Home Blog Left SidebarPage 336

ಮೂಡುಬಿದಿರೆ: ಆಳ್ವಾಸ್ ಶಾಲೆಯಲ್ಲಿ ಇಂಡಿಯನ್ ಸೈನ್ಸ್ ಸೊಸೈಟಿ ಸ್ಪರ್ಧೆ: 5 ಮಾದರಿಗಳು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ

ಮೂಡುಬಿದಿರೆ:‘ಆವಿಷ್ಕಾರದ ಫಲ ಸಮುದಾಯಕ್ಕೆ ತಲುಪಿದಾಗ ಸಾರ್ಥಕ’ಎಂದು ಅಮೆರಿಕ ಫ್ಲಾರಿಡಾದ ಹೂಡಿಕೆ ಬ್ಯಾಂಕರ್ ಎಮಿಲಿ ಆಳ್ವ ಹೇಳಿದರು. ಭಾರತೀಯ ವಿಜ್ಞಾನ ಸಮಾಜ(ಇಂಡಿಯನ್ ಸೈನ್ಸ್ ಸೊಸೈಟಿ) ಸಹಯೋಗದಲ್ಲಿ ಆಳ್ವಾಸ್ ಕೇಂದ್ರೀಯ ಶಾಲೆ (ಸಿಬಿಎಸ್‌ಸಿ)ಯಲ್ಲಿ ಶನಿವಾರ ನಡೆದ ‘ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿAಗ್ ಮೇಳ (ಇನ್‌ಸೆಫ್)’ದ ಪ್ರಾದೇಶಿಕ ಮೇಳ ಮತ್ತು ವಿಜ್ಞಾನ

ಮೂಡುಬಿದಿರೆ: ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಧಾನ್ ಎಂ. ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಮೂಡುಬಿದಿರೆ: ಪದವಿ ಪೂರ್ವ ಶಿಕ್ಷಣ ಇಲಾಖಾ ವತಿಯಿಂದ ಬೀದರ್ ನ ಗುರುನಾನಕ್ ಪದವಿ ಪೂರ್ವ ಕಾಲೇಜ್ ನಲ್ಲಿ ನಡೆದ ರಾಜ್ಯ ಮಟ್ಟದ ಟೆಬಲ್ ಟೆನ್ನಿಸ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು , ಇದರಲ್ಲಿ ಮೂಡುಬಿದಿರೆಯ ಕಲ್ಲಬೆಟ್ಟು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯಾದ ಪ್ರಧಾನ್ ಎಂ. (ಪ್ರಥಮ ಪಿ.ಯು.ಸಿ) ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಯ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ

ಕ್ಯಾಪ್ಟನ್ ಪ್ರಾಂಜಲ್ ಬಲಿದಾನ ವ್ಯರ್ಥ ವಾಗದಿರಲಿ….ಡಾ ಚೂಂತಾರು

ದೇಶದ ರಕ್ಷಣೆಗಾಗಿ ತನ್ನ ಜೀವವನ್ನೇ ಪಣಕ್ಕಿಟ್ಟು ಹೋರಾಡಿ ಹುತಾತ್ಮರಾದ ಶ್ರೀ ಕ್ಯಾಪ್ಟನ್ ಪ್ರಾಂಜಲ್ ಅವರು ನಮ್ಮ ಯುವ ಪೀಳಿಗೆಗೆ ಮಾದರಿ. ಅವರ ತ್ಯಾಗ ಮತ್ತು ಬಲಿದಾನ ವ್ಯರ್ಥ ವಾಗದಿರಲಿ. ಭಯೋತ್ಪಾದನೆ ಮತ್ತು ಹಿಂಸಾಚಾರ ವನ್ನು ಬೇರು ಸಮೇತ ಕಿತ್ತು ಹಾಕಿ ಅಗಲಿದ ಕ್ಯಾಪ್ಟನ್ ಪ್ರಾಂಜಲ್ ಅವರ ಆತ್ಮಕ್ಕೆ ಶಾಂತಿ ಸಿಗುವಂತೆ ಮಾಡುವ ಗುರುತರ ಜವಾಬ್ದಾರಿ ನಮ್ಮ ಮೇಲಿದೆ. ನಾವೆಲ್ಲಾ ನಮ್ಮ ಜಾತಿ ಮತ ಧರ್ಮ ಎಂದು ಕಚ್ಚಾಡದೆ, ದೇಶದ ಆಂತರಿಕ ಭದ್ರತೆ ಮತ್ತು ಶಾಂತಿ ಹಾಗೂ

ಮಂಗಳೂರು: ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ, ಮಹಿಳೆಗೆ ಗಂಭೀರ ಗಾಯ

ಮಂಗಳೂರಿನ ಅತ್ತಾವರದ ಐವರಿ ಟವರ್‌ನಲ್ಲಿ ಶಾರ್ಟ್ ಸರ್ಕೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದ್ದು, ಮಹಿಳೆಯೊಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯಲ್ಲಿ ಹಲವು ಮಂದಿಯಿದ್ದು, ಘಟನೆ ಸಂಭವಿಸಿದ ತಕ್ಷಣ ಹೊರಗೆ ಬಂದು ಅಪಾಯದಿಂದ ಪಾರಾಗಿದ್ದಾರೆ. ಆದರೆ ಮಹಿಳೆಯೊಬ್ಬರು ಬಾತ್ ರೂಮ್‌ನಲ್ಲಿದ್ದ ಕಾರಣ ಹೊರಗೆ ಬರಲಾಗದೆ ಸಿಲುಕಿದ್ದರಿಂದ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎಂದು ಹೇಳಲಾಗಿದೆ. ಬೆಂಕಿ ಅನಾಹುತದಿಂದ

ಬೆಳ್ತಂಗಡಿ: ಚಲಿಸುತ್ತಿದ್ದ ಕಾರಿನ ಮೇಲೆ ಕಾಡಾನೆ ದಾಳಿ: ಕಾರಿನಲ್ಲಿದ್ದ ಓರ್ವರಿಗೆ ಗಾಯ

ಬೆಳ್ತಂಗಡಿ ತಾಲೂಕಿನ ನೆರಿಯ-ಕಕ್ಕಿಂಜೆರಸ್ತೆಯ ಬಯಲು ಬಸ್ತಿ ಎಂಬಲ್ಲಿ ಒಂಟಿ ಸಲಗವೊಂದು ಕಾರಿಗೆ ಹಾನಿ ಮಾಡಿ ಓರ್ವನನ್ನು ಗಾಯಗೊಳಿಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ. ಆನೆಯು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದು, ಈ ವೇಳೆ ಆಗಮಿಸಿದ ಆಲ್ಟೋ ಕಾರನ್ನು ಚಾಲಕ ಆತಂಕಗೊಂಡು ನಿಲ್ಲಿಸಿದ್ದಾರೆ. ನಿಂತ ಕಾರಿನ ಬಳಿಗೆ ಆಗಮಿಸಿದ ಆನೆಯು ತನ್ನ ಸೊಂಡಿಲ ಮೂಲಕ ಕಾರನ್ನು ಎತ್ತಿ ಹಾನಿ ಮಾಡಿದೆ. ಕಾರಿನಲ್ಲಿ ಮಗು ಸಹಿತ ಆರು ಮಂದಿ ಪ್ರಯಾಣಿಸುತ್ತಿದ್ದು, ಘಟನೆಯಲ್ಲಿ

🛑ಉರುಳಿದ 80 ವರುಷಗಳ ಬಿಬಿಎಂಪಿ ಶಾಲೆ

ಬೆಂಗಳೂರು ಶಿವಾಜಿನಗರದ ಕುಕ್ಸ್ ರಸ್ತೆಯ ಬಿ ಅಡ್ಡ ರಸ್ತೆಯ ಬಿಬಿಎಂಪಿ ನರ್ಸರಿ ಶಾಲೆ ಮಧ್ಯ ರಾತ್ರಿ ಬಿದ್ದು ಹೋಗಿದೆ. ಮಕ್ಕಳಾಗಲಿ, ಜನರಿಗಾಗಲಿ ಅಪಾಯವಾಗಿಲ್ಲ ಎಂಬುದು ಸಮಾಧಾನಕರ. 80 ವರ್ಷಗಳಷ್ಟು ಹಳೆಯ ಈ ಶಾಲೆಯಲ್ಲಿ ವ 80ರಷ್ಟು ಮಕ್ಕಳು ಇದ್ದರು. ಶಾಲೆಯ ಎಲ್ಲ, ಪರಿಕರ, ಮಕ್ಕಳ ಆಟದ ಸಾಮಾನುಗಳು ಮಾತ್ರವಲ್ಲ ಅಕ್ಕಪಕ್ಕಗಳಲ್ಲಿ ನಿಲ್ಲಿಸಿದ್ದ ಹಲವು ವಾಹನಗಳು ಹಾನಿಗೊಂಡಿವೆ. ಸದ್ಯ ಬಿಬಿಎಂಪಿಯವರು ಮಣ್ಣು ಸರಿಸುವ ಕೆಲಸದಲ್ಲಿ ಈಡುಗೊಂಡಿದ್ದಾರೆ

ವಿಚಿತ್ರ ತಿರುವು ಪಡೆಯುವ ಊರಿನ ಹೆಸರುಗಳು

ಭತ್ತ ಅನ್ನಕ್ಕೆಂದು ಪಿಡಿದರೆ ಬಾಳೆ ಹಣ್ಣದು ಆಯ್ತು ದೈವವೆ! ಮಂಗಳೂರಿನಲ್ಲಿ ಒಂದು ಬಾಳೆ ಬಯ್ಲು (ಬಯಲು) ಇದೆ. ಈ ಭತ್ತ ಬೆಳೆಯುವ ತುಳು ಜಾಗದ ನೆಲದ ಹೆಸರು ಬದಲಾದುದು ಬರೇ ಶತಮಾನದ ಕತೆ. ಬಾರ ಬಯ್ಲ್ ಎಂದರೆ ಭತ್ತದ ಬಯಲು. ರಾಷ್ಟ್ರೀಯ ಹೆದ್ದಾರಿ ಮಾಜೀ 17 ಹಾಲಿ 66 ಇದರ ನಡುವೆ ಹೋಗಿ, ಈಗ ಇಲ್ಲಿ ಕಟ್ಟಡಗಳು ಬೆಳೆದಿವೆ. ತುಳು ಕನ್ನಡದಲ್ಲಿ ರ ಳ ಲ ಬದಲಾವಣೆ ಬಹಳ ಇವೆ. ತುಳು ಶಬ್ದಗಳಾದ ಕೋರಿ, ಕೆರು, ತರೆ, […]

ಮಂಗಳೂರಿನಲ್ಲಿ `ಕ್ರಿಸ್ತ ಜಯಂತಿ ಜುಬಿಲಿ ಸಂಭ್ರಮಾಚರಣೆ

ಜಗತ್ತಿನಾದ್ಯಂತ ಕ್ರೈಸ್ತ ಧರ್ಮಸಭೆಯಲ್ಲಿ ಯೇಸು ಕ್ರಿಸ್ತರ ಜನನದ 2025 ವರ್ಷಗಳ ಸ್ಮರಣಾರ್ಥ `ಕ್ರಿಸ್ತ ಜಯಂತಿ ಜುಬಿಲಿ2025′ ಸಂಭ್ರಮಾಚರಣೆಯ ಪೂರ್ವ ಸಿದ್ಧತೆಗಳು ನಡೆಯುತ್ತಿದ್ದು, ಮಂಗಳೂರಿನ ರೋಮನ್ ಕೆಥೊಲಿಕ್ ಧರ್ಮಕ್ಷೇತ್ರದಲ್ಲೂ ಎರಡು ವರ್ಷಗಳ ಪೂರ್ವ ತಯಾರಿಗಳಿಗೆ ಬಿಷಪ್ ಅ.ವಂ. ಡಾ.ಪೀಟರ್ ಪಾವ್ಲ್ ಸಲ್ಡಾನ ಚಾಲನೆ ನೀಡಿದರು. ನಗರದ ಹೋಲಿ ರೋಜರಿ ಕೆಥೆಡ್ರಲ್‍ನಲ್ಲಿ `ಭರವಸೆಯ ಯಾತ್ರಿಕರು’ ಎಂಬ ಧ್ಯೇಯವನ್ನು ಒಳಗೊಂಡ ಜುಬಿಲಿ ಲಾಂಛನದ

ಸಿಎಂ ಅಪರ ಮುಖ್ಯ ಕಾರ್ಯದರ್ಶಿಯಾಗಿ ಎಲ್.ಕೆ ಅತೀಖ್ ನೇಮಕ

ರಾಜ್ಯ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಎಲ್ ಕೆ ಅತೀಖ್ ಅವರನ್ನು ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಯಾಗಿ ತಕ್ಷಣ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಈವರೆಗೆ ಆ ಹುದ್ದೆಯಲ್ಲಿದ್ದ ಡಾ. ರಜನೀಶ್ ಗೋಯಲ್ ಅವರನ್ನು ಆ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ. ಎಲ್ ಕೆ ಅತೀಖ್ ಅವರು ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿಯೂ ಮುಂದಿನ ಆದೇಶದವರೆಗೆ ಹೆಚ್ಚುವರಿ ಹೊಣೆ ನಿರ್ವಹಿಸಲಿದ್ದಾರೆ.

ಕಾಂತಾರ ಚಾಪ್ಟರ್-1 ಫಸ್ಟ್ ಲುಕ್, ಟೀಸರ್ ಬಿಡುಗಡೆ

ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾದ ಪ್ರೀಕ್ವೆಲ್ ಕಾಂತಾರ ಚಾಪ್ಟರ್ ಫಸ್ಟ್ ಲುಕ್ ಹಾಗೂ ಟೀಸರ್ ಬಿಡುಗಡೆಯಾಗಿದೆ. ಕನ್ನಡ, ಇಂಗ್ಲಿಷ್, ಹಿಂದಿ, ತಮಿಳು, ತೆಲುಗು, ಮಲಯಾಳಂ ಹಾಗೂ ಬಂಗಾಳಿ ಭಾಷೆಯಲ್ಲಿ ಬಿಡುಗಡೆಯಾಗಿದ್ದು ಹೊಂಬಾಳೆ ಫಿಲ್ಮ್ಸ್ ತನ್ನ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಹಂಚಿಕೊಂಡಿದೆ. ಯುಟ್ಯೂಬ್‍ನಲ್ಲಿ ಟೀಸರ್ ಬಿಡುಗಡೆಯಾಗಿದ್ದು ಕಾಂತಾರ ಪ್ರೀಕ್ವೆಲ್ ಕತೆ ಕದಂಬರ ಕಾಲಕ್ಕೆ ಕರೆದುಕೊಂಡು ಹೋಗಲಿದೆ ಎಂದು