ಬಂಟ್ವಾಳ: ಮೂಲತಃ ತಾಲೂಕಿನ ಕುಕ್ಕಿಪ್ಪಾಡಿ ಗ್ರಾಮದ ಯುವಕನೋರ್ವ ಇಂಡೋನೇಷಿಯಾದ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾನೆ. ತಾಲೂಕಿನ ಕುಕ್ಕಿಪ್ಪಾಡಿ ಹುಣಸೆ ಬೆಟ್ಟು ನಿವಾಸಿ ಮಹಾಬಲ ಶೆಟ್ಟಿ ಎಂಬವರ ಪುತ್ರ ಧನೇಶ್ ಶೆಟ್ಟಿ ಇಂಡೋನೇಷಿಯಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದವರು. ವಿವಾಹಿತರಾಗಿರುವ ಧನೇಶ್ ಅವರು ತನ್ನ ಪತ್ನಿಯೊಂದಿಗೆ ಇಂಡೋನೇಷಿಯದ್ದಲ್ಲಿದ್ದು
ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಮಂಗಳೂರಿಗೆ ಆಗಮಿಸಿದ ಬಿ. ವೈ ವಿಜಯೇಂದ್ರ ಅವರಿಗೆ ಅದ್ದೂರಿ ಸ್ವಾಗತ ಕೋರಲಾಯಿತು. ಮಂಗಳೂರು ವಿಮಾನ ನಿಲ್ದಾಣದಿಂದ ನೇರವಾಗಿ ನಗರಕ್ಕೆ ಆಗಮಿಸಿದ ಅವರು, ತೆರೆದ ವಾಹನದ ಮೂಲಕ ನಗರದ ಬಂಟ್ಸ್ ಹಾಸ್ಟೆಲ್‍ನಿಂದ ಸಿವಿ ನಾಯಕ್ ಹಾಲ್ ವರೆಗೆ ಮೆರವಣಿಗೆಯಲ್ಲಿ ಸಾಗಿ ಬಂದರು. ಈ ವೇಳೆ ಬಿಜೆಪಿಯ ಮಹಿಳಾ ಕಾರ್ಯಕರ್ತರು ಆರತಿ ಬೆಳಗಿ, ತಿಲಕ ಹಚ್ಚಿ ಬರಮಾಡಿಕೊಂಡರು, ಜೊತೆಗೆ ಸೇಬು ಹಣ್ಣಿನ ಹಾರದ ಮೂಲಕ ಭರ್ಜರಿ ಸ್ವಾಗತ ಮಾಡಿದರು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ), ಪೆÇಲೀಸ್ ಸಬ್ ಇನ್ಸ್‍ಪೆಕ್ಟರ್ ನೇಮಕಾತಿಯ ಮರು ಪರೀಕ್ಷೆಯನ್ನು ಡಿಸೆಂಬರ್ 23ರಂದು ಬೆಂಗಳೂರಿನಲ್ಲಿ ನಡೆಸಲಿದೆ. ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪಿಎಸ್‍ಐ ಮರು ಪರೀಕ್ಷೆ ನಡೆಸುತ್ತಿದ್ದು, ಈ ಹಿಂದಿನ ಪರೀಕ್ಷೆಗೆ ಅರ್ಹತೆ ಪಡೆದವರು ಈ ಮರು ಪರೀಕ್ಷೆಗೂ ಅರ್ಹತೆ ಪಡೆಯುತ್ತಾರೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.2021ರ ಜನವರಿ 21ರಂದು ಪೆÇಲೀಸ್ ಇಲಾಖೆಯಿಂದ 545
ಉಡುಪಿಯ ನೇಜಾರುವಿನಲ್ಲಿ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಯನ್ನು ಪೆÇಲೀಸರು ಉಡುಪಿ ಪ್ರಧಾನ ಸಿವಿಲ್ ಹಾಗೂ ಜೆಎಂಎಫ್‍ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯ ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ. ಬಂಧಿತ ಆರೋಪಿ ಪ್ರವೀಣ್ ನನ್ನು ನ.15ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಪೊಲೀಸರು, ಗಂಭೀರ ಪ್ರಕರಣದ ಹಿನ್ನೆಲೆಯಲ್ಲಿ ಹೆಚ್ಚಿನ
ಅಮೆರಿಕ ನೌಕಾಪಡೆಯ ಬೃಹತ್ ಕಣ್ಗಾವಲು ವಿಮಾನವೊಂದು ರನ್‍ವೇಯಲ್ಲಿ ನಿಯಂತ್ರಣ ಕಳೆದುಕೊಂಡು ಸಮುದ್ರಕ್ಕೆ ಬಿದ್ದ ಘಟನೆ ನಡೆದಿದೆ. ವಿಮಾನದಲ್ಲಿ 9 ಜನರಿದ್ದು, ಎಲ್ಲರೂ ಈಜಿ ದಡ ತಲುಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿಮಾನ ಸಮುದ್ರದಲ್ಲಿ ತೇಲುತ್ತಿದ್ದ ದೃಶ್ಯ ದೊರೆತಿದೆ. ಹವಾಯಿ ಮೆರೈನ್ ಕಾರ್ಪ್ಸ್ ಬೇಸ್‍ನಲ್ಲಿ ಈ ಘಟನೆ ನಡೆದಿದೆ. ಈ ಅಪಘಾತವನ್ನು ಅಧಿಕಾರಿಗಳು ಖಚಿತಪಡಿಸಿದ್ದಾರೆ.ಘಟನೆ ತಿಳಿದ ತಕ್ಷಣ ಕೋಸ್ಟ್ ಗಾರ್ಡ್ ಸಿಬ್ಬಂದಿ ಸ್ಥಳಕ್ಕೆ
ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ಸುರಕ್ಷತೆ ಮತ್ತು ರಕ್ಷಣೆಗಾಗಿ ಪ್ರಾರ್ಥಿಸಿ ಖ್ಯಾತ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಒಡಿಶಾದ ಪುರಿ ಬೀಚ್‍ನಲ್ಲಿ ಮರಳು ಕಲಾಕೃತಿಯನ್ನು ರಚಿಸಿದ್ದಾರೆ.`ಕಾರ್ಮಿಕರು ಆದಷ್ಟು ಬೇಗ ಸುರಕ್ಷಿತವಾಗಿ ಹೊರಬರಲು ನಾವು ಜಗನ್ನಾಥನನ್ನು ಪ್ರಾರ್ಥಿಸುತ್ತಿದ್ದೇವೆ. ಸಿಕ್ಕಿಬಿದ್ದಿರುವ 41 ಕಾರ್ಮಿಕರಲ್ಲಿ 5 ಮಂದಿ ಒಡಿಶಾದವರಿದ್ದಾರೆ. ಎಲ್ಲ ಕಾರ್ಮಿಕರ ರಕ್ಷಣೆಗಾಗಿ ನಾವೆಲ್ಲರೂ ಒಗ್ಗೂಡಬೇಕು
ಸುರತ್ಕಲ್‍ನ ನಿವಾಸಿಯಾದ ಕಿರಣ್ ದೇವಾಡಿಗ ಎಂಬವರು ಅಪರೂಪದ ಎಲುಬು ಕ್ಯಾನ್ಸರ್‍ಗೆ ತುತ್ತಾಗಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ ಚಿಕತ್ಸೆಗಾಗಿ ಸಾವಿರಾರು ರೂಪಾಯಿ ಖರ್ಚಾಗಿದ್ದು, ಕಿರಣ್ ಮನೆಯವರು ದಾನಿಗಳ ಸಹಾಯದ ನಿರೀಕ್ಷೆಯಲ್ಲಿದ್ದಾರೆ. ಸೋಮನಾಥ್ ದೇವಾಡಿಗ ಅವರು ಹುಟ್ಟು ಅಂಗವಿಕಲರಾಗಿದ್ದು, ವೃದ್ದಾಪ್ಯ ಹಾಗೂ ಸಂಕಷ್ಠದ ಸಮಯದಲ್ಲಿ ತನ್ನ ಒಬ್ಬನೇ ಮಗನಾದ 28 ವರ್ಷ ಪ್ರಾಯದ ಕಿರಣ್ ದೇವಾಡಿಗ ಅವರು
ಬರ ನಿರ್ವಹಣೆಯ ಬಗ್ಗೆ ಚರ್ಚಿಸಬೇಕಾದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಸಚಿವರು ಮುಂದಿನ ಲೋಕಸಭಾ ಚುನಾವಣೆ, ನಿಗಮ ಮಂಡಳಿ ನೇಮಕಾತಿಯ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿ ಮಂಗಳೂರಿಗೆ ಆಗಮಿಸಿದ ಅವರು ನಗರದ ಬಿಜೆಪಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು. ಅಭಿವೃದ್ಧಿ ಯೋಜನೆಗಳಿಗೆ ಸರಕಾರದಿಂದ
ಬ್ರಹ್ಮಾವರ : ಕರಾವಳಿಯಲ್ಲಿ ಈ ಬಾರಿ ಭತ್ತದ ಬೇಸಾಯ ಮಾಡಿದ ರೈತರಲ್ಲಿ ಕೆಲವು ಭಾಗದಲ್ಲಿ ಉತ್ತಮ ಇಳುವರಿ ಬಂದರೂ ಗದ್ದೆಯಿಂದ ಮನೆಗೆ ತರಲು ಅಕಾಲಿಕ ಮಳೆರಾಯ ತೊಂದರೆ ಕೊಟ್ಟರೂ, ದೀಪಾವಳಿಯ ಬಳಿಕ ಕಟಾವಿಗೆ ವೇಗ ಹೆಚ್ಚಿದೆ. ಬಹತೇಕ ಕೃಷಿಕರು ಕೂಲಿ ಆಳುಗಳ ಕೊರತೆಯಿಂದ ಯಾಂತ್ರಿಕೃತ ಕಟಾವಿಗೆ ಹೊಂದಿಕೊಂಡ ಕಾರಣ, ನದಿ ತೀರದ ತಗ್ಗು ಪ್ರದೇಶದ ಗದ್ದೆಯಲ್ಲಿ ನೀರು ತುಂಬಿಕೊಂಡ ಕಟಾವು ಯಂತ್ರಗಳು ಗದ್ದೆಯಲ್ಲಿ ಸಂಚರಿಸಲು ಆಗದೆ ಮತ್ತಷ್ಟು ವಿಳಂಬವಾಗಿದೆ. ಬ್ರಹ್ಮಾವರ ಭಾಗದ
`ಬೆಂಗಳೂರು ಕಂಬಳ’ದಲ್ಲಿ ಭಾರತ ಕುಸ್ತಿ ಫೆಡರೇಷನ್ ಮಾಜಿ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್‍ಭೂಷಣ್ ಶರಣ್ ಸಿಂಗ್ ಭಾಗವಹಿಸುವುದಕ್ಕೆ ವಿರೋಧ ವ್ಯಕ್ತವಾದ ಬೆನ್ನಲ್ಲೇ ಸಂಘಟಕರು ಅವರ ಹೆಸರನ್ನು ಆಹ್ವಾನ ಪತ್ರಿಕೆಯಿಂದ ಕೈಬಿಟ್ಟಿದ್ದಾರೆ. ನ.25 ಮತ್ತು 26ರಂದು ಕಂಬಳ ನಡೆಯಲಿದ್ದು, 25ರಂದು ನಡೆಯುವ ಸಭಾ ಕಾರ್ಯಕ್ರಮದಲ್ಲಿ ಕುಸ್ತಿಪಟುಗಳನ್ನು ಬ್ರಿಜ್‍ಭೂಷಣ್ ಸನ್ಮಾನಿಸಬೇಕಿತ್ತು. ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಅವರ




























