ವಿಟ್ಲ: ವಿಟ್ಲ ಪೇಟೆ ಎರಡು ಅಂಗಡಿಗಳಿಗೆ, ವಿಟ್ಲದ ಮೇಗಿನ ಪೇಟೆಯ ಒಂದು ಅಂಗಡಿಗೆ ಶುಕ್ರವಾರ ರಾತ್ರಿ ಕಳ್ಳರು ನುಗ್ಗಿ ಹಣ ಹಾಗೂ ದಿನಸಿ ಸಾಮಾಗ್ರಿ ಕದ್ದೋಯ್ಯಿದಿದ್ದಾರೆ. ಚುನಾವಣೆ ಹಿನ್ನಲೆ ಆಯಕಟ್ಟಿನ ಸ್ಥಳಗಳಲ್ಲಿ ಪೊಲೀಸ್ ನಿಯೋಜನೆಗೊಳಿಸಲಾಗಿದ್ದು, ಅವರು ತಡ ರಾತ್ರಿ ಹೊತ್ತಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರೂ, ಕಳ್ಳರು ಸಲೀಸಾಗಿ ಬಂದು ಕಳ್ಳತನ ನಡೆಸಿ,
ಕಾಸರಗೋಡು ಜಿಲ್ಲೆಯ ಕಾಞಾಂಗಾಡ್ ಸಮೀಪ ಅಂಬಲತರ ಪಾರಪಳ್ಳಿ ಗುರುಪುರದ ಬಾಡಿಗೆ ಮನೆಯೊಂದರಲ್ಲಿ ರೂ 2 ಸಾವಿರ ಮುಖಬೆಲೆಯ 7.25 ಕೋಟಿ ರೂ ಪತ್ತೆಯಾಗಿದ್ದು ತನಿಖೆಯ ವೇಳೆ ಇವೆಲ್ಲವೂ ಖೋಟಾ ನೋಟುಗಳು ಎಂದು ತನಿಖೆಯಿಂದ ಸ್ಪಷ್ಟವಾಗಿದೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ನಿವಾಸಿ ಸುಲೈಮಾನ್ ಸಹಿತ ಹಾಗೂ ಇಬ್ಬರನ್ನು ಪೋಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ.ಅಂಬಲತರ ಠಾಣಾ ವ್ಯಾಪ್ತಿಯ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ
ಸರಕಾರಿ ಕೆಲಸದಿಂದ ನಿವೃತ್ತಿ ಹೊಂದಿ ಗಂಡನೊಂದಿಗೆ ತನ್ನ ಮುದ್ದಾದ ಮಗುವಿನೊಂದಿಗೆ ಸುಂದರವಾದ ಬದುಕಿನ ಕನಸು ಕಾಣುತ್ತಿದ್ದ ಆ ಮುದ್ದಾದ ಕುಟುಂಬಕ್ಕೆ, ಅದ್ಯಾರ ಕಣ್ಣು ಬಿತ್ತೋ.. ಗೊತ್ತಿಲ್ಲ.! ಬೈಕ್ ಸಾವರನೊಬ್ಬನ ಅತೀವೇಗ , ಅತೀ ಅವಸರ ಇಡೀ ಕುಟುಂಬವನ್ನೇ ಜೀವನಪೂರ್ತಿ ಕಣ್ಣೀರ ಕಡಲಲ್ಲಿ ಕಳೆಯುವಂತೆ ಮಾಡಿದೆ ಈ ಬಗ್ಗೆ ಒಂದು ವಿಶೇಷ ವರದಿ ಇಲ್ಲಿದೆ. ಇವರು ಉಡುಪಿಯ ವೈ ರಮೇಶ್ ಭಟು, ಈ ಹಿಂದೆ ಉಡುಪಿಯ ರೇಷ್ಮೆ ಇಲಾಖೆಯಲ್ಲಿ ಸುಮಾರು 12 ವರ್ಷಗಳ ಕಾಲ ದಿನಗೂಲಿ
ನಗರದ ಪಂಪ್ವೆಲ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ತೊಕ್ಕೊಟ್ಟು ನಿವಾಸಿ ಸಮಿತ್ ಶೆಟ್ಟಿ (30) ಮೃತಪಟ್ಟ ಯುವಕ. ಸಮಿತ್ ಶೆಟ್ಟಿ ಕೊಟ್ಟಾರದಲ್ಲಿರುವ ತನ್ನ ರೂಮ್ ನಿಂದ ಇಂದು ಬೆಳಗ್ಗೆ ತೊಕ್ಕೊಟ್ಟಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ರಾ.ಹೆ. 66ರ ಪಂಪ್ವೆಲ್ ಬಳಿ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದೆ
ಮೂಡುಬಿದಿರೆ: ಏ. 26 ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆ- 2024 ರ ಪ್ರಯುಕ್ತ ಮತದಾರರಿಗೆ ಜಾಗೃತಿ ಮೂಡಿಸುವ ಸಲುವಾಗಿ ಮತದಾನ ಜಾಗೃತಿ ಜಾಥಾ ರಥವು ಶನಿವಾರ ಮೂಡುಬಿದಿರೆ ತಾಲೂಕು ಪಂಚಾಯತ್ ಗೆ ಆಗಮಿಸಿತು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರಾದ ಎಸ್. ವೆಂಕಟಚಲಪತಿ ಜಾಗೃತಿ ರಥವನ್ನು ಸ್ವಾಗತಿಸಿದರು.ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸಿಬ್ಬಂದಿ ವರ್ಗ ಹಾಗೂ ಸ್ಥಳೀಯ ಶಾಲೆಯ ಮುಖ್ಯೋಪಾಧ್ಯರು, ಶಿಕ್ಷಕರು ಹಾಜರಿದ್ದರು.ನಂತರ ಮತದಾನ
ಮೂಡುಬಿದಿರೆ: ಕಾಂಗ್ರೆಸ್ ಯಾವತ್ತಿಗೂ ಹರಿಯುವ ನದಿ. ಕರ್ನಾಟಕದಲ್ಲಿ ಕಾಂಗ್ರೆಸನ್ನು ನಿರ್ನಾಮ ಮಾಡುವುದಾಗಿ ಹೇಳಿದ್ದ ಬಿಜೆಪಿ ಇಂದು ಅಧಿಕಾರವನ್ನು ಕಳೆದುಕೊಂಡಿದೆ. ಜನಸಾಮಾನ್ಯರಿಗೆ ಸದಾ ಸ್ಪಂದಿಸುವ ಗುಣ ಹೊಂದಿರುವ ಕಾಂಗ್ರೆಸನ್ನು ನಿರ್ನಾಮ ಮಾಡಲು ಸಾಧ್ಯವೇ ಇಲ್ಲ. ಈ ಬಾರಿ ಸಂಸತ್ ಚುನಾವಣೆಯಲ್ಲಿ ರಾಜ್ಯದಲ್ಲಿ ಅತೀ ಹೆಚ್ಚಿನ ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ. ಈ ಮೂಲಕ ಕರಾವಳಿ ಭಾಗದಲ್ಲೂ ಕಾಂಗ್ರೆಸ್ ಗೆಲುವು ಪಡೆದುಕೊಳ್ಳಲಿದೆ ಎಂದು ಮಾಜಿ ಸಚಿವ
ಗ್ಯಾರಂಟಿಗಳ ಆಸರೆಯಿಂದ ಅಧಿಕಾರಕ್ಕೇರಿದ ಕಾಂಗ್ರೆಸ್, ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿ ಮಾಡದೆ ರಾಜ್ಯದ ಜನತೆಗೆ ಮಂಕುಬೂದಿ ಎರಚಿದೆ. ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿರುವ ಕಾಂಗ್ರೆಸ್ ಒಂದೇ ವರ್ಗದ ಅತಿಯಾದ ಓಲೈಕೆಯಲ್ಲಿ ತೊಡಗಿದೆ ಎಂದು ಮಂಗಳೂರು ಉತ್ತರದ ಶಾಸಕ ಡಾ. ವೈ ಭರತ್ ಶೆಟ್ಟಿ ಆರೋಪಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಲೋಕಸಭಾ ಚುನಾವಣೆ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು.ಕಾಂಗ್ರೆಸ್ ಪಕ್ಷ ತನ್ನ
ಮಂಜೇಶ್ವರ: ವಿದ್ಯುತ್ ಶಾಕ್ ತಗುಲಿ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ. ಹೊಸಂಗಡಿ ಸಮೀಪದ ಅಂಗಡಿಪದವು ನಿವಾಸಿ ದಿವಂಗತ ಅಶೋಕ್ – ಕಲಾವತಿ ದಂಪತಿಯ ಪುತ್ರ ಪ್ರಜ್ವಲ್ (19) ಸಾವನ್ನಪ್ಪಿದ ದುರ್ದೈವಿ. ಅಂಗಡಿಪದವಿನ ಅಂಗಡಿಯೊಂದರ ಮುಂಭಾಗದಲ್ಲಿ ವಿದ್ಯುತ್ ಹರಿಯುತ್ತಿದ್ದ ಕಬ್ಬಿಣದ ಗೇಟ್ ನ್ನು ತಿಳಿಯದೆ ಸ್ಪರ್ಶಿಸಿದಾಗ ವಿದ್ಯುತ್ ಶಾಕ್ ತಗುಲಿದ್ದು, ಬೊಬ್ಬೆ ಕೇಳಿದ ಸ್ಥಳೀಯರು ವಿದ್ಯುತ್ ವಯರ್ ನ್ನು ವಿಚ್ಚೆದಿಸಿ, ಕೂಡಲೇ ಉಪ್ಪಳದ ಖಾಸಗಿ
ಬಂಟ್ವಾಳ: ಇತ್ತೀಚಿನ ದಿನಗಳಲ್ಲಿ ಯಕ್ಷಗಾನದತ್ತ ಯುವ ಸಮುದಾಯ ಆಕರ್ಷಿತಗೊಳ್ಳುತ್ತಿದೆ. ಆದರೆ ಇಂತಹ ಶ್ರೇಷ್ಠ ಎಲ್ಲರಿಗೂ ಒಲಿಯವುದಿಲ್ಲ. ನಿರಂತರ ಅಭ್ಯಾಸ, ಅಧ್ಯಯನ ಶೀಲತೆ, ಕಲೆಯ ಮೇಲಿನ ಒಲುಮೆ, ಪ್ರೀತಿ, ಅಭಿಮಾನ ಆ ಕ್ಷೇತ್ರದಲ್ಲಿ ಸಾಧನೆ ಮಾಡುವಂತೆ ಮಾಡುತ್ತದೆ. ಬಂಟ್ವಾಳದ ಎಂಜಿನಿಯರ್ ವಿದ್ಯಾರ್ಥಿಯೋರ್ವನಿಗೆ ಯಕ್ಷಗಾನ ಕಲೆ ಒಲಿದಿದೆ. ಬಾಲ್ಯದಿಂದಲೂ ಯಜ್ಷಗಾನದ ಮೇಲಿನ ಆಸಕ್ತಿ ಇಂದು ಈ ಕಲಾವಿದನನ್ನು ಯಕ್ಷ ಲೋಕದಲ್ಲಿ ಸಾಧನೆ ಮಾಡುವಂತೆ ಮಾಡಿದೆ. ಯಕ್ಷಗಾನದ
ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಅನುಮತಿ ನೀಡಿದೆ.ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಅಧಿಸೂಚನೆಗಳನ್ನು ರದ್ದುಪಡಿಸಿದ್ದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ನ್ಯಾಯಮೂರ್ತಿ ಕೆ.ಸೋಮಶೇಖರ್ ನೇತೃತ್ವದ ವಿಭಾಗೀಯ ನ್ಯಾಯಪೀಠ ರದ್ದುಪಡಿಸಿದೆ. ಈ ಕುರಿತಂತೆ




























