ ನೀಡಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ನಮಿಸಿದರು. ತದನಂತರ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಪುಷ್ಪಗುಚ್ಛವಿರಿಸಿ, ಗೌರವ ಸಲ್ಲಿಸಿದರು. ಇಂದು ಸಂಜೆ 7.15 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ನರೇಂದ್ರ
ಬ್ರಹ್ಮಾವರ : ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನ ವಾರ್ಷಿಕೋತ್ಸವ ಮತ್ತು . ಕಾಲೇಜಿನ ವಿದ್ಯಾರ್ಥಿಗಳೇ ಸ್ವತಃ ತಾವೇ ವಿನ್ಯಾಸಗೊಳಿಸಿರುವ ಉಡುಪುಗಳ ಪ್ರದರ್ಶನ ಮತ್ತು ರ್‍ಯಾಂಪ್ ವಾಕ್ ನಡೆಯಿತು. ಅನೇಕ ಸ್ಪರ್ಧೆಗಳನ್ನು ನಡೆಸಿ ವಿಜೇತರಿಗೆ ಬಹುಮಾನ ವಿತರಣೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ತುಳು ಮತ್ತು ಕನ್ನಡ ಭಾಷೆಯ ನಾಟಕ, ಚಲನಚಿತ್ರಗಳಲ್ಲಿ ಹಾಸ್ಯ ಕಲಾವಿದರಾಗಿರುವ ಅರವಿಂದ ಬೋಳಾರ್ ಕಾರ್ಯಕ್ರಮ ಉದ್ಘಾಟಿಸಿ
ಉಳ್ಳಾಲ: ನೇಪಾಳ ಮೂಲದ ಅಪ್ರಾಪ್ತೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೊಕ್ಕೊಟ್ಟು,ಚೆಂಬುಗುಡ್ಡೆಯ ಬಾಡಿಗೆ ಮನೆಯಲ್ಲಿ ಇಂದು ಬೆಳಕಿಗೆ ಬಂದಿದೆ.ನೇಪಾಳ ಮೂಲದ ರಬೀನ ಬಿ.ಕೆ (16)ಮೃತ ಅಪ್ರಾಪ್ತೆ.ತೊಕ್ಕೊಟ್ಟು ವೃಂದಾವನ ಹೊಟೇಲಿನ ಪಕ್ಕದಲ್ಲಿ ಫಾಸ್ಟ್ ಫುಡ್ ಕಮ್ ಕ್ಯಾಂಟೀನ್ ನಡೆಸುತ್ತಿದ್ದ ನೇಪಾಳ ಮೂಲದ ರಾಮ್ ಶರಣ್ ಎಂಬವರು ತನ್ನ ಪತ್ನಿ ಮತ್ತು ನಾಲ್ಕು ಮಕ್ಕಳೊಂದಿಗೆ ತೊಕ್ಕೊಟ್ಟು, ಚೆಂಬುಗುಡ್ಡೆಯ ರೀಟಾ ಡಿ ಸೋಜ ಎಂಬವರ ಮನೆಯಲ್ಲಿ ಬಾಡಿಗೆಗೆ
ಸುಳ್ಳು ಕೇಸ್ ದಾಖಲಿಸಿ ಉದ್ದೇಶಪೂರ್ವಕವಾಗಿ ದ.ಕ. ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಬಂಧನ ನಡೆದಿದೆ. ಆತ ಅಮಾಯಕ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಶಾಸಕ ಹರೀಶ್ ಪೂಂಜಾ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ನಡೆದ ಘಟನೆಗಳ ಬಗ್ಗೆ ಅವರ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ದಾಖಲಾಗಿದ್ದ ಮೊಕದ್ದಮೆ ವಿಚಾರವಾಗಿ ಜೂ೦೭ ರಂದು ಪ್ರಕರಣವನ್ನು ಕೈಗೆತ್ತಿಕೊಂಡ ಹೈಕೋರ್ಟ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್
ಯುವಕನೋರ್ವ ಬೀಚ್ ಬಳಿ ಬೈಕ್ ಇಟ್ಟು ನಿಗೂಡವಾಗಿ ನಾಪತ್ತೆಯಾದ ಘಟನೆ ಕಾಪುವಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕಾಪು ಪಡುಗ್ರಾಮ ನಿವಾಸಿ ತುಳಸಿ ಸಾಲ್ಯಾನ್ ಅವರ ಪುತ್ರ ಕರಣ್ ಸಾಲ್ಯಾನ್ (20) ನಾಪತ್ತೆಯಾದ ಯುವಕ. ಈತ ಗುರುವಾರ ಸಂಜೆಯಿಂದ ನಾಪತ್ತೆಯಾಗಿದ್ದು ಶುಕ್ರವಾರ ಬೆಳಿಗ್ಗೆ ಕಾಪು ಬೀಚ್ ಬಳಿ ಬೈಕ್, ಬೆಲೆಬಾಳುವ ಫೋನ್, ನಗದು ಸಹಿತವಾಗಿ ಪರ್ಸ್ ಪತ್ತೆಯಾಗಿದೆ. ಮನೆಯವರು ಮತ್ತು ಸ್ಥಳೀಯರು ಕಾಪು ಬೀಚ್ ಬಳಿ, ಸಮುದ್ರ ತೀರ ಮತ್ತು ಸಮುದ್ರದಲ್ಲಿ ತೀವ್ರ
ನೆಹರೂ ಸ್ಮಾರಕ ಪದವಿ ಕಾಲೇಜು ಸುಳ್ಯ ಇಲ್ಲಿನ ನೇಚರ್ ಕ್ಲಬ್ ವತಿಯಿಂದ ಗ್ರಾಮ ಪಂಚಾಯತ್ ಪೆರಾಜೆ, ಸಾಮಾಜಿಕ ಅರಣ್ಯ ಇಲಾಖೆ ಸುಳ್ಯ ವಲಯ, ಹಿರಿಯ ವಿದ್ಯಾರ್ಥಿ ಸಂಘ ಕನ್ನಡ ಪೆರಾಜೆ ಶಾಲೆ, ಶಾಲಾಭಿವೃದ್ಧಿ ಸಮಿತಿ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕನ್ನಡ ಪೆರಾಜೆಯಲ್ಲಿ ‘ಹಸಿರು ಉಸಿರು’ ಸಸ್ಯೋದ್ಯಾನ ನಿರ್ಮಾಣ ಮತ್ತು ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಪೆರಾಜೆ ಗ್ರಾಮ
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ಲಿಜನ್ ಮತ್ತು ಯೂತ್ ಸ್ಪೋರ್ಟ್ಸ್ & ಕಲ್ಬರಲ್ ಅಸೋಸಿಯೇಶನ್ (ರಿ.) ಮರ್ಣಿ, ಉಡುಪಿ, ಇವರ ಜಂಟಿ ಆಶ್ರಯದಲ್ಲಿ ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರ ಅಜ್ಜರಕಾಡು ಉಡುಪಿ ಇದರ ಸಹಯೋಗದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರವು ಜೂ. 9 ರವಿವಾರದಂದು ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಮರ್ಣೆಯಲ್ಲಿ ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 1.00 ರ ವರೆಗೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :
ಭಾರತ ಸರಕಾರದ ನೆಹರು ಯುವ ಕೇಂದ್ರ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಪೂಜಾ ಎರೇಂಜರ್ಸ್ ಮತ್ತು ಪೂಜಾ ಫ್ರೆಂಡ್ಸ್ ಹಳೆಯಂಗಡಿ, ಗ್ರಾಮ ಪಂಚಾಯತ್ ಪಡುಪಣಂಬೂರು, ಶ್ರೀ ಓಂಕಾರೇಶ್ವರಿ ಮಂದಿರ ತೋಕೂರು ಇದರ ಜಂಟಿ ಆಶ್ರಯದಲ್ಲಿ ಫೇಮಸ್ ಯೂತ್ ಕ್ಲಬ್ ಮತ್ತು ಮಹಿಳಾ ಮಂಡಲ 10ನೇ ತೋಕೂರು, ಹಳೆಯಂಗಡಿ ಪ್ರಾಯೋಜಕತ್ವದಲ್ಲಿ, ವಿಶ್ವ ಪರಿಸರ ದಿನಾಚರಣೆಯನ್ನು ಸಂಸ್ಥೆಯ ಕಾರ್ಯಾಲಯದಲ್ಲಿ ನೆರವೇರಿಸಲಾಯಿತು.ಸಂಸ್ಥೆಯ
ಪರಿಶಿಷ್ಟ ಜಾತಿ ಮುಂಡಾಳ ಸಮಾಜ ಬಾಂಧವರ ಸಾಮಾಜಿಕ,ಶೈಕ್ಷಣಿಕ ಮತ್ತು ಔದ್ಯೋಗಿಕ ವಿಚಾರಧಾರೆಗಳಿಗೆ ಸಹಕಾರಿಯಾಗುವಂತೆ ಆಸುಪಾಸಿನ ಗ್ರಾಮಗಳ ಸಮಾಜ ಬಾಂಧವರ ಉಪಸ್ಥಿತಿಯಲ್ಲಿ ನೂತನ ಕಟ್ಟಡ ಸಮಿತಿಯನ್ನು ಶ್ರೀ ಓಂಕಾರೇಶ್ವರಿ ಮಂದಿರ ತೋಕೂರು ಇದರ ಅಧ್ಯಕ್ಷರಾದ ಶ್ರೀ ಸದಾಶಿವ ಕುಂದರ್ ರವರ ಅಧ್ಯಕ್ಷತೆಯಲ್ಲಿ ನೆರವೇರಿಸಲಾಯಿತು.ಕಟ್ಟಡ ಸಮಿತಿಯ ನೂತನ ಅಧ್ಯಕ್ಷರಾಗಿ ಶ್ರೀ ಸದಾಶಿವ ಕುಂದರ್ ಅವರನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಶ್ರೀ ಶ್ರೀಧರ ಕೆಮ್ರಾಲ್,




























