ಕುಂದಾಪುರ ಸಲೀಂ ಅಲಿ ರಸ್ತೆಯ ನಿವಾಸಿ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತ ರಾಜೇಶ್ ಬೆಳ್ಕೆರೆ ಮನೆ ಮೇಲೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ದಾಳಿ ನಡೆದಿದೆ. ರಾಜೇಶ್ ಬೆಳ್ಕೆರೆಗೆ ಸಂಬಂಧಪಟ್ಟಂತೆ ಮೂರು ಕಡೆ ತಪಾಸಣೆ ನಡೆಸಲಾಗುತ್ತಿದೆ. ಸೋಮವಾರ ಬೆಳಿಗ್ಗೆ ಕುಂದಾಪುರದ ಸಲೀಂ ಅಲಿ ರಸ್ತೆಯಲ್ಲಿರುವ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು ಅಧಿಕಾರಿಗಳು ಪರಿಶೀಲನೆ
ಕಡಬ :ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಸಾರ್ಟಿಸಿ ಬಸ್ಸೊಂದು ಪಲ್ಟಿಯಾದ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಕೋಡಂದೂರು ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮಳೆ ಬರುತ್ತಿದ್ದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಚರಂಡಿಗೆ ಪಲ್ಟಿಯಾಗಿದೆ. ಘಟನೆಯಲ್ಲಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಪ್ರತಿಷ್ಟಿತ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನ ‘ಪಾರ್ಥ’ ಪುರುಷರ ಆಭರಣಗಳ ಅತೀ ದೊಡ್ಡ ಹಾಗೂ ವಿಶೇಷ ಸಂಗ್ರಹವನ್ನು ನಾಯರ್ ಕನ್ಸ್ಟ್ರಕ್ಷನ್ ಮಾಲಕರಾದ ಸೂರಜ್ ನಾಯರ್ ಅವರು ಅನಾವರಣಗೊಳಿಸಿದರು. ಬಳಿಕ ಮಾತನಾಡಿ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಉತ್ತಮ ಸೇವೆ ಹಾಗೂ ವಿಫುಲವಾದ ಸಂಗ್ರಹ ಇದೆ. ನಾನು ಇಲ್ಲಿನ ಸಂತೃಪ್ತ ಗ್ರಾಹಕನಾಗಿದ್ದೇನೆ. ‘ಪಾರ್ಥ ಸಂಗ್ರಹದಿಂದ ಜಿಎಲ್ ಸಂಸ್ಥೆಯು ಯಶಸ್ವಿಯಾಗಲಿ ಎಂದು ಶುಭಹಾರೈಸಿದ್ರು. ಈ ವೇಳೆ ಜಿಎಲ್
ಕೇರಳ ಎರ್ನಾಕುಲಂನ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಸ್ಪೋಟ ಹಿನ್ನೆಲೆಯಲ್ಲಿ ಕರ್ನಾಟಕ ಗಡಿಭಾಗದಲ್ಲಿ ಅಲರ್ಟ್ ಆಗಿರಲು ಸೂಚನೆ ನೀಡಲಾಗಿದೆ. ಈ ಬಗ್ಗೆ ಗಡಿಭಾಗದಲ್ಲಿ ಅಲರ್ಟ್ ಇರುವಂತೆ ಡಿಜಿ, ಐಜಿಯವರಿಗೆ ಸೂಚನೆ ನೀಡಲಾಗಿದೆ. ಅಲ್ಲದೆ ಕೇರಳ ಗಡಿ ಭಾಗದಲ್ಲಿ ಭದ್ರತೆ, ನಿಗಾ ಹೆಚ್ಚಿಸಲಾಗುವುದು ಎಂದು ಮಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಅವರು ಮಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ದಸರಾ ಸಂದರ್ಭದಲ್ಲಿ ಮೈಸೂರು, ಕೊಡಗು
ಕೊಚ್ಚಿಯ ಕಲಮಸ್ಸೆರಿ ಪ್ರದೇಶದಲ್ಲಿ ನಡೆಯುತ್ತಿದ್ದ ಯೆಹೋವನ ಪ್ರಾರ್ಥನಾ ಸಭೆಯ ವೇಳೆ ಸಂಭವಿಸಿದ ಸರಣಿ ಸ್ಫೋಟದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 36 ಮಂದಿ ಗಾಯಗೊಂಡಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಪೋಟಕ್ಕೆ ಕಾರಣ ತಿಳಿದು ಬಂದಿಲ್ಲ, ಪೊಲೀಸರು, ಅಗ್ನಿಶಾಮಕ ದಳ ಹಾಗೂ ಆರೋಗ್ಯ ಸಿಬ್ಬಂದಿ ಸ್ಥಳದಲ್ಲಿ ಬೀಡು ಬಿಟ್ಟು ಪರಿಹಾರ ಕಾರ್ಯಾಚರಣೆ ಕೈಗೊಂಡಿದ್ದಾರೆ ಎಂದು ಸಚಿವ
ಬಜ್ಪೆ ಪೊಲೀಸ್ ಠಾಣೆಯ ನೂತನ ಕಟ್ಟಡವನ್ನು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ ಉದ್ಘಾಟಿಸಿದರು. ಈ ಸಂದರ್ಭ ಮಾಜಿ ಸಚಿವ ಬಿ.ರಮಾನಾಥ ರೈ, ಶಾಸಕ ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಶಾಸಕ ಜೆ.ಆರ್.ಲೋಬೊ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಇನಾಯತ್ ಅಲಿ, ಮಿಥುನ್ ರೈ, ಡಿಐಜಿ ಡಾ. ಚಂದ್ರಗುಪ್ತ, ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಡಿಸಿಪಿ ದಿನೇಶ್ ಕುಮಾರ್, ಮನೋಜ್ ಕುಮಾರ್, ನಿರೀಕ್ಷಕ ಸಂದೀಪ್ ಮತ್ತಿತರರು
ಮಂಗಳೂರಿನ ಕೊಟ್ಟಾರದಲ್ಲಿರುವ ಶ್ರೀ ವಿದ್ಯಾ ಸರಸ್ವತಿ ಕ್ಷೇತ್ರದಲ್ಲಿ ನವರಾತ್ರಿ ಪೂಜೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನೆರವೇರಿತು. ಶ್ರೀ ವಿದ್ಯಾ ಸರಸ್ವತಿ ಕ್ಷೇತ್ರದಲ್ಲಿ ನವರಾತ್ರಿ ಪೂಜೆ, ಅಭಿಷೇಕ, ಅಲಂಕಾರ ಪೂಜೆ, ಹೂವಿನ ಪೂಜಾ, ಅಕ್ಷರಭ್ಯಾಸ ಪೂಜೆ, ಮಹಿಳಾ ಬೃಂದದಿಂದ ಸರಸ್ವತಿ ಕೀರ್ತನೆ, ಮೃತ್ಯುಂಜಯ ಶಾಂತಿ ಹೋಮ, ನವಗ್ರಹ ಶಾಂತಿ ಹೋಮ, ಮಹಿಳಾ ವೃಂದದಿಂದ ಕುಂಕುಮರ್ಚನೆ ಸೇವೆ ಹಾಗೂ ಸಪ್ತಸ್ವರ ಬಳಗದವರಿಂದ ಭಕ್ತಿಗೀತೆ, ರಾತ್ರಿ ದಿನ ಅನ್ನ ಸಂತರ್ಪಣೆ ಬಹಳ
ಬಂಟ್ವಾಳ: ಸಜೀಪಮುನ್ನೂರು ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿಯು ಅಧಿಕಾರ ದುರುಪಯೋಗ ಪಡಿಸುತ್ತಿದ್ದು ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ ಕರ್ತವ್ಯದಿಂದ ವಜಾಗೊಳಿಸುವಂತೆ ಸಜೀಪಮುನ್ನೂರು ಗ್ರಾ.ಪಂ.ನ ಎಸ್‌ಡಿಪಿಐ ಬೆಂಬಲಿತ ಸದಸ್ಯರು ಆಗ್ರಹಿಸಿದ್ದಾರೆ. ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿಯಲ್ಲಿ ಸ್ಥಳೀಯ ನಾಯಕ ಮುಬಾರಕ್ ಕಾರಾಜೆ ಮಾತನಾಡಿ ಎಸ್‌ಡಿಪಿಐ ಬೆಂಬಲಿತ ೮ ಮಂದಿ ಸದಸ್ಯರನ್ನು ಪಂಚಾಯತಿ ಕಾರ್ಯ ಚಟುವಟಿಕೆಯಲ್ಲಿ ಯಾವುದೇ
ಹಾಸನ: ನವೆಂಬರ್ 2ರಿಂದ ಆರಂಭವಾಗುವ ಹಾಸನಾಂಬೆ ಜಾತ್ರಾ ಮಹೋತ್ಸವ ಹಿನ್ನಲೆಯಲ್ಲಿ ಐಜಿ ಡಾ. ಬೋರಲಿಂಗಯ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾಸನ ಜಿಲ್ಲೆಯ ಡಿಸಿ ಸಿ. ಸತ್ಯಭಾಮ ಮತ್ತು ಎಸ್ಪಿ ಮಹಮದ್ ಸುಜೀತಾ ಹಾಗೂ ಉಪವಿಭಾಗಧಿಕಾರಿ ಮಾರುತಿ ಅವರಿಂದ ಮಾಹಿತಿ ಪಡೆದ ಮೈಸೂರು ದಕ್ಷಿಣ ವಲಯ ಐ.ಜಿ ಅವರು, ದೇವಸ್ಥಾನದ ಸರತಿ ಸಾಲು, ವಾಹನಗಳ ಪಾರ್ಕಿಂಗ್, ಭಕ್ತರು ಬಂದು ಹೋಗುವ ಸ್ಥಳ ಸೇರಿದಂತೆ ಇತರೆ ವ್ಯವಸ್ಥೆಯನ್ನು
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಸೆ.30ರಂದು ಬೆಳಗ್ಗೆ 10.45ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕ, ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈಭಾಗವಹಿಸಿ ಗೌರವ ಸ್ವೀಕರಿಸಲಿದ್ದಾರೆ. ದೈಜಿವರ್ಲ್ಡ್ ಮೀಡಿಯಾದ ವ್ಯವಸ್ಥಾಪಕ ನಿರ್ದೇಶಕ ವಾಲ್ಟರ್ ನಂದಳಿಕೆ ಕಾರ್ಯಕ್ರಮ ಉದ್ಘಾಟಿಸುವರು. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸುವರು. ಜಿಲ್ಲಾ




























