Home Blog Left SidebarPage 321

ಕಡಬ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸಿದ್ಧಗೊಂಡ ಆಕರ್ಷಕ ರಥ

ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾ ಷಷ್ಠಿಯ ಸಂಭ್ರಮದಲ್ಲಿದ್ದು, ಜಾತ್ರಾ ಮಹೋತ್ಸವದಲ್ಲಿ ಬಹುಪಾಲು ರಥಗಳದ್ದೇ ಆಕರ್ಷಣೆ. ಜಾತ್ರೆಗೆ ಮೂಲ ನಿವಾಸಿಗಳಾದ ಮಲೆಕುಡಿಯ ಜನಾಂಗದವರು ರಚಿಸುವ ಆಕರ್ಷಕ ಬೆತ್ತದ ರಥಗಳು ಭೂಷಣವಾಗಿದೆ. ಕಾರ್ತಿಕ ಮಾಸದ ಶುದ್ಧ ಪೌರ್ಣಿಮಿ ದಿನ ಸಹಸ್ರನಾಮಾರ್ಚನೆಯ ಬಳಿಕ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಸಂದರ್ಭ

ಪಡುಬಿದ್ರಿ : ಕಾನೂನು ಬಾಹಿರ ಮಣ್ಣು ಸಾಗಾಟ

ಕಾನೂನು ಬಾಹಿರವಾಗಿ ಮಣ್ಣು ಸಾಗಾಟ ನಡೆಸುತ್ತಿದ್ದ ಟಿಪ್ಪರನ್ನು ತಡೆದ ಸಾರ್ವಜನಿಕರು ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಪಡುಬಿದ್ರಿಯ ಇಕ್ಕಟ್ಟಾದ ಸರ್ವಿಸ್ ರಸ್ತೆಯಲ್ಲಿ ಸಾಲುಗಟ್ಟಿ ಟಿಪ್ಪರ್ ಗಳು ಮಣ್ಣಿಗೆ ಹೊದಿಕೆಯನ್ನೇ ಹಾಕದೆ ಕಾನೂನು ಬಾಹಿರವಾಗಿ ಸಾಗಾಟ ನಡೆಸುತ್ತಿದ್ದು, ಈ ಬಗ್ಗೆ ಸಾರ್ವಜನಿಕರು ಬಹಳಷ್ಟು ಬಾರಿ ಎಚ್ಚರಿಕೆಯನ್ನು ನೀಡಿದರೂ ಮಾನ್ಯತೆ ನೀಡದೆ ತಮ್ಮ ಚಾಲಿ ಮುಂದುವರಿಸಿದ್ದರಿಂದ ಆಕ್ರೋಶಗೊಂಡ ಸಾರ್ವಜನಿಕರು ಪಡುಬಿದ್ರಿ ಗ್ರಾ.ಪಂ.

ಪಡುಬಿದ್ರಿ: ಅಕ್ರಮ ಮರಳು ಸಾಗಾಟ: ಮಾಲಕ-ಚಾಲಕನ ವಿರುದ್ಧ ಪ್ರಕರಣ ದಾಖಲು

ಪಡುಬಿದ್ರಿ ಕಾರ್ಕಳ ರಾಜ್ಯ ಹೆದ್ದಾರಿಯ ನಯಾತ್ ಕಟ್ಟಡದ ಮುಂಭಾಗ ಕದ್ದು ಅಕ್ರಮವಾಗಿ ಸಾಗಿಸುತ್ತಿದ್ದ ಟಿಪ್ಪರ್, ಮರಳು ಸಹಿತ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.ಆರೋಪಿಗಳಾದ ಮಂತ್ರದೇವತೆ ಹೆಸರಿನ ಟಿಪ್ಪರ್ ಮಾಲಕ ಗುರುಪುರದ ರಾಜೇಶ್ ಹಾಗೂ ಅದರ ಚಾಲಕ ನಂದಿಕೂರು ದೇವಸ್ಥಾನ ಬಳಿಯ ನಿವಾಸಿ ಸರ್ಫ್ರಾಜ್ ಆರೋಪಿಗಳು.ಟಿಪ್ಪರ್ ಮಾಲಿಕನ ಸೂಚನೆಯಂತೆ ವಾಹನದಲ್ಲಿ ಮರಳು ತುಂಬಿಸಿ ಪಡುಬಿದ್ರಿ ಬೀಚ್ ಕಡೆ ಸಾಗಿಸಲು ಹೋಗುತ್ತಿದ್ದ ಟಿಪ್ಪರನ್ನು ಪಡುಬಿದ್ರಿ ಪಿಎಸ್ ಐ

ಕಾಪು: ತನಿಯ ಮೋಟಾರ್ಸ್ ಸೂಪರ್ ಆಟೋ ಶೋರೂಂ ಶುಭಾರಂಭ

ಮೊಂಟ್ರಾ ಇಲೆಕ್ಟ್ರಿಕ್ ಅಧಿಕೃತ ಡೀಲರ್‌ನ ತನಿಯ ಮೋಟಾರ್ಸ್ ಸೂಪರ್ ಆಟೋ ಶೋರೂಂ ಕಾಪುವಿನ ಕೊಪ್ಪಲಂಗಡಿಯ ಸ್ವಸ್ತಿಕ್ ಎನ್‌ಕ್ಲೇವ್‌ನಲ್ಲಿ ಶುಭಾರಂಭಗೊಂಡಿತು. ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ಹಾಗೂ ಉತ್ಪಾದನೆ ಹೆಚ್ಚಾಗಿದೆ. ಕಾರು, ಸ್ಕೂಟರ್, ಬೈಕ್ ಹಾಗೂ ತ್ರಿಚಕ್ರ ವಾಹನಗಳ ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಯಾಗಿದೆ. ಅಂತೆಯೇ ಕಾಪು ವ್ಯಾಪ್ತಿಯ ಗ್ರಾಹಕರಿಗೆ ಸಿಹಿ ಸುದ್ದಿ ಎಂಬಂತೆ ಕಾಪುವಿನ ಕೊಪ್ಪಲಂಗಡಿಯ ಸ್ವಸ್ತಿಕ್ ಎನ್‌ಕ್ಲೇವ್‌ನಲ್ಲಿ ತನಿಯ

ಮೂಡುಬಿದಿರೆ: ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ ಡಿ.19ಕ್ಕೆ ಜಿಲ್ಲಾಧಿಕಾರಿ ಕಚೇರಿ ಚಲೋ ಹೋರಾಟ

ಮೂಡುಬಿದಿರೆ: ಜಿಲ್ಲೆಯ ಜನರಿಗೆ ಉತ್ತಮ ಶಿಕ್ಷಣ, ಆರೋಗ್ಯ, ಉದ್ಯೋಗ, ಮೂಲ ಸೌಕರ್ಯ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ ಸಿಪಿಐ(ಎಂ)ವತಿಯಿಂದ ಡಿ. 19ರಂದು  ಬೆಳಿಗ್ಗೆ 10 ಗಂಟೆಗೆ  ಮಂಗಳೂರಿನಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಚಲೋ ಹೋರಾಟ ನಡೆಯಲಿದೆ ಎಂದು ಸಿಪಿಐ(ಎಂ)ಜಿಲ್ಲಾ ಕಾರ್ಯದರ್ಶಿ ಯಾದವ ಶೆಟ್ಟಿ ಹೇಳಿದರು. ಅವರು ಮೂಡುಬಿದಿರೆಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಶಿಕ್ಷಣ ಖಾಸಗೀಕರಣದಿಂದ ಜನಸಾಮಾನ್ಯರ ಮಕ್ಕಳು ಉನ್ನತ ಶಿಕ್ಷಣದಿಂದ

ಅಳ್ನಾವರ ದಾಂಡೇಲಿ ರೈಲು ಓಡುವುದು ಯಾವಾಗ?

ದಟ್ಟ ಕಾಡಿನ ನಡುವಿನ ಬ್ರಿಟಿಷರ ಕಾಲದ ಉತ್ತರ ಕನ್ನಡ ಜಿಲ್ಲೆಯ ಅಂಬೇವಾಡಿ ರೈಲು ನಿಲ್ದಾಣದ ಹೆಸರನ್ನು ಅಧಿಕೃತವಾಗಿ ದಾಂಡೇಲಿ ಎಂದು ಬದಲಿಸಲಾಗಿದೆ. ಬ್ರಿಟಿಷರು ಮರದ ದಿಮ್ಮಿಗಳನ್ನು ಸಾಗಿಸಲು ಈ ರೈಲು ಹಾದಿ ನಿರ್ಮಿಸಿದ್ದರು. ಮೀಟರ್ ಗೇಜ್, ಬ್ರಾಡ್ ಗೇಜ್ ಕಂಡರೂ ಇದರಲ್ಲಿ ಜನ ರೈಲು ಓಡಾಟ ಇಲ್ಲ. ಕೆಲ ಕಾಲ ಮಾತ್ರ ಅಳ್ನಾವರ ಅಂಬೇವಾಡಿ ನಡುವೆ ಒಂದು ಪ್ಯಾಸೆಂಜರ್ ರೈಲು ಓಡಿದ್ದಿದೆ. ಮಾಜೀ ಮಂತ್ರಿ ಆರ್. ವಿ. ದೇಶಪಾಂಡೆಯವರು ಈ ನಿಲ್ದಾಣದ ಹೆಸರನ್ನು ಅಂಬೇವಾಡಿಯಿಂದ

ಮಂಗಳೂರು : ಡಿ.17ರಂದು ಪ್ರಸಾದ್ ನೇತ್ರಾಲಯದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ

ಮಂಗಳೂರಿನ ಉಜ್ಜೋಡಿಯಲ್ಲಿರುವ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಲ್ಲಿ ಲಾಸಿಕ್- ಸ್ಮೈಲ್ ಮತ್ತು ಪಿಆರ್‌ಕೆ ಲೇಸರ್ ಕಣ್ಣಿನ ಉಚಿತ ತಪಾಸಣಾ ಶಿಬಿರವು ಡಿ.17 ರಂದು ನಡೆಯಲಿದೆ. ಈ ಉಚಿತ ಕಣ್ಣಿನ ತಪಾಸಣಾ ಶಿಬಿರವು ಡಿ.17 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1ರ ವರೆಗೆ ನಡೆಯಲಿದೆ.  18 ವರ್ಷ ಪ್ರಾಯದಿಂದ ಸುಮಾರು 50 ವರ್ಷ ಪ್ರಾಯದವರೆಗಿನವರಿಗೆ ಮಾಡಬಹುದಾದ ಅತ್ಯಾಧುನಿಕ ಲೇಸರ್ ಚಿಕಿತ್ಸೆಯ ಮೂಲಕ ಕನ್ನಡಕ ಮತ್ತು ಕಾಂಟಾಕ್ಟ್

ಇಂದು ಲೋಕ ಟೀ ಡೇ

ಡಿಸೆಂಬರ್ 15ನ್ನು 2005ರಿಂದ ಜಾಗತಿಕ ಟೀಡೇ ಆಗಿ ಭಾರತ ಸಹಿತ ಹಲವು ದೇಶಗಳು ಆಚರಿಸುತ್ತಿವೆ. ಚಾ ಬೆಳೆಗೆ ಪೆÇ್ರೀತ್ಸಾಹ, ಗ್ರಾಹಕರ ಮತ್ತು ಚಾ ಕಾರ್ಮಿಕರ, ಮುಖ್ಯವಾಗಿ ಎಲೆ ಕೊಯ್ವ ಮಹಿಳೆಯರ ಒಳಿತನ್ನು ಹುಡುಕುವುದು ಈ ದಿನಾಚರಣೆಯ ವಿಶೇಷವಾಗಿದೆ. ಬಾಂಗ್ಲಾದೇಶ, ಶ್ರೀಲಂಕಾ, ನೇಪಾಳ, ವಿಯೆಟ್ನಾಂ, ಇಂಡೋನೇಶಿಯಾ, ಕೆನ್ಯಾ, ಮಲಾವಿ, ಮಲೇಶಿಯಾ, ಉಗಾಂಡಾ, ತಾಂಜಾನಿಯಾ, ಭಾರತ ಇವು ಮುಖ್ಯವಾಗಿ ಚಾ ದಿನ ಆಚರಿಸುವ ದೇಶಗಳಾಗಿವೆ.

ಮೂಡುಬಿದರೆ: ಆಳ್ವಾಸ್ ವಿರಾಸತ್ – ಸಪ್ತ ಮೇಳಗಳನ್ನು ಉದ್ಘಾಟಿಸಿದ ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ

ಮೂಡುಬಿದಿರೆ : ಲಕ್ಷಾಂತರ ಮಕ್ಕಳನ್ನು ಸತ್ಪ್ರಜೆ ಮಾಡುವ ಆಳ್ವಾಸ್, ವಿರಾಸತ್ ಹಾಗೂ ವಿವಿಧ ಮೇಳಗಳ ಮೂಲಕ ಎಲ್ಲರ ಹೃದಯದ ಕಣ್ಣು ತೆರೆಸುವ ಕೆಲಸ ಮಾಡುತ್ತಿದೆ ಎಂದು ಕರ್ನಾಟಕ ಭಾರತ್ ಸ್ಕೌಟ್ಸ್-ಗೈಡ್ಸ್ ಮುಖ್ಯ ಆಯುಕ್ತ, ಮಾಜಿ ಸಚಿವ ಪಿ. ಜಿ. ಆರ್. ಸಿಂಧ್ಯಾ ಶ್ಲಾಘಿಸಿದರು. ವಿದ್ಯಾಗಿರಿಯಲ್ಲಿ ಅಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಮ್ಮಿಕೊಂಡ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ’೨೯ನೇ ಆಳ್ವಾಸ್ ವಿರಾಸತ್’ ಅಂಗವಾಗಿ ಕೃಷಿಸಿರಿ ಆವರಣದಲ್ಲಿ ಅನ್ವೇಷಣಾತ್ಮಕ ಕೃಷಿಕ,

ಮೂಡುಬಿದಿರೆ: ಆಳ್ವಾಸ್ ವಿರಾಸ್-2023ರ ಮಾಧ್ಯಮ ಕೇಂದ್ರ ಉದ್ಘಾಟನೆ

ಮೂಡುಬಿದಿರೆ : ಡಿ.14.ರಿಂದ 17ರ ವರೆಗೆ ನಡೆಯುವ ‘ಆಳ್ವಾಸ್‌ವಿರಾಸತ್-23’ರ ಮಾಧ್ಯಮ ಕೇಂದ್ರವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ, ವಿರಾಸತ್ ನ ರೂವಾರಿ ಡಾ.ಎಂ.ಮೋಹನ ಆಳ್ವ ಉದ್ಘಾಟಿಸಿದರು. ನಂತರ  ಮಾತನಾಡಿದ ಅವರು  ಸಣ್ಣಮಟ್ಟದಿಂದ ಆರಂಭಗೊಂಡ ಆಳ್ವಾಸ್ ವಿರಾಸತ್ ಇಂದು ಲೋಕ ಪ್ರಸಿದ್ಧವಾಗಿದೆ. ವಿವಿಧತೆಯಲ್ಲಿ ಏಕತೆಯನ್ನು ಸಾರುವ ಸಂದೇಶವನ್ನು  ಹೊಂದಿದೆ. ವಿರಾಸತ್ ಯಶಸ್ಸಿನಲ್ಲಿ ಮಾಧ್ಯಮದ ಪಾತ್ರ ಮಹತ್ತರವಾದುದು ಎಂದರು. ವನ್ಯಜೀವ ಛಾಯಾಗ್ರಾಹಕ,