Home Blog Left SidebarPage 214

ಹೋರಾಟ ಸಮಿತಿ ಸದಸ್ಯರಿಂದ ಉರುಳು ಸೇವೆ ಮಾಡಿ ಪ್ರತಿಭಟನೆ

ಮಂಜೇಶ್ವರ: ಅಂಡರ್‌ಪಾಸ್ ನಿರ್ಮಿಸಬೇಕೆಂಬ ಜನರ ಬೇಡಿಕೆ ಈಡೇರದಿರುವುದನ್ನು ವಿರೋಧಿಸಿ ಮಂಜೇಶ್ವರ ರಾಷ್ಟ್ರೀಯ ಹೆದ್ದಾರಿ ಕ್ರಿಯಾ ಸಮಿತಿಯ ನೇತೃತ್ವದಲ್ಲಿ ಮೂರು ತಿಂಗಳಿಗೂ ಹೆಚ್ಚು ಕಾಲದಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿಯ 100ನೇ ದಿನಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ ಹೋರಾಟ ಸಮಿತಿ ಸದಸ್ಯರು ಉರುಳು ಸೇವೆ ಮಾಡಿ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ

ಐವರು ಸಂಸದರಿಗೆ ಮೂವರು ಮಂತ್ರಿ ಎಂದ ಪಾಸ್ವಾನ್

ಎನ್‌ಡಿಎ ನಾಯಕರಾಗಿ ಮೋದಿಯವರು ಆಯ್ಕೆಯಾಗಿದ್ದು ಮೂರನೆಯ ಬಾರಿ ಪ್ರಧಾನಿಯಾಗಲಿದ್ದಾರೆ. ಆದರೆ ಮಿತ್ರ ಪಕ್ಷಗಳ ಬೇಡಿಕೆ ನಡುವೆ ಮುದುರಿದ್ದಾರೆ. ಸಚಿವ ಸ್ಥಾನಕ್ಕೆ ಲಾಬಿ ಜೋರಾಗಿದೆ. 16 ಸಂಸದರ ತೆಲುಗು ದೇಶಂ ಸ್ಪೀಕರ್ ಹುದ್ದೆ ಮತ್ತು ನಾಲ್ಕು ಪ್ರಮುಖ ಮಂತ್ರಿ ಖಾತೆಗಳಿಗೆ ಬೇಡಿಕೆ ಇಟ್ಟಿದೆ. ನಟ ಪವನ್ ಕಲ್ಯಾಣ್ ಕೂಡ ಒಂದು ಮಂತ್ರಿ ಸ್ಥಾನ ಕೇಳಿದ್ದಾರೆ. 12 ಸಂಸದರ ಜೆಡಿಯು ನಾಲ್ಕು ಪ್ರಮುಖ ಮಂತ್ರಿಗಿರಿ ಕೇಳಿದೆ. ಅಲ್ಲದೆ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಮೊದಲು

ಇಳಿದ ಮಹಿಳಾ ಸಂಸದೆಯರ ಸಂಖ್ಯೆ

2019ರ 17ನೇ ಲೋಕಸಭೆಯಲ್ಲಿ ಅತಿ ಹೆಚ್ಚು 78 ಮಹಿಳಾ ಸಂಸದೆಯರು ಇದ್ದರು. ಈ ಬಾರಿ ಸಂಸದೆಯರಾಗಿ ಗೆದ್ದವರ ಸಂಖ್ಯೆಯು 73ಕ್ಕೆ ಇಳಿದಿದೆ.ಶೇಕಡಾವಾರು 14 ಇದ್ದುದು ಈ ಸಲ 13 ಶೇಕಡಾಕ್ಕೆ ಇಳಿಕೆಯಾಗಿದೆ. ಒಟ್ಟು 797 ಮಂದಿ ಮಹಿಳೆಯರು ಸ್ಪರ್ಧೆಯಲ್ಲಿ ಇದ್ದರು; ಗೆದ್ದವರು 73 ಮಹಿಳೆಯರು. 2014ರಲ್ಲಿ ಬರೇ 64 ಮಹಿಳೆಯರು ಸಂಸತ್ತಿಗೆ ಆಯ್ಕೆಯಾಗಿದ್ದರು. ಬಿಜೆಪಿಯಿಂದ 69 ಮಂದಿ ಸ್ಪರ್ಧಿಸಿ 30 ಮಂದಿ ಮತ್ತು ಕಾಂಗ್ರೆಸ್ಸಿನಿಂದ 41 ಸ್ಪರ್ಧಿಸಿ 14 ಮಂದಿ ಮಹಿಳೆಯರು

ಕ್ಷಯ ರೋಗಿಗಳಿಗೆ ಆಹಾರ ದವಸ ಧಾನ್ಯದ ಕಿಟ್ ವಿತರಣೆ

ಬಂಟ್ವಾಳ: ನಿಕ್ಷಯ್ ಮಿತ್ರ ಕಾರ್ಯಕ್ರಮದ ಮೂಲಕ ಹಂತ ಹಂತವಾಗಿ ಕ್ಷಯ ರೋಗಿಗಳ ಸಂಖ್ಯೆ ಕಡಿಮೆಯಾಗುವುದರ ಜತೆಗೆ ರೋಗಿಗಳು ಸಂಪೂರ್ಣವಾಗಿ ರೋಗಮುಕ್ತರಾಗಿ ಮತ್ತೆ ಈ ಕಾರ್ಯಕ್ರಮವನ್ನು ಆಯೋಜಿಸುವ ಪರಿಸ್ಥಿತಿ ನಿರ್ಮಾಣವಾಗ ಬಾರದು ಎಂದು ಬಂಟ್ವಾಳದ ಸ್ವಣೋದ್ಯಮಿ, ವಿಎನ್‌ಆರ್ ಗೋಲ್ಡ್ ಮಾಲಕ ನಾಗೇಂದ್ರ ವಿ. ಬಾಳಿಗ ಹೇಳಿದರು.ಕ್ಷಯ ಮುಕ್ತ ಭಾರತ ನಿರ್ಮಾಣದ ಅಂಗವಾಗಿ ಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಸೇವಾಂಜಲಿ ಪ್ರತಿಷ್ಠಾನದ ಆಶ್ರಯದಲ್ಲಿ ಫರಂಗಿಪೇಟೆಯ

ಚಲಿಸುತ್ತಿದ್ದ ಶಾಲಾ ಬಸ್ ಚಾಲಕನಿಗೆ ಹೃದಯಘಾತ

ಚಾಲನೆಯಲ್ಲಿ ಲಘು ಹೃದಯಾಘಾತಕ್ಕೆ ಒಳಗಾದ ಶಾಲಾ ಬಸ್ಸೊಂದರ ಚಾಲಕನ ಸಮಯ ಪ್ರಜ್ಞೆಯಿಂದ ಹಲವು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪೆರಂಪಳ್ಳಿ ಎಂಬಲ್ಲಿ ಸಂಭವಿಸಿದೆ. ಬ್ರಹ್ಮಾವರದ ಖಾಸಗಿ ಶಾಲೆಯೊಂದರ ವಾಹನವು ಮಕ್ಕಳನ್ನು ಕರೆದುಕೊಂಡು ಪೆರಂಪಳ್ಳಿ ಮಾರ್ಗವಾಗಿ ಮಣಿಪಾಲಕ್ಕೆ ಹೋಗುತ್ತಿತ್ತು. ಪೆರಪಂಳ್ಳಿ ಬಳಿ ಹೋಗುತ್ತಿದ್ದಾಗ ಚಾಲಕ ಮಲ್ವಿನ್ ಡಿಸೋಜ ಅವರಿಗೆ ಲಘು ಹೃದಯಾಘಾತ ಸಂಭವಿಸಿತ್ತೆನ್ನಲಾಗಿದೆ. ಕೂಡಲೇ ಎಚ್ಚೆತ್ತ ಚಾಲಕ ಬಸ್ಸನ್ನು ರಸ್ತೆಯ ಬದಿಯ

ದೇವೇಂದ್ರ ಫಡ್ನವೀಸ್ ಅವರಿಗೆ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳುವಂತೆ ಬಿಜೆಪಿ ಹೈಕಮಾಂಡಿಗೆ ಮನವಿ

ಮಹಾರಾಷ್ಟದ ಹಾಲೀ ಉಪ ಮುಖ್ಯಮಂತ್ರಿ ಮಾಜೀ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ರಾಜೀನಾಮೆ ನೀಡಿ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳಲು ಅವಕಾಶ ಮಾಡುವಂತೆ ಬಿಜೆಪಿ ಹೈಕಮಾಂಡಿಗೆ ಮನವಿ ಮಾಡಿದ್ದಾರೆ. ಶಿವಸೇನೆ ಮುರಿದು, ಇತರ ಪಕ್ಷಗಳ ಶಾಸಕರನ್ನು ಖರೀದಿಸಿ ಮಹಾರಾಷ್ಟದಲ್ಲಿ ಬಿಜೆಪಿಯು ಖರೀದಿ ಸರಕಾರ ರಚಿಸಿತ್ತು. ಮತದಾರರು ಅದನ್ನು ಅಕ್ರಮ ಎನ್ನುವಂತೆ ತೀರ್ಪು ನೀಡಿದ್ದಾರೆ. ಇನ್ನು ಒಂದು ವರುಷದಲ್ಲಿ ವಿಧಾನ ಸಭೆಗೆ ಚುನಾವಣೆ ನಡೆಯುವಾಗ ಬಿಜೆಪಿಗೆ ಇದು ದೊಡ್ಡ

ದಿಲ್ಲಿಯಲ್ಲಿ ಇಂಡಿಯಾ ಮೈತ್ರಿ ಕೂಟ ಮತ್ತು ಎನ್‌ಡಿಎ ಮೈತ್ರಿ ಕೂಟ ಎರಡೂ ಕುಟಗಳ ಸಭೆ

ಬುಧವಾರ ದಿಲ್ಲಿಯಲ್ಲಿ ಇಂಡಿಯಾ ಮೈತ್ರಿ ಕೂಟ ಮತ್ತು ಎನ್‌ಡಿಎ ಮೈತ್ರಿ ಕೂಟ ಎರಡೂ ಕುಟಗಳು ತಮ್ಮ ರಾಜಕೀಯ ತಂತ್ರಗಾರಿಕೆಯ ಬಗೆಗೆ ಸಭೆ ನಡೆಸಿದವು. ಪಾಟ್ನಾದಿಂದ ಬೆಳಿಗ್ಗೆ ಹತ್ತೂವರೆ ಗಂಟೆಯ ಹೊತ್ತಿಗೆ ಹೊರಟ ವಿಸ್ತಾರ್ ವಿಮಾನದಲ್ಲಿ ಮುಖ್ಯಮಂತ್ರಿ ನಿತೀಶ್‌ಕುಮಾರ್ ಮತ್ತು ಮಾಜೀ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ದಿಲ್ಲಿಗೆ ಹೊರಟದ್ದು ಭಾರೀ ಗಾಳಿ ಸುದ್ದಿಗಳಿಗೆ ಕಾರಣವಾಗಿತ್ತು. ಕೊನೆಗೆ ನಿತೀಶ್ ಕುಮಾರ್ ಅವರು ಎನ್‌ಡಿಎ ಕೂಟದ ಸಭೆಯಲ್ಲಿ ಭಾಗವಹಿಸಿದರೆ,

ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಮರ್ಣೆಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ಲಿಜನ್ ಮತ್ತು ಯೂತ್ ಸ್ಪೋರ್ಟ್ಸ್ & ಕಲ್ಬರಲ್‌ ಅಸೋಸಿಯೇಶನ್ (ರಿ.) ಮರ್ಣಿ, ಉಡುಪಿ, ಇವರ ಜಂಟಿ ಆಶ್ರಯದಲ್ಲಿ ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರ ಅಜ್ಜರಕಾಡು ಉಡುಪಿಇದರ ಸಹಯೋಗದಲ್ಲಿಸ್ವಯಂಪ್ರೇರಿತ ರಕ್ತದಾನ ಶಿಬಿರವು ದಿನಾಂಕ 9ರವಿವಾರದಂದುಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಮರ್ಣೆಯಲ್ಲಿಬೆಳಿಗ್ಗೆ 8.30 ರಿಂದ ಮಧ್ಯಾಹ್ನ 1.00 ರ ವರೆಗೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಕೆಳಗೆ ಕಾಣಿಸಿದ ನಂಬರಿಗೆ

ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ., ಪ್ರಾಯೋಜಿತ ಯಕ್ಷ ಶ್ರೀ ರಕ್ಷಾ ಗೌರವ- ವಾರ್ಷಿಕ ವಿಶೇ‍ಷ ಪ್ರಶಸ್ತಿ ಘೋಷಣೆ

ದುಬಾಯಿ ಯಕ್ಷಗಾನ ಅಭ್ಯಾಸ ತರಗತಿ (YAKU) ಪ್ರಾಯೋಜಕತ್ವದಲ್ಲಿ ದುಬಾಯಿ ಅಥವಾ ತಾಯಿನಾಡಿನ ಯಕ್ಷಗಾನ ರಂಗದ ಸಾಧಕರೊಬ್ಬರನ್ನು ಗುರುತಿಸಿ, ವಿಶೇಷವಾಗಿ ವಾರ್ಷಿಕ ಯಕ್ಷಶ್ರೀ ರಕ್ಷಾ ಗೌರವ ಪ್ರಶಸ್ತಿ ನೀಡಲು ಉದ್ದೇಶಿಸಿದಂತೆ, 2023-2024 ನೇ ಸಾಲಿನ ಪ್ರಶಸ್ತಿಗೆ, ಸ್ಥಳೀಯ ಯಕ್ಷಗಾನ ಹಿಮ್ಮೇಳ ಕಲಾವಿದರೂ, ನಮ್ಮ ಯಕ್ಷಗಾನ ಅಭ್ಯಾಸ ಕೇಂದ್ರದ ಹಿರಿಯ ಸದಸ್ಯರೂ ಆದ ಶ್ರೀಯುತ ವೆಂಕಟೇಶ ಶಾಸ್ತ್ರಿ ಪುತ್ತಿಗೆಯವರನ್ನು ಸರ್ವಾನುಮತದಿಂದ ಆಯ್ಕೆಮಾಡಲಾಗಿದೆ. ಶ್ರೀಯುತ ವೆಂಕಟೇಶ

ಆಳ್ವಾಸ್‌ ಪದವಿಪೂರ್ವ ಕಾಲೇಜು: ನೀಟ್ 2024ರಲ್ಲಿ ಸಾರ್ವಕಾಲಿಕ ಸಾಧನೆ

ಮೂಡುಬಿದಿರೆ: ಅಖಿಲ ಭಾರತ ಮಟ್ಟದ ಯುಜಿ ನೀಟ್ ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ಒಂದೇ ಕ್ಯಾಂಪಸ್ ನ ಕ್ಲಾಸ್‌ರೂಮ್ ವ್ಯವಸ್ಥೆಯಲ್ಲಿ 600 ಅಂಕಗಳ ಮೇಲೆ 181 ವಿದ್ಯಾರ್ಥಿಗಳು ಅಂಕ ಪಡೆಯುವ ಮೂಲಕ ಆಳ್ವಾಸ್ ಸಾರ್ವಕಾಲಿಕ ಸಾಧನೆಯನ್ನು ಮಾಡಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಆಳ್ವಾಸ್ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು 670ಕ್ಕೂ ಅಧಿಕ 11 ವಿದ್ಯಾರ್ಥಿಗಳು, 650ಕ್ಕೂ ಅಧಿಕ 51