ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮುಳ್ಳಿಕಟ್ಟೆ ತಿರುಮಲ ಕಾಂಪ್ಲೆಕ್ಸ್‍ನಲ್ಲಿ ಹರೀಶ್ ಮಾಲೀಕತ್ವದ ನೂತನವಾಗಿ ಆರಂಭಗೊಂಡಿರುವ ಬೆಂಗಳೂರು ಅಯ್ಯಂಗಾರ್ ಬೇಕರಿ ಅದ್ದೂರಿಯಾಗಿ ಶುಭಾರಂಭಗೊಂಡಿದೆ ಅಯ್ಯಂಗಾರ್ ಬೇಕರಿ ಶುಭಾರಂಭ ಕಾರ್ಯಕ್ರಮದ ಅಂಗವಾಗಿ ಗಣಹೋಮವನ್ನು ನೆರವೇರಿಸಲಾಯಿತು. ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಗುಣಮಟ್ಟದ ಬೇಕರಿ
ಬ್ರಹ್ಮಾವರ: ನೈರುತ್ಯ ಪಧವೀಧರ ಶಿಕ್ಷಕರ ಚುನಾವಣೆಯ ಮತದಾನ ಬ್ರಹ್ಮಾವರದ ಮತಗಟ್ಟೆಗಳಲ್ಲಿ ನಡೆಯುತ್ತಿದೆ. ಮತಗಟ್ಟೆಯಲ್ಲಿ ಶಿಕ್ಷಕರ ಕ್ಷೇತ್ರದಿಂದ 322 ಪುರುಷರು, 417 ಮಹಿಳೆಯರು ಮತ್ತು ಪಧವೀಧರ ಕ್ಷೇತ್ರದಿಂದ 1489 ಪುರುಷರು 1657 ಮಹಿಳೆಯರು ಮತದಾರರನ್ನು ಹೊಂದಿದೆ.
ವಿಧಾನ ಸಭಾ ಚುನಾವಣೆಯಲ್ಲಿ ಸಿಕ್ಕಿಂನಲ್ಲಿ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಮತ್ತು ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಎರಡನೆಯ ಬಾರಿ ಅಧಿಕಾರದ ಗದ್ದುಗೆಗೆ ಏರಿವೆ. ಎಸ್‌ಕೆಎಂ- ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾವು ಎರಡನೆಯ ಬಾರಿ ಏಕೈಕ ಪಕ್ಷವಾಗಿ ಅಧಿಕಾರಕ್ಕೆ ಏರಿದೆ. ಅದು ವಿಧಾನ ಸಭೆಯ 32ರಲ್ಲಿ 31 ಸ್ಥಾನ ಗೆದ್ದುಕೊಂಡಿತು. ರಾಷ್ಟ್ರೀಯ ಪಕ್ಷಗಳಿಗೆ ಸಿಕ್ಕಿಂ ಮಣೆ ಹಾಕಿಲ್ಲ. ಅರುಣಾಚಲ ಪ್ರದೇಶದಲ್ಲಿ ಬಿಜೆಪಿಯು 46 ಸ್ಥಾನಗಳಲ್ಲಿ ಗೆಲುವು ಕಂಡು ಮತ್ತೆ
ಭಾರತದ ಆರ್ಥಿಕ ರಾಜಧಾನಿ ಎನ್ನಲಾದ ಮುಂಬಯಿ ಜಗತ್ತಿನ ಅತಿ ಟ್ರಾಫಿಕ್ ಒತ್ತಡದ ನಗರವಾಗಿ ಮೊದಲ ಸ್ಥಾನದಲ್ಲಿದೆ. ಆ ಕಾರಣಕ್ಕೆ ಜನರು, ಕೆಲಸದ ಮಾನಸಿಕ ಒತ್ತಡಕ್ಕೆ ಒಳಗಾಗುವುದಾಗಿಯೂ ಹೇಳಲಾಗಿದೆ. ಅತಿ ಟ್ರಾಫಿಕ್‌ನ ಎಲ್ಲ ನಗರಗಳವರು ಹೆಚ್ಚು ಕಲುಷಿತ ಗಾಳಿ ಸೇವಿಸಬೇಕಾದ ಸ್ಥಿತಿ ಎದುರಿಸುತ್ತಿರುವುದಾಗಿ ಹೇಳಲಾಗಿದೆ.ಈ ನಿಟ್ಟಿನಲ್ಲಿ ನೈಜೀರಿಯಾದ ಲಾಗೋಸ್, ಪಿಲಿಪ್ಪೀನ್ಸ್ ರಾಜಧಾನಿ ಮನಿಲಾ, ಭಾರತದ ರಾಜಧಾನಿ ದಿಲ್ಲಿ, ಇರಾಕ್ ರಾಜಧಾನಿ ಬಾಗ್ದಾದ್, ಅಫಘಾನಿಸ್ತಾನದ
ದೇಶಾದ್ಯಂತ ಹೆದ್ದಾರಿಗಳನ್ನು ಬಳಕೆ ಮಾಡುವ ವಾಹನ ಚಾಲಕರು ಸೋಮವಾರದಿಂದ ಟೋಲ್‌ಗಳಲ್ಲಿ ಹೆಚ್ಚಿನ ಶುಲ್ಕವನ್ನು ನೀಡಬೇಕಾಗುತ್ತದೆ. ದೇಶಾದ್ಯಂತ ಹೆದ್ದಾರಿಗಳ ಟೋಲ್ ಶುಲ್ಕವನ್ನು ಸರಾಸರಿ ಶೇ. 5ರಷ್ಟು ಏರಿಕೆ ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ನಿರ್ಧರಿಸಿದೆ. ಸಾಮಾನ್ಯವಾಗಿ ಟೋಲ್ ಶುಲ್ಕ ಪ್ರತಿವರ್ಷ ಹೆಚ್ಚಾಗುತ್ತದೆ. ಇದರಂತೆ ಎಪ್ರಿಲ್ 1 ರಿಂದ ಪರಿಷ್ಕ್ರತ ಶುಲ್ಕ ಜಾರಿಯಾಗಬೇಕಿತ್ತು. ಆದರೆ, ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ
ಬಂಟ್ವಾಳ: ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸಂಘ ಬಂಟ್ವಾಳ ವಲಯ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಪ್ರಥಮ ಮಾಸಿಕ ಸಭೆ ಸಂಘದ ನೂತನ ಅಧ್ಯಕ್ಷ ಸುಧೀರ್ ಪೂಜಾರಿ ಅಧ್ಯಕ್ಷತೆಯಲ್ಲಿ ಬಿ.ಸಿ.ರೋಡಿನ ಗಾಣದಪಡ್ಪುವಿನಲ್ಲಿರುವ ಆಟೋಲೈನ್ಸ್ ಗ್ಯಾರೇಜಿನಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಜನಾರ್ದನ ಅತ್ತಾವರ ಅವರು ಮಾತನಾಡಿ ಸದಸ್ಯರ ಸಹಕಾರವಿದ್ದಾಗ ಸಂಘಟನೆ
ಬಂಟ್ವಾಳ: ವಾಮದಪದವು ಸಮೀಪದ ಆಲದಪದವು ಎಂಬಲ್ಲಿ ನೂರುಲ್ ಇಸ್ಲಾಂ ಮದ್ರಸ ಹಾಗೂ ಅಲ್-ಮಸ್ಜಿದುಲ್ ಬದ್ರಿಯಾ ಇದರ ನೂತನ ಮದ್ರಸ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಕೃಷ್ಣಾಪುರ ಬದ್ರಿಯಾ ಜುಮಾ ಮಸ್ಜಿದ್ ಮುಸ್ಲಿಂ ಜಮಾಅತ್ ಖಾಝಿ ಹಾಜಿ ಇ ಕೆ ಇಬ್ರಾಹಿಂ ಮುಸ್ಲಿಯಾರ್ ನೂತನ ಮದ್ರಸ ಕಟ್ಟಡ ಲೋಕಾರ್ಪಣೆಗೊಳಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಸೀದಿ ಹಾಗೂ ಮದ್ರಸ ಆಡಳಿತ ಸಮಿತಿ ಅಧ್ಯಕ್ಷ ಹಂಝ ಬಸ್ತಿಕೋಡಿ ಪ್ರಾಸ್ತವಿಕವಾಗಿ ಮಾತನಾಡಿ ಸ್ಥಳೀಯ ಮದ್ರಸ
ಕರ್ನಾಟಕ ವಿಧಾನ ಪರಿಷತ್ ನ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ಇಂದು ನಡೆಯುತ್ತಿದೆ. ಖ್ಯಾತ ವೈದ್ಯರಾದ ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು ಸ್ಪರ್ಧಿಸುತ್ತಿದ್ದು, ಉತ್ತಮ ಪ್ರಚಾರವನ್ನು ಮಾಡಿ ಗೆಲ್ಲುವ ವಿಶ್ವಾಸದಲ್ಲಿದ್ದಾರೆ. ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಸೇರಿದಂತೆ ವಿವಿಧೆಡೆ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ, ಅಲ್ಲಿನ ಶಿಕ್ಷಕರನ್ನು ಭೇಟಿಯಾಗಿ ಅವರೊಂದಿಗೆ ಚರ್ಚಿಸಿ,
ಫೇಮಸ್ ಯೂತ್ ಕ್ಲಬ್ ಮಹಿಳಾ ಮಂಡಲದ ವಾರ್ಷಿಕ ಮಹಾಸಭೆಯು ಸಂಸ್ಥೆ ಕಾರ್ಯಾಲಯದಲ್ಲಿ ನೆರವೇರಿತು. ನೂತನ ಅಧ್ಯಕ್ಷರಾಗಿ ಸತತ ಮೂರನೇ ವರ್ಷಕ್ಕೆ ಶ್ರೀಮತಿ ಪ್ರೇಮಲತಾ ಯೋಗೀಶ್ ರವರು ಅವಿರೋಧವಾಗಿ ಆಯ್ಕೆಯಾದರು.ಉಪಾಧ್ಯಕ್ಷರಾಗಿ ಅಮಿತಾ ದಿನಕರ್ ಸಾಲ್ಯಾನ್, ಕಾರ್ಯದರ್ಶಿಯಾಗಿ ಶ್ರೀಮತಿ ಕುಸುಮಾ ಎಚ್ ಕೋಟ್ಯಾನ್, ಕೋಶಾಧಿಕಾರಿಯಾಗಿ ಶ್ರೀಮತಿ ಇಂದಿರಾ ಸಂಜೀವ ಕರ್ಕೇರ, ಕ್ರೀಡಾ ಕಾರ್ಯದರ್ಶಿಯಾಗಿ ಶ್ರೀಮತಿ ಮಿತ್ರ ಮತ್ತು ಶ್ರೀಮತಿ ನಮಿತಾ ನವೀನ್ ಚಂದ್ರ, ಸಾಂಸ್ಕೃತಿಕ
ಸುರತ್ಕಲ್‌ನ ಸಸಿಹಿತ್ಲು ಬೀಚ್‌ನಲ್ಲಿ ರಾಷ್ಟ್ರೀಯ ಓಪನ್ ಸರ್ಫಿಂಗ್ ಚಾಂಪಿಯನ್‌ಶಿಪ್ ನಡೆಯುತ್ತಿದ್ದು, ಇಂದು ಫೈನಲ್‌ನಲ್ಲಿ ಸ್ಪರ್ಧಿಗಳು ಸೆಣೆಸಾಡಲಿದ್ದಾರೆ. ನಗರದ ಮಂತ್ರ ಸರ್ಫ್ ಕ್ಲಬ್ ಮತ್ತು ಸರ್ಫಿಂಗ್ ಸ್ವಾಮಿ ಫೌಂಡೇಷನ್ ಸಹಯೋಗದಲ್ಲಿ ಭಾರತ ಸರ್ಫಿಂಗ್ ಫೆಡರೇಷನ್ ಆಯೋಜಿಸಿರುವ ಚಾಂಪಿಯನ್‌ಷಿಪ್‌ನ ಎರಡನೇ ದಿನವೂ ತಮಿಳುನಾಡು ಸರ್ಫರ್‌ಗಳು ಪಾರಮ್ಯ ಮೆರೆದರು. ಮಂತ್ರ ಸರ್ಫ್ ಕ್ಲಬ್‌ನ ರಾಜು ಪೂಜಾರ್, ಪ್ರದೀಪ್ ಪೂಜಾರ್ ಮತ್ತು ಆಕಾಶ್ ಪೂಜಾರ್ ಬಾಲಕರ ವಿಭಾಗದ




























