Home Blog Left SidebarPage 232

ದ.ಕ. ಮತ್ತು ಉಡುಪಿ ಜಿಲ್ಲೆಯ ಲೋಕಾಯುಕ್ತ ಎಸ್.ಪಿ. ಸೈಮನ್ ಸಿ.ಎ ಅವರಿಗೆ ಜೋರ್ಜಿಯನ್ ಪುರಸ್ಕಾರ

ನೆಲ್ಯಾಡಿ: ಕಡಬ ತಾಲೂಕಿನ ಇಚ್ಲಂಪಾಡಿ ಸೈಂಟ್ ಜೋರ್ಜ್ ಓರ್ಥಡೋಕ್ಸ್ ಸಿರಿಯನ್ ಚರ್ಚ್ ನ ಏಳು ದಿನಗಳ ವಾರ್ಷಿಕ ಹಬ್ಬದಂದು ಪ್ರತಿ ವರ್ಷ ಸಮಾಜದಲ್ಲಿ ಉತ್ತಮ ಸೇವಾ ಕಾರ್ಯಗಳನ್ನು ಮಾಡಿದವರಿಗೆ ಕೊಡ ಮಾಡುವ ಜೋರ್ಜಿಯನ್ ಪುರಸ್ಕಾರವನ್ನು ದ.ಕ. ಮತ್ತು ಉಡುಪಿ ಜಿಲ್ಲೆಯ ಲೋಕಾಯುಕ್ತ ಎಸ್.ಪಿ. ಸೈಮನ್ ಸಿ.ಎ ಅವರಿಗೆ ಪ್ರಧಾನ ಮಾಡಲಾಯಿತು. ಚರ್ಚ್ ನ ಧರ್ಮಗುರು

ಶಿಬಾಜೆ: ಅಜಿರಡ್ಕದಲ್ಲಿ ಕಾಡಾನೆ ದಾಳಿ- ಕೃಷಿ ನಾಶ

ಕೊಕ್ಕಡ : ಶಿಬಾಜೆ ಗ್ರಾಮದ ಅಜಿರಡ್ಕ ಶ್ರೀಧರ ರಾವ್ ರವರ ತೋಟಕ್ಕೆ ಮೇ 7ರಂದು ತಡರಾತ್ರಿ ಕಾಡಾನೆ ದಾಳಿ ಮಾಡಿ ಪಸಲಿಗೆ ಬರುವ ತೆಂಗಿನ ಗಿಡ, ಕೊಕ್ಕೋ ಗಿಡ, ಬಾಳೆಗಿಡ ಅಪಾರ ಪ್ರಮಾಣದಲ್ಲಿ ನಾಶ ಮಾಡಿದೆ. ಈ ಹಿಂದೆಯೂ ಇವರ ತೋಟಕ್ಕೆ ಧಾಳಿ ಮಾಡಿದ್ದು ಕೃಷಿ ಹಾನಿ ಉಂಟು ಮಾಡಿತ್ತು, ಮೇ 6ರಂದು ಶಿಶಿಲ ಗ್ರಾಮದ ಕಳ್ಳಾಜೆ ದಿವಾಕರ ಗೌಡ ಇವರ ತೋಟಕ್ಕೂ ಧಾಳಿ ಮಾಡಿರುವ ಬಗ್ಗೆ ಮಾಹಿತಿ ಲಭಿಸಿದೆ.

ಕಾರ್ಕಳ: ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ – ಇಬ್ಬರು ಮಹಿಳೆಯರಿಗೆ ಗಾಯ

ಸುಡುಮದ್ದು ತಯಾರಿಕಾ ಘಟಕ ಸಿಡಿದು ಇಬ್ಬರು ಮಹಿಳೆಯರಿಗೆ ಗಾಯಗಳಾದ ಘಟನೆ ಕಾರ್ಕಳ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಜೆ ಎಂಬಲ್ಲಿ ನಡೆದಿದೆ. ಕಾರ್ಕಳ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ ಕಜೆ ಎಂಬಲ್ಲಿ ಕೆಲವಾರು ವರ್ಷಗಳಿಂದ ಸುಡುಮದ್ದು ತಯಾರಿಕಾ ಘಟಕ ಕಾರ್ಯಾಚರಿಸುತ್ತಿದ್ದು, ಎಂದಿನಂತೆ ಇಂದೂ ಬೆಳಗ್ಗೆ ಸುಡುಮದ್ದು ತಯಾರಿಕೆ ಸಂದರ್ಭ ಅನಿರೀಕ್ಷಿತವಾಗಿ ಸ್ಫೋಟಗೊಂಡು ಕೆಲಸ ನಿರ್ವಹಿಸುತ್ತಿದ್ದ ಮಹಿಳೆಯರಿಬ್ಬರು ಗಾಯಗೊಂಡು ಆಸ್ಪತ್ರೆಗೆ ಸಾಗಿಸಲಾಗಿದೆ. ಸುಡುಮದ್ದು

ಮಂಜೇಶ್ವರ : ರಾ.ಹೆದ್ದಾರಿಯಲ್ಲಿ ಕಾರಿಗೆ ಡಿಕ್ಕಿ ಹೊಡೆದ ಆಂಬ್ಯುಲೆನ್ಸ್ – ಮೂವರ ದಾರುಣ ಅಂತ್ಯ

ಮಂಜೇಶ್ವರ : ರಾಷ್ಟ್ರೀಯ ಹೆದ್ದಾರಿ ಕುಂಜತ್ತೂರಿನ ವಿರುದ್ಧ ದಿಕ್ಕಿನಲ್ಲಿ ಅಮಿತ ವೇಗದಲ್ಲಿ ಸಂಚರಿಸಿದ ಆಂಬ್ಯುಲೆನ್ಸ್ ಎದುರಿನಿಂದ ಬರುತಿದ್ದ ಕಾರೊಂದಕ್ಕೆ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಕೂಡಾ ದಾರುಣವಾಗಿ ಸಾವನ್ನಪ್ಪಿದ್ದಾರೆ. ಕುಂಜತ್ತೂರು ಜಂಕ್ಷನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರದಂದು ಬೆಳಿಗ್ಗೆ 10-50 ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.ಬೆಂಗಳೂರಿನಿಂದ ತ್ರಿಶೂರು ಭಾಗಕ್ಕೆ ಕಾರಿನಲ್ಲಿ ಸಂಚರಿಸುತಿದ್ದ

ಹಾಸನ : ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ

ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರ ನೆರವಿಗಾಗಿ ವಿಶೇಷ ತನಿಖಾ ತಂಡವು ಸಹಾಯವಾಣಿ ಸ್ಥಾಪಿಸಿದೆ. ತನಿಖೆಯ ಸಂದರ್ಭದಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಸಂತ್ರಸ್ತರು ಇರುವುದು ತಿಳಿದು ಬಂದಿದ್ದು, ಸಂತ್ರಸ್ತರು ಹಾಗೂ ಬಾತ್ಮೀದಾರರಿಗೆ (ಮಾಹಿತಿದಾರರಿಗೆ) ಕಾನೂನು ನೆರವು ಹಾಗೂ ರಕ್ಷಣೆ ನೀಡಲು ಸಹಾಯವಾಣಿ ತೆರೆಯಲಾಗಿದ್ದು.6360938947 ಸಹಾಯವಾಣಿ ಸಂಖ್ಯೆ ಸಂಪರ್ಕಿಸಬಹುದು.ಸಂತ್ರಸ್ತರು ಅಥವಾ

ಬಂಟ್ವಾಳ: ವ್ಯಕ್ತಿಯೋರ್ವನ ಮೃತದೇಹ ಪತ್ತೆ

ಬಂಟ್ವಾಳ: ಪ್ರತಿಷ್ಠಿತ ಮದುವೆ ಸಭಾಂಗಣದ ಅವರಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಮಂಗಳವಾರ ಪತ್ತೆಯಾಗಿದೆ. ತಲಪಾಡಿಯಲ್ಲಿರುವ ಬಂಟವಾಳದ ಬಂಟರ ಭವನದ ಕಂಪೌಂಡ್ ನ ಒಳಗಡೆಯಲ್ಲಿ ರಕ್ತಸಿಕ್ತವಾಗಿ ಬಿದ್ದುಕೊಂಡಿರುವ ಸ್ಥಿತಿಯಲ್ಲಿ ಮೃತದೇಹ ಕಂಡು ಬಂದಿದೆ.ಉಪ್ಪಿನಂಗಡಿ ವಳಾಲು ಮೂಲದ ನಿವಾಸಿ ಸಂತೋಷ್ ಎಂಬಾತನ ಶವ ಇದಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಬಂಟರ ಭವನದ ಹೊರಗಡೆಯಲ್ಲಿ ಈತನಿಗೆ ಸೇರಿದ ಬೈಕ್ ಕಂಡು ಬಂದಿದೆ.ಸಾವಿಗೆ ಸ್ಪಷ್ಟವಾದ ಕಾರಣ ಗೊತ್ತಾಗಿಲ್ಲವಾದರೂ

ವಿಶ್ವ ಅಸ್ತಮಾ ದಿನ – ಮೇ 7

ಪ್ರತಿ ವರ್ಷ ಮೇ ತಿಂಗಳ ಮೊದಲನೇ ಮಂಗಳವಾರದಂದು ವಿಶ್ವ ಅಸ್ತಮಾ ದಿನ ಎಂದು ಆಚರಿಸಲಾಗುತ್ತಿದೆ. ವಿಶ್ವದಾದ್ಯಂತ ಅಸ್ತಮಾ ರೋಗದ ಬಗೆಗಿನ ಅಪನಂಬಿಕೆಗಳನ್ನು ಹೋಗಲಾಡಿಸಿ, ರೋಗದ ಬಗ್ಗೆ ಜಾಗೃತಿ ಮೂಡಿಸಿ, ರೋಗಿಗಳಿಗೆ ಆತ್ಮಸೈರ್ಯವನ್ನು ನೀಡುವ ಸದುದ್ದೇಶ ಈ ಆಚರಣೆಯ ಹಿಂದೆ ಇದೆ. ಅಸ್ತಮಾ ರೋಗವು ಶ್ವಾಸಕೋಶಗಳಿಗೆ ಸಂಬಂಧಿಸಿದ ದೀರ್ಘಕಾಲಿಕ ರೋಗವಾಗಿದ್ದು, ಮುಖ್ಯವಾಗಿ ರೋಗಿಯ ಉಸಿರಾಟದ ಪ್ರಕ್ರಿಯೆ ಮೇಲೆ ತೊಂದರೆಯನ್ನು ಉಂಟುಮಾಡುತ್ತದೆ. ರೋಗದ ತೀವ್ರತೆ ಮತ್ತು

ಆಸಿಡಿಟಿ (ಅತಿ ಆಮ್ಲತೆ)

ಆಸಿಡಿಟಿ ಅಥವಾ ಅತಿ ಆಮ್ಲತೆ ಎನ್ನುವುದು ಇಂದಿನ ಕಾಲದಲ್ಲಿ ಜಗತ್ತಿನಾದ್ಯಂತ ಎಲ್ಲರಲ್ಲೂ ಕಂಡು ಬರುವ ಬಹಳ ಸಾಮಾನ್ಯ ಸಮಸ್ಯೆಯಾಗಿದೆ. ಇಂದಿನ ಧಾವಂತದ, ವೇಗದ ಸ್ಪರ್ದಾತ್ಮಕ ಜಗತ್ತಿನಲ್ಲಿ ಎಲ್ಲವೂ ವೇಗವಾಗಿ ನಡೆಯುತ್ತದೆ. ಎಲ್ಲರೂ ತಮ್ಮ ಕೆಲಸದಲ್ಲಿ ಮಗ್ನರಾಗಿ ಕಾಲಕಾಲಕ್ಕೆ ಸರಿಯಾಗಿ ಆಹಾರ ಸೇವಿಸಲಾಗದ ಒತ್ತಡದ ಜೀವನ ಶೈಲಿಗೆ ಅನಿವಾರ್ಯವಾಗಿ ಒಗ್ಗಿಕೊಂಡಿದ್ದಾರೆ. ಇಂದು ಇಂದಿನ ನಮ್ಮ ಯುವ ಜನಾಂಗದ ಜೀವನ ಶೈಲಿಗೆ ಹಿಡಿದ ಕೈಗನ್ನಡಿ ಎಂದರೂ ತಪ್ಪಲ್ಲ. ಆಸಿಡಿಟಿ

ವಿಶ್ವ ನಗು ದಿನ- ಮೇ 5

ಪ್ರತಿ ವರ್ಷ ಮೇ ತಿಂಗಳ ಮೊದಲ ಭಾನುವಾರದಂದು ವಿಶ್ವ ನಗು ದಿನ ಎಂದು ಆಚರಿಸಿ ಸಂಭ್ರಮಿಸಲಾಗುತ್ತದೆ. ಈ ದಿನದಂದು ಎಲ್ಲಾ ಜಾತಿ, ಧರ್ಮದ ಜನರು ಯಾವುದೇ ಮತ, ಭೇದವಿಲ್ಲದೆ, ಲಿಂಗ ಭೇದವಿಲ್ಲದೆ ವಯಸ್ಸಿನ ನಿರ್ಭಂದ ಇಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಸೇರಿ ಮನ ಬಿಚ್ಚಿ ನಗುತ್ತಾರೆ. ನಿಷ್ಕಲ್ಮಶವಾಗಿ ಮತ್ತು ವ್ಯಾಪಾರೀಕರಣವಿಲ್ಲದೆ ಮನ ಬಿಚ್ಚಿ ನಕ್ಕು ವಿಶ್ವಬಾತ್ರತ್ವ, ಸಹೋದರತ್ವ ಮತ್ತು ಶಾಂತಿಯ ಸಂಕೇತ ಎಂಬಂತೆ ಎಲ್ಲರೂ ಒಟ್ಟು ಸೇರಿ ನಕ್ಕು ಮನಸ್ಸನ್ನು ಹಗುರಾಗಿಸಲು

ಬಾಹ್ಯಾಕಾಶಕ್ಕೆ ಮೂರನೆಯ ದಾಪುಗಾಲು

ಭಾರತದ ಬಾಹ್ಯಾಕಾಶದ ಕನಸನ್ನು ಅಮೆರಿಕ ಸಂಯುಕ್ತ ಸಂಸ್ಥಾನದಲ್ಲಿ ಸಾಕಾರಪಡಿಸಿಕೊಂಡ ಮಹಿಳೆಯರು ಎಂದರೆ ಕಲ್ಪನಾ ಚಾವ್ಲಾ ಮತ್ತು ಸುನಿತಾ ವಿಲಿಯಮ್ಸ್. ಭಾರತೀಯ ಮೂಲದ ಅಮೆರಿಕದ ಪ್ರಜೆಗಳು ಇವರು. ಈಗ ಸುನಿತಾ ವಿಲಿಯಮ್ಸ್ ಅವರು ಮೂರನೆಯ ಬಾರಿಗೆ ಬಾಹ್ಯಾಕಾಶಕ್ಕೆ ನೆಗೆದಿದ್ದಾರೆ. ಕಲ್ಪನಾ ಬದುಕು ಅರ್ಧದಲ್ಲೇ ಉರಿದು ಗಗನದ ತಾರೆಯಾಯಿತು. ಇಲ್ಲದಿದ್ದರೆ ಅವರು ಕೂಡ ಮತ್ತಷ್ಟು ಬಾಹ್ಯಾಕಾಶ ಸಾಧನೆಗಳನ್ನು ಮಾಡುತ್ತಿದ್ದರು. ಕಲ್ಪನಾ ಚಾವ್ಲಾ ಭಾರತ ಮೂಲದ ಮೊದಲ ಮಹಿಳಾ