Home Blog Left SidebarPage 275

ಬೈಕ್ ಮತ್ತು ಬಸ್ ನಡುವೆ ಅಪಘಾತ: ಬೈಕ್ ಸವಾರ ಸಾವು

ಕಡಬ, ಬೈಕ್ ಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ಸೋಮವಾರದಂದು ನಡೆದಿದೆ. ಮೃತ ಬೈಕ್ ಸವಾರನನ್ನು ಕೊಂಬಾರು ಮಣಿಭಾಂಡ ತೇರೆಬೀದಿ ನಿವಾಸಿ ನೆಟ್ಟಣದಲ್ಲಿ ಮೆಕ್ಯಾನಿಕ್ ಆಗಿದ್ದ ವಾಸುದೇವ ಗೌಡ ಎಂದು ಗುರುತಿಸಲಾಗಿದೆ. ಕೆಎಸ್ಸಾರ್ಟಿಸಿ ಬಸ್ ಓವರ್ ಟೇಕ್

ಮೂಡುಬಿದಿರೆ : ವಿಸ್ಡಮ್ ಇನ್ಸ್ಟಿಟ್ಯೂಶನ್ಸ್ ನೆಟ್ ವರ್ಕ್ ನ ಮೂರನೇ ಶಾಖೆ ಆರಂಭ

ಮೂಡುಬಿದಿರೆ: ವಿಶ್ ಡಮ್ ಇನ್ಸ್ಟಿಟ್ಯೂಶನ್ಸ್ ನೆಟ್ ವಕ್ ೯ನ ಮೂರನೇ ಶಾಖೆಯು ಮೂಡುಬಿದಿರೆಯ ಪ್ರಭು ಕಾಂಪ್ಲೆಕ್ಸ್ ನಲ್ಲಿ ಸೋಮವಾರ ಉದ್ಘಾಟನೆಗೊಂಡಿತು. ಭಾರತದ ಒಳಗಡೆ ಮತ್ತು ಹೊರ ದೇಶಗಳಲ್ಲಿ ಉದ್ಯೋಗಾವಕಾಶ ಲಭಿಸಲು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ, ಕೌಶಲಾ ಆಧಾರಿತ ತರಬೇತಿ, ಶುಲ್ಕ ಸಹಿತ ಇಂಟನ್ ಶಿಫ್ ಸೌಲಭ್ಯ, ಕಾಲೇಜುಗಳಲ್ಲಿ ಪಾಲನಾ ಕೇಂದ್ರಗಳು ಮೊದಲಾದ ಉದ್ದೇಶಗಳನ್ನಿಟ್ಟುಕೊಂಡು ಆರಂಭಗೊಂಡಿರುವ ಈ ಕೇಂದ್ರವನ್ನು ಉದ್ಯಮಿ ಕೆ.ಶ್ರೀಪತಿ ಭಟ್ ಉದ್ಘಾಟಿಸಿದರು.

ವರ್ಲ್ಡ್ ಹ್ಯಾಪಿನೆಸ್ ಸೂಚ್ಯಂಕ ಭಾರತಕ್ಕೆ 126ನೇ ಸ್ಥಾನ

ಯಥಾ ರಾಜ ತಥಾ ಪ್ರಜಾ ಎನ್ನುವಂತೆ ವಿಶ್ವ ಸಂಸ್ಥೆಯು ಬಿಡುಗಡೆ ಮಾಡಿರುವ ವರ್ಲ್ಡ್ ಹ್ಯಾಪಿನೆಸ್ ಸೂಚ್ಯಂಕದಲ್ಲಿ ಭಾರತವು 126ನೇ ಸ್ಥಾನದಲ್ಲಿದೆ. ನೆರೆಹೊರೆಯ ದೇಶಗಳಾದ ಪಾಕಿಸ್ತಾನ, ನೇಪಾಳ, ಚೀನಾ, ಬಾಂಗ್ಲಾದೇಶ ಮೊದಲಾದವುಗಳಿಗಿಂತ ಭಾರತವು ಕೆಳಗಿನ ಹಂತದಲ್ಲಿ ಇದೆ. ಸತತ 6ನೆಯ ಬಾರಿ ಫಿನ್ಲೆಂಡ್ ಜಗತ್ತಿನ ಅತಿ ಸಂತೋಷದ ಜನರ ದೇಶವಾಗಿ ಮೊದಲ ಸ್ಥಾನದಲ್ಲಿದೆ. ಡೆನ್ಮಾರ್ಕ್, ಐಸ್‍ಲ್ಯಾಂಡ್‍ಗಳು ಎರಡು ಮೂರನೆಯ ಸ್ಥಾನಗಳಲ್ಲಿ ಇವೆ. ತಲಾದಾಯ, ಸಮಾಜಮುಖಿ ಬೆಂಬಲ, ಜನರ

ವಿದ್ಯಾರ್ಥಿಗಳು ಶಾಲೆಯ ಪ್ರಮುಖ ಆಸ್ತಿಯಾಗುತ್ತಾರೆ: ಡಾ. ಹರಿಕೃಷ್ಣ ಪುನರೂರು

ವಿದ್ಯಾರ್ಥಿಗಳು ಶಾಲೆಯ ಪ್ರಮುಖ ಆಸ್ತಿಯಾಗುತ್ತಾರೆ; ಅವರಿಲ್ಲದೆ, ಶಾಲೆಗಳು ಮತ್ತು ಶಿಕ್ಷಕರು ಏನೂ ಅಲ್ಲ. ಶಿಕ್ಷಕರ ಮೌಲ್ಯ ಮತ್ತು ಪ್ರಾಮುಖ್ಯತೆಯನ್ನು ಮಾಡುವಲ್ಲಿ ವಿದ್ಯಾರ್ಥಿಗಳು ದೊಡ್ಡ ಪಾತ್ರವನ್ನು ವಹಿಸುತ್ತಾರೆ. ವಿದ್ಯಾರ್ಥಿಯನ್ನು ಸರಿದಾರಿಗೆ ತರುವುದು ಶಿಕ್ಷಕರ ಜವಾಬ್ದಾರಿಯಾಗಿದೆ. ಆದಾಗ್ಯೂ, ಸರಿಯಾದ ದಾರಿಯಲ್ಲಿ ಇರಲು ತಮ್ಮ ಶಿಕ್ಷಕರ ಆದೇಶಗಳನ್ನು ಅನುಸರಿಸುವುದು ವಿದ್ಯಾರ್ಥಿಯ ಜವಾಬ್ದಾರಿಯಾಗಿದೆ. ಅವರು ಶಾಲೆಯಲ್ಲಿ ಪರಸ್ಪರ ಸಮಾನವಾಗಿ

ಸಂತ ಜೆರೋಸಾ ಶಾಲೆಯ ಜೊತೆಗೆ ನಿಂತ ಕಾನ್ಫರೆನ್ಸ್ ಆಫ್ ರಿಲಿಜಿಯಸ್ ಆಫ್ ಇಂಡಿಯಾ ( CRI )

ಫೆಬ್ರವರಿ 10, 2024 ರಂದು ತೆರೆದುಕೊಂಡ ದುರದೃಷ್ಟಕರ ಮತ್ತು ದುಃಖಕರ ಘಟನೆಗಳ ಮಧ್ಯೆ, CRI ಮಂಗಳೂರು ಘಟಕವು ಸೇಂಟ್ ಜೆರೋಸಾ ಇಂಗ್ಲಿಷ್ ಹೈಯರ್ ಪ್ರೈಮರಿ ಶಾಲೆ ಮತ್ತು ಅದರ ಆಡಳಿತದ ಜತೆಗೆ ಇದೆ. ಸೇಂಟ್ ಜೆರೋಸಾ ಶಾಲೆಯು ಇಂಗ್ಲಿಷ್ ಶಿಕ್ಷಕರ ವಿರುದ್ಧ ಆಧಾರರಹಿತ ಆರೋಪಗಳನ್ನು ಎದುರಿಸಿತು ಹಾಗೂ ಶಾಲಾ ಸಮುದಾಯಕ್ಕೆ ಸವಾಲಿನ ವಾತಾವರಣವನ್ನು ಸೃಷ್ಟಿಸಿತು.CRI ಮಂಗಳೂರು ಘಟಕವು ಯಾವುದೇ ರೀತಿಯ ಅನ್ಯಾಯದ ವರ್ತನೆಯನ್ನು ಖಂಡಿಸುತ್ತದೆ ಮತ್ತು ಸತ್ಯ ಮತ್ತು

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚದ ಪದಗ್ರಹಣ ಸಮಾರಂಭ

ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚದ ಪದಗ್ರಹಣ ಸಮಾರಂಭ ಬೆಂಗಳೂರಿನ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ಜರಗಿತು.ನೂತನ ಪದಾಧಿಕಾರಿಗಳಿಗೆ ನೂತನ ಜವಾಬ್ದಾರಿಗಳ ಘೋಷಣಾ ಪತ್ರವನ್ನು ಓಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷರಾದ ರಘು ಕೌಟಿಲ್ಯ ನೀಡಿದರು. ರಾಜ್ಯ ಬಿಜೆಪಿ ಕಾರ್ಯದರ್ಶಿ ಆರ್ ಸಿ ನಾರಾಯಣ್ ಇವರಿಗೂ ಜವಾಬ್ದಾರಿಯ ಘೋಷಣಾ ಪತ್ರವನ್ನು ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಅಧ್ಯಕ್ಷ ರಘು ಕೌಟಿಲ್ಯರವರು ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ

ಶಿಬರೂರು: “ಬಾಲೆಗ್ ಒಲಿಯಿನ ಭ್ರಾಮರಿ” ತುಳು ನಾಟಕಕ್ಕೆ ಮುಹೂರ್ತ

ಶ್ರೀ ಕೊಡಮಣಿತ್ತಾಯ ಕ್ಷೇತ್ರ ಶಿಬರೂರು ದೇಲಂತಬೆಟ್ಟು ಇಲ್ಲಿ ಎಪ್ರಿಲ್ ತಿಂಗಳಲ್ಲಿ ನಡೆಯುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಪರಮಾನಂದ ಸಾಲ್ಯಾನ್ ರಚಿಸಿ ನಿರ್ದೇಶಿಸಿರುವ “ಬಾಲೆಗ್ ಒಲಿಯಿನ ಭ್ರಾಮರಿ” ತುಳು ಭಕ್ತಿಪ್ರಧಾನ ನಾಟಕದ ಮುಹೂರ್ತ ಸಮಾರಂಭವು ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತದಲ್ಲಿ ನಡೆಯಿತು.ಶುಭಮುಹೂರ್ತಕ್ಕೆ ಶಿಬರೂರು ಗುತ್ತು ಉಮೇಶ್ ಎನ್ ಶೆಟ್ಟಿ ಚಾಲನೆ ನೀಡಿದರು. ಬ್ರಹ್ಮಕಲಶೋತ್ಸವದ

ಮೂಡುಬಿದಿರೆ: ಬೈಲ ಕುರಲ್ ಖ್ಯಾತಿಯ “ಭಾಷಾ” ಇನ್ನಿಲ್ಲ

ಮೂಡುಬಿದಿರೆ: ಕಳೆದ ಮೂರು ದಶಕಗಳಿಂದ ನಾಟಕ ರಂಗದಲ್ಲಿ ವಿವಿಧ ಪಾತ್ರಗಳ ಮೂಲಕ ಗಮನ ಸೆಳೆದಿದ್ದ ತುಳು ನಾಟಕ ಕಲಾವಿದ ಬೈರ ಕುರಲ್ ಖ್ಯಾತಿಯ “ಭಾಷಾ” ವಸಂತ್ ಶೆಟ್ಟಿ ತೋಡಾರು ಅವರು ಅನಾರೋಗ್ಯದಿಂದ ಭಾನುವಾರ ನಿಧನರಾಗಿದ್ದಾರೆ.ತೋಡಾರು ಗಗನ್ ನಿವಾಸದ ಸುಂದರ ಶೆಟ್ಟಿ ಅವರ ಪುತ್ರ ವಸಂತ ಶೆಟ್ಟಿ(52) ಕಳೆದ ಮೂರು ವರುಷಗಳಿಂದ ಅನಾರೋಗ್ಯವನ್ನು ಹೊಂದಿದ್ದರು.ಸುರೇಂದ್ರ ಕುಮಾರ್ ಕಲತ್ರಪಾದೆ ಅವರ ರಚನೆಯ ಅತ್ಯುತ್ತಮ ನಾಟಕ ಬೈರ ಕುರಲ್ ನಲ್ಲಿ

ಪಡುಬಿದ್ರಿ : ಅಕ್ರಮ ಮರಳು ಸಾಗಾಟ ಮರಳು ಸಹಿತ ಟಿಪ್ಪರ್ ವಶ

ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಈಚರ್ ಟಿಪ್ಪರೊಂದನ್ನು ಪಡುಬಿದ್ರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಮುಂಜಾನೆ ಹೆದ್ದಾರಿಯಲ್ಲಿ ಕರ್ತವ್ಯ ನಿರ್ವಾಹಿಸುತ್ತಿದ್ದ ಪಡುಬಿದ್ರಿ ಪೊಲೀಸರು ಟಿಪ್ಪರ್ ವೊಂದನ್ನು ನಿಲ್ಲಿಸಲು ಸೂಚನೆ ನೀಡಿದರೂ ಉಡುಪಿ ಕಡೆಗೆ ವೇಗವಾಗಿ ಪರಾರಿಯಾಗಲು ಯತ್ನಿಸಿದ ಕೆ.ಎ.20-ಬಿ 1146 ನೋಂದಾಯಿತ ಸಂಖ್ಯೆಯ ಟಿಪ್ಪರನ್ನು ಬೆನ್ನಟ್ಟಿದಾಗ ಅದರ ಚಾಲಕ ಟಿಪ್ಪರನ್ನು ಎರ್ಮಾಳು ಸೇತುವೆ ಬಳಿ ನಿಲ್ಲಿಸಿ ಪರಾರಿಯಾಗಿದ್ದಾನೆ, ಟಿಪ್ಪರನ್ನು

ಮೂಡುಬಿದ್ರಿ : ಬಂಟರ ಸಂಘ ಮಹಿಳಾ ಘಟಕದ ಪ್ರಥಮ ವಾರ್ಷಿಕೋತ್ಸವ

ಬಂಟರ ಸಂಘ ಮಹಿಳಾ ಘಟಕ ಮೂಡುಬಿದ್ರಿ ಇದರ ಪ್ರಥಮ ವಾರ್ಷಿಕೋತ್ಸವ ಸಮಾರಂಭವು ಮೋಹಿನಿ ಅಪ್ಪಾಜಿ ನಾಯಕ್ ಸಭಾಂಗಣ ವಿದ್ಯಾಗಿರಿ ಮೂಡುಬಿದ್ರಿ ಇಲ್ಲಿ ನೆರವೇರಿತು. ಸಮಾರಂಭದ ಅಧ್ಯಕ್ಷತೆಯನ್ನ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಶೋಭಾ ಎಸ್ ಹೆಗ್ಡೆ ಯವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಂಟರ ಸಂಘ ಮೂಡುಬಿದರೆ (ರಿ) ಇದರ ಅಧ್ಯಕ್ಷರಾದ ಶ್ರೀ ತಿಮ್ಮಯ್ಯ ಶೆಟ್ಟಿ ಅವರು ವಹಿಸಿದ್ದರು. ಸಮಾರಂಭದ ಉದ್ಘಾಟನೆಯನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ) ಇದರ ಅಧ್ಯಕ್ಷರಾದ