Home Blog Left SidebarPage 222

ರೆಮಲ್ ಎಂಬ ಮೃದು ಮರಳು ಅನಾಹುತ

ರೆಮಲ್ ಚಂಡಮಾರುತವು ಪಡುವಣ ಬಂಗಾಳದಲ್ಲಿ ಹದಿನಾರಕ್ಕೂ ಹೆಚ್ಚು ಮತ್ತು ಬಾಂಗ್ಲಾದೇಶದಲ್ಲಿ ಹದಿನೆಂಟಕ್ಕೂ ಹೆಚ್ಚು ಜನರ ಪ್ರಾಣ ಹರಣ ಮಾಡಿದೆ. ಇದೇ ವೇಳೆ ಅಮೆರಿಕ ಸಂಯುಕ್ತ ಸಂಸ್ಥಾನದ ಬಯಲು ಪ್ರದೇಶದಲ್ಲಿ ದಿಗಿಣ ಹಾಕಿದ ಸುಳಿಗಾಳಿಯು ನಾಲ್ಕು ಮಕ್ಕಳ ಸಹಿತ ಹದಿನೆಂಟಕ್ಕೂ ಹೆಚ್ಚು ಮಂದಿಯ ಜೀವವನ್ನು ಹೀರಿದೆ. ರೆಮಲ್ ಚಂಡ ಸುಂಟರ ಕುಣಿತಕ್ಕೆ ಮರಗಳುರುಳಿ, ಕಟ್ಟಡಗಳು

ಬೆಳ್ತಂಗಡಿ ಕಳವು ಪ್ರಕರಣ : ಕಳ್ಳರನ್ನು ಸಿನಿಮೀಯ ರೀತಿಯಲ್ಲಿ ಬಂಧಿಸಿದ ಪೊಲೀಸರು

ಕಳೆದ ನಾಲ್ಕು ವರ್ಷದ ಹಿಂದೆ ಬೆಳ್ತಂಗಡಿ ತಾಲೂಕಿನ ಕಲ್ಮಂಜ ಗ್ರಾಮದಲ್ಲಿ ಬಹಳ ಸಂಚಲನ ಹುಟ್ಟಿದ್ದ ವಾಸುದೇವ ಭಟ್ ಎಂಬವರ ಮನೆಯಲ್ಲಿ ಕಳ್ಳತನ ಪ್ರಕರಣದಲ್ಲಿ ಸರಿ ಸುಮಾರು 12 ಲಕ್ಷಕ್ಕೂ ಹೆಚ್ಚು ಒಡವೆ ಹಾಗೂ ಆಭರಣ ದೋಚಿದ್ದರು. ಇದನ್ನು ಬೆನ್ನಟ್ಟಿದ ಧರ್ಮಸ್ಥಳ ಪೊಲೀಸರು ಸಿನಿಮೀಯ ರೀತಿಯಲ್ಲಿ ಕಳ್ಳರನ್ನು ಪತ್ತೆ ಹಚ್ಚಿದ್ದಾರೆ. ಬಂಧಿತ ಆರೋಪಿಗಳು ಮುಂಡಾಜೆ ಗ್ರಾಮ ನಿವಾಸಿಗಳಾದ ನವಾಝ್ (38) ರಿಯಾಝ್ ಹಾಗೂ ಬೆಂಗಳೂರಿನ ಕೃಷ್ಣ ಎಂದು ತಿಳಿದುಬಂದಿದೆ. ಈ ಬಗ್ಗೆ

ಕಾಪು ಕೊಪ್ಪಲಂಗಡಿ ಬಳಿ ಭೀಕರ ಅಪಘಾತ : ಇಬ್ಬರ ಸ್ಥಿತಿ ಗಂಭೀರ

ಇಂದು ನಸುಕಿನ ವೇಳೆ ಅತೀ ವೇಗವಾಗಿ ಬಂದ ಕಾರೊಂದು ಹೆದ್ದಾರಿ ಪಕ್ಕದ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಕಾರು ತೀವೃ ಜಖಂ ಗೊಂಡಿದ್ದು ಕಾರಿನಲ್ಲಿದ್ದ ಇಬ್ಬರ ಸ್ಥಿತಿ ಗಂಭೀರವಾದರೆ ಮತ್ತಿಬ್ಬರಿಗೆ ತೀವೃ ಸ್ವರೂಪದ ಗಾಯಗಳಾಗಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ನಾಲ್ವರು ಯುವಕರು ಪ್ರಯಾಣಿಸುತ್ತಿದ್ದ ಕಾರು ಕಾಪುವಿನ ಕೊಪ್ಪಲಂಗಡಿಯಲ್ಲಿ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಬಹುತೇಕ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೆಚ್.ಡಿ. ರೇವಣ್ಣ ಭೇಟಿ

ಬೆಳ್ತಂಗಡಿ: ಅಪಹರಣ ಪ್ರಕರಣದಲ್ಲಿ ಬಂಧಿತರಾಗಿ ಜಾಮೀನು ಪಡೆದು ಬಿಡುಗಡೆಯಾದ ಬಳಿಕ ಮೊದಲ ಬಾರಿಗೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಶ್ರೀಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಆ ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆಯವರ ಭೇಟಿಯಾದ ರೇವಣ್ಣ ಅವರೊಂದಿಗೆ ಮಾತುಕತೆ ನಡೆಸಿದರು. ಬಂಧನದಿಂದ ಜಾಮೀನು ಬಳಿಕ ಅವರು ಇದೇ ಮೊದಲ ಬಾರಿಗೆ ಶ್ರೀಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಮಾಧ್ಯಮದೊಂದಿಗೆ

ಕಾರ್ಕಳ : ವಿದ್ಯಾನಿಧಿ, ಕಿಟ್ ವಿತರಣೆ ಕಾರ್ಯಕ್ರಮ

ಸನಾತನ ಹಿಂದೂ ಧರ್ಮದಲ್ಲಿ ಭಜನೆಗೆ ತುಂಬಾ ಮಹತ್ವವಿದೆ. ನಮ್ಮ ಪೂರ್ವಜರು ಅನಾಧಿಕಾಲದಿಂದಲೂ ಭಜನೆ ಹಾಗೂ ದೇವರ ನಾಮ ಸಂಕೀರ್ತನೆಯನ್ನು ಮಾಡುತ್ತಾ ಬಂದಿದ್ದಾರೆ. ಭಜನೆಯಿಂದ ವಿಭಜನೆ ಇಲ್ಲ. ಭಜನೆ ಎಲ್ಲರನ್ನೂ ಒಂದು ಮಾಡುವ ಆಧ್ಯಾತ್ಮಿಕ ಪ್ರಕ್ರಿಯೆ ಎಂದು ನಿವೃತ್ತ ಅಧ್ಯಾಪಕ ಸಾಯಿನಾಥ ಶೆಟ್ಟಿ ಹೇಳಿದರು. ಅವರು ಪೊಸ್ರಾಲ್ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಮುಂಡ್ಕೂರು, ಸಚ್ಚೇರೀಪೇಟೆಯ ಸೇವಾ ಭಾರತಿಯ ವತಿಯಿಂದ ಭಜನಾ ತಂಡದ ಮಕ್ಕಳಿಗೆ ವಿದ್ಯಾನಿಧಿ ಹಾಗೂ ಕಿಟ್

ಮುಂಡ್ಕೂರು : ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ರಕ್ತಕ್ಕೆ ಯಾವುದೇ ಜಾತಿ ಧರ್ಮ ಇಲ್ಲ. ರಕ್ತದಾನ ಮಾನವೀಯತೆಯ ಸಂಕೇತವಾಗಿದೆ. ದಾನದಲ್ಲಿ ಶ್ರೇಷ್ಠ ದಾನ ರಕ್ತದಾನ. ರಕ್ತದಾನದಿಂದ ಒಂದು ಜೀವವನ್ನು ಉಳಿಸಬಹುದು. ರಕ್ತದಾನದಿಂದ ಅನೇಕ ದೈಹಿಕ ಪ್ರಯೋಜನಗಳಿವೆ ಎಂದು ಪೊಂಪೈ ಕಾಲೇಜಿನ ಪ್ರಾಂಶುಪಾಲ ಡಾ. ಪುರುಷೋತ್ತಮ ಕೆ ಬಿ ಹೇಳಿದರು . ಅವರು ಲಯನ್ಸ್ ಕ್ಲಬ್ ಮುಂಡ್ಕೂರು ಕಡಂದಲೆ ಆಶ್ರಯದಲ್ಲಿ ಎ.ಜೆ ಹಾಸ್ಪಿಟಲ್ ಮತ್ತು ರಿಸರ್ಚ್ ಸೆಂಟರ್ ಮಂಗಳೂರು ಇವರ ನೇತೃತ್ವದಲ್ಲಿ ಮುಂಡ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದ

ಮೂಡುಬಿದಿರೆ : MCS ಬ್ಯಾಂಕಿನಿಂದ ಉಚಿತ ಮೂಳೆ ಸಾಂದ್ರತಾ ಪರೀಕ್ಷಾ ಶಿಬಿರ

ಮೂಡುಬಿದಿರೆ ಕೋ-ಓಪರೇಟಿವ್ ಸರ್ವೀಸ್ ಸೊಸೈಟಿ ಲಿ.ಮೂಡುಬಿದಿರೆ ಮತ್ತು ಎಮ್.ಸಿ.ಲಿಯೋಡ್ ಫಾರ್ಮಾ ಇವುಗಳ ಆಶ್ರಯದಲ್ಲಿ ಉಚಿತ ಮೂಳೆ ಸಾಂದ್ರತಾ ಪರೀಕ್ಷಾ ಶಿಬಿರವು ಬ್ಯಾಂಕಿನ ಸಭಾಭವನದಲ್ಲಿ ನಡೆಯಿತು. ಬ್ಯಾಂಕಿನ ಅಧ್ಯಕ್ಷ ಎಂ.ಬಾಹುಬಲಿ ಪ್ರಸಾದ್ ಅವರು ದೀಪ ಬೆಳಗಿಸಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಆರೋಗ್ಯದ ಬಗ್ಗೆ ನಾವು ಇಂದು ವಿಶೇಷವಾಗಿ ಗಮನ ಹರಿಸುವುದು ಅನಿವಾರ್ಯವಾಗಿದೆ. ಸಾರ್ವಜನಿಕರಿಗೆ ಈ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಶಿಬಿರವನ್ನು

ಬೀಚ್‍ಗಳಲ್ಲಿ ಬೀಚ್‍ಗಾರ್ಡ್ ನೇಮಕ : ಡಾ|| ಚೂಂತಾರು

ದಿನಾಂಕ: 26 05-2024 ರಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ರವರು ಸುರತ್ಕಲ್ ಮತ್ತು ಸಸಿಹಿತ್ಲು ಬೀಚ್‍ಗಳಿಗೆ ಭೇಟಿ ನೀಡಿ ಅಲ್ಲಿ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರಿಗೆ ಪ್ರವಾಹ ರಕ್ಷಣಾ ಕಾರ್ಯದ ಕುರಿತು ಸೂಕ್ತ ಸಲಹೆ ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ವಿಪತ್ತು ನಿರ್ವಹಣಾ ತಂಡ 70 ಗೃಹರಕ್ಷರರನ್ನು ಹೊಂದಿದೆ. ಪ್ರತೀ ವರ್ಷದಂತೆಯೇ ಮಾನ್ಯ

ಪಂಜ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಪ್ರಸಾದ ಚೀಲ ಕೊಡುಗೆ

 ಪಂಜ: ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಪ್ರಸಾದ ಚೀಲಗಳನ್ನು ಸೌಧಾಮಿನಿ  ಮಾಲಕರಾದ  ಮೋನಪ್ಪ ನಾಯ್ಕ್ ಎಂಬವರು ಸೇವಾರೂಪದಲ್ಲಿ ನೀಡಿದರು. ಇವರಿಗೆ ದೇಗುಲದ ವತಿಯಿಂದ ಶ್ರೀ ದೇವರ ಪ್ರಸಾದ ನೀಡಲಾಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರು, ಹಾಗೂ ದೇಗುಲದ ಪ್ರಧಾನ ಅರ್ಚಕರಾದ ರಾಮಚಂದ್ರ ಭಟ್ ಉಪಸ್ಥಿತಿದ್ದರು.

ಉಡುಪಿ ಗ್ಯಾಂಗ್ ವಾರ್ ಪ್ರಕರಣ: ಮತ್ತೆ ಮೂವರು ಆರೋಪಿಗಳು ವಶಕ್ಕೆ

ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿಯ ಕುಂಜಿಬೆಟ್ಟು ಎಂಬಲ್ಲಿ ಮೇ 18ರಂದು ನಡು ರಸ್ತೆಯಲ್ಲಿಯೇ ನಡೆದ ಗ್ಯಾಂಗ್‌ವಾರ್ ಗೆ ಸಂಬಂಧಿಸಿ ಮತ್ತೆ ಮೂವರು ಆರೋಪಿಗಳನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ ಆರಕ್ಕೇರಿದೆ. ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಕಾಪು ಕೊಂಬಗುಡ್ಡೆ ಮೂಲದ ಆಶಿಕ್ (26), ತೋನ್ಸೆ ಹೂಡೆಯ ರಾಕೀಬ್ (21) ಹಾಗೂ ಮೇ 25ರಂದು ಸಕ್ಲೈನ್ (26) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಮತ್ತೆ ಮೂವರನ್ನು ಉಡುಪಿ ನಗರ