ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ದರ್ಗಾದ ಬಾಗಿಲಿನ ಬೀಗ ಮುರಿದಿರುವ ಕಳ್ಳರು ಒಳಗಿದ್ದ ಹಣವನ್ನು ಕದ್ದು ಪರಾರಿಯಾಗಿರುವ ಘಟನೆ ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಸೋಮವಾರ ಬೆಳಗಿನ ಜಾವ ಸುಮಾರು 2.20ರ ವೇಳೆಗೆ ಇಬ್ಬರು ಕಳ್ಳರು ಬಾಗಿಲಿನ ಬೀಗ ಮುರಿದು ಒಳ ನುಗ್ಗಿ ಹಣವನ್ನು ಕಳ್ಳತನ ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ
ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡೆಮಿಯಿಂದ ಕೊಡಮಾಡುವ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ನಟಿ ರೂಪ ವರ್ಕಾಡಿ ಅವರು ಭಾಜನರಾಗಿದ್ದಾರೆ. ಕನ್ನಡ ಭಾಷೆ, ಸಾಹಿತ್ಯ, ಸಂಸ್ಕøತಿ ಮತ್ತು ಕಲೆಗಳ ಅಭಿವೃದ್ಧಿಗಾಗಿ ಅವಿರತ ಶ್ರಮಿಸುತ್ತಿರುವ ಗಡಿನಾಡ ಸಾಹಿತ್ಯ. ಸಾಂಸ್ಕøತಿಕ ಅಕಾಡೆಮಿ ವತಿಯಿಂದ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಕಾಸರಗೋಡಿನಲ್ಲಿ ನಡೆಯಿತು. ಚಲನಚಿತ್ರ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ನಟಿ ರೂಪ ವರ್ಕಾಡಿ ಅವರು
ಕಾರ್ಕಳದ ಪುಲ್ಕೇರಿ ಭವಾನಿ ವೃತ್ತದ ಬಳಿ ಇರುವ ಶಬ್ಬೀರ್ ಎಂಬವರ ಹಣ್ಣು ಹಂಪಲಿನ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದ ಅಂಗಡಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಅಪಾರ ಪ್ರಮಾಣದ ಹಣ್ಣು ಹಂಪಲು ಹಾಗೂ ಮಾಪನ ಉಪಕರಣ ಮತ್ತು ಸಂಪೂರ್ಣ ಅಂಗಡಿ ಬೆಂಕಿಗೆ ಆಹುತಿಯಾಗಿದೆ. ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಬೆಂಕಿಯನ್ನು ನಂದಿಸಿರುತ್ತಾರೆ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲೆಯಾಗಿದ್ದು ತನಿಖೆ ಮಾಡುತ್ತಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿಪೂರ್ವಶಿಷ್ಟ ಸಂಪ್ರದಾಯ ಪ್ರಕಾರ ಚಂಪಾಷಷ್ಠಿ ಮಹೋತ್ಸವವು ನಡೆಯಲಿದೆ. ಇದೇ ಶೋಭಕೃತ್ ನಾಮ ಸಂವತ್ಸರದ ಕಾರ್ತಿಕ ಬಹುಳ ದ್ವಾದಶಿ ಆದಿತ್ಯವಾರ 10-12-2023 ರಿಂದ ಲಾಗ್ಯಾತು ಮಾರ್ಗಶಿರ ಶುದ್ಧ ದ್ವಾದಶಿ ಆದಿತ್ಯವಾರ 24-12-2023ರ ವರೆಗೆ ಈ ಕೆಳಗಿನ ವಿವರದಂತೆ ವಾರ್ಷಿಕ ಜಾತ್ರಾ ಉತ್ಸವಾದಿಗಳು ನಡೆಯಲಿದೆ. ಭಗವತ್ಸಂಕಲ್ಪ ಪ್ರಕಾರ ನಡೆಯತಕ್ಕ ಈ ಮಹೋತ್ಸವಗಳಿಗೆ ಭಕ್ತರು
‘ಪಡು ತಿರುಪತಿ’ಎಂದೇ ಕೀರ್ತಿ ಪಡೆದ ಕಾರ್ಕಳದಲ್ಲಿ ಸೂರ್ಯೋದಯಕ್ಕೂ ಮೊದಲು ‘ವಿಶ್ವರೂಪ ದರ್ಶನ’ ನೆರವೇರಿದೆ. ಕಾರ್ಕಳದ ಭಕ್ತರು ಜಾತಿ, ಮತ, ಪಂಥಗಳ ಭೇದವಿಲ್ಲದೆ ಭಾಗವಹಿಸುವ ಉತ್ಸವ ಇದು. ಕಾರ್ತಿಕ ಮಾಸ ಬಂತೆಂದರೆ ಪಂಡರಾಪುರದ ವಿಠಲ ದೇವಸ್ಥಾನಕ್ಕೆ ಸಾವಿರಾರು ಭಜಕರು ಭಾರತದ ಮೂಲೆಮೂಲೆಗಳಿಂದ ಬಂದು ಸೇರಿ ಕುಣಿತ ಭಜನೆ ಮಾಡುವುದು, ವಿಠಲ ವಿಠಲ ಎಂದು ತಾಳ ಬಡಿಯುತ್ತಾ ಹಾಡುವುದು ತುಂಬಾ ಅದ್ಭುತ. ಆಷಾಢ, ಕಾರ್ತಿಕ ಮಾಸಗಳಲ್ಲಿ
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಪೈವಳಿಕೆಗೆ ಆಗಮಿಸಿದ್ದ ನವ ಕೇರಳ ಯಾತ್ರೆಗೆ ಕೇರಳದ ಸಿಎಂ ಪಿಣರಾಯಿ ವಿಜಯ್ ಅವರು ಚಾಲನೆ ನೀಡಿದರು. ರಾಜ್ಯ ಸರಕಾರದ ಅಭಿವೃದ್ದಿಯನ್ನು ಕೊಂಡಾಡಿದ ಮುಖ್ಯಮಂತ್ರಿಯವರು ಕೇಂದ್ರ ಸರಕಾರವನ್ನು ಹಾಗೂ ಯುಡಿಎಫ್‍ನ ಬಗ್ಗೆ ಅಸಮಧಾನ ವ್ಯಕ್ತಪಡಿಸಿ, ಅವರ ವಿರುದ್ಧ ಗಟ್ಟಿಯಾದ ಧ್ವನಿಯಲ್ಲಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಪ್ರತಿಯೊಂದು ವಿಧಾನ ಸಭಾ ಕ್ಷೇತ್ರದಲ್ಲೂ ರಾಜ್ಯ ಸರಕಾರ ಜಾರಿಗೆ ತಂದ ಯೋಜನೆಗಳು ಹಾಗೂ
ಮಂಗಳೂರು: ಡಿಜಿಟಲ್ ಬಸ್ ಮೂಲಕ ಗ್ರಾಮೀಣ ಭಾಗದಲ್ಲಿ ಸರಕಾರಿ ಶಾಲಾ ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣ ಒದಗಿಸುವ ‘ಕ್ಲಾಸ್ ಆನ್ ವ್ಹೀಲ್ಸ್’ ಡಿಜಿಟಲ್ ಕಂಪ್ಯೂಟರ್ ಸಾಕ್ಷರತಾ ಬಸ್ ಯೋಜನೆ ಸರಕಾರಕ್ಕೂ ಪ್ರೇರಣಾದಾಯಕ ಎಂದು ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಮೆಚ್ಚುಗೆ ವ್ಯಕ್ತಪಡಿಸಿದರು. ನಗರದ ಜೆಪ್ಪು ಸೈಂಟ್ ಜೋಸೆಫ್ಸ್ ಸೆಮಿನರಿ ಬಳಿಯ ಮರಿಯ ಜಯಂತಿ ಹಾಲ್ನಲ್ಲಿ ಶನಿವಾರ ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ನ ದಶಮಾನೋತ್ಸವದ ನಿಮಿತ್ತ ‘ಕ್ಲಾಸ್ ಆನ್
ನಾನು ಎಲ್ಲರಿಗೂ ಸೇರಿರುವ ವಿಧಾನ ಸಭಾಧ್ಯಕ್ಷ. ಈ ಸ್ಥಾನವನ್ನು ಯಾವುದೇ ರಾಜಕೀಯ ಜಾತಿ ಧರ್ಮದ ಆಧಾರದಲ್ಲಿ ನೋಡುವಂತಿಲ್ಲ. ಇದು ಎಲ್ಲವನ್ನೂ ಮೀರಿ ನೋಡಬೇಕಾದ ಸಂವಿಧಾನ ಬದ್ಧವಾದ ಸ್ಥಾನಮಾನ. ಎಲ್ಲರೂ ಗೌರವ ಕೊಡುವುದು ನನಗಲ್ಲ. ಸಂವಿಧಾನ ಪೀಠಕ್ಕೆ, ಸಭಾಧ್ಯಕ್ಷ ಸ್ಥಾನಕ್ಕೆ’ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮುಸ್ಲಿಂ ಸ್ಪೀಕರ್‍ಗೆ ಬಿಜೆಪಿ ಶಾಸಕರು ನಮಸ್ಕರಿಸುವಂತೆ
ಮೂಡುಬಿದಿರೆ: ವಾಣಿಜ್ಯ ಬ್ಯಾಂಕ್‍ಗಳ ಲಾಭದ ಪಾಲು ಗ್ರಾಹಕರಿಗೆ ಸಿಗುವುದು ಕಡಿಮೆ. ಆದರೆ ಸಾಮಾಜಿಕ ಕಳಕಳಿ ಹೊಂದಿರುವ ಸಹಕಾರಿ ಬ್ಯಾಂಕ್‍ಗಳು ತಮ್ಮ ಲಾಭದಲ್ಲಿ ಹೆಚ್ಚಿನ ಪಾಲನ್ನು ಸದಸ್ಯರ ಹಿತಕ್ಕೋಸ್ಕರ ವಿನಿಯೋಗಿಸುತ್ತಿವೆ ಎಂದು ಎಸ್‍ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್ ರಾಜೇಂದ್ರ ಕುಮಾರ್ ಹೇಳಿದರು. ಅವರು ಎಂಸಿಎಸ್ ಸೊಸೈಟಿಯಲ್ಲಿ ನಡೆಯುತ್ತಿರುವ ಸಹಕಾರ ಸಪ್ತಾಹದ ಮೂರನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗಂಗೊಳ್ಳಿಯಲ್ಲಿ ಕಳೆದ ಸೋಮವಾರ ನಡೆದಿದ್ದ ಬೋಟು ಅಗ್ನಿ ದುರಂತ ಪ್ರದೇಶದಲ್ಲಿ ವಾಸವಾಗಿರುವ ಮಹಿಳೆಯರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಮನವಿಯನ್ನು ಸಲ್ಲಿಸಿದರು. ಈ ಪ್ರದೇಶದಲ್ಲಿ ಯಾವುದೇ ರಾಸಾಯನಿಕ ವಸ್ತುಗಳನ್ನು ಬಳಸಿ ಯಾಂತ್ರಿಕ ದೋಣಿಯ ನಿರ್ಮಾಣಕ್ಕೆ ಅವಕಾಶ ನೀಡದಂತೆ ಒತ್ತಾಯಿಸಿದರು. ಕಳೆದ ತುಂಬಾ ಸಮಯದಿಂದ ಕೊಳಚೆ ತ್ಯಾಜ್ಯವನ್ನು ವಿಲೇವಾರಿ ಮಾಡದೇ ಸ್ಥಳೀಯ ನಾಗರಿಕರಿಗೆ ತುಂಬಾ ತೊಂದರೆಯಾಗಿದೆ. ಅಲ್ಲದೇ ಇಲ್ಲಿ ರಾಸಾಯನಿಕ ಮಿಶ್ರಿತ ಯಾಂತ್ರೀಕೃತ




























